Shivamogga News: ವಿದ್ಯುತ್ ಕಂಬಕ್ಕೆ ಖಾಸಗಿ ಬಸ್ ಡಿಕ್ಕಿ, 34ಕ್ಕೂ ಹೆಚ್ಚು ಪ್ರಯಾಣಿಕರಿಗೆ ಕರೆಂಟ್​ ಶಾಕ್

ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್​ವೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಪ್ರಯಾಣಿಕರಿಗೆ ವಿದ್ಯುತ್​ ಶಾಕ್​ ಹರಿದ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಗೆಣಸಿನಕುಣಿ ಗ್ರಾಮದ ಬಳಿ ನಡೆದಿದೆ.​

Shivamogga News: ವಿದ್ಯುತ್ ಕಂಬಕ್ಕೆ ಖಾಸಗಿ ಬಸ್ ಡಿಕ್ಕಿ, 34ಕ್ಕೂ ಹೆಚ್ಚು ಪ್ರಯಾಣಿಕರಿಗೆ ಕರೆಂಟ್​ ಶಾಕ್
ಸಾಂದರ್ಭಿಕ ಚಿತ್ರ
Follow us
| Updated By: ಕಿರಣ್ ಹನುಮಂತ್​ ಮಾದಾರ್

Updated on: Aug 02, 2023 | 1:28 PM

ಶಿವಮೊಗ್ಗ, ಆ.2: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್(BUS)​ವೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಪ್ರಯಾಣಿಕರಿಗೆ ವಿದ್ಯುತ್​ ಶಾಕ್​ ಹರಿದ ಘಟನೆ ಶಿವಮೊಗ್ಗ(Shivamogga) ಜಿಲ್ಲೆಯ ಸಾಗರ ತಾಲೂಕಿನ ಗೆಣಸಿನಕುಣಿ ಗ್ರಾಮದ ಬಳಿ ನಡೆದಿದೆ. ಬಸ್​ನಲ್ಲಿದ್ದ 45 ಕ್ಕೂ ಪ್ರಯಾಣಿಕರಿಗೆ ವಿದ್ಯುತ್ ಶಾಕ್ ತಗುಲಿದ್ದು, ಶಾಕ್​ನಿಂದ 35 ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯಗಳಾಗಿವೆ. ಕೂಡಲೇ ಅವರನ್ನ ಸಾಗರ ತಾಲೂಕು ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಇಬ್ಬರ ಸ್ಥಿತಿ ಗಂಭೀರವಾದ ಹಿನ್ನಲೆ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿದೆ.

ಬಸ್​ನಲ್ಲಿದ್ದ 45 ರಲ್ಲಿ 35 ಕಾಲೇಜು ವಿದ್ಯಾರ್ಥಿಗಳು

ಇನ್ನು ಈ ಖಾಸಗಿ ಬಸ್ ಸಾಗರ ತಾಲೂಕಿನ ಹೊಳೆಬಾಗಿಲಿನಿಂದ ಸಾಗರಕ್ಕೆ ಹೊರಟಿತ್ತು. ಬಸ್​ನಲ್ಲಿ 45 ಕ್ಕೂ ಹೆಚ್ಚು ಪ್ರಯಾಣಿಕರಿದ್ದು, ಅದರಲ್ಲಿ 35 ಕಾಲೇಜು ಹೋಗುವ ವಿದ್ಯಾರ್ಥಿಗಳಾಗಿದ್ದಾರೆ. ಈ ಕುರಿತು ಸಾಗರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಮೈಸೂರಿನಲ್ಲಿ 56 ಪ್ರಕರಣಗಳಲ್ಲಿ ಬೇಕಾಗಿದ್ದ ಕಳ್ಳ ಅರೆಸ್ಟ್

