AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವಮೊಗ್ಗ ಜಿಲ್ಲೆಯಲ್ಲಿ 11 ಮಂದಿಗೆ ಮಂಗನ ಕಾಯಿಲೆ ಪಾಸಿಟಿವ್

ಕರ್ನಾಟಕದಲ್ಲಿ ಮಂಗನ ಕಾಯಿಲೆ ಹೆಚ್ಚಾಗುತ್ತಿದ್ದು, ಆರೋಗ್ಯ ಇಲಾಖೆ ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳುತ್ತಿದೆ. ಅದಾಗ್ಯೂ, ಇಂದು ಬಿಡುಗಡೆಯಾದ ಹೆಲ್ತ್ ಬುಲೆಟಿನ್ ಪ್ರಕಾರ, ಶಿವಮೊಗ್ಗ ಜಿಲ್ಲೆಯಲ್ಲಿ 11 ಮಂದಿಗೆ ಮಂಗನ ಕಾಯಿಲೆ ಇರುವುದು ಪತ್ತೆಯಾಗಿದೆ. ನಿನ್ನೆ ಶಿವಮೊಗ್ಗ ಜಿಲ್ಲೆ ಹಾಗೂ ಶಿರಸಿಯ 19 ಜನರ ರಕ್ತದ ಮಾದರಿ ಪರೀಕ್ಷೆ ನಡೆಸಲಾಗಿತ್ತು.

ಶಿವಮೊಗ್ಗ ಜಿಲ್ಲೆಯಲ್ಲಿ 11 ಮಂದಿಗೆ ಮಂಗನ ಕಾಯಿಲೆ ಪಾಸಿಟಿವ್
ಶಿವಮೊಗ್ಗ ಜಿಲ್ಲೆಯಲ್ಲಿ 11 ಮಂದಿಗೆ ಮಂಗನ ಕಾಯಿಲೆ ಪಾಸಿಟಿವ್ (ಸಾಂದರ್ಭಿಕ ಚಿತ್ರ)
Basavaraj Yaraganavi
| Edited By: |

Updated on:Feb 05, 2024 | 4:48 PM

Share

ಶಿವಮೊಗ್ಗ, ಫೆ.5: ಕರ್ನಾಟಕದಲ್ಲಿ ಮಂಗನ ಕಾಯಿಲೆ (Kyasanur Forest Disease- KFD) ಹೆಚ್ಚಾಗುತ್ತಿದ್ದು, ಆರೋಗ್ಯ ಇಲಾಖೆ ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳುತ್ತಿದೆ. ಅದಾಗ್ಯೂ, ಇಂದು ಬಿಡುಗಡೆಯಾದ ಹೆಲ್ತ್ ಬುಲೆಟಿನ್ ಪ್ರಕಾರ, ನಿನ್ನೆ ಶಿವಮೊಗ್ಗ (Shivamogga) ಜಿಲ್ಲೆ ಹಾಗೂ ಶಿರಸಿಯ 19 ಜನರ ರಕ್ತದ ಮಾದರಿ ಪರೀಕ್ಷೆ ನಡೆಸಲಾಗಿದ್ದು, ಈ ಪೈಕಿ ಶಿವಮೊಗ್ಗ ಜಿಲ್ಲೆಯಲ್ಲಿ 11 ಮಂದಿಗೆ ಮಂಗನ ಕಾಯಿಲೆ ಇರುವುದು ಪತ್ತೆಯಾಗಿದೆ.

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಮೂವರಲ್ಲಿ ಮಂಗನ ಕಾಯಿಲೆ ಪತ್ತೆಯಾಗಿದ್ದು, ಹೊಸನಗರ ತಾಲೂಕಿನ ಎಂಟು ಮಂದಿಯಲ್ಲಿ ಮಂಗನ ಕಾಯಿಲ್ ಪಾಸಿಟಿವ್ ಕಾಣಿಸಿಕೊಂಡಿದೆ. ಆ ಮೂಲಕ ಜಿಲ್ಲೆಯಲ್ಲಿ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 13 ಕ್ಕೆ ಏರಿಕೆಯಾಗಿದೆ. ಆದರೆ, ಶಿರಸಿಯಲ್ಲಿ ಯಾರಿಗೂ ಮಂಗನ ಕಾಯಿಲೆ ವಕ್ಕರಿಸಿಲ್ಲ ಎಂದು ಹೆಲ್ತ್ ಬುಲೆಟಿನ್ ತಿಳಿಸಿದೆ.

ಇದನ್ನೂ ಓದಿ: ಉತ್ತರ ಕನ್ನಡ ಜಿಲ್ಲೆಯಲ್ಲಿ ಹೆಚ್ಚಾದ ಮಂಗನ ಕಾಯಿಲೆ; 14 ದಿನಗಳಲ್ಲಿ 37 ಜನರಿಗೆ ಸೋಂಕು, 3 ಮಂಗಗಳ ಸಾವು

