AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿಯ ಒಬ್ಬನೇ ಒಬ್ಬ ಕಾರ್ಯಕರ್ತನ ಮೈಮುಟ್ಟಿ ನೋಡಲಿ, ಅದರ ಪರಿಣಾಮವೇ ಬೇರೆ: ಸಚಿವ ಈಶ್ವರಪ್ಪ ಎಚ್ಚರಿಕೆ

ಒಂದು ಕಾಲಕ್ಕೆ ನಮ್ಮ ಸಂಘಟನೆ ಬಹಳ ದುರ್ಬಲವಾಗಿತ್ತು. ಆಗ ನಮ್ಮ ಕಾರ್ಯಕರ್ತರ ಮೇಲೆ ಹಲ್ಲೆ ನಡೆದಾಗ ನಮ್ಮ ಹಿರಿಯರು ಬಿ ಕಾಂ, ಬಿ ಕೂಲ್ ಎನ್ನುತ್ತಿದ್ದರು. ಆದರೆ ಈಗ ಕಾಲ ಬದಲಾಗಿದೆ: ಸಚಿವ ಈಶ್ವರಪ್ಪ

ಬಿಜೆಪಿಯ ಒಬ್ಬನೇ ಒಬ್ಬ ಕಾರ್ಯಕರ್ತನ ಮೈಮುಟ್ಟಿ ನೋಡಲಿ, ಅದರ ಪರಿಣಾಮವೇ ಬೇರೆ: ಸಚಿವ ಈಶ್ವರಪ್ಪ ಎಚ್ಚರಿಕೆ
ಸಚಿವ ಈಶ್ವರಪ್ಪ
TV9 Web
| Updated By: guruganesh bhat|

