ಶಿವಮೊಗ್ಗ: ನಗರದಲ್ಲಿ ಬಜರಂಗದಳ (Bajrang Dal) ಕಾರ್ಯಕರ್ತ, ಬಿಜೆಪಿ ಮುಖಂಡ (BJP Leader) ಕಾಂತರಾಜು ಮೇಲೆ ಹಲ್ಲೆ ನಡೆದಿದ್ದು, ಗಾಯಾಳನ್ನು ಚಿಕಿತ್ಸೆಗಾಗಿ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ನಿನ್ನೆ (ಜುಲೈ 11) ರಾತ್ರಿ ರಾಜೀವ್ ಗಾಂಧಿ ಬಡಾವಣೆಯಲ್ಲಿ ಕಾಂತರಾಜು ಮೂತ್ರ ವಿಸರ್ಜನೆಗೆಂದು ಹೋದಾಗ ಅನ್ಯಕೋಮಿನ ಹುಡುಗರು ದಾಳಿ ಮಾಡಿದ್ದಾರೆಂಬ ಆರೋಪ ಕೇಳಿಬಂದಿದೆ. ಸ್ಥಳಕ್ಕೆ ಸ್ನೇಹಿತರು, ಕುಟುಂಬಸ್ಥರು ಬಂದ ಹಿನ್ನೆಲೆ ದುಷ್ಕರ್ಮಿಗಳು ಎಸ್ಕೇಪ್ ಆಗಿದ್ದಾರೆ. ಘಟನೆಯಲ್ಲಿ ಕಾಂತರಾಜುವಿನ ಬಲಗೈಗೆ ಗಂಭೀರ ಗಾಯವಾಗಿದೆ.
ನಿನ್ನೆ ಮಥುರಾ ಪ್ಯಾರಡೈಸ್ ಬಳಿ ಯುವತಿಯರಿಗೆ ಚುಡಾಯಿಸಿದ್ದನ್ನು ಪ್ರಶ್ನಿಸಿದ್ದಕ್ಕೆ ಹಿಂದೂ ಯುವಕನ ಮೇಲೆ ಹಲ್ಲೆ ನಡೆದಿತ್ತು. ಈ ಘಟನೆ ಬೆನ್ನಲ್ಲೇ ಬಜರಂಗದಳ ಕಾರ್ಯಕರ್ತನ ಮೇಲೆ ಹಲ್ಲೆ ನಡೆದಿದೆ. ನಿನ್ನೆ ರಾಜೀವ್ ಗಾಂಧಿ ಬಡಾವಣೆಯಲ್ಲಿ ಎರಡೂ ಕೋಮಿನಿಂದ ಕಲ್ಲು ತೂರಾಟವಾಗಿತ್ತು. ಈ ಹಿನ್ನೆಲೆಯಲ್ಲಿ ಮತ್ತೆ ದಾಳಿ ನಡೆಸಿರುವ ಸಾಧ್ಯತೆಯಿದೆ. ಇನ್ನು ಆಸ್ಪತ್ರೆಗೆ ಶಿವಮೊಗ್ಗ ಜಿಲ್ಲಾ ಬಿಜೆಪಿ ಅಧ್ಯಕ್ಷ ಮೇಘರಾಜ್ ಮತ್ತು ಬಿಜೆಪಿ ಮುಖಂಡರು ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ. ಘಟನೆ ಕುರಿತು ಸಮಗ್ರ ತನಿಖೆ ಆಗಬೇಕು. ಹರ್ಷ ಹತ್ಯೆ ಪ್ರಕರಣದ ಬಳಿಕ ಭಜರಂಗದಳ ಮತ್ತು ಬಿಜೆಪಿ ಕಾರ್ಯಕರ್ತರನ್ನು ಟಾರ್ಗೇಟ್ ಮಾಡಲಾಗುತ್ತಿದೆ. ಈ ಮೂಲಕ ಕಾರ್ಯಕರ್ತರಿಗೆ ಭಯ ಹುಟ್ಟಿಸುವ ಕೆಲಸ ನಡೆಯುತ್ತಿದೆ. ಮುಸ್ಲಿಂ ಕೆಲ ದುಷ್ಕರ್ಮಿಗಳು ಈ ರೀತಿಯ ಚಟುವಟಿಕೆಯಲ್ಲಿ ತೊಡಗಿದ್ದಾರೆ. ಇಂತಹ ಘಟನೆಯಿಂದ ಬಿಜೆಪಿ ಕಾರ್ಯಕರ್ತರು ಭಯ ಪಡುವುದಿಲ್ಲ. ಜೀವ ಭಯದಿಂದ ಮನೆಯಲ್ಲಿ ಕೂರುವುದಿಲ್ಲ. ಮತ್ತಷ್ಟು ಸಕ್ರೀಯವಾಗಿ ಸಂಘಟನೆ ಕಾರ್ಯದಲ್ಲಿ ತೊಡಗುತ್ತಾರೆ ಎಂದು ಹೇಳುವ ಮೂಲಕ ದುಷ್ಕರ್ಮಿಗಳಿಗೆ ಜಿಲ್ಲಾ ಅಧ್ಯಕ್ಷ ಸಂದೇಶ ರವಾನಿಸಿದ್ದಾರೆ.
ಮಾರಕಾಸ್ತ್ರ ಮೂಲಕ ಹತ್ಯೆ ಮಾಡಲು ನಿನ್ನೆ ಅವರು ಬಂದಿದ್ಧರು. ಧೈರ್ಯ ದಿಂದ ಹಲ್ಲೆ ಎದುರಿಸಿ ಕಾಂತರಾಜ್ ಘಟನೆಯಲ್ಲಿ ಬಚಾವ್ ಆಗಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಾಣ ಹಾನಿ ಆಗಿಲ್ಲ. ಈ ಪ್ರಕರಣವನ್ನು ಪೊಲೀಸ್ ಇಲಾಖೆ ಗಂಭೀರವಾಗಿ ಪರಿಗಣಿಸಬೇಕು. ನಿನ್ನೆ ದಾಳಿ ಮಾಡಿದ ಏಳೆಂಟು ಜನರನ್ನು ಬಂಧಿಸಬೇಕು. ಈ ಘಟನೆ ಕುರಿತು ಗೃಹ ಸಚಿವ ಆರಗ ಜ್ಞಾನೇಂದ್ರ , ಮಾಜಿ ಸಚಿವ ಕೆ ಎಸ್ ಈಶ್ವರಪ್ಪ, ಸಂಸದ ಬಿ ವೈ ರಾಘವೇಂದ್ರ ದೂರವಾಣಿ ಮೂಲಕ ಮಾಹಿತಿ ಕಲೆ ಹಾಕಿದ್ದಾರೆ. ರಾಷ್ಟ್ರೀಯ ಪ್ರದಾನ ಕಾರ್ಯದರ್ಶಿ ಸಿ.ಟಿ. ರವಿ ವಿಡಿಯೋ ಕಾಲ್ ಮೂಲಕ ಕಾಂತರಾಜ್ ಜೊತೆ ಸಮಾಲೋಚನೆ ನಡೆಸಿದ್ದಾರೆ. ಆತನಿಗೆ ಸಾಂತ್ವನ ಮತ್ತು ಆತ್ಮ ವಿಶ್ವಾಸ ದಿಂದ ಇರಲು ಸಿ.ಟಿ. ರವಿ ಸೂಚನೆ ನೀಡಿದ್ದಾರೆ. ಸಂಬಂಧ ಪಟ್ಟ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ಜೊತೆ ಮಾತನಾಡಿ ಸೂಕ್ತ ಕ್ರಮ ತೆಗೆದುಕೊಳ್ಳಲು ಸೂಚನೆ ನೀಡುವುದಾಗಿ ಭರವಸೆ ನೀಡಿದ್ದಾರೆ ಎಂದರು.
