ಚೆಕ್ ಬೌನ್ಸ್ ಪ್ರಕರಣ; ಬಿಜೆಪಿ ನಾಯಕರ ವಿರುದ್ದ ಕಿಡಿಕಾರಿದ ಸಚಿವ ಮಧು ಬಂಗಾರಪ್ಪ

ಚೆಕ್ ಬೌನ್ಸ್ ಪ್ರಕರಣ(cheque bounce cases)ಕ್ಕೆ ಸಂಬಂಧಿಸಿದಂತೆ ಶಿವಮೊಗ್ಗದಲ್ಲಿ ಮಾತನಾಡಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ (Madhu bangarappa) ‘ಯಾವನೋ ಟ್ವೀಟ್ ಮಾಡಿದ್ದಾನೆ. ಏನೇನು ಮಾತನಾಡಿದ್ದಾರೆ ಅವರ ತಟ್ಟೆ ನೋಡಿಕೊಳ್ಳಲು ಹೇಳಿ, ನನ್ನ ತಟ್ಟೆ ಕ್ಲೀನ್ ಆಗಿದೆ ಎಂದು ಬಿಜೆಪಿ ನಾಯಕರ ವಿರುದ್ದ ಕಿಡಿಕಾರಿದ್ದಾರೆ.

ಚೆಕ್ ಬೌನ್ಸ್ ಪ್ರಕರಣ; ಬಿಜೆಪಿ ನಾಯಕರ ವಿರುದ್ದ ಕಿಡಿಕಾರಿದ ಸಚಿವ ಮಧು ಬಂಗಾರಪ್ಪ
ಸಚಿವ ಮಧು ಬಂಗಾರಪ್ಪ
Follow us
Basavaraj Yaraganavi
| Updated By: ಕಿರಣ್ ಹನುಮಂತ್​ ಮಾದಾರ್

Updated on: Dec 30, 2023 | 10:16 PM

ಶಿವಮೊಗ್ಗ, ಡಿ.30: ಚೆಕ್ ಬೌನ್ಸ್ ಪ್ರಕರಣ(cheque bounce cases)ಕ್ಕೆ ಸಂಬಂಧಿಸಿದಂತೆ ಶಿವಮೊಗ್ಗದಲ್ಲಿ ಮಾತನಾಡಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ (Madhu bangarappa) ‘ಯಾವನೋ ಟ್ವೀಟ್ ಮಾಡಿದ್ದಾನೆ. ಏನೇನು ಮಾತನಾಡಿದ್ದಾರೆ ಅವರ ತಟ್ಟೆ ನೋಡಿಕೊಳ್ಳಲು ಹೇಳಿ, ನನ್ನ ತಟ್ಟೆ ಕ್ಲೀನ್ ಆಗಿದೆ ಎಂದು ಬಿಜೆಪಿ ನಾಯಕರ ವಿರುದ್ದ ಕಿಡಿಕಾರಿದ್ದಾರೆ. ‘ನಿಮಗೆ ನನ್ನ ಬಗ್ಗೆ ಮಾಹಿತಿ‌ ಇಲ್ಲ, ಹೋಗಿ ಮಾಹಿತಿ ಹುಡುಕಿ. ನನಗೆ ಕಾನೂನು ಗೊತ್ತಿದೆ. ಯಾರು ಈ ಆರ್.ಅಶೋಕ್?, ನನ್ನ ಬಗ್ಗೆ ವಿಶೇಷವಾಗಿ ಟ್ವೀಟ್ ಮಾಡಿದವರಿಗೆ ಧನ್ಯವಾದ ಹೇಳಬೇಕು, ನನ್ನನ್ನು ಎಚ್ಚರಿಸಿದ್ದಾರೆ. ನನ್ನನ್ನು ಟಾರ್ಗೆಟ್ ಮಾಡಲು ಯಾರಿಂದಲೂ ಆಗಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.

