AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಳೆಯ ದ್ವೇಷಕ್ಕೆ ಹರಿದ ನೆತ್ತರು: ಮಗನ ಜೀವ ಉಳಿಸಲು ಹೋಗಿ ಬಲಿಯಾದ ತಾಯಿ

ಮಗನ ಮೇಲಿನ ದಾಳಿಯನ್ನು ತಡೆಯಲು ಹೋಗಿ ಮಹಿಳೆಯೋರ್ವರು ಮೃತಪಟ್ಟಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ತಾವು ಹಲ್ಲೆ ನಡೆಸಿದ್ದ ವ್ಯಕ್ತಿಗೆ ಉಪಚರಿಸಿರುವುದನ್ನೇ ನೆಪ ಮಾಡಿಕೊಂಡು ಜಗಳ ತೆಗೆದಿರುವ ಆರೋಪಿಗಳು, ಮೃತ ಮಹಿಳೆಯ ಮಗನ ಮೇಲೆ ಹಲ್ಲೆ ನಡೆಸಿದ್ದಾರೆ. ಮಚ್ಚಿನಿಂದ ದಾಳಿಗೂ ಯತ್ನಿಸಿದ್ದು, ಈ ವೇಳೆ ತಡೆಯಲು ಯತ್ನಿಸಿದ ಮಹಿಳೆಗೆ ಮಚ್ಚಿನೇಟು ಬಿದ್ದಿದೆ. ಗಂಭೀರ ಗಾಯಗೊಂಡ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಹಳೆಯ ದ್ವೇಷಕ್ಕೆ ಹರಿದ ನೆತ್ತರು: ಮಗನ ಜೀವ ಉಳಿಸಲು ಹೋಗಿ ಬಲಿಯಾದ ತಾಯಿ
ಮಹಿಳೆಯ ಹತ್ಯೆ
Basavaraj Yaraganavi
| Edited By: |

Updated on: Nov 10, 2025 | 5:07 PM

Share

ಶಿವಮೊಗ್ಗ, ನವೆಂಬರ್​ 10: ಮಗನ ಮೇಲಿನ ದಾಳಿಯನ್ನು ತಡೆಯಲು ಹೋಗಿ ಮಹಿಳೆಯೋರ್ವರು ಬರ್ಬರವಾಗಿ ಕೊಲೆಯಾಗಿರುವ ಘಟನೆ ಶಿವಮೊಗ್ಗ ತಾಲೂಕು ದುಮ್ಮಳ್ಳಿ ಗ್ರಾಮದ ಸಿದ್ದೇಶ್ವರ ಬಡಾವಣೆಯಲ್ಲಿ ನಡೆದಿದೆ. ಗಂಗಮ್ಮ (45) ಮೃತ ದುರ್ದೈವಿಯಾಗಿದ್ದು, ಆರೋಪಿಗಳಾದ ಹರೀಶ್ ಮತ್ತು ನಾಗೇಶ್​ರನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳು ಮಚ್ಚಿನಿಂದ ದಾಳಿ ಮಾಡಿರುವ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಗಂಗಮ್ಮ ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಸಿದ್ದೇಶ್ವರ ಬಡಾವಣೆಯಲ್ಲಿ ನಿನ್ನೆ ರಾತ್ರಿ 11 ಗಂಟೆ ಸುಮಾರಿಗೆ ಆರೋಪಿಗಳಾದ ಹರೀಶ್ ಮತ್ತು ನಾಗೇಶ್​​ ಬೈಕ್​ನಲ್ಲಿ ತೆರಳುತ್ತಿದ್ದ ಅದೇ ಬಡಾವಣೆಯ ಮಂಜುನಾಥ್​ ಎಂಬವರ ಮೇಲೆ ಕಲ್ಲಿನಿಂದ ಹಲ್ಲೆ ನಡೆಸಿದ್ದರು. ಮಾನವೀಯತೆಯಿಂದ ಗಾಯಗೊಂಡ ಮಂಜುನಾಥನಿಗೆ ಗಂಗಮ್ಮ ಉಪಚರಿಸಿದ್ದರು. ಮಂಜುನಾಥ್​ ತಲೆಗೆ ಅರಿಶಿಣ ಹಚ್ಚಿ, ನೀರು ಕುಡಿಸಿದ್ದರು. ಇದೇ ವಿಚಾರಕ್ಕೆ ಕುಪಿತಗೊಂಡ ಆರೋಪಿಗಳು ಗಂಗಮ್ಮ ಅವರ ಪುತ್ರ ಜೀವನ್​ ಬಳಿ ಗಲಾಟೆ ಮಾಡಿದ್ದಾರೆ. ನಾವು ಹೊಡೆದವರಿಗೆ ಅರಿಶಿಣ ಹಚ್ಚುತ್ತೀರಾ ಎಂದು ತಗಾದೆ ತೆಗೆದು ಹಲ್ಲೆ ನಡೆಸಿದ್ದಾರೆ. ಬಳಿಕ ಮನೆಯಿಂದ ಮಚ್ಚು ತಂದು ಜೀವನ್​​ ಮೇಲೆ ಬೀಸಿದ್ದು, ಈ ವೇಳೆ ಅಲ್ಲೇ ಇದ್ದ ಗಂಗಮ್ಮ ತಲೆ ಮತ್ತು ಕುತ್ತಿಗೆ ಭಾಗಮನ್ನು ಮಚ್ಚು ಸಿಳಿದೆ. ಗಾಯಗೊಂಡ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನಾ ಸ್ಥಳಕ್ಕೆ ತುಂಗಾ ನಗರ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಕೊಲೆ ಮಾಡಿ ತಪ್ಪಿಸಿಕೊಂಡಿದ್ದ ಆರೋಪಿಗಳನ್ನು ಬಂಧಿಸಲಾಗಿದ್ದು, ಹಳೆಯ ದ್ವೇಷದ ಹಿನ್ನಲೆ ಕೊಲೆ ಮಾಡಿರುವ ವಿಚಾರ ಬೆಳಕಿಗೆ ಬಂದಿದೆ.

