ಬೈಕ್ ಮೇಲೆ ತೆರಳುತ್ತಿದ್ದ ವ್ಯಕ್ತಿ ಮೇಲೆ ಕ್ಷುಲ್ಲಕ ಕಾರಣಕ್ಕೆ ಫೈರಿಂಗ್
ಶಿವಮೊಗ್ಗ: ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿ ಮೇಲೆ ಗುಂಡಿನ ದಾಳಿ ನಡೆಸಿರುವ ಘಟನೆ ತೀರ್ಥಹಳ್ಳಿ ತಾಲೂಕಿನ ಶಿರಳಹಳ್ಳಿ ಗ್ರಾಮದಲ್ಲಿ ತಡರಾತ್ರಿ ನಡೆದಿದೆ. ಬೈಕ್ ಮೇಲೆ ತೆರಳುತ್ತಿದ್ದ ರಾಮಚಂದ್ರಗೆ ಆರೋಪಿ ಮಂಜುನಾಥ್ ಗೌಡ ನಾಡ ಬಂದೂಕಿನಿಂದ ಗುಂಡು ಹಾರಿಸಿದ್ದಾನೆ. ಗಾಯಾಳು ರಾಮಚಂದ್ರರನ್ನ ಶಿವಮೊಗ್ಗದ ಮೆಗ್ಗಾನ್ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಬಳಿಕ ಮಂಜುನಾಥ್ ಗೌಡ ಅಲಿಯಾಸ್ ಫೋಟೋ ಮಂಜು ತಲೆಮರೆಸಿಕೊಂಡಿದ್ದಾನೆ. ಈ ಸಂಬಂಧ ಮಾಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪರಾರಿಯಾಗಿರುವ ಆರೋಪಿ ಮಂಜುನಾಥ್ಗಾಗಿ ಪೊಲೀಸರು ಬಲೆ ಬೀಸಿದ್ದಾರೆ.
Follow us on
ಶಿವಮೊಗ್ಗ: ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿ ಮೇಲೆ ಗುಂಡಿನ ದಾಳಿ ನಡೆಸಿರುವ ಘಟನೆ ತೀರ್ಥಹಳ್ಳಿ ತಾಲೂಕಿನ ಶಿರಳಹಳ್ಳಿ ಗ್ರಾಮದಲ್ಲಿ ತಡರಾತ್ರಿ ನಡೆದಿದೆ. ಬೈಕ್ ಮೇಲೆ ತೆರಳುತ್ತಿದ್ದ ರಾಮಚಂದ್ರಗೆ ಆರೋಪಿ ಮಂಜುನಾಥ್ ಗೌಡ ನಾಡ ಬಂದೂಕಿನಿಂದ ಗುಂಡು ಹಾರಿಸಿದ್ದಾನೆ.
ಗಾಯಾಳು ರಾಮಚಂದ್ರರನ್ನ ಶಿವಮೊಗ್ಗದ ಮೆಗ್ಗಾನ್ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಬಳಿಕ ಮಂಜುನಾಥ್ ಗೌಡ ಅಲಿಯಾಸ್ ಫೋಟೋ ಮಂಜು ತಲೆಮರೆಸಿಕೊಂಡಿದ್ದಾನೆ. ಈ ಸಂಬಂಧ ಮಾಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪರಾರಿಯಾಗಿರುವ ಆರೋಪಿ ಮಂಜುನಾಥ್ಗಾಗಿ ಪೊಲೀಸರು ಬಲೆ ಬೀಸಿದ್ದಾರೆ.