ವೀಕೆಂಡ್ ಕರ್ಫ್ಯೂಗೆ ಅಪಸ್ವರ ಎತ್ತಿದ ಈಶ್ವರಪ್ಪ, ಮಾರ್ಗಸೂಚಿ ಉಲ್ಲಂಘನೆಗೆ ಜೈ ಜೈ ಎಂದ ಗೃಹ ಸಚಿವ ಆರಗ ಜ್ಞಾನೇಂದ್ರ!
ಮಹಾಮಾರಿ ಕೊರೊನಾ ಹಾಗೂ ಒಮಿಕ್ರಾನ್ ಆತಂಕ ಹಿನ್ನೆಲೆ ಬಿಜೆಪಿ ಸರ್ಕಾರ ಕೈಗೊಂಡ ವೀಕೆಂಡ್ ಕರ್ಫ್ಯೂ ಮತ್ತು ಕಟ್ಟುನಿಟ್ಟಿನ ಕ್ರಮಕ್ಕೆ ಬಿಜೆಪಿ ಸರ್ಕಾರದಲ್ಲೇ ಅಪಸ್ವರ ಕೇಳಿ ಬಂದಿದೆ. ಸರ್ಕಾರದ ಕ್ರಮದ ಬಗ್ಗೆ ಶಿವಮೊಗ್ಗದಲ್ಲಿ ಮಾತನಾಡಿದ ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರಪ್ಪ, ಬೆಂಗಳೂರು ಸೇರಿದಂತೆ ಗಡಿ ಜಿಲ್ಲೆಗಳಲ್ಲಿ ಮಾತ್ರ ಕಟ್ಟುನಿಟ್ಟಿನ ಕ್ರಮ ವಹಿಸಿ ಎಂದಿದ್ದಾರೆ.
ಶಿವಮೊಗ್ಗ: ರಾಜ್ಯ ಸರ್ಕಾರ ಕೈಗೊಂಡಿರುವ ವೀಕೆಂಡ್ ಕರ್ಫ್ಯೂ ಮತ್ತು ಕಟ್ಟುನಿಟ್ಟಿನ ಕ್ರಮಕ್ಕೆ ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರಪ್ಪ ಅಪಸ್ವರ ನುಡಿದಿದ್ದಾರೆ. ಬೆಂಗಳೂರು, ಗಡಿ ಜಿಲ್ಲೆಗಳಲ್ಲಿ ಮಾತ್ರ ಕಟ್ಟುನಿಟ್ಟಿನ ಕ್ರಮಕೈಗೊಳ್ಳಿ. ಇದನ್ನು ಹೊರತುಪಡಿಸಿ ರಾಜ್ಯದೆಲ್ಲೆಡೆ ಕಠಿಣ ಕ್ರಮ ಅಗತ್ಯವಿಲ್ಲ ಎಂದು ಅಭಿಪ್ರಾಯ ಹೊರ ಹಾಕಿದ್ದಾರೆ.
ಮಹಾಮಾರಿ ಕೊರೊನಾ ಹಾಗೂ ಒಮಿಕ್ರಾನ್ ಆತಂಕ ಹಿನ್ನೆಲೆ ಬಿಜೆಪಿ ಸರ್ಕಾರ ಕೈಗೊಂಡ ವೀಕೆಂಡ್ ಕರ್ಫ್ಯೂ ಮತ್ತು ಕಟ್ಟುನಿಟ್ಟಿನ ಕ್ರಮಕ್ಕೆ ಬಿಜೆಪಿ ಸರ್ಕಾರದಲ್ಲೇ ಅಪಸ್ವರ ಕೇಳಿ ಬಂದಿದೆ. ಸರ್ಕಾರದ ಕ್ರಮದ ಬಗ್ಗೆ ಶಿವಮೊಗ್ಗದಲ್ಲಿ ಮಾತನಾಡಿದ ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರಪ್ಪ, ಬೆಂಗಳೂರು ಸೇರಿದಂತೆ ಗಡಿ ಜಿಲ್ಲೆಗಳಲ್ಲಿ ಮಾತ್ರ ಕಟ್ಟುನಿಟ್ಟಿನ ಕ್ರಮ ವಹಿಸಿ. ಇದನ್ನು ಹೊರತುಪಡಿಸಿ ರಾಜ್ಯದೆಲ್ಲೆಡೆ ಕಠಿಣ ಕ್ರಮ ಕೈಗೊಳ್ಳುವ ಅಗತ್ಯ ಇಲ್ಲ. ಈ ಬಗ್ಗೆ ನಾಳಿನ ಸಚಿವ ಸಂಪುಟದಲ್ಲಿ ಅಭಿಪ್ರಾಯ ಹೇಳುತ್ತೇನೆ. ಇದರಿಂದ ವ್ಯಾಪಾರ ವಹಿವಾಟು, ಬಡ ಶ್ರಮಿಕ ವರ್ಗಕ್ಕೆ ಸಮಸ್ಯೆ ಆಗುತ್ತೆ. ರಾಜ್ಯದ ವಿವಿಧೆಡೆಯಿಂದ ನನಗೆ ಸಾಕಷ್ಟು ಕರೆಗಳು ಬರುತ್ತಿವೆ ಎಂದು ಶಿವಮೊಗ್ಗದಲ್ಲಿ ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರಪ್ಪ ಸರ್ಕಾರದ ಕ್ರಮದ ಬಗ್ಗೆ ವಿರೋಧ ವ್ಯಕ್ತಪಡಿಸಿದ್ದಾರೆ.
