ಆರಗ ಜ್ಞಾನೇಂದ್ರ ವಿರುದ್ಧವೇ ಕೇಸುಗಳಿವೆ, ಈಗ ಅವರೇ ಗೃಹ ಮಂತ್ರಿ! ಹೀಗಾದರೆ ನ್ಯಾಯ ಸಿಗುತ್ತಾ? -ಕಿಮ್ಮನೆ ರತ್ನಾಕರ್ ವ್ಯಂಗ್ಯ

ಆರಗ ಜ್ಞಾನೇಂದ್ರ ತೀರ್ಥಹಳ್ಳಿಯ ಮರ್ಯಾದೆ ತೆಗೀತಿದ್ದಾರೆ. ಆರಗ ಜ್ಞಾನೇಂದ್ರ ತೀರ್ಥಹಳ್ಳಿಯ ಪೊಲೀಸ್ ಠಾಣೆಗಳು ಮತ್ತು ಆರ್‌ಎಫ್ ಕಚೇರಿಗೆ ಮಾತ್ರ ಸೀಮಿತವಾಗಿದ್ದಾರೆ. ಬಿಜೆಪಿಯವರೇ ಅಕ್ರಮವಾಗಿ ಮರಳು ದಂಧೆ ನಡೆಸ್ತಿದ್ದಾರೆ. ಬಿಜೆಪಿ ಕಾರ್ಯಕರ್ತರೇ ಗೃಹ ಸಚಿವರು, ಪೊಲೀಸರಾಗಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಕೇಸ್​ ದಾಖಲಿಸುತ್ತಿದ್ದಾರೆ ಎಂದು ಕಿಮ್ಮನೆ ರತ್ನಾಕರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಆರಗ ಜ್ಞಾನೇಂದ್ರ ವಿರುದ್ಧವೇ ಕೇಸುಗಳಿವೆ, ಈಗ ಅವರೇ ಗೃಹ ಮಂತ್ರಿ! ಹೀಗಾದರೆ ನ್ಯಾಯ ಸಿಗುತ್ತಾ? -ಕಿಮ್ಮನೆ ರತ್ನಾಕರ್ ವ್ಯಂಗ್ಯ
ಆರಗ ಜ್ಞಾನೇಂದ್ರ ವಿರುದ್ಧವೇ ಅದೆಷ್ಟೋ ಕೇಸುಗಳಿವೆ, ಈಗ ನೋಡಿದರೆ ಅವರೇ ಗೃಹ ಮಂತ್ರಿ! ಹೀಗಾದರೆ, ನ್ಯಾಯ ಸಿಗುತ್ತಾ!? - ಕಿಮ್ಮನೆ ರತ್ನಾಕರ್ ವ್ಯಂಗ್ಯ
Follow us
TV9 Web
| Updated By: ಸಾಧು ಶ್ರೀನಾಥ್​

Updated on:Nov 22, 2021 | 1:08 PM

ಶಿವಮೊಗ್ಗ: ಆರಗ ಜ್ಞಾನೇಂದ್ರ ವಿರುದ್ಧವೇ ಅದೆಷ್ಟೋ ಕೇಸುಗಳಿವೆ, ಈಗ ನೋಡಿದರೆ ಅವರೇ ಗೃಹ ಮಂತ್ರಿಯಾಗಿದ್ದಾರೆ! ಹೀಗಾದರೆ, ನ್ಯಾಯ ಸಿಗುತ್ತಾ!? ಎಂದು ಕೆಪಿಸಿಸಿ ವಕ್ತಾರ ಕಿಮ್ಮನೆ ರತ್ನಾಕರ್ ವ್ಯಂಗ್ಯವಾಡಿದ್ದಾರೆ. ಆರಗ ಜ್ಞಾನೇಂದ್ರ ಇಡೀ ರಾಜ್ಯಕ್ಕೆ ಗೃಹ ಮಂತ್ರಿಯಾಗಿಲ್ಲ. ಅವರು ಕೇವಲ ತೀರ್ಥಹಳ್ಳಿಗೆ ಗೃಹ ಸಚಿವರಾಗಿದ್ದಾರೆ ಎಂದಿರುವ ಕಿಮ್ಮನೆ ರತ್ನಾಕರ್, ಆರಗ ಜ್ಞಾನೇಂದ್ರ ತೀರ್ಥಹಳ್ಳಿಯ ಮರ್ಯಾದೆ ತೆಗೀತಿದ್ದಾರೆ. ಆರಗ ಜ್ಞಾನೇಂದ್ರ ತೀರ್ಥಹಳ್ಳಿಯ ಪೊಲೀಸ್ ಠಾಣೆಗಳು ಮತ್ತು ಆರ್‌ಎಫ್ ಕಚೇರಿಗೆ ಮಾತ್ರ ಸೀಮಿತವಾಗಿದ್ದಾರೆ. ಬಿಜೆಪಿಯವರೇ ಅಕ್ರಮವಾಗಿ ಮರಳು ದಂಧೆ ನಡೆಸ್ತಿದ್ದಾರೆ. ಬಿಜೆಪಿ ಕಾರ್ಯಕರ್ತರೇ ಗೃಹ ಸಚಿವರು, ಪೊಲೀಸರಾಗಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಕೇಸ್​ ದಾಖಲಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಶಿವಮೊಗ್ಗದಲ್ಲಿ ಮಾಜಿ ಸಚಿವ, ಕೆಪಿಸಿಸಿ ವಕ್ತಾರ ಕಿಮ್ಮನೆ ರತ್ನಾಕರ್ ಅವರು ಗೃಹ ಮಂತ್ರಿ ಆರಗ ಜ್ಞಾನೇಂದ್ರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಗೃಹ ಮಂತ್ರಿಯಾಗಿ ಆರಗ ಕಾರ್ಯವೈಖರಿ ಸರಿಯಿಲ್ಲ. ಆರಗ ಸಚಿವರಾದಾಗ ನಾನೂ ಅವರಿಗೆ ಶುಭ ಹಾರೈಸಿದ್ದೆ. ಆದರೆ ಇದೀಗ ಅವರು ನಡೆದುಕೊಳ್ಳುವ ರೀತಿ ನೋಡಿದರೆ ತೀರ್ಥಹಳ್ಳಿ ಮರ್ಯಾದೆ ತೆಗೆಯುವ ಕೆಲಸ ಮಾಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.

