ಶಿವಮೊಗ್ಗ: ಆಸ್ತಿ ವಿಚಾರಕ್ಕೆ ಬೆಂಕಿ ಹಚ್ಚಿ ವ್ಯಕ್ತಿಯ ಕೊಲೆ, ಆರೋಪಿಗಳು ನಾಪತ್ತೆ

ಆಸ್ತಿ ಮಾರಾಟ ವಿಚಾರಕ್ಕೆ ಕಳೆದೊಂದು ವರ್ಷದಿಂದ ಮಹೇಶಪ್ಪ ಹಾಗೂ ಕುಮಾರ್ ನಡುವೆ ಕಲಹ ಇತ್ತು. ಇದೇ ದ್ವೇಷದಲ್ಲಿ ಕೊಲೆ ಮಾಡಲಾಗಿದೆ. ಬಿಕ್ಕೋನಹಳ್ಳಿಯ ಮಗಳ ಮನೆಯಿಂದ ಮಹೇಶಪ್ಪ ಬರುತ್ತಿದ್ದ ವೇಳೆ ಅಡ್ಡಗಟ್ಟಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಲೆ ಮಾಡಲಾಗಿದೆ.

ಶಿವಮೊಗ್ಗ: ಆಸ್ತಿ ವಿಚಾರಕ್ಕೆ ಬೆಂಕಿ ಹಚ್ಚಿ ವ್ಯಕ್ತಿಯ ಕೊಲೆ, ಆರೋಪಿಗಳು ನಾಪತ್ತೆ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: ಆಯೇಷಾ ಬಾನು

Updated on: Dec 03, 2023 | 2:48 PM

ಶಿವಮೊಗ್ಗ, ಡಿ.03: ಆಸ್ತಿ ವಿಚಾರಕ್ಕೆ ನಡೆದ ಜಗಳ ತಾರಕಕ್ಕೇರಿದ್ದು ಬೆಂಕಿ ಹಚ್ಚಿ ವ್ಯಕ್ತಿಯ ಕೊಲೆ ಮಾಡಲಾಗಿರುವ ಘಟನೆ ಶಿವಮೊಗ್ಗದ (Shivamogga) ಬೆಳಲಕಟ್ಟೆ ಗ್ರಾಮದ ಚಾನಲ್ ಬಳಿ ನಡೆದಿದೆ. ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಭೀಕರವಾಗಿ ವ್ಯಕ್ತಿಯ ಹತ್ಯೆ ಮಾಡಲಾಗಿದೆ (Murder). ಬೆಳಲಕಟ್ಟೆ ಗ್ರಾಮದ ಮಹೇಶಪ್ಪ(60) ಕೊಲೆಯಾದ ವ್ಯಕ್ತಿ.

ಬಿಕ್ಕೋನಹಳ್ಳಿಯ ಮಗಳ ಮನೆಯಿಂದ ಮಹೇಶಪ್ಪ ಬರುತ್ತಿದ್ದ ವೇಳೆ ಅಡ್ಡಗಟ್ಟಿ ಕೊಲೆ ಮಾಡಲಾಗಿದೆ ಎನ್ನಲಾಗುತ್ತಿದೆ. ಬೆಳಲಕಟ್ಟೆ ಗ್ರಾಮದ ಕುಮಾರ್ ಹಾಗೂ ಕಾರ್ತಿಕ್ ಎಂಬುವವರು ಕೃತ್ಯ ಎಸಗಿದ್ದಾರೆ. ಘಟನೆ ಬಳಿಕ ಕುಮಾರ್ ಹಾಗೂ ಕಾರ್ತಿಕ್ ಎಸ್ಕೇಪ್ ಆಗಿದ್ದು ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಆಸ್ತಿ ಮಾರಾಟ ವಿಚಾರಕ್ಕೆ ಕಳೆದೊಂದು ವರ್ಷದಿಂದ ಮಹೇಶಪ್ಪ ಹಾಗೂ ಕುಮಾರ್ ನಡುವೆ ಕಲಹ ಇತ್ತು. ಇದೇ ದ್ವೇಷದಲ್ಲಿ ಕೊಲೆ ಮಾಡಲಾಗಿದೆ. ಮಹೇಶಪ್ಪ ಮೃತದೇಹ ಮೆಗ್ಗಾನ್ ಶವಾಗಾರಕ್ಕೆ ರವಾನಿಸಲಾಗಿದೆ. ಘಟನೆ ಸಂಬಂಧ ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಕಾರವಾರ: ಲಾರಿಯಲ್ಲೇ ಗುಪ್ತ ಕಂಪಾರ್ಟ್ಮೆಂಟ್ ನಿರ್ಮಿಸಿ ಗೋವಾದಿಂದ ಆಂಧ್ರಕ್ಕೆ ಸಾಗಿಸುತ್ತಿದ್ದ 4 ಲಕ್ಷಕ್ಕೂ ಹೆಚ್ಚು ಮೌಲ್ಯದ ಮದ್ಯ ವಶ

ಬಾಲಕನ ಶ್ವಾಸಕೋಶದಲ್ಲಿದ್ದ ಗುಂಡು ಸೂಜಿ!