Updated on:Aug 08, 2021 | 4:51 PM

Share

ಶಿವಮೊಗ್ಗ: ಈಗ ನಮ್ಮದೇ ಸರ್ಕಾರ ದೇಶಾದ್ಯಂತ ಅಧಿಕಾರದಲ್ಲಿದೆ. ಹಾಗಾಗಿ ನಮ್ಮ ಒಬ್ಬನೇ ಒಬ್ಬ ಕಾರ್ಯಕರ್ತನ ಮೈಯನ್ನು ಮುಟ್ಟಿ ನೋಡಲಿ ಅದರ ಪರಿಣಾಮವೇ ಬೇರೆಯಾಗುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು. ಹಿಂದೆಲ್ಲ ಹಿಂದುತ್ವದ ಮೆರವಣಿಗೆ ಅಂದರೆ ಊಹಿಸಲೂ ಆಗುತ್ತಿರಲಿಲ್ಲ. ಆಗ ನಮ್ಮ ಕಾರ್ಯಕರ್ತರ ಕೊಲೆಗಳಾಗುತ್ತಿತ್ತು. ಏಕೆಂದರೆ ಆಗ ನಮಗೆ ಅಷ್ಟೊಂದು ಶಕ್ತಿ ಇರಲಿಲ್ಲ. ಹೀಗಾಗಿ ಏನೇ ಆದರೂ ಶಾಂತವಾಗಿರಿ ಎಂದು ಹಿರಿಯರು ಹೇಳುತ್ತಿದ್ದರು. ನಮಗೆ ಹೊಡೆದರೂ, ಕೊಲೆ ಮಾಡಿದರೂ ಸುಮ್ಮನಿರಿ ಎನ್ನುತ್ತಿದ್ದರು. ಆದರೆ ಈಗ ದೇಶದಲ್ಲಿ ಬಿಜೆಪಿ ದೊಡ್ಡದಾಗಿ ಬೆಳೆದಿದೆ. ದೇಶದಲ್ಲಿ ಮೊದಲಿದ್ದ ಪರಿಸ್ಥಿತಿ ಈಗ ಇಲ್ಲ. ಯಾವುದರಲ್ಲಿ ಹೊಡೆಯುತ್ತಾರೋ ಅದರಲ್ಲೇ ಹೊಡೆದು ಒಂದಕ್ಕೆ ಎರಡು ತೆಗೆಯಿರಿ ಎಂದು ಸಚಿವ ಕೆ.ಎಸ್.ಈಶ್ವರಪ್ಪ ಬಿಜೆಪಿ ಕಾರ್ಯಕಾರಿಣಿಯಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಶಿವಮೊಗ್ಗದಲ್ಲಿ ಇಂದು ನಡೆದ ಬಿಜೆಪಿ ನಗರ ಕಾರ್ಯಕಾರಣಿ ಸಭೆಯಲ್ಲಿ ಮಾತನಾಡಿ, ಬಿಜೆಪಿ ಕೇವಲ ಅಧಿಕಾರಕ್ಕೆ ಇರುವ ಪಕ್ಷ ಅಲ್ಲ. ರಾಷ್ಟ್ರೀಯ ವಿಚಾರಧಾರೆ ಹಾಗೂ ಸಿದ್ಧಾಂತವನ್ನು ಹೊಂದಿರುವ ಪಕ್ಷ. ಈ ವಿಷಯವನ್ನು ಜನರಿಗೆ ಮುಟ್ಟಿಸಿ ಅವರ ಮನ ಗೆಲ್ಲಲು ಅಸಂಖ್ಯಾತ ಕಾರ್ಯಕರ್ತರು ಶ್ರಮ ವಹಿಸಿದ್ದಾರೆ. ಒಂದು ಕಾಲಕ್ಕೆ ನಮ್ಮ ಸಂಘಟನೆ ಬಹಳ ದುರ್ಬಲವಾಗಿತ್ತು. ಆಗ ನಮ್ಮ ಕಾರ್ಯಕರ್ತರ ಮೇಲೆ ಹಲ್ಲೆ ನಡೆದಾಗ ನಮ್ಮ ಹಿರಿಯರು ಬಿ ಕಾಂ, ಬಿ ಕೂಲ್ ಎನ್ನುತ್ತಿದ್ದರು. ಆದರೆ ಈಗ ಕಾಲ ಬದಲಾಗಿದೆ. ದೇಶಾದ್ಯಂತ ಎಲ್ಲಾ ಹಂತಗಳಲ್ಲಿ ಪಕ್ಷ ಅಧಿಕಾರದಲ್ಲಿದೆ. ಕೇರಳ ಸೇರಿದಂತೆ ಎಲ್ಲೆಡೆ ಸಂಘಟನೆ ಬಲವಾಗಿದೆ. ಇಂತಹ ಸಂದರ್ಭದಲ್ಲ ನಮ್ಮ ಕಾರ್ಯಕರ್ತರ ಮೇಲೆ ಹಲ್ಲೆ ನಡೆದರೆ ಸಂಘಟನೆಯ ಪ್ರಮುಖರು ಬಿ ಕಾಂ ಎಂದು ಹೇಳುವ ಬದಲು ಬಿ ಫೇಸ್ ವಿತ್ ಸೇಮ್ ಸ್ಟಿಕ್ ಎಂದು ಹೇಳುತ್ತಾರೆ. ಅಷ್ಟರ ಮಟ್ಟಿಗೆ ನಾವು ಸಂಘಟನಾತ್ಮಕವಾಗಿ ಶಕ್ತಿಯುತವಾಗಿ ಹೊರಹೊಮ್ಮಿದ್ದೇವೆ. ಆದರೆ ಇಷ್ಟಕ್ಕೆ ಮೈ ಮರೆಯಬಾರದು. ಮುಂಬರುವ ತಾಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಚುನಾವಣೆ ಸೇರಿದಂತೆ ಪ್ರತಿ ಸಂದರ್ಭದಲ್ಲೂ ಸದಾ ಜಾಗೃತವಾಗಿ ಕೆಲಸ ಮಾಡಬೇಕಿದೆ ಎಂದರು.

ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಆಕ್ರೋಶ ನಮ್ಮ ತಂಟೆಗೆ ಯಾರೇ ಬಂದರೂ ನಾವು ಸುಮ್ಮನೆ ಬಿಡಲ್ಲ. ಯಾವುದರಲ್ಲಿ ಹೊಡೀತಾರೋ ಅದರಲ್ಲೇ ಹೊಡೆದು ತೆಗೀರಿ ಎಂಬ ಸಚಿವ ಕೆ.ಎಸ್. ಈಶ್ವರಪ್ಪ ವಿವಾದಾತ್ಮಕ ಹೇಳಿಕೆಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಖಂಡನೆ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಟಿವಿ9ಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಪ್ರತಿಕ್ರಿಯೆ ನೀಡಿದ್ದಾರೆ. ಪ್ರಚೋದನಕಾರಿ ಹೇಳಿಕೆ ನೀಡುವ ಈಶ್ವರಪ್ಪರನ್ನು ಸಂಪುಟದಿಂದ ಕೈಬಿಡಿ ಎಂದು ಹೇಳಿದ್ದಾರೆ. ಸಚಿವ ಸಂಪುಟದಿಂದ ಈಶ್ವರಪ್ಪರನ್ನ ತೆಗೆಯುವಂತೆ ಒತ್ತಾಯ ಮಾಡಿದ್ದಾರೆ.

ಆರ್​ಎಸ್​ಎಸ್​ನವರಿಗೆ ಪ್ರಚೋದನಕಾರಿ ಹೇಳಿಕೆ ನೀಡುವವರೇ ಬೇಕು. ಇಂತಹ ಸಚಿವರಿಂದ ಬೇರೆ ಏನನ್ನೂ ನಿರೀಕ್ಷಿಸಲು ಆಗಲ್ಲ. ಕರ್ನಾಟಕ ರಾಜ್ಯದ ಜನರ ಹಿತಕ್ಕಿಂತ ಗೊಂದಲ ಸೃಷ್ಟಿಸುವುದೇ ಇಂಥವರ ಉದ್ದೇಶ ಎಂದು ಸಚಿವ ಕೆ.ಎಸ್. ಈಶ್ವರಪ್ಪ ವಿರುದ್ಧ ಸಲೀಂ ಅಹ್ಮದ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈಶ್ವರಪ್ಪರನ್ನು ಸಂಪುಟದಿಂದ ಕೈಬಿಡುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಸಲೀಂ ಅಹ್ಮದ್ ಒತ್ತಾಯ ಮಾಡಿದ್ದಾರೆ.

ಇದನ್ನೂ ಓದಿ: 

ಕೆಎಸ್ ಈಶ್ವರಪ್ಪ ವಿವಾದಾತ್ಮಕ ಹೇಳಿಕೆ; ಸಂಪುಟದಿಂದ ಕೈಬಿಡುವಂತೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಒತ್ತಾಯ

ಕೆ.ಎಸ್.ಈಶ್ವರಪ್ಪ ಯಾವ ಊರಿನ ದಾಸಯ್ಯ? ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಹೀಗೇಕೆ ಹೇಳಿದರು!?

(Minister KS Eshwarappa says single of single BJP activist threatened the result is different)