ತೀರ್ಥಹಳ್ಳಿಯಲ್ಲಿ ಅದೆಷ್ಟೋ ಕೋಮು ಗಲಭೆಗಳು ನಡೆದಿವೆ. ಅದರಲ್ಲಿ ಆರಗ ವಿರುದ್ಧವೇ ಅದೆಷ್ಟೋ ಕೇಸುಗಳಿವೆ. ಈಗ ನೋಡಿದರೆ, ಅವರೇ ಗೃಹಮಂತ್ರಿ. ಹೀಗಾದರೆ, ನ್ಯಾಯ ಸಿಗುತ್ತಾ!? ಎಲ್ಲಾ ಜಾತಿ ಧರ್ಮಗಳನ್ನು ಒಟ್ಟಾಗಿ ತೆಗೆದುಕೊಂಡು ಹೋಗದೇ ಇದ್ದರೆ ಈ ದೇಶ ಉಳಿಯಲ್ಲ. ದೇಶದಲ್ಲಿ ದುರಾಡಳಿತ ನಡೆಯುತ್ತಿದ್ದು, ಮೋದಿಯ ಒಳ್ಳೆಯ ದಿನಗಳು ಎಲ್ಲಿವೆ ಎಂದು ಕಿಮ್ಮನೆ ರತ್ನಾಕರ್ ಪ್ರಶ್ನೆ ಮಾಡಿದರು.

ಬರುವ ಎಂ.ಎಲ್.ಸಿ. ಚುನಾವಣೆಯಲ್ಲಿ ನಮ್ಮ ಕಾಂಗ್ರೆಸ್ ಅಭ್ಯರ್ಥಿ ಗೆಲುವು ಸಾಧಿಸಲಿದ್ದಾರೆ. ಈಗಿರುವ ಬಿಟ್ ಕಾಯಿನ್ ಸೇರಿದಂತೆ, ವಿವಿಧ ಬೆಳವಣಿಗೆಗಳು ನೋಡಿದರೆ ಬೊಮ್ಮಾಯಿ ತಲೆದಂಡ ಆಗಬಹುದು ಎಂಬ ರಾಜಕೀಯ ಲೆಕ್ಕಾಚಾರವನ್ನೂ ಮುಂದಿಟ್ಟರು.

ಗಾಂಧಿ, ನೆಹರು ವಿರುದ್ಧವಾಗಿ ಕೆಲವರು ಪುಸ್ತಕ ಬರೀತಾರೆ. ಹೀಗೆ ಬರೆಯುವವರ ವೈಯಕ್ತಿಕ ಬದುಕು ಕುಲಗೆಟ್ಟಿದೆ. ಅವರು ತಮ್ಮ ಮಕ್ಕಳಿಗೇ ಮಾದರಿ ಆಗಲು ಸಾಧ್ಯವಿಲ್ಲ. ಅಂತಹವರು ಗಾಂಧಿ, ನೆಹರು ವಿರುದ್ಧ ಪುಸ್ತಕ ಬರೆಯುತ್ತಾರೆ ಎಂದು ಚಕ್ರವರ್ತಿ ಸೂಲಿಬೆಲೆ ವಿರುದ್ಧ ಶಿವಮೊಗ್ಗದಲ್ಲಿ ಕೆಪಿಸಿಸಿ ವಕ್ತಾರ ಕಿಮ್ಮನೆ ರತ್ನಾಕರ್ ಪರೋಕ್ಷ ವಾಗ್ದಾಳಿ ನಡೆಸಿದರು.

ಪ್ರಧಾನಿ ನರೇಂದ್ರ‌ಮೋದಿ ಚಿನ್ನದ ರಸ್ತೆ ಮಾಡುತ್ತಾರೆ, ದೇಶದ ಸಾಲ ತೀರಿಸಿದ್ದಾರೆ ಎನ್ನುತ್ತಿದ್ದಾರೆ. ಆದರೆ ಸಾಲ ಮಾಡಿ ದೇಶ ಬಿಟ್ಟು ಓಡಿಹೋದವರು ಯಾರೂ ವಾಪಸ್ ಬಂದಿಲ್ಲ ಎಂದು ಕಿಮ್ಮನೆ ರತ್ನಾಕರ್ ವ್ಯಂಗ್ಯವಾಡಿದರು.

ಇದನ್ನೂ ಓದಿ: ಬಿಟ್​ಕಾಯಿನ್ ಅಂದ್ರೆ ಕನ್ನಡಿಯೊಳಗಿನ ಗಂಟು: ಗೃಹ ಸಚಿವ ಆರಗ ಜ್ಞಾನೇಂದ್ರ

ಸರ್ಕಾರವನ್ನು ವಜಾ ಮಾಡುವಂತೆ ರಾಜ್ಯಪಾಲರಿಗೆ ಮನವಿ ಸಲ್ಲಿಸುತ್ತೇವೆ |Tv9Kannada

Published On - 12:55 pm, Mon, 22 November 21

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್