ಮೈಸೂರು: ಮನೆ ಹಾಗೂ ಐಷಾರಾಮಿ ಕಾರುಗಳನ್ನು ಕಳುವು ಮಾಡುತ್ತಿದ್ದ ಕುಖ್ಯಾತ ಕಳ್ಳನನ್ನ ಪೊಲೀಸರು ಅರೆಸ್ಟ್​ ಮಾಡಿದ್ದಾರೆ. ನಾಲ್ಕು ರಾಜ್ಯಗಳಲ್ಲಿ ಮನೆ ಹಾಗೂ ಕಾರು ಕಳ್ಳತನ ಮಾಡಿ, 56 ಪ್ರಕರಣಗಳಲ್ಲಿ ಬೇಕಾಗಿದ್ದ ಆರೋಪಿಯನ್ನ ಬಂಧಿಸಲಾಗಿದೆ. ಆಂಧ್ರಪ್ರದೇಶ ಮೂಲದ ಸತ್ತಿಬಾಬು ಅಲಿಯಾಸ್ ಕರಿ ಸತ್ತಿಬಾಬು ಅಲಿಯಾಸ್ ಸತ್ತಿರೆ ಬಂಧಿತ ಆರೋಪಿ. ಇನ್ನು ಇತನಿಂದ ಮೂರು ಕಾರು, 750 ಗ್ರಾಂ ಚಿನ್ನಾಭರಣ, ಮೂರು ವಾಚು ಸೇರಿದಂತೆ ಸುಮಾರು 1.19 ಕೋಟಿ ಬೆಲೆ ಬಾಳುವ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ಇನ್ನು ಇತ ಮೈಸೂರಿನ ವಿ ವಿ ಪುರಂ, ಹೆಬ್ಬಾಳು ಹಾಗೂ ವಿಜಯನಗರ ಠಾಣಾ ವ್ಯಾಪ್ತಿಯಲ್ಲಿ ಕಳ್ಳತನ ಮಾಡಿದ್ದ. ಈ ಹಿನ್ನಲೆ ತನಿಖೆ ಆರಂಭಿಸಿದ್ದ ಪೊಲೀಸರಿಗೆ ಈ ಆಸಾಮಿ ಸಿಕ್ಕಿಬಿದ್ದಿದ್ದಾನೆ.

ಇದನ್ನು ಓದಿ:23 ವರ್ಷಗಳ ಬಳಿಕ ಜೈಲಿನಿಂದ ಹೊರ ಬಂದ ನಜ್ಜು, ಉತ್ತರ ಪ್ರದೇಶದ ದೇವಸ್ಥಾನಕ್ಕೆ 101ಕೆಜಿ ತೂಕದ ಘಂಟೆ ಅರ್ಪಣೆ

ಪ್ರಕರಣ ಭೇದಿಸಿದಾಗ ಮತ್ತೆರಡು ಕಾರು ಕಳವು ಬಗ್ಗೆ ಮಾಹಿತಿ

ಇನ್ನು ಇತನನ್ನು ಬಂಧಿಸಿ, ವಿಚಾರಣೆ ನಡೆಸಿದಾಗ ತೆಲಂಗಾಣದಲ್ಲಿ‌ 20, ಆಂಧ್ರಪ್ರದೇಶದ 30, ತಮಿಳುನಾಡಿನ ಹಾಗೂ ಕರ್ನಾಟಕದಲ್ಲಿ 3 ಪ್ರಕರಣಗಳಿಗೆ ಬೇಕಾಗಿದ್ದ. ಮತ್ತಷ್ಟು ಪೊಲೀಸ್​ ಭಾಷೆಯಲ್ಲಿ ಕೇಳಿದಾಗ ಇತ ಇಂಟರ್ ನೆಟ್ ಮೂಲಕ ಐಷಾರಾಮಿ ಜನರ ಮಾಹಿತಿ ಪಡೆದು, ಬಳಿಕ ಅವರ ಬಳಿಯಿದ್ದ ಕಾರು ಕದ್ದು ಶೋಕಿಗಾಗಿ ಕಡಿಮೆ ಹಣಕ್ಕೆ ಮಾರಾಟ ಮಾಡುತ್ತಿರುವುದು ಬೆಳಕಿಗೆ ಬಂದಿದೆ.

