shivamogga: ಭೀಕರ ರಸ್ತೆ ಅಪಘಾತ, 2 ಬಸ್​ಗಳ ನಡುವೆ ಡಿಕ್ಕಿ: ಇಬ್ಬರು ದುರ್ಮರಣ

ಎರಡು ಬಸ್​ಗಳ ನಡುವೆ ಅಪಘಾತ ಸಂಭವಿಸಿದ್ದು, ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ದುರ್ಮರಣ ಹೊಂದಿರುವಂತಹ ಘಟನೆ ಶಿವಮೊಗ್ಗ ತಾಲೂಕಿನ ಕುಂಸಿ ಬಳಿ ನಡೆದಿದೆ.

shivamogga: ಭೀಕರ ರಸ್ತೆ ಅಪಘಾತ, 2 ಬಸ್​ಗಳ ನಡುವೆ ಡಿಕ್ಕಿ: ಇಬ್ಬರು ದುರ್ಮರಣ
ಸಾಂದರ್ಭಿಕ ಚಿತ್ರ
Follow us
|

Updated on:May 11, 2023 | 9:15 PM

ಶಿವಮೊಗ್ಗ: ಎರಡು ಬಸ್​ಗಳ ನಡುವೆ ಡಿಕ್ಕಿ (accident) ಸಂಭವಿಸಿದ್ದು, ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ದುರ್ಮರಣ ಹೊಂದಿರುವಂತಹ ಘಟನೆ ಶಿವಮೊಗ್ಗ ತಾಲೂಕಿನ ಕುಂಸಿ ಬಳಿಯ ಕುಮಧ್ವತಿ ಸೇತುವೆ‌ ಮೇಲೆ ನಡೆದಿದೆ. ಹೊಸದುರ್ಗ ನಿವಾಸಿ ತಿಪ್ಪೇಸ್ವಾಮಿ, ಮತ್ತೊಬ್ಬ ಮಹಿಳೆ ಸಾವನ್ನಪ್ಪಿದ್ದಾರೆ. 30ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿದ್ದು, ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅಪಘಾತ ಸ್ಥಳಕ್ಕೆ ಕುಂಸಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಬಸ್ ಎಲ್ಲಿಂದ ಎಲ್ಲಿಗೆ ಹೊರಟಿತ್ತು ಎಂಬ ಮಾಹಿತಿ ದೊರೆತಿಲ್ಲ. ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಯಿಂದ 5 ಆ್ಯಂಬ್ಯುಲೆನ್ಸ್​ಗಳು ಮತ್ತು ಅಗ್ನಿಶಾಮಕ ದಳ ದಾವಿಸಿದೆ. ಎರಡು ಬಸ್​ಗಳು ಶಿಕಾರಿಪುರದ ಲೈನ್ ಬಸ್​ಗಳು ಎಂದು ತಿಳಿದು ಬಂದಿದೆ.

ಅಪಘಾತದ ಬಗ್ಗೆ ಶಿವಮೊಗ್ಗದಲ್ಲಿ ಟಿವಿ9ಗೆ ಎಸ್​​ಪಿ ಮಿಥುನ್​ಕುಮಾರ್​ ಪ್ರತಿಕ್ರಿಯೆ ನೀಡಿದ್ದು, 2 ಬಸ್​ಗಳ ನಡುವೆ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. 6 ಜನರ ಸ್ಥಿತಿ ಚಿಂತಾಜನಕ, ಮೆಗ್ಗಾನ್​ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಸ್​ನಲ್ಲಿ 60ಕ್ಕೂ ಹೆಚ್ಚು ಪ್ರಯಾಣಿಕರಿದ್ದರು. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಹೇಳಿದರು.

ಇದನ್ನೂ ಓದಿ: ಕಲಬುರಗಿ: ನೇಣುಬಿಗಿದ ಸ್ಥಿತಿಯಲ್ಲಿ ಬಿಜೆಪಿ ಕಾರ್ಯಕರ್ತನ ಶವ ಪತ್ತೆ

ಮೆಗ್ಗಾನ್ ಆಸ್ಪತ್ರೆಗೆ ಸಂಸದ ರಾಘವೇಂದ್ರ, ವಿಜಯೇಂದ್ರ ಭೇಟಿ ನೀಡಿದ್ದು, ಗಾಯಾಳುಗಳ ಆರೋಗ್ಯವನ್ನು ಉಭಯ ನಾಯಕರು ವಿಚಾರಿಸಿದ್ದಾರೆ.

