AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವಮೊಗ್ಗ: ಗಣೇಶ ಮೂರ್ತಿಗೆ ಒದ್ದು, ನಾಗರ ವಿಗ್ರಹವನ್ನು ಅನ್ಯಕೋಮಿನ ವ್ಯಕ್ತಿ ಚರಂಡಿಗೆ ಎಸೆದ ಆರೋಪ

ಶಿವಮೊಗ್ಗದ ಶಾಂತಿನಗರದಲ್ಲಿ ಅನ್ಯಕೋಮಿನ ವ್ಯಕ್ತಿಯೊಬ್ಬ ಗಣೇಶ ಮತ್ತು ನಾಗರ ವಿಗ್ರಹಗಳಿಗೆ ಅವಮಾನ ಮಾಡಿರುವ ಘಟನೆ ನಡೆದಿದೆ. ನಾಗರ ವಿಗ್ರಹವನ್ನು ಚರಂಡಿಗೆ ಎಸೆಯಲಾಗಿದೆ. ಪೊಲೀಸರು ತನಿಖೆ ಆರಂಭಿಸಿದ್ದು, ಸ್ಥಳದಲ್ಲಿ ಬಿಗುವಿನ ವಾತಾವರಣವಿದೆ. ಈ ಘಟನೆಯಿಂದಾಗಿ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪೊಲೀಸರು ಆರೋಪಿಯನ್ನು ಬಂಧಿಸಲು ಪ್ರಯತ್ನಿಸುತ್ತಿದ್ದಾರೆ.

ಶಿವಮೊಗ್ಗ: ಗಣೇಶ ಮೂರ್ತಿಗೆ ಒದ್ದು, ನಾಗರ ವಿಗ್ರಹವನ್ನು ಅನ್ಯಕೋಮಿನ ವ್ಯಕ್ತಿ ಚರಂಡಿಗೆ ಎಸೆದ ಆರೋಪ
ಗಣೇಶ, ನಾಗರ ವಿಗ್ರಹಗಳಿಗೆ ಅಪಮಾನ
Basavaraj Yaraganavi
| Updated By: ವಿವೇಕ ಬಿರಾದಾರ|

Updated on:Jul 05, 2025 | 11:35 PM

Share

ಶಿವಮೊಗ್ಗ, ಜುಲೈ 05: ಅನ್ಯಕೋಮಿನ ವ್ಯಕ್ತಿ ನಾಗರ ವಿಗ್ರಹವನ್ನು (Nagara statue) ಚರಂಡಿಗೆ ಎಸೆದಿರುವ ಆರೋಪ ಕೇಳಿಬಂದಿದೆ. ಶಿವಮೊಗ್ಗ  (Shivamogga) ಪಟ್ಟಣದ ಶಾಂತಿನಗರದ ಬಂಗಾರಪ್ಪ ಬಡಾವಣೆಯಲ್ಲಿ ಘಟನೆ ನಡೆದಿದೆ. ಅನ್ಯಕೋಮಿನ ವ್ಯಕ್ತಿ ಗಣೇಶನ ಮೂರ್ತಿಗೆ (Ganesh Statue) ಒದ್ದು, ಅವಮಾನ ಮಾಡಿದ್ದಾನೆ. ಬಳಿಕ ಅಲ್ಲೇ ಇದ್ದ ನಾಗರ ವಿಗ್ರಹ ಚರಂಡಿಗೆ ಎಸೆದು ಪರಾರಿಯಾಗಿದ್ದಾನೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಸ್ಥಳಕ್ಕೆ ಡಿವೈಎಸ್​ಪಿ ಸಂಜೀವ್​​ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಬಡಾವಣೆಯ ಮುಖ್ಯ ರಸ್ತೆಯಲ್ಲಿ ಇತ್ತೀಚೆಗೆ ಗಣಪತಿ ವಿಗ್ರಹ ಪ್ರತಿಷ್ಠಾಪನೆ ಮಾಡಲಾಗಿತ್ತು ಎಂದು ತಿಳಿದುಬಂದಿದೆ. ಬಡಾವಣೆ ಜನರು ಅನ್ಯಕೋಮಿನ ವ್ಯಕ್ತಿ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.

ಘಟನೆ ಸಂಬಂಧ ಶಿವಮೊಗ್ಗ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಮಿಥುನ್ ಕುಮಾರ್ ಮಾತನಾಡಿ, ಸಂಜೆ ಸಮಯದಲ್ಲಿ ಈ ಘಟನೆ ನಡೆದಿದೆ. ಬಡಾವಣೆಯಲ್ಲಿ ಪಾರ್ಕ್​ಗೆ ಮೀಸಲು ಇರಿಸಲಾಗಿದ್ದ ಜಾಗದಲ್ಲಿ ಗಣಪತಿ ವಿಗ್ರಹ ಮತ್ತು ನಾಗ ದೇವರ ವಿಗ್ರಹ ಪ್ರತಿಷ್ಠಾಪನೆ ಮಾಡಲಾಗಿದೆ. ಓರ್ವ ವ್ಯಕ್ತಿ ಬಂದು ದೇವರ ಮೂರ್ತಿ ಎಸೆದು ಅವಮಾನ ಮಾಡಿದ್ದಾನೆ ಎಂದು ಸ್ಥಳೀಯರು ಆರೋಪಿಸಿದ್ದಾರೆ ಎಂದರು.

ಇದನ್ನೂ ಓದಿ: ಮೇಯಲು ಬಿಟ್ಟಿದ್ದ ಹಸುವಿನ ಕೆಚ್ಚಲು ಕೊಯ್ದು ವಿಕೃತಿ ಮೆರೆದ ಕಿಡಿಗೇಡಿಗಳು

ಪ್ರಕರಣದ ತನಿಖೆಯನ್ನು ಶಿವಮೊಗ್ಗ ಗ್ರಾಮಾಂತರ ಪೊಲೀಸರು ನಡೆಸುತ್ತಿದ್ದಾರೆ. ಕೃತ್ಯ ಎಸಗಿದವನನ್ನು ಪತ್ತೆ ಮಾಡಲಾಗುವುದು. ಘಟನೆ ಕುರಿತು ಮಾಹಿತಿ ಕಲೆ ಹಾಕಲಾಗುತ್ತಿದೆ. ಯಾವ ಕಾರಣಕ್ಕೆ ಈ ಘಟನೆ ನಡೆದಿದೆ ಎನ್ನುವುದು ಪತ್ತೆ ಮಾಡಬೇಕಿದೆ ಎಂದು ಹೇಳಿದರು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:21 pm, Sat, 5 July 25