ಗೃಹ ಸಚಿವರ ಜಿಲ್ಲೆ ಶಿವಮೊಗ್ಗದಲ್ಲಿ ಗಾಂಜಾ ಹಾವಳಿ; ಕಳೆದ ಒಂದು ತಿಂಗಳಿನಿಂದ ಕಾರ್, ಬೈಕ್, ಆಟೋದಲ್ಲಿ ಗಾಂಜಾ ಪತ್ತೆ

ಮೊನ್ನೆಯಷ್ಟೇ ಹೊಸನಗರದ ಮಾವಿನಕೊಪ್ಪ ವೃತ್ತದ ಬಳಿ ಮೀನು ಸಾಗಾಟ ಮಾಡುತ್ತಿದ್ದ ಗೂಡ್ಸ್ ಆಟೋವನ್ನು ಪೊಲೀಸರು ಪರಿಶೀಲನೆ ಮಾಡಿದ್ದಾರೆ. ಮೀನು ಸಾಗಾಟ ಮಾಡುತ್ತಿದ್ದ ಗೂಡ್ಸ್ ಆಟೋದಲ್ಲಿ 1.5 ಕೆಜಿ ಗಾಂಜಾ ಪತ್ತೆಯಾಗಿತ್ತು. ಇದರ ಹಿಂದೆ ತರಿಕೆರೆಯಿಂದ ಭದ್ರಾವತಿ ಕಡೆಗೆ ಓಮಿನಿಯಲ್ಲಿ ಅಕ್ರಮವಾಗಿ ಗಾಂಜಾ ಸಾಗಾಟ ಪತ್ತೆಯಾಗಿತ್ತು.

ಗೃಹ ಸಚಿವರ ಜಿಲ್ಲೆ ಶಿವಮೊಗ್ಗದಲ್ಲಿ ಗಾಂಜಾ ಹಾವಳಿ; ಕಳೆದ ಒಂದು ತಿಂಗಳಿನಿಂದ ಕಾರ್, ಬೈಕ್, ಆಟೋದಲ್ಲಿ ಗಾಂಜಾ ಪತ್ತೆ
ಗಾಂಜಾ( ಸಂಗ್ರಹ ಚಿತ್ರ)
Follow us
TV9 Web
| Updated By: Digi Tech Desk

Updated on:Oct 25, 2021 | 12:32 PM

ಶಿವಮೊಗ್ಗ: ಜಿಲ್ಲೆಯಲ್ಲಿ ಗಾಂಜಾ ಮಾರಾಟ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಹೊರ ರಾಜ್ಯದಿಂದ ಎಗ್ಗಿಲ್ಲದೇ ಗಾಂಜಾ ಮಲೆನಾಡಿಗೆ ಸರಬರಾಜಾಗುತ್ತಿದೆ. ಈ ನಡುವೆ ಗೃಹ ಸಚಿವರಾದ ಆರಗ ಜ್ಞಾನೇಂದ್ರ ಅವರ ಜಿಲ್ಲೆಯಲ್ಲಿಯೇ ಗಾಂಜಾ ಹಾವಳಿ ಜಾಸ್ತಿಯಾದ ಹಿನ್ನಲೆಯಲ್ಲಿ ಶಿವಮೊಗ್ಗ ಎಸ್​ಪಿ ಆಪರೇಶನ್ ಗಾಂಜಾಗೆ ಮುಂದಾಗಿದ್ದಾರೆ. ಜಿಲ್ಲೆಯಲ್ಲಿ ದೊಡ್ಡ ಪ್ರಮಾಣದಲ್ಲಿ ನಿರಂತರವಾಗಿ ಗಾಂಜಾ ಪತ್ತೆಯಾಗುತ್ತಿದೆ. ಅದರಲ್ಲೂ ಯುವಕರು ಗಾಂಜಾ ಮಾರಾಟಕ್ಕೆ ಮುಳುಗಿರುವುದು ನಾಗರಿಕರಲ್ಲಿ ಆತಂಕ ಸೃಷ್ಟಿಸಿದೆ.