ಕರ್ನಾಟಕದಲ್ಲಿ ಈವರಗೆ ವರದಿಯಾದ ಒಟ್ಟು ಪ್ರಕರಣಗಳ ಸಂಖ್ಯೆ 64 ಕ್ಕೆ ಏರಿದೆ. ಈ ಪೈಕಿ 37 ಪ್ರಕರಣಗಳು ಉತ್ತರ ಕನ್ನಡ ಜಿಲ್ಲೆಯಲ್ಲಿ ದಾಖಲಾಗಿದ್ದರೆ, 24 ಪ್ರಕರಣಗಳು ಶಿವಮೊಗ್ಗ ಮತ್ತು ಮೂರು ಪ್ರಕರಣಗಳು ಚಿಕ್ಕಮಗಳೂರು ಜಿಲ್ಲೆಯಲ್ಲಿ ಪತ್ತೆಯಾಗಿವೆ. ಇದುವರೆಗೆ 25 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಮಂಗನ ಕಾಯಿಲೆಗೆ ಒಟ್ಟು ಇಬ್ಬರು ಬಲಿಯಾಗಿದ್ದಾರೆ. ಸದ್ಯ, ಸಕ್ರಿಯ 37 ಪ್ರಕರಣಗಳಿಗೆ ಚಿಕಿತ್ಸೆ ಮುಂದುವರಿದಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತ ಡಿ.ರಂದೀಪ್ ಅವರು ಫೆಬ್ರವರಿ 3 ರಂದು ಶಿವಮೊಗ್ಗದಲ್ಲಿ ಮೂರು ಜಿಲ್ಲೆಗಳ ಅಧಿಕಾರಿಗಳನ್ನು ಭೇಟಿ ಮಾಡಿ ಹೆಚ್ಚಿನ ಸಾವುಗಳನ್ನು ತಪ್ಪಿಸಲು ಅಗತ್ಯವಾದ ಕ್ರಮಗಳ ಕುರಿತು ಚರ್ಚಿಸಿದ್ದರು.

ರಾಜ್ಯದಲ್ಲಿ ಮಂಗನ ಖಾಯಿಲೆ ಆತಂಕ ಶುರುವಾಗಿದೆ. ನವೆಂಬ‌ರ್ ನಿಂದ ಮೇ ತಿಂಗಳ ಅವಧಿಯಲ್ಲಿ ಮಂಗನ ಕಾಯಿಲೆ ಕಾಣಿಸಿಕೊಳ್ಳುತ್ತದೆ. ಹಠಾತ್ ಜ್ವರ, ಶರೀರದಲ್ಲಿ ತೀವ್ರ ಸ್ನಾಯುಗಳ ನೋವು, ತಲೆ ನೋವು ಇತ್ಯಾದಿ ರೋಗ ಲಕ್ಷಣಗಳಾಗಿವೆ. ರೋಗ ಹರಡುವಿಕೆಯನ್ನು ತಡೆಗಟ್ಟಲು ಸಾರ್ವಜನಿಕರು ಸಹಕರಿಸುವಂತೆ ಆರೋಗ್ಯ ಇಲಾಖೆ ಮನವಿ ಮಾಡಿದೆ. ರೋಗ ಲಕ್ಷಣ ಕಂಡು ಬಂದ ತಕ್ಷಣ ಹತ್ತಿರದ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ. ಪ್ರಾಥಮಿಕ ಚಿಕಿತ್ಸೆ ಪಡೆದು KFD ಪರೀಕ್ಷೆಗೆ ರಕ್ತ ಮಾದರಿಯನ್ನು ನೀಡುವಂತೆ ಆರೋಗ್ಯ ಇಲಾಖೆ‌ ಸೂಚನೆ ನೀಡಿದೆ. ಕಾಡಿಗೆ ಹೋಗುವ ಮುನ್ನ ಇಲಾಖೆ ಉಚಿತವಾಗಿ ನೀಡುವ DEPA ತೈಲವನ್ನು ಲೇಪಿಸಿಕೊಂಡು ಹೋಗುವಂತೆ ಸೂಚನೆ ನೀಡಿದ್ದಾರೆ.

ರಾಜ್ಯದಲ್ಲಿ KFD 10 ರಿಂದ 12 ಜಿಲ್ಲೆಗಳಲ್ಲಿ ಇದು ಕಂಡು ಬಂದಿದೆ. ಪ್ರಮುಖ ಮೂರು ಜಿಲ್ಲೆಗಳಲ್ಲಿ ಕಟ್ಟು ನಿಟ್ಟಿನ ಕ್ರಮವಹಿಸಲಾಗಿದೆ. ಮಂಗನ ಖಾಯಿಲೆ ಬಗ್ಗೆ ಆರೋಗ್ಯ ಇಲಾಖೆ ನಿಗಾ ವಹಿಸಿದೆ. ರೋಗ ಲಕ್ಷಣ ಕಂಡು ಬಂದ ತಕ್ಷಣ ಹತ್ತಿರದ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡುವಂತೆ ಸೂಚನೆ ನೀಡಲಾಗಿದೆ. ಕಾಡಿಗೆ ಹೋಗುವ ಮುನ್ನ ಇಲಾಖೆ ಉಚಿತವಾಗಿ ನೀಡುವ DEPA ತೈಲವನ್ನು ಲೇಪಿಸಿಕೊಂಡು ಹೋಗುವಂತೆ ಸೂಚನೆ ನೀಡಲಾಗಿದೆ. DEPA ತೈಲವನ್ನು ಉಚಿತವಾಗಿ ಎಲ್ಲ ಕುಟುಂಬಗಳಿಗೆ ನೀಡಲಾಗುತ್ತದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:45 pm, Mon, 5 February 24

ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