ಘಟನೆ ವಿವರ

ಶಿಕ್ಷಣ ಸಚಿವ ಮಧು ಬಂಗಾರಪ್ಪಅವರ 2011ರ ಚೆಕ್‌ಬೌನ್ಸ್‌ ಪ್ರಕರಣಕ್ಕೆ ಸಬಂಧಿಸಿದಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು 6.96 ಕೋಟಿ ರೂ. ದಂಡವನ್ನು ವಿಧಿಸಿ ಆದೇಶಿಸಿ, ಈ ದಂಡ ಪಾವತಿ ಮಾಡದಿದ್ದರೆ 6 ತಿಂಗಳು ಜೈಲುವಾಸ ಅನುಭವಿಸುವಂತೆ ಆದೇಶ ಹೊರಡಿಸಿತ್ತು. ಇದರ ಬೆನ್ನಲ್ಲೇ ಸಚಿವ ಮಧು ಬಂಗಾರಪ್ಪ ರಾಜೀನಾಮೆ ನೀಡುವಂತೆ ಬಿಜೆಪಿ ನಾಯಕರು ಆಗ್ರಹಿಸಿದ್ದರು.

ಇದನ್ನೂ ಓದಿ:ಚೆಕ್ ಬೌನ್ಸ್ ಕೇಸ್: ಸಚಿವ ಮಧು ಬಂಗಾರಪ್ಪಗೆ ದಂಡ ವಿಧಿಸಿದ ಕೋರ್ಟ್, ಕಟ್ಟದಿದ್ದರೆ ಜೈಲು ಶಿಕ್ಷೆ

ರಾಜೀನಾಮೆ ನೀಡುವಂತೆ ಒತ್ತಾಯಿಸಿದ್ದ ಬಿಜೆಪಿ ನಾಯಕರು

ರಾಜೀನಾಮೆಗೆ ಆಗ್ರಹಿಸಿದ್ದ ವಿಜಯೇಂದ್ರ; ಕನ್ನಡ ಬರೆಯಲು ಬರಲ್ಲವೆಂದಿದ್ದ ಯತ್ನಾಳ್​

ಸಚಿವರು ಚೆಕ್ ಬೌನ್ಸ್ ಪ್ರಕರಣದಲ್ಲಿ ಶಿಕ್ಷಾರ್ಹ ಅಪರಾಧಿ ಎಂದು ಸಾಭೀತಾಗಿದೆ. ಇದು ಸರ್ಕಾರದ ಘನತೆ ಅಷ್ಟೇ ಅಲ್ಲದೇ ಶಿಕ್ಷಣದ ಪಾವಿತ್ರ್ಯತೆಗೆ ತಗುಲಿದೆ ಕಪ್ಪು ಚುಕ್ಕೆಯಾಗಿದ್ದು, ಈ ಕೂಡಲೇ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ರಾಜೀನಾಮೆ ನೀಡಿ ತಮ್ಮ ನೈತಿಕತೆ ಪ್ರದರ್ಶಿಸಲಿ, ಇಲ್ಲವೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಕೂಡಲೇ ಸಚಿವರ ರಾಜೀನಾಮೆ ಪಡೆಯಲಿ ಎಂದು ಒತ್ತಾಯಿಸಿದ್ದರು. ಜೊತೆಗೆ ಮಧು ಬಂಗಾರಪ್ಪ ವಿರುದ್ಧ ಎಕ್ಸ್​ ಮೂಲಕ ಬಿಜೆಪಿ ಶಾಸಕ ಯತ್ನಾಳ್ ಪ್ರತಿಕ್ರಿಯಿಸಿದ್ದು, ಶಿಕ್ಷಣ ಕ್ಷೇತ್ರದಲ್ಲಿ ಆಮೂಲಾಗ್ರ ಬದಲಾವಣೆ ಮಾಡಬೇಕಾದ ಮಂತ್ರಿಗಳು. ಆದ್ರೆ, ಶಿಕ್ಷಣ ಸಚಿವರೇ ವಂಚಿಸಿ ತಪ್ಪಿತಸ್ಥರಾದರೆ ಇನ್ನು ಇಲಾಖೆಯ ಗತಿಯೇನು? ಬಲ್ಲ ಮೂಲಗಳ ಪ್ರಕಾರ ಕನ್ನಡ ಓದಲು, ಬರೆಯಲು ಸಹ ಕಷ್ಟ ಪಡುತ್ತಾರೆ ಎಂದು ಬರೆದುಕೊಂಡಿದ್ದಾರೆ ಎಂದಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