ಕಳೆದ ಕೆಲವು ತಿಂಗಳನಿಂದ ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದಲ್ಲಿ ಗಾಂಜಾ ಘಾಟು ಜೋರಾಗಿದೆ. ಶಿವಮೊಗ್ಗ, ಭದ್ರಾವತಿ, ಸಾಗರ ಸೇರಿದಂತೆ ಜಿಲ್ಲೆಯಲ್ಲಿ ಸುಲಭವಾಗಿ ಗಾಂಜಾ ಯುವಕರ ಕೈ ಸೇರುತ್ತಿದೆ. ಅದರಲ್ಲೂ ಶಾಲಾ ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಎನ್ನುವುದು ಚಾಕಲೇಟ್ ನಷ್ಟೇ ಸುಲಭವಾಗಿ ಸಿಗುತ್ತಿರುವುದು ಕಳವಳಕಾರಿ ಸಂಗತಿ. ಟಿವಿ9 ಕೂಡಾ ಮಲೆನಾಡಿನಲ್ಲಿ ಗಾಂಜಾ ದಂಧೆಯ ಕುರಿತು ವಿಸ್ತ್ರತವಾಗಿರುವ ವರದಿ ಪ್ರಸಾರ ಮಾಡಿದೆ. ಈ ಹಿನ್ನಲೆಯಲ್ಲಿ ಗೃಹ ಸಚಿವರು ಸದ್ಯ ಎಚ್ಛೆತ್ತುಕೊಂಡಿದ್ದಾರೆ. ಹೀಗಾಗಿ ಅವರೇ ಖುದ್ದಾಗಿ ಮಾದಕ ವಸ್ತುಗಳ ಕುರಿತು ಜಾಗೃತಿ ಮೂಡಿಸಲು ಮುಂದಾಗಿರುವುದು ವಿಶೇಷವಾಗಿದೆ.

ಗೃಹ ಸಚಿವರೇ ಮಾದಕ ವಸ್ತುಗಳ ಕುರಿತು ಜನ ಜಾಗೃತಿ ಅಭಿಯಾನಕ್ಕೆ ತೀರ್ಥಹಳ್ಳಿಯಲ್ಲಿ ಚಾಲನೆ ನೀಡಿದರು. ತೀರ್ಥಹಳ್ಳಿ ಶಾಲಾ ಮಕ್ಕಳು, ಸ್ಥಳೀಯರು ಪೊಲೀಸ್ ಅಧಿಕಾರಿಗಳು ಈ ಜಾಗೃತಿ ಅಭಿಯಾನದಲ್ಲಿ ಭಾಗವಹಿಸಿದ್ದರು. ಈ ಮೂಲಕ ಗೃಹ ಸಚಿವರು, ಪೊಲೀಸ್ ಇಲಾಖೆಗೆ ಗಾಂಜಾ ಸೇರಿದಂತೆ ಇತರೆ ಮಾದಕ ವಸ್ತುಗಳಿಗೆ ಕಡಿವಾಣ ಹಾಕುವುದಕ್ಕೆ ಖಡಕ್ ಸಂದೇಶ ರವಾನಿಸಿದ್ದರು.

ಮೊನ್ನೆಯಷ್ಟೇ ಹೊಸನಗರದ ಮಾವಿನಕೊಪ್ಪ ವೃತ್ತದ ಬಳಿ ಮೀನು ಸಾಗಾಟ ಮಾಡುತ್ತಿದ್ದ ಗೂಡ್ಸ್ ಆಟೋವನ್ನು ಪೊಲೀಸರು ಪರಿಶೀಲನೆ ಮಾಡಿದ್ದಾರೆ. ಮೀನು ಸಾಗಾಟ ಮಾಡುತ್ತಿದ್ದ ಗೂಡ್ಸ್ ಆಟೋದಲ್ಲಿ 1.5 ಕೆಜಿ ಗಾಂಜಾ ಪತ್ತೆಯಾಗಿತ್ತು. ಇದರ ಹಿಂದೆ ತರಿಕೆರೆಯಿಂದ ಭದ್ರಾವತಿ ಕಡೆಗೆ ಓಮಿನಿಯಲ್ಲಿ ಅಕ್ರಮವಾಗಿ ಗಾಂಜಾ ಸಾಗಾಟ ಪತ್ತೆಯಾಗಿತ್ತು. ಅದರಲ್ಲಿ ಐದು ಕೆ.ಜಿ ಒಣ ಗಾಂಜಾ ಪತ್ತೆಯಾಗಿತ್ತು. ಕೋಟೆ ಪೋಲೀಸರು ಎರಡು ಬೈಕ್ ಮೇಲೆ ಸಾಗಾಟ ಮಾಡುತ್ತಿದ್ದ 782 ಗ್ರಾಂ ಒಣ ಗಾಂಜಾ ಪತ್ತೆ ಮಾಡಿ ನಾಲ್ವರನ್ನು ಬಂಧಿಸಿದ್ದರು. ಶಿಕಾರಿಪುರದ ಶಿರಾಳಕೊಪ್ಪದಲ್ಲಿ ಎರಡು ಬೈಕ್​ನಲ್ಲಿ 460 ಗ್ರಾಂ ಒಣ ಗಾಂಜಾ ಜಪ್ತಿ ಆಗಿತ್ತು.

