AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅರೆಸ್ಟ್​ ಮಾಡಲು ತೆರಳಿದ್ದ ಪೊಲೀಸರ ಮೇಲೆ ಹಲ್ಲೆಗೆ ಯತ್ನ: ಫೈರಿಂಗ್‌ ಮಾಡಿ ಆರೋಪಿಯ ಬಂಧನ

ಬಾರ್ ಕ್ಯಾಷಿಯರ್​​ ಮರ್ಡರ್​ ಕೇಸ್​ಗೆ ಸಂಬಂಧಿಸಿಂದತೆ ಕೊಲೆ ಆರೋಪಿ ಬಂಧಿಸಲು ತೆರಳಿದ್ದ ಪೊಲೀಸರ ಮೇಲೆ ಚಾಕುವಿನಿಂದ ಹಲ್ಲೆಗೆ ಯತ್ನಿಸಿರುವಂತಹ ಘಟನೆ ನಡೆದಿದೆ.

ಅರೆಸ್ಟ್​ ಮಾಡಲು ತೆರಳಿದ್ದ ಪೊಲೀಸರ ಮೇಲೆ ಹಲ್ಲೆಗೆ ಯತ್ನ: ಫೈರಿಂಗ್‌ ಮಾಡಿ ಆರೋಪಿಯ ಬಂಧನ
ಮೃತ ಬಾರ್ ಕ್ಯಾಷಿಯರ್‌ ಸಚಿನ್
ಗಂಗಾಧರ​ ಬ. ಸಾಬೋಜಿ
|

Updated on: Jun 05, 2023 | 8:17 PM

Share

ಶಿವಮೊಗ್ಗ: ಬಾರ್ ಕ್ಯಾಷಿಯರ್​​ ಮರ್ಡರ್​ ಕೇಸ್​ಗೆ ಸಂಬಂಧಿಸಿಂದತೆ ಕೊಲೆ ಆರೋಪಿ ಬಂಧಿಸಲು ತೆರಳಿದ್ದ ಪೊಲೀಸರ ಮೇಲೆ ಚಾಕುವಿನಿಂದ ಹಲ್ಲೆಗೆ ಯತ್ನಿಸಿರುವಂತಹ ಘಟನೆ ನಡೆದಿದೆ. ಫೈರಿಂಗ್​ ಮಾಡುವ ಮೂಲಕ ಆರೋಪಿಯನ್ನು ಪೊಲೀಸರು ಅರೆಸ್ಟ್ (arrest)​ ಮಾಡಿದ್ದಾರೆ. ಸತೀಶ್​​ ಬಂಧಿತ ಆರೋಪಿ. ಶಿವಮೊಗ್ಗ ತಾಲ್ಲೂಕಿನ ಆಯನೂರಿನಲ್ಲಿ ಬಾರ್ ಕ್ಯಾಷಿಯರ್​ ಸಚಿನ್ ಮರ್ಡರ್​ ಕೇಸ್ ಸಂಬಂಧ ಅರೆಸ್ಟ್​ ಮಾಡಲಾಗಿದೆ.​ ಪಿಎಸ್‌ಐ ಎಸ್ ರಾಜು ರೆಡ್ಡಿರಿಂದ ಸ್ವಯಂ ರಕ್ಷಣೆ ಹಿನ್ನಲೆ ಆರೋಪಿ ಕಾಲಿಗೆ ಫೈರಿಂಗ್​ ಮಾಡಲಾಗಿದೆ.

ಗಾಯಾಳು ಸತೀಶ್​ ನನ್ನು ಶಿವಮೊಗ್ಗ ಮೆಗ್ಗಾನ್ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಘಟನೆಯಲ್ಲಿ ಪೊಲೀಸ್‌ ಸಿಬ್ಬಂದಿ ಪ್ರವೀಣ್‌ ಮತ್ತು ಶಿವರಾಜ್​ಗೆ ಗಾಯಗಳಾಗಿದ್ದು, ಅವರನ್ನು ಮೆಗ್ಗಾನ್‌ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಇದನ್ನೂ ಓದಿ: ಜಾರ್ಖಂಡ್‌ನಿಂದ ಗಾಂಜಾ ತಂದು ಬೆಂಗಳೂರಲ್ಲಿ ಮಾರಾಟ: 3 ಅಂತಾರಾಜ್ಯ ಡ್ರಗ್ಸ್‌ ಪೆಡ್ಲರ್‌ಗಳ ಬಂಧನ