Published On - 4:36 pm, Sun, 8 August 21

ಜುಲೈ 22ಕ್ಕೆ ನಟ ದರ್ಶನ್ ಜಾಮೀನು ವಿಚಾರಣೆ ಮುಂದೂಡಿಕೆ
ಜುಲೈ 22ಕ್ಕೆ ನಟ ದರ್ಶನ್ ಜಾಮೀನು ವಿಚಾರಣೆ ಮುಂದೂಡಿಕೆ
ಪಾಕಿಸ್ತಾನದಲ್ಲಿ ಭಾರೀ ಪ್ರವಾಹ; 116 ಸಾವು, 253 ಜನರಿಗೆ ಗಾಯ
ಪಾಕಿಸ್ತಾನದಲ್ಲಿ ಭಾರೀ ಪ್ರವಾಹ; 116 ಸಾವು, 253 ಜನರಿಗೆ ಗಾಯ
ಪಾಟ್ನಾದ ಆಸ್ಪತ್ರೆಗೆ ದಾಖಲಾಗಿದ್ದ ಕೊಲೆ ಆರೋಪಿಯನ್ನು ಶೂಟ್ ಮಾಡಿ ಕೊಲೆ
ಪಾಟ್ನಾದ ಆಸ್ಪತ್ರೆಗೆ ದಾಖಲಾಗಿದ್ದ ಕೊಲೆ ಆರೋಪಿಯನ್ನು ಶೂಟ್ ಮಾಡಿ ಕೊಲೆ
ಶ್ರೀರಾಮುಲು ಮಾತುಗಳಲ್ಲಿ ಸ್ಪಷ್ಟತೆಯ ಕೊರತೆ, ಮಾತುಗಳಲ್ಲಿ ಗೊಂದಲ
ಶ್ರೀರಾಮುಲು ಮಾತುಗಳಲ್ಲಿ ಸ್ಪಷ್ಟತೆಯ ಕೊರತೆ, ಮಾತುಗಳಲ್ಲಿ ಗೊಂದಲ
3 ನಿಮಿಷಗಳ ವಿಡಿಯೋದಲ್ಲಿ ಕೊಹ್ಲಿ ಏನು ಹೇಳಿದ್ದಾರೆ? ನೀವೇ ನೋಡಿ
3 ನಿಮಿಷಗಳ ವಿಡಿಯೋದಲ್ಲಿ ಕೊಹ್ಲಿ ಏನು ಹೇಳಿದ್ದಾರೆ? ನೀವೇ ನೋಡಿ
ಬಿಬಿಎಂಪಿಯನ್ನು 5 ಪಾಲಿಕೆಗಳನ್ನಾಗಿ ವಿಂಗಡಿಸಲು ನಿರ್ಧರಿಸಲಾಗಿದೆ: ಶಿವಕುಮಾರ
ಬಿಬಿಎಂಪಿಯನ್ನು 5 ಪಾಲಿಕೆಗಳನ್ನಾಗಿ ವಿಂಗಡಿಸಲು ನಿರ್ಧರಿಸಲಾಗಿದೆ: ಶಿವಕುಮಾರ
ರವಿಚಂದ್ರನ್ ಅವರನ್ನು ಅಳುವಂತೆ ಮಾಡಿದ ಏಕೈಕ ಸಿನಿಮಾ ಇದು
ರವಿಚಂದ್ರನ್ ಅವರನ್ನು ಅಳುವಂತೆ ಮಾಡಿದ ಏಕೈಕ ಸಿನಿಮಾ ಇದು
ಸೇತುವೆ ಲೋಕಾರ್ಪಣೆಗೆ ಬರಬೇಡವೆಂದು ಸಿಎಂಗೆ ಬಿಎಸ್​ವೈ ಹೇಳಿದ್ದರು: ಯತ್ನಾಳ್
ಸೇತುವೆ ಲೋಕಾರ್ಪಣೆಗೆ ಬರಬೇಡವೆಂದು ಸಿಎಂಗೆ ಬಿಎಸ್​ವೈ ಹೇಳಿದ್ದರು: ಯತ್ನಾಳ್
ವಿಶ್ವ ನಂ.1 ಕಾರ್ಲ್ಸನ್​ಗೆ ಸೋಲುಣಿಸಿದ ಮತ್ತೊಬ್ಬ ಭಾರತೀಯ
ವಿಶ್ವ ನಂ.1 ಕಾರ್ಲ್ಸನ್​ಗೆ ಸೋಲುಣಿಸಿದ ಮತ್ತೊಬ್ಬ ಭಾರತೀಯ
ಶಾಸಕರು ಅನುದಾನಗಳಿಗಾಗಿ ಸುರ್ಜೇವಾಲಾರನ್ನು ಭೇಟಿಯಾಗುತ್ತಿದ್ದಾರೆ: ನಿಖಿಲ್
ಶಾಸಕರು ಅನುದಾನಗಳಿಗಾಗಿ ಸುರ್ಜೇವಾಲಾರನ್ನು ಭೇಟಿಯಾಗುತ್ತಿದ್ದಾರೆ: ನಿಖಿಲ್