ಶಿವಮೊಗ್ಗ ತಾಲೂಕಿನ ಕಲ್ಲೂರು ಗ್ರಾಮದ ತುಂಗಾ ಚಾನಲ್ ಬಳಿ 2 ಕೆಜಿ ಗಾಂಜಾವನ್ನು ಪತ್ತೆಮಾಡಿದ್ದರು. ಇನ್ನು ಕಾರ್​ನಲ್ಲಿ ಈ ಗಾಂಜಾ ಮಾರಾಟ ಮಾಡುತ್ತಿದ್ದವರು ಪೊಲೀಸರ ಬಲೆಗೆ ಬಿದ್ದಿದ್ದರು. ಭದ್ರಾವತಿ ತಾಲೂಕಿನಲ್ಲಿ ಕೂಡ್ಲಿಗೇರೆ ಚೆಕ್ ಪೋಸ್ಟ್​ನಲ್ಲಿ ಟಾಟಾ ಏಸ್ ಮತ್ತು ಓಮಿನಿನಲ್ಲಿ 22 ಕೆಜಿ ಗಾಂಜಾ ಪತ್ತೆ ಆಗಿತ್ತು. ಹೀಗೆ ಕಳೆದ ಒಂದು ತಿಂಗಳನಿಂದ ಶಿವಮೊಗ್ಗ ಜಿಲ್ಲೆಯಲ್ಲಿ ಎಸ್​ಪಿ ಲಕ್ಷ್ಮಿಪ್ರಸಾದ್ ನೇತೃತ್ವದಲ್ಲಿ ನಿರಂತರವಾಗಿ ಆಪರೇಶನ್ ನಡೆಯುತ್ತಿದೆ. ಎಸ್​ಪಿ ಇನ್ನೂ ದೊಡ್ಡ ದೊಡ್ಡ ಕಾರ್ಯಾಚರಣೆಗೆ ಮಾಸ್ಟರ್ ಪ್ಲ್ಯಾನ್ ಮಾಡಿಕೊಂಡಿದ್ದಾರೆ.

ಮಲೆನಾಡಿನಲ್ಲಿ ಅಕ್ರಮ ಗಾಂಜಾ ದಂಧೆಯು ವ್ಯಾಪಕವಾಗಿ ಹಬ್ಬಿಕೊಂಡಿದೆ. ಗೃಹ ಸಚಿವರ ತವರು ಜಿಲ್ಲೆಯಲ್ಲಿ ಗಾಂಜಾವನ್ನು ಬೇರು ಸಮೇತ ಕಿತ್ತುಹಾಕಲು ಶಿವಮೊಗ್ಗ ಪೊಲೀಸರು ಮುಂದಾಗಿದ್ದಾರೆ. ಎಸ್​ಪಿ ಅವರೇ ಈ ಬಗ್ಗೆ ಹೆಚ್ಚಿನ ಗಮನಹರಿಸಿದ್ದು, ಸದ್ಯ ಪೊಲೀಸ್ ಅಧಿಕಾರಿಗಳಿಗೆ ಮತ್ತು ಸಿಬ್ಬಂದಿಗಳಿಗೆ ಒತ್ತಡ ಹೆಚ್ಚಾಗಿದೆ. ಇನ್ನೊಂದೆಡೆ ಗಾಂಜಾ ದಂಧೆಕೋರರಿಗೆ ನಡುಕ ಹುಟ್ಟಿಸಿದೆ.

ವರದಿ: ಬಸವರಾಜ್ ಯರಗಣವಿ

ಇದನ್ನೂ ಓದಿ: ಪ್ರವಾಸಕ್ಕೆ ತೆರಳುತ್ತಿದ್ದ ಯುವಕರ ಕಾರಿನಲ್ಲಿ ಗಾಂಜಾ ಪತ್ತೆ, ಸುಂಕದಕಟ್ಟೆ ಮೂಲದ ಮೂವರ ಬಂಧನ

ಹುಬ್ಬಳ್ಳಿ: ಪೊಲೀಸರಿಂದಲೇ ಗಾಂಜಾ ಮಾರಾಟ ಪ್ರಕರಣ; ಇನ್ಸ್ಪೆಕ್ಟರ್ ಸೇರಿ ಏಳು ಜನ ಅಮಾನತು

Published On - 10:29 am, Mon, 25 October 21

ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