ಸಾಗರದಲ್ಲಿ ಬಜರಂಗದಳ ಕಾರ್ಯಕರ್ತನ ಹತ್ಯೆಗೆ ಯತ್ನ; ಮಂಗಳವಾರ ಅಘೋಷಿತ ಬಂದ್​ಗೆ ಕರೆ

Shivamogga: ಸುನೀಲ್​​​ ಜೊತೆ ಸಮೀರ್ ಕಿರಿಕ್​​ ಮಾಡಿಕೊಂಡಿದ್ದಾನೆ. ಈ ವೇಳೆ ಸುನೀಲ್ ಮೇಲೆ ಮಚ್ಚು ಬೀಸಿ ಸಮೀರ್ ಎಸ್ಕೇಪ್ ಆಗಿದ್ದಾನೆ.

ಸಾಗರದಲ್ಲಿ ಬಜರಂಗದಳ ಕಾರ್ಯಕರ್ತನ ಹತ್ಯೆಗೆ ಯತ್ನ; ಮಂಗಳವಾರ ಅಘೋಷಿತ ಬಂದ್​ಗೆ ಕರೆ
ಸುನೀಲ್
Follow us
TV9 Web
| Updated By: ಆಯೇಷಾ ಬಾನು

Updated on:Jan 09, 2023 | 2:06 PM

ಶಿವಮೊಗ್ಗ: ಜಿಲ್ಲೆಯ ಸಾಗರ ನಗರದಲ್ಲಿ ಬಜರಂಗದಳ ಕಾರ್ಯಕರ್ತನ ಹತ್ಯೆಗೆ ಯತ್ನ ನಡೆದಿದೆ. ನಿನ್ನೆ(ಜ.08) ಶಿವಮೊಗ್ಗದಲ್ಲಿ ನಡೆದ ಶೌರ್ಯ ಸಂಚಲನ ಯಾತ್ರೆಯಲ್ಲಿ ಬೆಳ್ಳಂ ಬೆಳಗ್ಗೆ ಸುನೀಲ್ ಎಂಬ ಬಜರಂಗದಳ ಕಾರ್ಯಕರ್ತನನ್ನು ಸಮೀರ್ ಎಂಬಾತ ಹತ್ಯೆಗೆ ಯತ್ನಿಸಿದ್ದಾನೆ. ದಾಳಿ ವೇಳೆ ಕೂದಲೆಳೆ ಅಂತರದಲ್ಲಿ ಸುನೀಲ್ ಪಾರಾಗಿದ್ದಾನೆ.

ಕಾರ್ಯಕ್ರಮಕ್ಕೆ ತೆರಳಿದ್ದ ಸುನೀಲ್​​​ ಜೊತೆ ಸಮೀರ್ ಕಿರಿಕ್​​ ಮಾಡಿಕೊಂಡಿದ್ದಾನೆ. ಈ ವೇಳೆ ಸುನೀಲ್ ಮೇಲೆ ಮಚ್ಚು ಬೀಸಿ ಸಮೀರ್ ಎಸ್ಕೇಪ್ ಆಗಿದ್ದಾನೆ. ​​ಸುನೀಲ್​ ಮೇಲೆ ದಾಳಿಗೆ ಯತ್ನಿಸಿದ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಸಾಗರ ನಗರದ ಬಿ.ಹೆಚ್​​.ರಸ್ತೆಯ ಬಸ್ ನಿಲ್ದಾಣ ಬಳಿ ಘಟನೆ ನಡೆದಿದ್ದು ಸಾಗರ ನಗರ ಪೊಲೀಸ್​​​ ಠಾಣೆಯಲ್ಲಿ ದೂರು ದಾಖಲಾಗಿದೆ. ​​