ಇದನ್ನೂ ಓದಿ: ಪತ್ನಿ ಪಾಲಿಗೆ ಪ್ರೀತಿಸಿ ಮದುವೆಯಾದಾತನೇ ವಿಲನ್​: ಪತಿ ಅಟ್ಟಹಾಸಕ್ಕೆ 6 ತಿಂಗಳ ಭ್ರೂಣ ಸಾವು

ಹಳೆಯ ದ್ವೇಷಕ್ಕೆ ಹರಿದ ನೆತ್ತರು

ಮೃತ ಗಂಗಮ್ಮ ಅವರ ಮಗ ಜೀವನ್​ ಮೇಲೆ ಆರೋಪಿಗಳಿಗೆ ಹಳೆಯ ದ್ವೇಷ ಇತ್ತು ಎನ್ನಲಾಗಿದೆ. ಈ ಹಿಂದೆ ಇದೇ ದುಮ್ಮಳ್ಳಿ ಗ್ರಾಮದಲ್ಲಿ ಜೀವನ್ ಸಂಬಂಧಿಕರ ಮನೆ ಬಾಡಿಗೆ ಪಡೆದು ನಾಗೇಶ್​ ಮತ್ತು ಹರೀಶ್​ ನೆಲೆಸಿದ್ದರು. ಆದರೆ ಬಾಡಿಗೆ ಹಣ ನೀಡಿರಲಿಲ್ಲ. ಹೀಗಾಗಿ ಊರಿನ ಸರ್ಕಲ್​ನಲ್ಲಿ ಹಣ ನೀಡುವಂತೆ ಜೀವನ್​ ಕೇಳಿದ್ದ. ಆ ವೇಳೆ ಇವರ ನಡುವೆ ಗಲಾಟೆ ನಡೆದಿತ್ತು. ಆ ಬಳಿಕ ಜೀವನ್​ ಮನೆ ಮುಂಭಾಗವೇ ಇರುವ ಮನೆಯಲ್ಲಿ ಬಂದು ನೆಲೆಸಿದ್ದ ಆರೋಪಿಗಳು, ಜೀವನ್​​ಗೆ ಗುರಾಯಿಸಿಕೊಂಡೇ ಓಡಾಡುತ್ತಿದ್ದರು. ಇವರ ನಡುವೆ ಆಗಾಗ ಸಣ್ಣ ಪುಟ್ಟ ಗಲಾಟೆ ಸಹ ನಡೆಯುತ್ತಿತ್ತು ಎನ್ನಲಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಯಾಗರಾಜ್​ನ ಮಾಘ ಮೇಳದಲ್ಲಿ ಭಕ್ತಸಾಗರ; ಡ್ರೋನ್ ವಿಡಿಯೋ ಇಲ್ಲಿದೆ
ಪ್ರಯಾಗರಾಜ್​ನ ಮಾಘ ಮೇಳದಲ್ಲಿ ಭಕ್ತಸಾಗರ; ಡ್ರೋನ್ ವಿಡಿಯೋ ಇಲ್ಲಿದೆ
ನನಗೂ ಮುಖ್ಯಮಂತ್ರಿಯಾಗಬೇಕು ಎಂಬ ಆಸೆ ಇದೆ
ನನಗೂ ಮುಖ್ಯಮಂತ್ರಿಯಾಗಬೇಕು ಎಂಬ ಆಸೆ ಇದೆ
ಅಪಘಾತವಾಗುವುದ ತಡೆದು ಒಂದು ಕುಟುಂಬವನ್ನು ರಕ್ಷಿಸಿದ ಯುವತಿ