ಶಸ್ತ್ರ ಚಿಕಿತ್ಸೆ ಮೂಲಕ ಬಾಲಕನ ಶ್ವಾಸಕೋಶದಲ್ಲಿದ್ದ ಗುಂಡು ಸೂಜಿಯನ್ನು ವೈದ್ಯರು ಹೊರತೆಗೆದಿದ್ದಾರೆ. ರಾಯಚೂರಿನ ರಿಮ್ಸ್ ಆಸ್ಪತ್ರೆ ವೈದ್ಯರಿಂದ ವಿನೂತನ ಸಾಧನೆ ಮಾಡಿದ್ದು, 13 ವರ್ಷದ ಶಿವಕುಮಾರ್ ಅನ್ನೋ ಬಾಲಕನ ಶ್ವಾಸಕೋಶದ ಶಸ್ತ್ರ ಚಿಕಿತ್ಸೆ ನಡೆಸಿದ್ರು. ಸಿರವಾರ ತಾಲೂಕಿನ ಮುಚ್ಚುಳ ಕ್ಯಾಂಪ್ ನ ನಿವಾಸಿಯಾಗಿರೊ ಬಾಲಕ ಶಿವಕುಮಾರ್, ಶಾಲೆಯಲ್ಲಿ ಆಟವಾಡುವಾಗ ಗುಂಡು ಸೂಜಿಯನ್ನು ನುಂಗಿದ್ದ. ಆಗ ಬಾಲಕನ ಬಲ ಶ್ವಾಸಕೋಶದೊಳಗೆ ಸೇರಿದ್ದ ಗುಂಡು ಸೂಜಿಯನ್ನ ಬ್ರಾಂಕೋಸ್ಕೋಪ್ ಚಿಕಿತ್ಸೆ ಮೂಲಕ ರಿಮ್ಸ್ ವೈದ್ಯರ ತಂಡ ಹೊರತೆಗೆಯುವಲ್ಲಿ ಯಶಸ್ವಿಯಾಗಿದೆ.

ಬಟ್ಟೆ ಅಂಗಡಿಗೆ ಬಂದಿದ್ದ ಯುವತಿಗೆ ಬ್ಲ್ಯಾಕ್​ಮೇಲ್!

ಬಟ್ಟೆ ಅಂಗಡಿಗೆ ಬಂದಿದ್ದ ಯುವತಿಗೆ ಟ್ರಯಲ್ ರೂಮ್​ನಲ್ಲಿ ಆಶ್ಲೀಲ ಫೋಟೋ ತೆಗೆದುಕೊಂಡು ಬ್ಲಾಕ್​ಮೇಲ್ ಮಾಡ್ತಿದ್ದ ಆರೋಪಿಯನ್ನ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಹಾವೇರಿ ಜಿಲ್ಲೆ ಹಾನಗಲ್ ಪಟ್ಟಣದಲ್ಲಿ ಮೈನುದ್ದೀನ್ ಮುಂಡಗೋಡ 32 ವರ್ಷ ವ್ಯಕ್ತಿಯನ್ನ ಬಂಧಿಸಲಾಗಿದೆ. ಬಟ್ಟೆ ಖರೀದಿಗೆಂದು ಹಾನಗಲ್ ಬಾಂಬೆ ಲೇಡಿಸ್ ಕಾರ್ನರ್ ಅಂಗಡಿಗೆ ಹೋಗಿದ್ದಾಗ ಯುವತಿಯ ಆಶ್ಲೀಲ ಫೋಟೋ ತೆಗೆದು, ವಿಡಿಯೋ ಕಾಲ್ ಮಾಡಿ ನಗ್ನವಾಗಿ ತೋರಿಸು ಎಂದು ಕಿರುಕುಳ ಕೊಡುತ್ತಿದ್ದ. ಅಲ್ಲದೆ ಬ್ಲಾಕಮೇಲ್ ಮಾಡಿ 50 ಸಾವಿರ ಚಿನ್ನದ ಸರ ತೆಗೆದುಕೊಂಡಿದ್ದ ಅನ್ನೋದು ತನಿಖೆ ವೇಳೆ ಬಯಲಾಗಿದೆ.

ಅಪರಾಧ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