ಶಿವಮೊಗ್ಗ ಡಿಸಿಸಿ ಬ್ಯಾಂಕ್​ ‌ಹಗರಣದಲ್ಲಿ ಎಂಪಿ ಪಾತ್ರವೂ ಇದೆ: ಬಿವೈ ರಾಘವೇಂದ್ರ ವಿರುದ್ಧ ಬೇಳೂರು ಗಂಭೀರ ಆರೋಪ

ಶಿವಮೊಗ್ಗ ಡಿಸಿಸಿ ಬ್ಯಾಂಕ್ ‌ಹಗರಣ ಸಂಸದ‌ ರಾಘವೇಂದ್ರ ಪಾತ್ರ ಇದೆ. ಈಗ ನಮ್ಮದೇ ಸರಕಾರ ಇದೆ. ಈ ಬಗ್ಗೆ ತನಿಖೆ ಆಗಬೇಕು. ಒಂದೊಂದು‌ ಹುದ್ದೆ ಕೊಡಲು 40 ಲಕ್ಷ ಲಂಚ ಪಡೆದಿದ್ದಾರೆ. ಲಂಚ ಹಣ ಪಡೆಯಲು ಉದ್ಯೋಗಿಗಳಿಗೆ ಬ್ಯಾಂಕ್ ನಲ್ಲೇ ಸಾಲ ಕೊಡಿಸಿದ್ದಾರೆ ಎಂದು ಕಾಂಗ್ರೆಸ್ ಶಾಸಕ ಬೇಳೂರು ಗೋಪಾಲಕೃಷ್ಣ ಗಂಭೀರ ಆರೋಪ ಮಾಡಿದ್ದಾರೆ.

ಶಿವಮೊಗ್ಗ ಡಿಸಿಸಿ ಬ್ಯಾಂಕ್​ ‌ಹಗರಣದಲ್ಲಿ ಎಂಪಿ ಪಾತ್ರವೂ ಇದೆ: ಬಿವೈ ರಾಘವೇಂದ್ರ ವಿರುದ್ಧ ಬೇಳೂರು ಗಂಭೀರ ಆರೋಪ
ಬೇಳೂರು ಗೋಪಾಲಕೃಷ್ಣ
Follow us
| Updated By: ಆಯೇಷಾ ಬಾನು

Updated on: Nov 08, 2023 | 1:19 PM

ಶಿವಮೊಗ್ಗ, ನ.08: ಶಿವಮೊಗ್ಗ ಡಿಸಿಸಿ ಬ್ಯಾಂಕ್​ನಲ್ಲಿ ‌ಹಗರಣ (DCC Bank Scam) ನಡೆದಿದೆ. ಒಂದೊಂದು‌ ಹುದ್ದೆ ಕೊಡಲು 40 ಲಕ್ಷ ಲಂಚ ಪಡೆದಿದ್ದಾರೆ. ಲಂಚ ಹಣ ಪಡೆಯಲು ಉದ್ಯೋಗಿಗಳಿಗೆ ಬ್ಯಾಂಕ್ ನಲ್ಲೇ ಸಾಲ ಕೊಡಿಸಿದ್ದಾರೆ. ಈ ಹಗರಣದಲ್ಲಿ ಸಂಸದ‌ ರಾಘವೇಂದ್ರ (BY Raghavendra) ಪಾತ್ರ ಇದೆ. ಈಗ ನಮ್ಮದೇ ಸರಕಾರ ಇದೆ. ಈ ಬಗ್ಗೆ ತನಿಖೆ ಆಗಬೇಕು ಎಂದು ಶಿವಮೊಗ್ಗದಲ್ಲಿ ಕಾಂಗ್ರೆಸ್ ಶಾಸಕ ಬೇಳೂರು ಗೋಪಾಲಕೃಷ್ಣ (Belur Gopalakrishna) ಅವರು ಗಂಭೀರ ಆರೋಪ ಮಾಡಿದ್ದಾರೆ. ಹಾಗೂ ಬಿಜೆಪಿ ನಾಯಕರು ಬರ ಅಧ್ಯಯನ ಮಾಡುತ್ತಿದ್ದಾರೆ. ಬರಕ್ಕೆ ಮುಖ್ಯಮಂತ್ರಿಗಳು ಪರಿಹಾರ ಬಿಡುಗಡೆ ಮಾಡಿದ್ದಾರೆ. ರಾಜ್ಯದಲ್ಲಿ ಬಿಜೆಪಿಗೆ ವಿಪಕ್ಷ ನಾಯಕನೇ ಇಲ್ಲ. ನಿಮ್ಮ ಕಾಲದಲ್ಲಿ ನೆರೆ ಬಂತು ಏನಾದರೂ ಪರಿಹಾರ ಕೊಟ್ರಾ? ಕೇವಲ ಸಮೀಕ್ಷೆ ಮಾಡಿಕೊಂಡು ಹೋದ್ರಿ ನಿಮ್ಮ ಪ್ರಧಾನಿ, ನಿಮ್ಮ ಸರಕಾರ ಏನಾದರೂ ಪರಿಹಾರ ಕೊಟ್ರಾ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಶಿವಮೊಗ್ಗದಲ್ಲಿ ಮಾತನಾಡಿದ ಕಾಂಗ್ರೆಸ್ ಶಾಸಕ ಬೇಳೂರು ಗೋಪಾಲಕೃಷ್ಣ ಅವರು ಸರಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಷಡಾಕ್ಷರಿ ವರ್ಗಾವಣೆ ವಿಚಾರ ಸಂಬಂಧ ಪ್ರತಿಕ್ರಿಯೆ ನೀಡಿದರು. ಷಡಾಕ್ಷರಿ ವರ್ಗಾವಣೆ ವಿಚಾರ ಏನು ದೊಡ್ಡ ವಿಚಾರವಲ್ಲ. ಆತ ಸಾಕಷ್ಟು ಅಕ್ರಮ ಆಸ್ತಿ ಸಂಪಾದಿಸಿದ್ದಾನೆ. ಆತನ ವಿರುದ್ದ ತನಿಖೆಯಾಗಬೇಕು. ಯಾರು ಯಾರದ್ದೋ ತನಿಖೆ ಮಾಡ್ತಾರೆ ಈತನ ವಿರುದ್ದವು ತನಿಖೆ ನಡೆಸಲಿ. ಇನ್ನು ಕಿಯೋನಿಕ್ಸ್ ಹಗರಣ ವಿಚಾರದಲ್ಲಿ ಪ್ರಿಯಾಂಕ್ ಖರ್ಗೆ ತಪ್ಪು ಮಾಡಿದ್ರೆ ತನಿಖೆ ಮಾಡಲಿ ಎಂದರು.