ಹಿಂದೂಪರ ಸಂಘಟನೆಯಿಂದ ನಾಳೆ ಸಾಗರ ನಗರ ಬಂದ್​ಗೆ ಕರೆ

ಇನ್ನು ಘಟನೆ ಸಂಬಂಧ ಬಜರಂಗದಳ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದು, ಹಿಂದೂಪರ ಸಂಘಟನೆಯಿಂದ ನಾಳೆ ಸಾಗರ ನಗರ ಬಂದ್​ಗೆ ಕರೆ ನೀಡಲಾಗಿದೆ. ಸಾಗರದಲ್ಲಿ ಹಿಂದೂಪರ ಸಂಘಟನೆಯಿಂದ ಪ್ರತಿಭಟನಾ ಮೆರವಣಿಗೆ ನಡೆಸಲಿದ್ದಾರೆ.

ಇದನ್ನೂ ಓದಿ: ಯಾರುಯಾರೋ ನನ್ನ ಮನೆಗೆ ಬಂದು ಫೋಟೋ ತೆಗೆಸಿಕೊಳ್ತಾರೆ; ಆ ಫೋಟೋ ತೋರಿಸಿ ತೇಜೋವಧೆ ಮಾಡಬಾರದು -ಹೆಚ್​ಡಿಕೆ ವಿರುದ್ಧ ಆರಗ ಜ್ಞಾನೇಂದ್ರ ವಾಗ್ದಾಳಿ

ಸಾಗರದಲ್ಲಿ ನಾವು ಶಾಂತಿಯಿಂದ ಜೀವನ ಮಾಡಲು ಸಾಧ್ಯವಾಗುತ್ತಿಲ್ಲ ಅನ್ನೋದು ಜಿಹಾದಿಗಳಿಂದ ಗೊತ್ತಾಗುತ್ತಿದೆ. ಇವತ್ತಿನ ಕೃತ್ಯದಿಂದ ಜೀವನ ಮಾಡಲು ಸಾಧ್ಯವಾಗುತ್ತಿಲ್ಲ ಅನ್ನೋದು ಗೊತ್ತಾಗುತ್ತಿದೆ. ಈಗಲಾದರೂ ಸಾಗರ ಜನರು ಎಚ್ಚರವಾಗಿ, ನಮ್ಮ ಜೊತೆಗೆ ಕೈ ಜೋಡಿಸಿ, ಇಲ್ಲದೇ ಇದ್ರೆ ನಿಮ್ಮ ಮನೆಯ ಮುಂದಿ ಬೀದಿಯ ಹೆಣ ಆಗೋದು ಖಂಡಿತ ಎಂದು ವಿಶ್ವ ಹಿಂದು ಪರಿಷತ್ ಮುಖಂಡ ರವೀಶ್ ಮನವಿ ಮಾಡಿದ್ದಾರೆ.

ಸಾಗರದಲ್ಲಿ ನಾಳೆ ಬೆಳಗ್ಗೆ ಯಿಂದ ಮಧ್ಯಾಹ್ನ 2ಗಂಟೆ ವರೆಗೆ ಅಘೋಷಿತ ಬಂದ್​ ಮಾಡಬೇಕು ಎಂದು ವಿಶ್ವ ಹಿಂದು ಪರಿಷತ್ ಮುಖಂಡ ಕರೆ ನೀಡಿದ್ದಾರೆ. ಸಾಗರದ ಬೀದಿ ಬೀದಿಯಲ್ಲಿ ಇಂದು ನಾವು ಮೆರವಣಿಗೆ ಮಾಡಲಿದ್ದೇವೆ. ಹಾಗಾಗಿ ಸಾಗರದ ಜನತೆ ಸ್ವಯಂ ಪ್ರೇರಣೆಯಿಂದ ನಾಳಿನ ಬಂದ್​ಗೆ ಬೆಂಬಲಿಸಿ, ಸ್ಪಂದಿಸಿ ಹಿಂದು ಉಳಿವಿಗಾಗಿ ಸಾಗರದ ಜನ ಸಹಕರಿಸಿ ಎಂದು ಮನವಿ ಮಾಡಿದ್ದಾರೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 2:06 pm, Mon, 9 January 23

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್