ಶಿವಮೊಗ್ಗದಲ್ಲಿ ಅಲ್ಲಾಹು ಅಕ್ಬರ್ ಘೋಷಣೆ ಕೂಗಿದ ಮುಸ್ಲಿಂ ಮಹಿಳೆ ಮಾನಸಿಕ ಅಸ್ವಸ್ಥೆ: ಎಸ್​ಪಿ ಮಿಥುನ್ ಕುಮಾರ್

ಅಯೋಧ್ಯೆ ಶ್ರೀರಾಮ ಮಂದಿರ ಉದ್ಘಾಟನೆ ಹಿನ್ನೆಲೆ ಶಿವಮೊಗ್ಗದ ಶಿವಪ್ಪನಾಯಕ ವೃತ್ತದಲ್ಲಿ ಸಿಹಿ ವಿತರಣೆ ಮಾಡಿ ಸಂಭ್ರಮಿಸಲಾಗುತ್ತಿತ್ತು. ಈ ವೇಳೆ ಮುಸ್ಲಿಂ ಮಹಿಳೆಯೊಬ್ಬಳು ಅಲ್ಲಾಹು ಅಕ್ಬರ್ ಘೋಷಣೆ ಕೂಗಿ ಶಾಂತಿ ಕದಡುವ ಯತ್ನ ಮಾಡಿದ್ದಳು. ಬಿಜೆಪಿ ನಾಯಕ ಕೆಇ ಕಾಂತೇಶ್ ಒತ್ತಾಯದ ಮೇರೆಗೆ ಪೊಲೀಸರು ಆಕೆಯನ್ನು ವಶಕ್ಕೆ ಪಡೆದಿದ್ದರು. ಈ ಬಗ್ಗೆ ಎಸ್​ಪಿ ಮಿಥುನ್ ಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.

ಶಿವಮೊಗ್ಗದಲ್ಲಿ ಅಲ್ಲಾಹು ಅಕ್ಬರ್ ಘೋಷಣೆ ಕೂಗಿದ ಮುಸ್ಲಿಂ ಮಹಿಳೆ ಮಾನಸಿಕ ಅಸ್ವಸ್ಥೆ: ಎಸ್​ಪಿ ಮಿಥುನ್ ಕುಮಾರ್
ಶಿವಮೊಗ್ಗದಲ್ಲಿ ಅಲ್ಲಾಹು ಅಕ್ಬರ್ ಘೋಷಣೆ ಕೂಗಿದ ಮುಸ್ಲಿಂ ಮಹಿಳೆ ಮಾನಸಿಕ ಅಸ್ವಸ್ಥೆ ಎಂದ ಎಸ್​ಪಿ ಮಿಥುನ್ ಕುಮಾರ್
Follow us
Basavaraj Yaraganavi
| Updated By: Rakesh Nayak Manchi

Updated on:Jan 22, 2024 | 2:59 PM

ಶಿವಮೊಗ್ಗ, ಜ.22: ಶಿವಪ್ಪ ನಾಯಕ ವೃತ್ತದಲ್ಲಿ ಅಯೋಧ್ಯೆ ರಾಮ ಮಂದಿರ (Ayodhya Ram Mandir) ಉದ್ಘಾಟನೆ ಸಂಭ್ರಮಾಚರಣೆ ವೇಳೆ ಅಲ್ಲಾಹು ಅಕ್ಬರ್ ಘೋಷಣೆ ಕೂಗಿದ ಮುಸ್ಲಿಂ ಮಹಿಳೆ ಮಾನಸಿಕ ಅಸ್ವಸ್ಥೆ ಎಂದು ತಿಳಿದುಬಂದಿದೆ. ಈ ಬಗ್ಗೆ ಮಾತನಾಡಿದ ಶಿವಮೊಗ್ಗ (Shivamogga) ಎಸ್​ಪಿ ಮಿಥುನ್ ಕುಮಾರ್, ಪೊಲೀಸರಿಂದ ಮಹಿಳೆಯ ಹಿನ್ನೆಲೆ, ಪೂರ್ವಾಪರ ಬಗ್ಗೆ ಪರಿಶೀಲನೆ ನಡೆಸಿದಾಗ ಮಹಿಳೆ ಮಾನಸಿಕ ಅಸ್ವಸ್ಥೆ ಎಂಬ ಬಗ್ಗೆ ಮಾಹಿತಿ ತಿಳಿದುಬಂದಿದೆ ಎಂದರು.

ಮಾನಸಿಕ ರೋಗಕ್ಕೆ ಮಹಿಳೆ ಚಿಕಿತ್ಸೆ ಪಡೆಯುತ್ತಿರುವ ಬಗ್ಗೆ ಮಹಿಳೆ ತಂದೆಯಿದ ಪೊಲೀಸರಿಗೆ ದಾಖಲೆಗಳ ಸಲ್ಲಿಕೆ ಮಾಡಲಾಗಿದ್ದು, 2018 ರಿಂದ ಚಿಕಿತ್ಸೆ ಪಡೆಯುತ್ತಿರುವ ಬಗ್ಗೆ ಎಸ್​ಪಿ ಮಿಥುನ್ ಕುಮಾರ್ ದೃಢಪಟ್ಟಿದ್ದಾರೆ.

