ಸರ್ಕಾರಿ ಜಮೀನು ಒತ್ತುವರಿ ಪತ್ತೆಗೆ ಜಿಪಿಎಸ್​ ಮೂಲಕ ಸರ್ವೆ; ಶಿವಮೊಗ್ಗದಲ್ಲಿ ಕೃಷ್ಣ ಭೈರೇಗೌಡ ಹೇಳಿಕೆ

ದಾಖಲೆಯಲ್ಲಿ 250 ಎಕರೆ ಇದ್ದರೆ, ಭೌತಿಕವಾಗಿ 200 ಎಕರೆ ಕಂಡುಬರುತ್ತಿದೆ. ಇಂತಹ ಮಿಸ್​ ಮ್ಯಾಚ್​ಗಳನ್ನು ಸರಿಪಡಿಸಬೇಕಿದೆ. ದಾಖಲೆಯಲ್ಲಿ ಬೆಳೆ ಎಂಟ್ರಿ ಸಮಸ್ಯೆಯನ್ನು ಕೂಡಲೇ ಬಗೆಹರಿಸುತ್ತೇವೆ. ರಾಜ್ಯದಲ್ಲಿ ಸರ್ಕಾರಿ ಜಮೀನು ಒತ್ತುವರಿ ಬಗ್ಗೆ ಜಿಪಿಎಸ್​ ಮೂಲಕ ಸರ್ವೆ ಮಾಡಿಸಲಾಗುವುದು. ಕಂದಾಯ ಇಲಾಖೆಯಲ್ಲಿ ಸುಧಾರಣೆ ತರಲಾಗುವುದು ಎಂದು ಕೃಷ್ಣ ಭೈರೇಗೌಡ ಹೇಳಿದರು.

ಸರ್ಕಾರಿ ಜಮೀನು ಒತ್ತುವರಿ ಪತ್ತೆಗೆ ಜಿಪಿಎಸ್​ ಮೂಲಕ ಸರ್ವೆ; ಶಿವಮೊಗ್ಗದಲ್ಲಿ ಕೃಷ್ಣ ಭೈರೇಗೌಡ ಹೇಳಿಕೆ
ಕೃಷ್ಣ ಭೈರೇಗೌಡ
Follow us
Basavaraj Yaraganavi
| Updated By: Ganapathi Sharma

Updated on: Sep 06, 2023 | 8:23 PM

ಶಿವಮೊಗ್ಗ, ಸೆಪ್ಟೆಂಬರ್ 6: ರಾಜ್ಯದಲ್ಲಿ ಸರ್ಕಾರಿ ಜಮೀನು ಒತ್ತುವರಿ ಬಗ್ಗೆ ಜಿಪಿಎಸ್​ ಮೂಲಕ ಸರ್ವೆ ಮಾಡಲಾಗುವುದು. ಕಂದಾಯ ಇಲಾಖೆಯಲ್ಲಿ ಸುಧಾರಣೆ ತರುತ್ತೇನೆ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ (Krishna Byre Gowda) ಬುಧವಾರ ಹೇಳಿದರು. ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಶಿವಮೊಗ್ಗ ಜಿಲ್ಲೆಯಲ್ಲಿ ಮಂಜೂರಾತಿ ಸಂಬಂಧ ಸಾಕಷ್ಟು ಸಮಸ್ಯೆಗಳಿವೆ. ಅರಣ್ಯ, ಕಂದಾಯ ಇಲಾಖೆ ನಡುವೆ ಬಿಡಿಸಲಾಗದ ಗೊಂದಲಗಳಿವೆ. ಡ್ರೋನ್ ಕ್ಯಾಮರಾ ಬಳಸಿ ಸರ್ವೆ ಮಾಡಿದರೂ ಪ್ರಯೋಜನವಾಗುವುದಿಲ್ಲ. ಸರ್ವೆ ಇಲಾಖೆಯಲ್ಲಿ ಸಿಬ್ಬಂದಿ ಕೊರತೆಯಿದೆ. ಹೆಚ್ಚಿನ ಮಾನವ ಸಂಪನ್ಮೂಲ ಒದಗಿಸುವಂತೆ ಆಯುಕ್ತರಿಗೆ ಸೂಚಿಸಿದ್ದೇನೆ ಎಂದು ಹೇಳಿದರು.

