AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವಮೊಗ್ಗ: ಮೂಕ ಪ್ರಾಣಿಗಳ ಮಾರಣಹೋಮ; 150ಕ್ಕೂ ಹೆಚ್ಚು ಬೀದಿ ನಾಯಿಗಳ ಜೀವಂತ ಸಮಾಧಿ

ಮೈಸೂರಿನ ಮೂಲದವರಿಗೆ ಬೀದಿ ನಾಯಿ ಹಿಡಿಯುವ ಟೆಂಡರ್ ನೀಡಲಾಗಿದೆ ಎಂಬ ಮಾಹಿತಿ ದೊರೆತಿದ್ದು, ನಾಯಿಗಳ ಸಂತಾನ ಹರಣ ಶಸ್ತ್ರ ಚಿಕಿತ್ಸೆ ವೆಚ್ಚ ಉಳಿಸಲು ಈ ಕೃತ್ಯ ಮಾಡಿರುವ ಸಾಧ್ಯತೆ ಇದೆ. ಭದ್ರಾವತಿ ಗ್ರಾಮಾಂತರ ಠಾಣೆಯಲ್ಲಿ ಸದ್ಯ ಈ ಸಂಬಂಧ ದೂರು ದಾಖಲಾಗಿದೆ.

ಶಿವಮೊಗ್ಗ: ಮೂಕ ಪ್ರಾಣಿಗಳ ಮಾರಣಹೋಮ; 150ಕ್ಕೂ ಹೆಚ್ಚು ಬೀದಿ ನಾಯಿಗಳ ಜೀವಂತ ಸಮಾಧಿ
ಬೀದಿ ನಾಯಿಗಳ ಮಾರಣಹೋಮ
TV9 Web
| Updated By: preethi shettigar|

Updated on:Sep 08, 2021 | 9:11 AM

Share

ಶಿವಮೊಗ್ಗ: ಸುಮಾರು 150ಕ್ಕೂ ಹೆಚ್ಚು ಬೀದಿ ನಾಯಿಗಳನ್ನು ಜೀವಂತವಾಗಿ ಹೂತಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ನಡೆದಿದೆ.  ಕಂಬದಾಳು-ಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ರಂಗನಾಥಪುರದಲ್ಲಿ ಮೂಕ ಪ್ರಾಣಿಗಳ ಮಾರಣಹೋಮ ನಡೆದಿದೆ. ತಮ್ಮಡಿಹಳ್ಳಿ ಎಂಪಿಎಂ‌ ಅರಣ್ಯದ ಎಸ್‌ಎಲ್ ನಂಬರ್ 863, 864, 865, 858ರ ಪ್ರದೇಶದಲ್ಲಿ ನಾಯಿಗಳು ಪತ್ತೆಯಾಗಿದ್ದು, ಐದು ದಿನಗಳ ಹಿಂದೆ ನಾಯಿಗಳನ್ನು ಹೂತಿಡಲಾಗಿದೆ. ಈ ಪ್ರಕರಣ ತಡವಾಗಿ ಬೆಳಕಿಗೆ ಬಂದಿದ್ದು, ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಸಿದೆ. 

ಬೀದಿ ನಾಯಿಗಳನ್ನು ಹಿಡಿದು ಜೀವಂತವಾಗಿ ಹೂತಿಡುವ ವೇಳೆ ನಾಯಿಗಳ ಚೀರಾಟ ಕೇಳಿದೆ.  ಆದರೆ ನಂತರ ಯಾವುದೇ ಶಬ್ಧಗಳು ಕೇಳಿ ಬಂದಿಲ್ಲ. ಬಳಿಕ ಅನುಮಾನಗೊಂಡ ಗ್ರಾಮದ ಕೆಲ ಯುವಕರು  ಶಿವಮೊಗ್ಗದ ಪ್ರಾಣಿ ದಯಾ ಸಂಘಕ್ಕೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಬಳಿಕ ಸ್ಥಳಕ್ಕೆ ಎನಿಮಲ್ ರೇಸ್ಕೂ ಕ್ಲಬ್ (ಪ್ರಾಣಿ ದಯಾ ಸಂಘ) ಆಗಮನಿಸಿದ್ದು, ನಾಯಿಗಳನ್ನು ಪತ್ತೆ ಮಾಡಿದ್ದಾರೆ. ಈ ವೇಳೆ ಮಣ್ಣಲ್ಲಿ  ಸುಮಾರು 150 ನಾಯಿಗಳು ಹೂತಿರುವುದು ಬೆಳಕಿಗೆ ಬಂದಿದೆ.

ಇಲ್ಲಿನ ಗ್ರಾಮ ಪಂಚಾಯತಿಯವರೇ ಮೈಸೂರು ಮೂಲದವರಿಗೆ ಬೀದಿ ನಾಯಿ ಹಿಡಿಯುವ ಟೆಂಡರ್ ನೀಡಿದ್ದಾರೆ ಎಂದು ಕೆಲವು ಮೂಲಗಳು ಮಾಹಿತಿ ನೀಡಿವೆ. ನಾಯಿಗಳ ಸಂತಾನ ಹರಣ ಶಸ್ತ್ರ ಚಿಕಿತ್ಸೆ ವೆಚ್ಚ ಉಳಿಸಲು ಈ ಕೃತ್ಯ ಮಾಡಿರುವ ಸಾಧ್ಯತೆ ಇದೆ ಎಂಬ ಅನುಮಾನ ಸೃಷ್ಟಿಯಾಗಿದೆ.  ಆದರೆ ನಾಯಿಗಳ ಸಾವಿಗೆ ಇನ್ನೂ ಕೂಡ ನಿಖರವಾದ ಕಾರಣ ತಿಳಿದು ಬಂದಿಲ್ಲ. ಸದ್ಯ ಭದ್ರಾವತಿ ಗ್ರಾಮಾಂತರ ಠಾಣೆಯಲ್ಲಿ ಈ ಸಂಬಂಧ ದೂರು ದಾಖಲಾಗಿದೆ.

ಇದನ್ನೂ ಓದಿ: ಹಾಸನ: ಮಂಗಗಳ ಮಾರಣಹೋಮ ಪ್ರಕರಣಕ್ಕೆ ತಿರುವು; ಐವರನ್ನು ವಶಕ್ಕೆ ಪಡೆದ ಪೊಲೀಸರು

ಮಂಗಗಳ ಮಾರಣಹೋಮ‌ ಮಾಸುವ ಮುನ್ನವೇ ಹಾಸನದಲ್ಲಿ 20ಕ್ಕೂ ಹೆಚ್ಚು ಕರುಗಳು ಸಾವು

Published On - 8:55 am, Wed, 8 September 21

ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!