ಇದನ್ನೂ ಓದಿ: ಬೆಳಗಾವಿ ಬಿಜೆಪಿ-ಕಾಂಗ್ರೆಸ್ ಕಿತ್ತಾಟ: ಸಂಬಳವಿಲ್ಲದೆ ಪರದಾಡುತ್ತಿರುವ ಪೌರ ಕಾರ್ಮಿಕರು

ನಾನು ಲೋಕಸಭಾ ಚುನಾವಣೆಗೆ ಸ್ಪರ್ಧಿಸುವ ಆಸೆ ಇಟ್ಟುಕೊಂಡಿದ್ದೇನೆ

ಲೋಕಸಭಾ ಚುನಾವಣೆಗೆ ನಾನು ಪ್ರಬಲ ಆಕಾಂಕ್ಷಿ. ನಾನು ಈ ಬಾರಿ ಲೋಕಸಭೆಗೆ ಸ್ಪರ್ಧಿಸುವ ಆಸೆ ಹೊಂದಿದ್ದೇನೆ. ಚುನಾವಣೆಗೆ ಸ್ಪರ್ಧಿಸುವ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರ ಬಳಿ ಹೇಳಿದ್ದೇನೆ. ಶಿವಮೊಗ್ಗ ಕ್ಷೇತ್ರದಲ್ಲಿ ಬಿಜೆಪಿ ಎದುರಿಸಲು ನಾನೇ ಪ್ರಬಲ ಸ್ಪರ್ಧಿ ಎಂದರು. ಇದೇ ವೇಳೆ ಡಿಕೆ ಶಿವಕುಮಾರ್ ಅವರು ಮುಖ್ಯಮಂತ್ರಿ ಆಗುವ ವಿಚಾರ ಸಂಬಂಧ ಪ್ರತಿಕ್ರಿಯಿಸಿದ್ದು, ಈ ಬಗ್ಗೆ ನನಗೆ ಗೊತ್ತಿಲ್ಲ. ನಾನು ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಬಗ್ಗೆ ಮಾತನಾಡಲ್ಲ. ನಾನು ಹೇಳೋದು ಎಲ್ಲಾ ಶಾಸಕರಿಗೂ 20:20 ತಿಂಗಳು ಸಚಿವರನ್ನು ‌ಮಾಡಿ. ಶಾಸಕರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ಬೇಡ. 20:20 ತಿಂಗಳು ಎಲ್ಲರನ್ನು ಸಚಿವರನ್ನಾಗಿ ಮಾಡಿ. ಅಭಿವೃದ್ಧಿ ಆಗಬೇಕು ಅಂದ್ರೆ‌ ಹೇಗೆ ಬೇಕಾದರೂ ಆಗ್ತದೆ ಎಂದರು.

ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರು ಯಾರು ಅನ್ನೋದೆ ನನಗೆ ಗೊತ್ತಿಲ್ಲ. ನಾನು‌ ಕೇವಲ ಶಾಸಕ ಅಷ್ಟೇ. ಮೊದಲು ಮಧು ಬಂಗಾರಪ್ಪ ಉಸ್ತುವಾರಿ ಸಚಿವರಾಗಿದ್ದರಂತೆ. ಈಗ ಉಸ್ತುವಾರಿ ಸಚಿವರು ಯಾರು ಅಂತಾ ನನಗೆ ಗೊತ್ತಿಲ್ಲ ಇವತ್ತು ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಕೆಡಿಪಿ ಸಭೆ ಇದೆಯಂತೆ ಕೆಡಿಪಿ ಸಭೆಗೆ ನನಗೆ ಆಹ್ವಾನವಿಲ್ಲ ಎಂದು ಹೇಳಿದರು.

ಶಿವಮೊಗ್ಗ ಜಿಲ್ಲೆಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