ತವರು ಕ್ಷೇತ್ರದ ಜಾತ್ರೆಯನ್ನ ಸಮರ್ಥಿಸಿಕೊಂಡ ಗೃಹ ಸಚಿವ ಇನ್ನು, ಶಿವಮೊಗ್ಗದವರೇ ಆದ ಮತ್ತೊಬ್ಬ ಸಚಿವರು, ತಮ್ಮದೇ ತವರು ಕ್ಷೇತ್ರದಲ್ಲಿ ಕೊರೊನಾ ಮಾರ್ಗಸೂಚಿ ಉಲ್ಲಂಘಿಸಿ ನಡೆಸಿರುವ (ತೀರ್ಥಹಳ್ಳಿಯಲ್ಲಿ ರಾಮೇಶ್ವರ ದೇವಸ್ಥಾನದ ಜಾತ್ರೆ) ಜಾತ್ರೆಯನ್ನು ಸಮರ್ಥಿಸಿಕೊಂಡಿದ್ದಾರೆ.
ಕೊರೊನಾ ಹೆಚ್ಚಾಗುತ್ತಿರುವ ಹಿನ್ನೆಲೆ ಸರ್ಕಾರ ಕಟ್ಟು ನಿಟ್ಟಿನ ಕ್ರಮ ಕೈಗೊಂಡಿದೆ. ಆದ್ರೆ ತೀರ್ಥಹಳ್ಳಿಯಲ್ಲಿ ಕೊರೊನಾ ಮಾರ್ಗಸೂಚಿ ಉಲ್ಲಂಘಿಸಿ ನಡೆದಿರುವ ರಾಮೇಶ್ವರ ದೇವಸ್ಥಾನದ ಜಾತ್ರೆಯನ್ನು ಗೃಹ ಸಚಿವ ಆರಗ ಜ್ಞಾನೇಂದ್ರ ಸಮರ್ಥಿಸಿಕೊಂಡಿದ್ದಾರೆ. ಕಳೆದ ಮೂರು ದಿನಗಳಿಂದ ತೀರ್ಥಹಳ್ಳಿಯಲ್ಲಿ ಪ್ರಸಿದ್ಧ ರಾಮೇಶ್ವರ ದೇವಸ್ಥಾನದ ಜಾತ್ರೆ ನಡೆಯುತ್ತಿದೆ. ಸ್ಥಳೀಯರ ಒತ್ತಾಯದಂತೆ ಜಾತ್ರೆಗೆ ನಿರ್ಬಂಧ ಹೇರಿಲ್ಲ. ಜಾತ್ರೆಯಲ್ಲಿ ಕೊವಿಡ್ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ. ಅದರ ಮುಂದೆ ಎಲ್ಲವೂ ದೇವರ ಮೇಲೆ ಬಿಟ್ಟಿದ್ದು ಎಂದು ಶಿವಮೊಗ್ಗದಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಸಮರ್ಥನೆ ನೀಡಿದ್ದಾರೆ.
