AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವಮೊಗ್ಗ ಗಲಾಟೆ ಸಂಬಂಧ ಮಂಗಳೂರಿನಲ್ಲಿ ಕೋಮುದ್ವೇಷದ ಫೇಸ್​ಬುಕ್ ಪೋಸ್ಟ್; ವಿಷ ಬಿತ್ತುವವರಿಗೆ ಎಚ್ಚರಿಕೆ ನೀಡಿದ ಎಸ್​ಪಿ ಶಶಿಕುಮಾರ್

ಅಷ್ಟೇ ಅಲ್ಲದೆ, ಈ ಪ್ರಕರಣದ ಸತ್ಯಾಸತ್ಯತೆ ಬಯಲಾಗಬೇಕಾದರೆ ಕೆ.ಎಸ್. ಈಶ್ವರಪ್ಪ ಅವರನ್ನು ಬಂಧಿಸಿ ತನಿಖೆಗೆ ಒಳಪಡಿಸಿ. ಯಾವ ಮುಸ್ಲಿಂಗೆ ಸುಪಾರಿ ಕೊಟ್ಟು ಕೊಲೆ ಮಾಡಿಸಲಾಗಿದೆ ಎಂದು ತಿಳಿಯುತ್ತದೆ ಎಂದು ಬರೆದುಕೊಂಡಿದ್ದಾರೆ.

ಶಿವಮೊಗ್ಗ ಗಲಾಟೆ ಸಂಬಂಧ ಮಂಗಳೂರಿನಲ್ಲಿ ಕೋಮುದ್ವೇಷದ ಫೇಸ್​ಬುಕ್ ಪೋಸ್ಟ್; ವಿಷ ಬಿತ್ತುವವರಿಗೆ ಎಚ್ಚರಿಕೆ ನೀಡಿದ ಎಸ್​ಪಿ ಶಶಿಕುಮಾರ್
ಮಂಗಳೂರು ಎಸ್ಪಿ ಎನ್. ಶಶಿಕುಮಾರ್
TV9 Web
| Updated By: ganapathi bhat|

Updated on:Feb 21, 2022 | 6:43 PM

Share

ಶಿವಮೊಗ್ಗ: ನಗರದಲ್ಲಿ ಬಜರಂಗದಳ ಕಾರ್ಯಕರ್ತನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಮಂಗಳೂರಿನ ಫೇಸ್​ಬುಕ್ ಗ್ರೂಪ್ ಒಂದ್ ಪ್ರಚೋದನಾಕಾರಿ ಫೇಸ್​​ಬುಕ್​ ಪೋಸ್ಟ್ ಹಂಚಿಕೊಂಡಿದೆ. ಮಂಗಳೂರು ಮುಸ್ಲಿಂಸ್ ಫೇಸ್​​ಬುಕ್ ಪೇಜ್​ನಿಂದ ಪೋಸ್ಟ್​ ಹಾಕಲಾಗಿದೆ. 2015ರಲ್ಲಿ ಪ್ರವಾದಿಗೆ ನಿಂದನೆ ಮಾಡಿದ್ದರಿಂದ ಕೊಲೆಯಾಗಿದೆ. ಪ್ರವಾದಿಗೆ ನಿಂದಿಸಿದ್ರೆ ಎಲ್ಲರಿಗೂ ಇದೇ ಸ್ಥಿತಿ ಎಂದು ಪೋಸ್ಟ್ ಹಂಚಿಕೊಳ್ಳಲಾಗಿದೆ. ಮಂಗಳೂರು ಮುಸ್ಲಿಂಸ್ ಪೇಜ್ ತಾನು 2015ರಲ್ಲೇ ಹರ್ಷ ಬಗ್ಗೆ ಬರೆದುಕೊಂಡಿದ್ದ ಫೇಸ್​ಬುಕ್ ಪೋಸ್ಟ್ ಹಂಚಿಕೊಂಡಿದೆ. ಜೊತೆಗೆ ಅಂದು ಹಾಗೆ ಪ್ರವಾದಿ ನಿಂದಿಸಿದ್ದಕ್ಕೆ ಇಂದು ಹೀಗಾಗಿದೆ ಎಂದು ಹೇಳಿದೆ.