ಘಟನೆ ಹಿನ್ನಲೆ

ಮದ್ಯ ನೀಡಲು ನಿರಾಕರಿಸಿದ್ದಕ್ಕೆ ಬಾರ್​ ಕ್ಯಾಶಿಯರ್​ ಸಚಿನ್​ ನನ್ನು ಮೂವರು ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ. ನಿನ್ನೆ (ಜೂ.05) ಬಾರ್​ಗೆ ಗಾಂಜಾ ಅಮಲಿನಲ್ಲಿ ಬಂದ ಮೂವರು ಮದ್ಯ ಕೇಳಿದ್ದಾರೆ. ಅದಕ್ಕೆ ಕ್ಯಾಶಿಯರ್​ ಸಚಿನ್​​ ಸಮಯ ಮುಗದಿದೆ ಮದ್ಯ ನೀಡಲು ಆಗುವುದಿಲ್ಲ ಎಂದಿದ್ದಾನೆ. ಇದರಿಂದ ಸಿಟ್ಟಿಗೆದ್ದ ಮೂವರು ಗಲಾಟೆ ಮಾಡಿದ್ದಾರೆ.

ನಂತರ ಡ್ರ್ಯಾಗನ್​ನಿಂದ ದುಷ್ಕರ್ಮಿಗಳು ಕ್ಯಾಶಿಯರ್ ಮೇಲೆ ಹಲ್ಲೆ ಮಾಡಿ ಪರಾರಿಯಾಗಿದ್ದಾರೆ. ಅಲ್ಲದೇ ಆರೋಪಿಗಳು ಬಾರ್​ ಸನಿಹ ಗಸ್ತಿಗೆ ನೀಯೋಜಿಸಿದ್ದ ಪೊಲೀಸರ ಮೇಲೂ ಹಲ್ಲೆಗೆ ಯತ್ನಿಸಿದ್ದಾರೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: Mandya News: ಟಾರ್ಗೆಟ್ ಮಾಡಿದ್ದು ತಮ್ಮನನ್ನ, ಹಂತಕರ ಕೈಯಲ್ಲಿ ತಗ್ಲಾಕೊಂಡು ದುರಂತ ಅಂತ್ಯ ಕಂಡಿದ್ದು ಅಣ್ಣ

ಗಂಭೀರಗೊಂಡಿದ್ದ ಕ್ಯಾಶಿಯರ್ ಸಚಿನ್​​ನನ್ನು ಸ್ಥಳೀಯರು ಕೂಡಲೇ ಶಿವಮೊಗ್ಗ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ. ಕುಂಸಿ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ದಾಖಲಿದೆ.

ಕತ್ತು ಕುಯ್ದ ಸ್ಥಿತಿಯಲ್ಲಿ ಬಿಹಾರ ಮೂಲದ ವ್ಯಕ್ತಿಯ ಶವ ಪತ್ತೆ

ತುಮಕೂರು: ಕತ್ತು ಕುಯ್ದ ಸ್ಥಿತಿಯಲ್ಲಿ ಬಿಹಾರ ಮೂಲದ ವ್ಯಕ್ತಿಯ ಶವ ಪತ್ತೆಯಾಗಿರುವಂತಹ ಘಟನೆ  ಅಂತಸರನಹಳ್ಳಿ ತರಕಾರಿ ಮಾರ್ಕೆಟ್‌ನಲ್ಲಿ ನಡೆದಿದೆ. ಸಾರ್ವಜನಿಕ ಶೌಚಾಲಯದಲ್ಲಿ ಲಖನ್ ಮಾಂಜಿ(36) ಶವ ಪತ್ತೆಯಾಗಿದೆ. ಮಾಂಜಿ 6 ತಿಂಗಳಿಂದ ಮಾರ್ಕೆಟ್‌ನ ಶೌಚಾಲಯ ಕೀಪರ್ ಆಗಿದ್ದ. ತುಮಕೂರು ನಗರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಗಂಗಾಧರ​ ಬ. ಸಾಬೋಜಿ
ಗಂಗಾಧರ​ ಬ. ಸಾಬೋಜಿ

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್