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

‘ಹೊಸ ಜೀವನ ಸಿಕ್ಕಿದೆ’; ಅಪಘಾತದ ನಂತರ ಮುಶೀರ್ ಖಾನ್ ಮೊದಲ ಮಾತು
‘ಹೊಸ ಜೀವನ ಸಿಕ್ಕಿದೆ’; ಅಪಘಾತದ ನಂತರ ಮುಶೀರ್ ಖಾನ್ ಮೊದಲ ಮಾತು
ರಾಜೀನಾಮೆ ನೀಡದಂತೆ ಸಿಎಂ ಸಿದ್ದರಾಮಯ್ಯಗೆ ರಕ್ತದಲ್ಲಿ ಪತ್ರ ಬರೆದ ಅಭಿಮಾನಿ
ರಾಜೀನಾಮೆ ನೀಡದಂತೆ ಸಿಎಂ ಸಿದ್ದರಾಮಯ್ಯಗೆ ರಕ್ತದಲ್ಲಿ ಪತ್ರ ಬರೆದ ಅಭಿಮಾನಿ
ವಿಡಿಯೋ: ವೀಕೆಂಡ್​ನಲ್ಲಿ ಅಭಿಮಾನಿಗಳ ಭೇಟಿ ಮಾಡಿದ ಧ್ರುವ ಸರ್ಜಾ
ವಿಡಿಯೋ: ವೀಕೆಂಡ್​ನಲ್ಲಿ ಅಭಿಮಾನಿಗಳ ಭೇಟಿ ಮಾಡಿದ ಧ್ರುವ ಸರ್ಜಾ
ರೀಲ್ಸ್​ ಹುಚ್ಚು, 10ಮೀ. ಎತ್ತರದ ಸೈನ್‌ಬೋರ್ಡ್ ಮೇಲೆ ಯುವಕನ ಸಾಹಸ
ರೀಲ್ಸ್​ ಹುಚ್ಚು, 10ಮೀ. ಎತ್ತರದ ಸೈನ್‌ಬೋರ್ಡ್ ಮೇಲೆ ಯುವಕನ ಸಾಹಸ
ಬಿಜೆಪಿಯಲ್ಲಿ ತೀವ್ರಗೊಂಡ ವಿಜಯೇಂದ್ರ ಹಠಾವೋ ಹೋರಾಟ
ಬಿಜೆಪಿಯಲ್ಲಿ ತೀವ್ರಗೊಂಡ ವಿಜಯೇಂದ್ರ ಹಠಾವೋ ಹೋರಾಟ
CPL 2024: ಫಾಫ್ ಡುಪ್ಲೆಸಿಸ್ ಸ್ಪೋಟಕ ಬ್ಯಾಟಿಂಗ್: ಆದರೂ ಸೋತರು..!
CPL 2024: ಫಾಫ್ ಡುಪ್ಲೆಸಿಸ್ ಸ್ಪೋಟಕ ಬ್ಯಾಟಿಂಗ್: ಆದರೂ ಸೋತರು..!
ನೇರ ಪ್ರಸಾರದಲ್ಲಿ ಅಳುತ್ತಾ ಸುದ್ದಿ ಓದಿದ​​ ಆ್ಯಂಕರ್​; ಕಾರಣ ಏನು ಗೊತ್ತಾ?
ನೇರ ಪ್ರಸಾರದಲ್ಲಿ ಅಳುತ್ತಾ ಸುದ್ದಿ ಓದಿದ​​ ಆ್ಯಂಕರ್​; ಕಾರಣ ಏನು ಗೊತ್ತಾ?
ಮಂಗಳೂರಿನ ಕಾಲೇಜಿನಲ್ಲಿ ಓಣಂ ಸಂಭ್ರಮ; ಕುಣಿದು ಕುಪ್ಪಳಿಸಿದ ವಿದ್ಯಾರ್ಥಿಗಳು
ಮಂಗಳೂರಿನ ಕಾಲೇಜಿನಲ್ಲಿ ಓಣಂ ಸಂಭ್ರಮ; ಕುಣಿದು ಕುಪ್ಪಳಿಸಿದ ವಿದ್ಯಾರ್ಥಿಗಳು
 ‘ಸತ್ಯ ಹೊರಕ್ಕೆ ಬರುತ್ತದೆ’; ಬಿಗ್​ ಬಾಸ್​ನಲ್ಲಿ ಹೊರ ಬರುತ್ತಾ ನಿಜ ವಿಚಾರ?
 ‘ಸತ್ಯ ಹೊರಕ್ಕೆ ಬರುತ್ತದೆ’; ಬಿಗ್​ ಬಾಸ್​ನಲ್ಲಿ ಹೊರ ಬರುತ್ತಾ ನಿಜ ವಿಚಾರ?
ಇಲ್ಲಿ ಪರ್ಸಂಟೇಜ್ ಲೆಕ್ಕ ಹಾಕ್ಬಾರ್ದು; ಶಿವಣ್ಣ ಹೀಗೆ ಹೇಳಿದ್ದೇಕೆ?
ಇಲ್ಲಿ ಪರ್ಸಂಟೇಜ್ ಲೆಕ್ಕ ಹಾಕ್ಬಾರ್ದು; ಶಿವಣ್ಣ ಹೀಗೆ ಹೇಳಿದ್ದೇಕೆ?