ಅಪಘಾತವಾಗುವುದ ತಡೆದು ಒಂದು ಕುಟುಂಬವನ್ನು ರಕ್ಷಿಸಿದ ಯುವತಿ
ಕಾರುಣ್ಯ ಮುಖ ನೋಡಿ ಸಾಲ ಕೊಡಿ ಎಂದಿದ್ದರು, ಈಗ ಧಮ್ಕಿ ಹಾಕ್ತಾರೆ: ಪ್ರಜ್ವಲ್
ಕಾರುಣ್ಯ ಮುಖ ನೋಡಿ ಸಾಲ ಕೊಡಿ ಎಂದಿದ್ದರು, ಈಗ ಧಮ್ಕಿ ಹಾಕ್ತಾರೆ: ಪ್ರಜ್ವಲ್
ನಮ್ಮ ಮೆಟ್ರೋ ಯೆಲ್ಲೋ ಲೈನ್‌ನಲ್ಲಿ 7ನೇ ರೈಲಿನ ಸಂಚಾರ ಶುರು
ನಮ್ಮ ಮೆಟ್ರೋ ಯೆಲ್ಲೋ ಲೈನ್‌ನಲ್ಲಿ 7ನೇ ರೈಲಿನ ಸಂಚಾರ ಶುರು
ಲೈಟ್​ನಲ್ಲಿ ಕಾಣಿಸಿಕೊಂಡ ಹೊಗೆ, ಪತ್ರಿಕಾಗೋಷ್ಠಿ ಮೊಟಕುಗೊಳಿಸಿದ ಮಾಯಾವತಿ
ಲೈಟ್​ನಲ್ಲಿ ಕಾಣಿಸಿಕೊಂಡ ಹೊಗೆ, ಪತ್ರಿಕಾಗೋಷ್ಠಿ ಮೊಟಕುಗೊಳಿಸಿದ ಮಾಯಾವತಿ
ನಗರಸಭೆ ಪೌರಾಯುಕ್ತೆಗೆ ನಿಂದನೆ​​: ರಾಜೀವ್​ ಗೌಡ ಪರ ಮುನಿಯಪ್ಪ ಬ್ಯಾಟಿಂಗ್​​
ನಗರಸಭೆ ಪೌರಾಯುಕ್ತೆಗೆ ನಿಂದನೆ​​: ರಾಜೀವ್​ ಗೌಡ ಪರ ಮುನಿಯಪ್ಪ ಬ್ಯಾಟಿಂಗ್​​
ನಮ್ಮ ಮೆಟ್ರೋದಲ್ಲಿ ಇಂದಿನಿಂದ ಹೊಸ ಬದಲಾವಣೆ: ಇಲ್ಲಿದೆ ಮಾಹಿತಿ
ನಮ್ಮ ಮೆಟ್ರೋದಲ್ಲಿ ಇಂದಿನಿಂದ ಹೊಸ ಬದಲಾವಣೆ: ಇಲ್ಲಿದೆ ಮಾಹಿತಿ
ಅಶ್ಲೀಲವಾಗಿ ನಿಂದಿಸಿದ ಕಾಂಗ್ರೆಸ್ ಮುಖಂಡನ ಬಗ್ಗೆ ಖರ್ಗೆ ಖಡಕ್ ಮಾತು
ಅಶ್ಲೀಲವಾಗಿ ನಿಂದಿಸಿದ ಕಾಂಗ್ರೆಸ್ ಮುಖಂಡನ ಬಗ್ಗೆ ಖರ್ಗೆ ಖಡಕ್ ಮಾತು
ವಿಧಾನಸಭೆ ಚುನಾವಣೆಗೆ ತಾನು ಈ ಕ್ಷೇತ್ರದ ಟಿಕೆಟ್​​ ಆಕಾಂಕ್ಷಿ ಎಂದ ಪ್ರತಾಪ್​
ವಿಧಾನಸಭೆ ಚುನಾವಣೆಗೆ ತಾನು ಈ ಕ್ಷೇತ್ರದ ಟಿಕೆಟ್​​ ಆಕಾಂಕ್ಷಿ ಎಂದ ಪ್ರತಾಪ್​