2 ಸಾವಿರ ಪರವಾನಗಿ ಹೊಂದಿದ ಸರ್ವೆಯರ್​ಗಳ ನೇಮಕಕ್ಕೆ ಚಾಲನೆ ನೀಡಲಾಗಿದೆ. 1700 ಗ್ರಾಮ ಲೆಕ್ಕಿಗರ ನೇಮಕಾತಿ ಪ್ರಕ್ರಿಯೆಗೂ ಚಾಲನೆ ನೀಡಿದ್ದೇನೆ. ರಾಜ್ಯಾದ್ಯಂತ ಏಕರೂಪ ನೇಮಕಾತಿ ನಡೆಸಲು ಸೂಚನೆ ನೀಡಿದ್ದೇನೆ ಎಂದು ಅವರು ಮಾಹಿತಿ ನೀಡಿದರು.

ದಾಖಲೆಯಲ್ಲಿ 250 ಎಕರೆ ಇದ್ದರೆ, ಭೌತಿಕವಾಗಿ 200 ಎಕರೆ ಕಂಡುಬರುತ್ತಿದೆ. ಇಂತಹ ಮಿಸ್​ ಮ್ಯಾಚ್​ಗಳನ್ನು ಸರಿಪಡಿಸಬೇಕಿದೆ. ದಾಖಲೆಯಲ್ಲಿ ಬೆಳೆ ಎಂಟ್ರಿ ಸಮಸ್ಯೆಯನ್ನು ಕೂಡಲೇ ಬಗೆಹರಿಸುತ್ತೇವೆ. ರಾಜ್ಯದಲ್ಲಿ ಸರ್ಕಾರಿ ಜಮೀನು ಒತ್ತುವರಿ ಬಗ್ಗೆ ಜಿಪಿಎಸ್​ ಮೂಲಕ ಸರ್ವೆ ಮಾಡಿಸಲಾಗುವುದು. ಕಂದಾಯ ಇಲಾಖೆಯಲ್ಲಿ ಸುಧಾರಣೆ ತರಲಾಗುವುದು ಎಂದು ಕೃಷ್ಣ ಭೈರೇಗೌಡ ಹೇಳಿದರು.

ಇದನ್ನೂ ಓದಿ: ಬೆಂಗಳೂರು: ರಾತ್ರಿ ಪ್ರಯಾಣಿಸುವವರಿಗೆ ಸಿಹಿಸುದ್ದಿ ನೀಡಿದ ಬಿಎಂಟಿಸಿ; ಏನು ಗೊತ್ತಾ?

ಉತ್ತಮವಾಗಿ ಕೆಲಸ ಮಾಡಿದವರಿಗೆ ಸರ್ವೋತ್ತಮ ಅಧಿಕಾರಿ ಪ್ರಶಸ್ತಿ

ಉತ್ತಮವಾಗಿ ಕೆಲಸ ಮಾಡಿದವರಿಗೆ ಸರ್ವೋತ್ತಮ ಅಧಿಕಾರಿ ಪ್ರಶಸ್ತಿ ನೀಡುತ್ತೇವೆ. ಬೆಂಗಳೂರಿನಲ್ಲಿ ಸರ್ಕಾರಿ ಭೂಮಿ ಪರಭಾರೆ ಬಗ್ಗೆ ತನಿಖೆ ನಡೆಸುತ್ತೇವೆ. ಖಾಸಗಿ ವ್ಯಕ್ತಿಗಳ ಜೊತೆ ಕೈಜೋಡಿಸುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಕಡೂರು ತಾಲೂಕಿನಲ್ಲಿ ಅನರ್ಹರಿಗೆ ಸರ್ಕಾರಿ ಭೂಮಿ ಮಂಜೂರು ಮಾಡಿದ್ದ ಅಧಿಕಾರಿ ಜೈಲಿನ ಕಂಬಿ ಎಣಿಸುತ್ತಿದ್ದಾನೆ. ಕಂದಾಯ ಇಲಾಖೆಯಲ್ಲಿನ ಸಮಸ್ಯೆ ಬಗೆಹರಿಸಲು ಅದಾಲತ್ ಆಯೋಜನೆ ಮಾಡಲಾಗುವುದು. ಕಂದಾಯ ಇಲಾಖೆಯಲ್ಲಿ ಮಧ್ಯವರ್ತಿಗಳ ಹಾವಳಿ ತಪ್ಪಿಸುತ್ತೇವೆ. ಕಂದಾಯ ಇಲಾಖೆಯಲ್ಲಿ ಪ್ರತಿ ತಿಂಗಳು ಪ್ರಗತಿ ಪರಿಶೀಲನೆ ಮಾಡುತ್ತೇನೆ. ಪ್ರತಿ ತಿಂಗಳು ಸಭೆ ನಡೆಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಸುಮ್ಮನೆ ಬಾಯಿ ಮಾತಿನಲ್ಲಿ ವಚನ ಹೇಳಿ ಕಾಲ ಕಳೆದರೆ ಆಗುವುದಿಲ್ಲ ಎಂದು ಕೃಷ್ಣ ಭೈರೇಗೌಡ ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