ಶಿವಮೊಗ್ಗದ ರಾಗಿಗುಡ್ಡದಲ್ಲಿ ಸಾಮೂಹಿಕ ಗಣೇಶ ವಿಸರ್ಜನೆ; ಸುತ್ತಮುತ್ತ ಪೊಲೀಸ್ ಬಿಗಿಬಂದೋಬಸ್ತ್
ಇಂದು(ಗುರುವಾರ) ಸಂಜೆ ಶಿವಮೊಗ್ಗದ ರಾಗಿಗುಡ್ಡದಲ್ಲಿ ಸಾಮೂಹಿಕ ಗಣೇಶ ವಿಸರ್ಜನೆ ಹಮ್ಮಿಕೊಳ್ಳಲಾಗಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಸುತ್ತಮುತ್ತಲೂ ಪೊಲೀಸ್ ಬಿಗಿಬಂದೋಬಸ್ತ್ ಮಾಡಲಾಗಿದೆ. ಜೊತೆಗೆ ಗಣಪತಿ ವಿಸರ್ಜನಾ ಕರ್ತವ್ಯದ ಕುರಿತು ಸಿಬ್ಬಂದಿಗಳಿಗೆ ಎಸ್ಪಿ ಮಿಥುನ್ ಕುಮಾರ್ ಸಲಹೆ ಸೂಚನೆ ನೀಡಿದ್ದಾರೆ.
ಶಿವಮೊಗ್ಗ, ಸೆ.12: ನಗರದ ರಾಗಿಗುಡ್ಡದಲ್ಲಿ ಇಂದು(ಗುರುವಾರ) ಸಂಜೆ ಸಾಮೂಹಿಕ ಗಣೇಶ ವಿಸರ್ಜನೆ ಹಿನ್ನಲೆ ಪೊಲೀಸ್ ಬಿಗಿಬಂದೋಬಸ್ತ್ ಮಾಡಲಾಗಿದೆ. ರಾಗಿಗುಡ್ಡ ಬಡಾವಣೆಯ ವಿವಿಧ ಏರಿಯಾದಲ್ಲಿ ಒಟ್ಟು 10 ಗಣಪತಿ ಪ್ರತಿಷ್ಠಾಪನೆ ಮಾಡಲಾಗಿದ್ದು, ಪ್ರತಿ ವರ್ಷದಂತೆ ಈ ವರ್ಷವೂ ಸಾಮೂಹಿಕ ಗಣೇಶ ವಿಸರ್ಜನೆ ಹಮ್ಮಿಕೊಳ್ಳಲಾಗಿದೆ. ಇನ್ನು ಕಳೆದ ವರ್ಷ ಈದ್ ಮಿಲಾದ್ ಹಬ್ಬದ ಮೆರವಣಿಗೆ ವೇಳೆ ಗಲಾಟೆ ಹಿನ್ನಲೆ ಈ ಬಾರಿ ಮುಂಜಾಗ್ರತೆ ಕೈಗೊಳ್ಳಲಾಗಿದೆ.
ಮುಂಜಾಗ್ರತಾ ಕ್ರಮ ಕೈಗೊಂಡ ಪೊಲೀಸ್ ಇಲಾಖೆ
- 04 ಮಂದಿ ಡಿವೈಎಸ್ ಪಿ,
- 14 ಮಂದಿ ಇನ್ಸ್ ಪೆಕ್ಟರ್
- 26 ಮಂದಿ ಪಿಎಸ್ ಐ
- 56 ಮಂದಿ ಎಎಸ್ ಐ
- 416 ಮಂದಿ ಹೆಡ್ ಕಾನ್ಸ್‌ಟೇಬಲ್, ಕಾನ್ಸ್‌ಟೇಬಲ್ ಗಳು
- 236 ಮಂದಿ ಗೃಹ ರಕ್ಷಕದಳ
- 01 ಆರ್ ಎಎಫ್ ತುಕಡಿ
- 05 ಕೆಎಸ್ ಆರ್ ಪಿ ತುಕಡಿ ಕರ್ತವ್ಯಕ್ಕೆ ನಿಯೋಜಿಸಲಾಗಿದೆ.
ಇನ್ನು ಗಣಪತಿ ವಿಸರ್ಜನಾ ಕರ್ತವ್ಯದ ಕುರಿತು ಸಿಬ್ಬಂದಿಗಳಿಗೆ ಎಸ್ಪಿ ಮಿಥುನ್ ಕುಮಾರ್ ಸಲಹೆ ಸೂಚನೆ ನೀಡಿದ್ದಾರೆ.
ಇದನ್ನೂ ಓದಿ:ಶಿವಮೊಗ್ಗದಲ್ಲಿ ಗಣೇಶ ವಿಸರ್ಜನೆ ವೇಳೆ ಎರಡು ಗುಂಪುಗಳ ಮಧ್ಯೆ ಗಲಾಟೆ: 30ಕ್ಕೂ ಹೆಚ್ಚು ಜನರು ವಶಕ್ಕೆ
ಕಳೆದ ವರ್ಷ ಈದ್ ಮಿಲಾದ್ ಹಬ್ಬದಾಚರಣೆ ವೇಳೆ ರಾಗಿಗುಡ್ಡದಲ್ಲಿ ಪ್ರಚೋದನಾಕಾರಿ ಫ್ಲೇಕ್ಸ್ ಮತ್ತು ಕಟೌಟ್ ವಿವಾದ ಶುರುಗಾಗಿತ್ತು. ಇದು ಬಳಿಕ ಎರಡು ಕೋಮಿನ ನಡುವೆ ಹಿಂಸಾರೂಪ ಪಡೆದುಕೊಂಡಿತ್ತು. 15 ದಿನಗಳ ರಾಗಿಗುಡ್ಡದಲ್ಲಿ 144 ಸೆಕ್ಷನ್ ಜಾರಿ ಕೂಡ ಮಾಡಲಾಗಿತ್ತು. ಎಲ್ಲೆಂದರಲ್ಲಿ ಕಲ್ಲು ತೂರಾಟ, ಲಾಠಿ ಚಾರ್ಜ್, ಮನೆ ಮೇಲೆ ಕಲ್ಲುತೂರಾಟ ಸೇರಿದಂತೆ ಅನೇಕ ಹಿಂಸಾರೂಪದ ಘಟನೆಗಳು ನಡೆದಿದ್ದವು. ಈ ವರ್ಷ ಶಾಂತಿಯುತವಾಗಿ ಹಬ್ಬದಾಚರಣೆ ಆಗಬೇಕಿದೆ. ಈ ಹಿನ್ನಲೆಯಲ್ಲಿ ಎರಡು ಕೋಮಿನ ಮುಖಂಡರನ್ನು ಸೇರಿಸಿ ಶಾಂತಿ ಸಭೆಗಳು ನಿರಂತರವಾಗಿ ಶಿವಮೊಗ್ಗದಲ್ಲಿ ನಡೆದಿವೆ. ಅದರಂತೆ ಇಂದು ಖಾಕಿ ಸರ್ಪಗಾವಲಿನಲ್ಲಿ ಸಾಮೂಹಿಕ ಗಣೇಶ ವಿಸರ್ಜನೆ ನಡೆಯಲಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