ಬೆಳ್ಳಂ‌ ಬೆಳಗ್ಗೆ ಕಾರು ಬೈಕ್ ನಡುವೆ‌ ಬೀಕರ‌ ರಸ್ತೆ ಅಪಘಾತ; ಇಬ್ಬರು ಸ್ಥಳದಲ್ಲೇ ಸಾವು

ಬೆಂಗಳೂರು: ಬೆಳ್ಳಂ‌ ಬೆಳಗ್ಗೆ ಕಾರು ಬೈಕ್ ನಡುವೆ‌ ಬೀಕರ‌ ರಸ್ತೆ ಅಪಘಾತ ಸಂಭವಿಸಿ ಬೈಕ್​ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಯಲಹಂಕ ತಾಲೂಕಿನ ರಾಜಾನುಕುಂಟೆ ಕಾಕೋಳು ರಸ್ತೆಯ ಚಲ್ಲಹಳ್ಳಿ ಬಳಿ ನಡೆದಿದೆ. ಚಲ್ಲಹಳ್ಳಿ ಗ್ರಾಮದ ರಾಮಯ್ಯ (39) ನಾಗರಾಜ್ (42) ಮೃತ ದುರ್ದೈವಿಗಳು. ಇನ್ನು ಅಪಘಾತದ ರಬಸಕ್ಕೆ ಬೈಕ್ ಮತ್ತು ಕಾರಿನ ಮುಂಬಾಗ ಜಖಂ ಆಗಿದ್ದು, ರಸ್ತೆಯಿಂದ ನೂರು ಮೀಟರ್ ದೂರದಲ್ಲಿ ಬಿದ್ದಿದೆ.

ಇದನ್ನೂ ಓದಿ: ತುಮಕೂರು: ಪ್ರೀತಿ ನಿರಾಕರಿಸಿದ್ದಕ್ಕೆ ಅಪ್ರಾಪ್ತ ಬಾಲಕಿ ಮೇಲೆ ಪ್ರಿಯಕರನಿಂದ ಹಲ್ಲೆ

ಕಾರು-ಟಿಟಿ ವಾಹನ ಮುಖಾಮುಖಿ ಡಿಕ್ಕಿ; ಇಬ್ಬರು ಸ್ಥಳದಲ್ಲೇ ಸಾವು

ಚಿಕ್ಕಮಗಳೂರು: ಕಾರು, ಟಿಟಿ ವಾಹನ ಮುಖಾಮುಖಿ ಡಿಕ್ಕಿಯಾಗಿ, ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕಡೂರು ತಾಲೂಕಿನ ಬೆಂಗಳೂರು ಶಿವಮೊಗ್ಗ ರಾಷ್ಟ್ರೀಯ ಹೆದ್ದಾರಿ 206ರ ಮತಿಘಟ್ಟ ಕ್ರಾಸ್ ಬಳಿ ನಡೆದಿದೆ. ಕಾರಿನಲ್ಲಿದ್ದ ಗಿರಿಧರ್ (46) ಮಯಂಕ್(3) ಮೃತ ರ್ದುದೈವಿಗಳು.

ಹೊನ್ನಾವರದಿಂದ ಸಂಬಂಧಿಕರ ಮದುವೆ ನಿಮಿತ್ತ ಗಿರಿಧರ್ ಕುಟುಂಬ ತೆರಳುವಾಗ, ಎದುರುಗಡೆ ಕೇರಳದಿಂದ ಚಿಕ್ಕಮಗಳೂರಿಗೆ ಪ್ರವಾಸಕ್ಕೆ ಬರುತ್ತಿದ್ದ ಟಿ.ಟಿ ವಾಹನಕ್ಕೆ ಡಿಕ್ಕಿಯಾಗಿದೆ. ಪರಿಣಾಮ ಟಿಟಿ ವಾಹನ ಪಲ್ಟಿಯಾಗಿದೆ. ಕಾರಿನಲ್ಲಿದ್ದ ಮಗು ಸೇರಿದಂತೆ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಟಿ.ಟಿ ವಾಹನದಲ್ಲಿದ್ದ ಕೇರಳ ಮೂಲದ 7 ಪ್ರವಾಸಿಗರಿಗೆ ಗಂಭೀರ ಗಾಯಗಳಾಗಿವೆ. ಕೂಡಲೇ ಅವರನ್ನ ಶಿವಮೊಗ್ಗ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು, ಜಿಲ್ಲೆಯ ಕಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:06 pm, Thu, 11 May 23