ಇದನ್ನೂ ಓದಿ: ಮಳೆಯಿಂದ ತತ್ತರಿಸಿರುವ ಜನರಿಗೆ ನೆರವಾಗುವ ಬದ್ಧತೆ ಆಯಾ ಜಿಲ್ಲಾ ಉಸ್ತುವಾರಿ ಸಚಿವರಿಗೆ ಇಲ್ಲ: ಎಮ್ ಬಿ ಪಾಟೀಲ್, ಕಾಂಗ್ರೆಸ್ ಶಾಸಕ
ನಿನ್ನೆ ನಡೆದ ಘಟನೆ ಏನು?:
ಹಿಂದೂ ಯುವತಿಯರನ್ನು ಚುಡಾಯಿಸುತ್ತಿದ್ದ ಅನ್ಯ ಕೋಮಿನ ಯುವಕರನ್ನು ಪ್ರಶ್ನಿಸಿದ್ದಕ್ಕೆ ಶಿವಮೊಗ್ಗದ ಬಾಲರಾಜ್ ಅರಸು ರಸ್ತೆಯ ಮಥುರಾ ಪ್ಯಾರಡೈಸ್ ಹೋಟೆಲ್ ಬಳಿ ಹಿಂದೂ ಯುವಕನ ಮೇಲೆ ಅನ್ಯಕೋಮಿನ ಯುವಕರು ಹಲ್ಲೆ ಮಾಡಿದ್ದರು. 18 ವರ್ಷದ ಹರ್ಷ ಹಲ್ಲೆಗೊಳಗಾದ ಯುವಕ. ಹರ್ಷನಿಗೆ 8 ಜನರು ಹಲ್ಲೆ ನಡೆಸಿ ಸ್ಥಳದಿಂದ ಪರಾರಿಯಾಗಿದ್ದರು. ಹಲ್ಲೆಗೊಳಗಾದ ಹರ್ಷ, ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತನಾಗಿದ್ದು, ಐಟಿಐ ವ್ಯಾಸಂಗ ಮಾಡುತ್ತಿದ್ದಾನೆ.
ಇಬ್ಬರ ಮೃತದೇಹ ಪತ್ತೆ:
ಮಂಗಳೂರು: ಸೇತುವೆ ತಡೆಗೋಡೆಗೆ ಡಿಕ್ಕಿಯಾಗಿ ಕಾರು ಹೊಳೆಗೆ ಬಿದ್ದ ಪ್ರಕರಣಕ್ಕೆ ಸಂಬಂಧಿಸಿ ನೀರಿನಲ್ಲಿ ಕೊಚ್ಚಿಹೋಗಿದ್ದ ಇಬ್ಬರ ಪೈಕಿ ಓರ್ವನ ಶವ ಇಂದು ಪತ್ತೆಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಕಾಣಿಯೂರು ಬಳಿ ಜುಲೈ 10ರ ತಡರಾತ್ರಿ ವೇಗವಾಗಿ ಬಂದಿದ್ದ ಕಾರು ಸೇತುವೆಯ ತಡೆಗೋಡೆಗೆ ಡಿಕ್ಕಿಯಾಗಿ ಹೊಳೆಗೆ ಬಿದ್ದಿತ್ತು. ಪ್ರಕರಣದಲ್ಲಿ ಬಂಟ್ವಾಳ ತಾಲೂಕಿನ ಕುಂಡಡ್ಕ ಗ್ರಾಮದ 25 ವರ್ಷದ ಧನುಷ್ ಹಾಗೂ ಕನ್ಯಾನ ಗ್ರಾಮದ 26 ವರ್ಷದ ಧನುಷ್ ಸಾವನ್ನಪ್ಪಿದ್ದರು. ಎರಡು ದಿನಗಳಿಂದ ಇಬ್ಬರಿಗಾಗಿ ಶೋಧಕಾರ್ಯ ನಡೆಯುತ್ತಿತ್ತು.
Published On - 11:45 am, Tue, 12 July 22