ಪ್ರಕರಣ ಸಂಬಂಧ ಮಾತನಾಡಿದ ಮಹಿಳೆಯ ತಂದೆ ಸಯ್ಯದ್ ಅಬ್ಬಾಸ್, ನನ್ನ ಮಗಳು ಮೊದಲಿನಿಂದಲೂ ಸ್ವಲ್ಪ ಮಾನಸಿಕ ಅಸ್ವಸ್ಥಳಿದ್ದಾಳೆ. ಈ ಸಂಬಂಧ ಅವಳಿಗೆ ಚಿಕಿತ್ಸೆ ಕೊಡಿಸುತ್ತಿದ್ದೇವೆ. ಕಳೆದ 10 ತಿಂಗಳಿನಿಂದ ಗಂಡನ ಮನೆ ಬಿಟ್ಟು ನನ್ನ ಮನೆಯಲ್ಲಿಯೇ ಇದ್ದಾಳೆ. ಈ ಹಿಂದೆ ಖಾಸಗಿ ಶಿಕ್ಷಣ ಸಂಸ್ಥೆಯಲ್ಲಿ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿದ್ದಳು. ಘಟನೆ ಕೇಳಿ ನನಗೂ ನೋವಾಗಿದೆ. ಅವಳು ಆ ತರಹದ ಹುಡುಗಿ ಅಲ್ಲ. ಅವಳು ಜಾತಿ ಭೇದ ಮಾಡಲ್ಲ. ಎಲ್ಲರನ್ನೂ ಒಂದೇ ತರ ನೋಡುತ್ತಾಳೆ. ಉದ್ದೇಶ ಪೂರಕವಾಗಿ ಅವಳು ಘೋಷಣೆ ಕೂಗಿಲ್ಲ ಎಂದರು.

ಏನಿದು ಪ್ರಕರಣ?

ಕೋಟ್ಯಂತರ ಹಿಂದೂಗಳ ಐದು ದಶಕಗಳ ಕನಸು ಅಯೋಧ್ಯೆ ರಾಮ ಮಂದಿರ ಇಂದು ಲೋಕಾರ್ಪಣೆಗೊಂಡಿದೆ. ಮಂದಿರದಲ್ಲಿ ಪ್ರಭು ಶ್ರೀರಾಮ ವಿರಾಜಮಾನನಾಗಿದ್ದಾನೆ. ದೇಶಾದ್ಯಂತ ಸಂಭ್ರಮಾಚರಣೆ ನಡೆಸಲಾಗುತ್ತಿದೆ. ಅದರಂತೆ ಶಿವಮೊಗ್ಗದ ಶಿವಪ್ಪನಾಯಕ ವೃತ್ತದಲ್ಲೂ ಸಿಹಿ ಹಂಚಿ ಸಂಭ್ರಮಿಸಲಾಗುತ್ತಿತ್ತು. ಜೈ ಶ್ರೀರಾಮ್ ಘೋಷಣೆಗಳು ಮೊಳಗುತ್ತಿದ್ದವು.

ಇದನ್ನೂ ಓದಿ: ರಾಮಲಲ್ಲಾ ಇನ್ಮುಂದೆ ಟೆಂಟ್​​​ನಲ್ಲಿ ಅಲ್ಲ, ದಿವ್ಯ ಮಂದಿರದಲ್ಲಿ ಇರುತ್ತಾನೆ: ನರೇಂದ್ರ ಮೋದಿ

ಈ ವೇಳೆ ಮುಸ್ಲಿಂ ಮಹಿಳೆಯೊಬ್ಬಳು ಅಲ್ಲಾಹು ಅಕ್ಬರ್ ಎಂದು ಘೋಷಣೆ ಕೂಗಿದ್ದಲ್ಲದೆ, ನೀವು ಮೋದಿ‌ ಪರ ಕೆಲಸ ಮಾಡುತ್ತಿದ್ದೀರಿ ಎಂದು ಪೊಲೀಸರಿಗೆ ಆವಾಜ್ ಹಾಕಿದ್ದಳು. ಪರಿಣಾಮವಾಗಿ ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟಾಯಿತು. ಹಿಂದೂ ಕಾರ್ಯಕರ್ತರು ತೀವ್ರ ಪ್ರತಿರೋಧ ವ್ಯಕ್ತಪಡಿಸಿದ್ದಲ್ಲದೆ, ಇನ್ನಷ್ಟು ಜೈ ಶ್ರೀರಾಮ್ ಘೋಷಣೆಗಳನ್ನು ಕೂಗಲಾರಂಭಿಸಿದರು.

ಈ ವೇಳೆ ಮಾಜಿ ಸಚಿವ ಕೆಎಸ್​ ಈಶ್ವರಪ್ಪ ಪುತ್ರ ಕೆಇ ಕಾಂತೇಶ್ ಅವರು ಪೊಲೀಸರನ್ನು ತರಾಟೆಗೆ ತೆಗೆದುಕೊಂಡಿದ್ದು, ಮುಸ್ಲಿಂ ಮಹಿಳೆ ಗೊಂದಲ ಸೃಷ್ಟಿಸುತ್ತಿದ್ದರೂ ಸುಮ್ಮನಿದ್ದೀರಾ ಎಂದು ಪ್ರಶ್ನಿಸಿದರು. ಬಳಿಕ ಎಚ್ಚೆತ್ತ ಪೊಲೀಸರು, ಮುಸ್ಲಿಂ ಮಹಿಳೆಯನ್ನು ವಶಕ್ಕೆ ಪಡೆದು ಪೊಲೀಸ್ ಜೀಪ್​ನಲ್ಲಿ ಕರೆದೊಯ್ದಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:55 pm, Mon, 22 January 24