ತಾಜಾ ಸುದ್ದಿ
ಮುಂಬೈನಲ್ಲಿ ಜನಸಾಗರ ಮಧ್ಯೆ ಕಪ್ ಹಿಡಿದು ಕುಣಿದ ಬ್ಯೂ ಬಾಯ್ಸ್: ವಿಡಿಯೋ ನೋಡಿ
ಮುಂಬೈನಲ್ಲಿ ಜನಸಾಗರ ಮಧ್ಯೆ ಕಪ್ ಹಿಡಿದು ಕುಣಿದ ಬ್ಯೂ ಬಾಯ್ಸ್: ವಿಡಿಯೋ ನೋಡಿ
ಮುಂಬೈ ಏರ್‌ಪೋರ್ಟ್‌ನಲ್ಲಿ ಟೀಂ ಇಂಡಿಯಾದ ಆಟಗಾರರಿಗೆ ವಾಟರ್ ಸೆಲ್ಯೂಟ್‌
ಮುಂಬೈ ಏರ್‌ಪೋರ್ಟ್‌ನಲ್ಲಿ ಟೀಂ ಇಂಡಿಯಾದ ಆಟಗಾರರಿಗೆ ವಾಟರ್ ಸೆಲ್ಯೂಟ್‌
ದರ್ಶನ್ ಹಾಗೆ ಮಾಡಿರಲು ಸಾಧ್ಯವಿಲ್ಲ: ಸುಮಲತಾ ಅಂಬರೀಶ್
ದರ್ಶನ್ ಹಾಗೆ ಮಾಡಿರಲು ಸಾಧ್ಯವಿಲ್ಲ: ಸುಮಲತಾ ಅಂಬರೀಶ್
ಪ್ರಧಾನಿ ಮೋದಿಯವರನ್ನು ಭೇಟಿಯಾಗಿ ಮುಂಬೈ ಬಂದ ಟೀಮ್ ಇಂಡಿಯಾಗೆ ಭವ್ಯ ಸ್ವಾಗತ
ಪ್ರಧಾನಿ ಮೋದಿಯವರನ್ನು ಭೇಟಿಯಾಗಿ ಮುಂಬೈ ಬಂದ ಟೀಮ್ ಇಂಡಿಯಾಗೆ ಭವ್ಯ ಸ್ವಾಗತ
ಟೀಂ ಇಂಡಿಯಾ ವಿಜಯೋತ್ಸವಕ್ಕೆ ಕಡಲ ಕಿನಾರೆಯಲ್ಲಿ ಜನ ಸಾಗರ: ವಿಹಂಗಮ ನೋಟ
ಟೀಂ ಇಂಡಿಯಾ ವಿಜಯೋತ್ಸವಕ್ಕೆ ಕಡಲ ಕಿನಾರೆಯಲ್ಲಿ ಜನ ಸಾಗರ: ವಿಹಂಗಮ ನೋಟ
ದರ್ಶನ್ ಕುಟುಂಬ  ಜೊತೆ ನಿರಂತರವಾಗಿ ಸಂಪರ್ಕದಲ್ಲಿರುವೆ: ಸುಮಲತಾ ಅಂಬರೀಶ್
ದರ್ಶನ್ ಕುಟುಂಬ  ಜೊತೆ ನಿರಂತರವಾಗಿ ಸಂಪರ್ಕದಲ್ಲಿರುವೆ: ಸುಮಲತಾ ಅಂಬರೀಶ್
ಶ್ರೀರಾಮ ಮಂದಿರ ಮೇಲ್ಚಾವಣಿ ಸೋರಿಕೆಗೆ ಪೇಜಾವರಶ್ರೀ ಸ್ಪಷ್ಟನೆ
ಶ್ರೀರಾಮ ಮಂದಿರ ಮೇಲ್ಚಾವಣಿ ಸೋರಿಕೆಗೆ ಪೇಜಾವರಶ್ರೀ ಸ್ಪಷ್ಟನೆ
ಮುಂಬೈ: ಮುಗಿಲು ಮುಟ್ಟಿದ ಸಂಭ್ರಮ: ರೋಹಿತ್​, ಕೊಹ್ಲಿ ಪರ ಫ್ಯಾನ್ಸ್​ ಘೋಷಣೆ
ಮುಂಬೈ: ಮುಗಿಲು ಮುಟ್ಟಿದ ಸಂಭ್ರಮ: ರೋಹಿತ್​, ಕೊಹ್ಲಿ ಪರ ಫ್ಯಾನ್ಸ್​ ಘೋಷಣೆ
ರಾಮನಗರ ಬಿಬಿಎಂಪಿ ವ್ಯಾಪ್ತಿಗೆ ಸೇರಿಸುವ ಡಿಕೆಶಿ ಆಶಯಕ್ಕೆ ರಾಜಣ್ಣ ಸ್ವಾಗತ
ರಾಮನಗರ ಬಿಬಿಎಂಪಿ ವ್ಯಾಪ್ತಿಗೆ ಸೇರಿಸುವ ಡಿಕೆಶಿ ಆಶಯಕ್ಕೆ ರಾಜಣ್ಣ ಸ್ವಾಗತ
ಟೀಮ್ ಇಂಡಿಯಾ ವಿಜಯೋತ್ಸವ: ಎಲ್ಲಿ ನೋಡಿದರಲ್ಲಿ ಜನ, ಅಭಿಮಾನಿಗಳ ಸಂಭ್ರಮ
ಟೀಮ್ ಇಂಡಿಯಾ ವಿಜಯೋತ್ಸವ: ಎಲ್ಲಿ ನೋಡಿದರಲ್ಲಿ ಜನ, ಅಭಿಮಾನಿಗಳ ಸಂಭ್ರಮ