ಅಷ್ಟೇ ಅಲ್ಲದೆ, ಈ ಪ್ರಕರಣದ ಸತ್ಯಾಸತ್ಯತೆ ಬಯಲಾಗಬೇಕಾದರೆ ಕೆ.ಎಸ್. ಈಶ್ವರಪ್ಪ ಅವರನ್ನು ಬಂಧಿಸಿ ತನಿಖೆಗೆ ಒಳಪಡಿಸಿ. ಯಾವ ಮುಸ್ಲಿಂಗೆ ಸುಪಾರಿ ಕೊಟ್ಟು ಕೊಲೆ ಮಾಡಿಸಲಾಗಿದೆ ಎಂದು ತಿಳಿಯುತ್ತದೆ ಎಂದು ಬರೆದುಕೊಂಡಿದ್ದಾರೆ.

ಈ ಮಧ್ಯೆ, ಶಿವಮೊಗ್ಗ ಗಲಭೆ ಪ್ರಕರಣ‌ಕ್ಕೆ ಸಂಬಂಧಿಸಿ ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಪತ್ರಿಕಾಗೋಷ್ಠಿ ನಡೆಸಿದ್ದಾರೆ. ಶಿವಮೊಗ್ಗ ಗಲಾಟೆ ಸಂಬಂಧಿದಂತೆ ಸಾಮಾಜಿಕ ಜಾಲತಾಣದಲ್ಲಿ ಕೋಮುದ್ವೇಷದ ಸಂದೇಶ ಹರಡುವ ಪೋಸ್ಟ್​ಗಳನ್ನು ಹಾಕಲಾಗುತ್ತಿದೆ. ಮಂಗಳೂರಿನಲ್ಲಿ ಕೋಮುದ್ವೇಷ ಹರಡುವ ಪೋಸ್ಟ್​ಗಳು ಹಾಕಲಾಗುತ್ತಿದೆ. ನೂರಕ್ಕೂ ಹೆಚ್ಚು ಸಂಘಟನೆಗಳು, ವ್ಯಕ್ತಿಗಳು ಸೇರಿದಂತೆ 1064 ಪೇಜ್​ಗಳನ್ನು, ಜನರನ್ನು ಕಳೆದ ಎರಡು ತಿಂಗಳಿಂದ ಗಮನಿಸುತ್ತಿದ್ದೇವೆ. ಸೋಷಿಯಲ್ ಮೀಡಿಯಾ ಸೆಲ್ ಗಮನಿಸುತ್ತಿದೆ‌. ಯಾರೇ ವಿಷ ಬೀಜ ಬಿತ್ತಿದ್ರು ಅವರನ್ನು ವಶಕ್ಕೆ ಪಡೆಯುತ್ತೇವೆ ಎಂದು ಶಶಿಕುಮಾರ್ ಎಚ್ಚರಿಕೆ ನೀಡಿದ್ದಾರೆ.

ಮಂಗಳೂರು ಮುಸ್ಲಿಂ ಪೇಜ್ ವಿರುದ್ಧ ಸ್ವಯಂಪ್ರೇರಿತ ದೂರು ದಾಖಲು

ಶಿವಮೊಗ್ಗದಲ್ಲಿ ಬಜರಂಗದಳ ಕಾರ್ಯಕರ್ತನ ಹತ್ಯೆ ಪ್ರಕರಣಲ್ಲೆ ಸಂಬಂಧಿಸಿ ಮಂಗಳೂರಿನಲ್ಲಿ ಪ್ರಚೋದನಾಕಾರಿ ಫೇಸ್ ​ಬುಕ್​ ಪೋಸ್ಟ್ ಹಿನ್ನೆಲೆ ದೂರು ದಾಖಲು ಮಾಡಲಾಗಿದೆ. ಮಂಗಳೂರು ಮುಸ್ಲಿಂ ಪೇಜ್ ವಿರುದ್ಧ ದೂರು ದಾಖಲು ಮಾಡಲಾಗಿದೆ. ಸೆನ್ ಠಾಣೆಯಲ್ಲಿ ಸ್ವಯಂಪ್ರೇರಿತ ದೂರು ದಾಖಲಿಸಲಾಗಿದೆ. ಮಂಗಳೂರು ಪೊಲೀಸ್ ಆಯುಕ್ತ ಶಶಿಕುಮಾರ್ ಈ ಬಗ್ಗೆ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಬಜರಂಗದಳ ಕಾರ್ಯಕರ್ತನ ಹತ್ಯೆ ಪ್ರಕರಣ: ಮೂವರು ಆರೋಪಿಗಳನ್ನು ಬಂಧಿಸಿರುವ ಬಗ್ಗೆ ಆರಗ ಜ್ಞಾನೇಂದ್ರ ಮಾಹಿತಿ

ಇದನ್ನೂ ಓದಿ: ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣ: ತಾಯಿ ದೂರು ಆಧರಿಸಿ ಎಫ್‌ಐಆರ್ ದಾಖಲು

Published On - 6:39 pm, Mon, 21 February 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