ಸಚಿವರು ಪಾಲ್ಗೊಂಡ ಕಾರ್ಯಕ್ರಮದಲ್ಲಿ ಕೊವಿಡ್ ರೂಲ್ಸ್ ಬ್ರೇಕ್ ಇದೆಲ್ಲದರ ನಡುವೆ ಶಿವಮೊಗ್ಗದ ಶುಭಮಂಗಳ ಸಮುದಾಯ ಭವನದಲ್ಲಿ ನಡೆದ ರಾಜ್ಯ ಬಿಜೆಪಿ ಘಟಕದ ಹಿಂದುಳಿದ ವರ್ಗಗಳ ಕಾರ್ಯಕಾರಿಣಿ ಸಭೆಯಲ್ಲಿ ಕೊವಿಡ್ ನಿಯಮ ಉಲ್ಲಂಘನೆಯಾಗಿದೆ. ಸಚಿವರಾದ ಈಶ್ವರಪ್ಪ, ಆರಗ ಜ್ಞಾನೇಂದ್ರ, ಶಾಸಕ ಹಾಲಪ್ಪ ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. ಬಿಜೆಪಿ ಕಾರ್ಯಕ್ರಮದಲ್ಲಿ ನೂರಾರು ಕಾರ್ಯಕರ್ತರು ಸೇರಿದ್ದಾರೆ. ಕಾರ್ಯಕ್ರಮದಲ್ಲಿ ಸೇರಿರುವ ಜನರು ಮಾಸ್ಕ್ ಧರಿಸದೆ, ದೈಹಿಕ ಅಂತರ ಉಲ್ಲಂಘಿಸಿದ್ದಾರೆ. ಗೃಹಮಂತ್ರಿ ಕಣ್ಣೆದುರೇ ನಿಯಮ ಉಲ್ಲಂಘಿಸಿದರೂ ಜಾಣಕುರುಡು ಕಂಡು ಬಂದಿದೆ.
ಕಾಂಗ್ರೆಸ್ ಪಾದಯಾತ್ರೆಗೆ ಮಾತ್ರ ಈಶ್ವರಪ್ಪ ಕಿಡಿಕಿಡಿ ಒಂದು ಕಡೆ ವೀಕೆಂಡ್ ಕರ್ಫ್ಯೂಗೆ ಸಚಿವ ಈಶ್ವರಪ್ಪ ಅಪಸ್ವರ ನುಡಿದಿದ್ದಾರೆ. ಮತ್ತೊಂದೆಡೆ ತವರು ಕ್ಷೇತ್ರದ ಜಾತ್ರೆಯನ್ನ ಗೃಹ ಸಚಿವ ಆರಗ ಜ್ಞಾನೇಂದ್ರ ಸಮರ್ಥಿಸಿಕೊಂಡಿದ್ದಾರೆ. ಆದ್ರೆ ಇತ್ತ ಮೇಕೆದಾಟು ಯೋಜನೆ ಜಾರಿಗಾಗಿ ಕಾಂಗ್ರೆಸ್ನಿಂದ ಕೈಗೊಳ್ಳುತ್ತಿರುವ ಪಾದಯಾತ್ರೆ ಬಗ್ಗೆ ಕೆ.ಎಸ್. ಈಶ್ವರಪ್ಪ ವ್ಯಂಗ ಮಾಡಿದ್ದಾರೆ. ಕಾಂಗ್ರೆಸ್ ಪಾದಯಾತ್ರೆಯಿಂದ ರಾಜ್ಯದ ಜನರಿಗೆ ಸಮಸ್ಯೆಯಾಗುತ್ತಿದೆ. ಕಾಂಗ್ರೆಸ್ನವರು ಸರ್ಕಾರಕ್ಕೆ ಸವಾಲು ಹಾಕುವುದು ಒಳ್ಳೆಯದಲ್ಲ. ರಾಜಕೀಯಕ್ಕೋಸ್ಕರ ಪಾದಯಾತ್ರೆ ಮಾಡುವುದು ಒಳ್ಳೆಯದಲ್ಲ. ಹೋರಾಟ ಮಾಡುವುದು ತಪ್ಪು ಎಂದು ನಾನು ಹೇಳುವುದಿಲ್ಲ. ಆದರೆ ಪಾದಯಾತ್ರೆಯನ್ನು ಪ್ರತಿಷ್ಠೆಯಾಗಿ ತೆಗೆದುಕೊಳ್ಳಬಾರದು. ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸರ್ಕಾರಕ್ಕೆ ಸಲಹೆ ನೀಡಲಿ. ಮೇಕೆದಾಟು ಹೋರಾಟಕ್ಕೆ ವೈಯಕ್ತಿಕವಾಗಿ ನನ್ನ ಬೆಂಬಲವಿದೆ. ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಮತ್ತೊಮ್ಮೆ ಆಲೋಚಿಸಲಿ ಎಂದು ಹೇಳಿದ್ದಾರೆ.
ಇದನ್ನೂ ಓದಿ: Sourav Ganguly: ಗಂಗೂಲಿ ಬಳಿಕ ಮಗಳು ಸನಾ ಗಂಗೂಲಿಗೆ ಕೊರೊನಾ ಪಾಸಿಟಿವ್! ಮತ್ತಿಬ್ಬರು ಕುಟುಂಬ ಸದಸ್ಯರಿಗೂ ಸೋಂಕು
Published On - 1:22 pm, Wed, 5 January 22