AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shivamogga Airport: ಶಿವಮೊಗ್ಗ ಏರ್​​ಪೋರ್ಟ್ ಉದ್ಘಾಟಿಸಿದ ಮೋದಿ, ಯಡಿಯೂರಪ್ಪಗೆ ವಿಶೇಷ ಸನ್ಮಾನ

ಪ್ರಧಾನಿ ನರೇಂದ್ರ ಮೋದಿ ಅವರು ಶಿವಮೊಗ್ಗ ವಿಮಾನ ನಿಲ್ದಾಣವನ್ನು ಉದ್ಘಾಟಿಸಿ ಯಡಿಯೂರಪ್ಪ ಅವರ ಕನಸು ನನಸು ಮಾಡಿದರು. ಬಿಎಸ್​ವೈ ಅವರ ಹುಟ್ಟುಹಬ್ಬದಂದೇ ಲೋಕಾರ್ಪಣೆಗೊಳಿಸಿದ್ದು ವಿಶೇಷವಾಗಿದೆ. ಈ ವೇಳೆ ಯಡಿಯೂರಪ್ಪ ಅವರಿಗೆ ಮೋದಿ ವಿಶೇಷ ಸನ್ಮಾನ ಮಾಡಿದರು.

ರಮೇಶ್ ಬಿ. ಜವಳಗೇರಾ
|

Updated on:Feb 27, 2023 | 1:02 PM

Share

ಶಿವಮೊಗ್ಗ: ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರ(BS Yediyurappa) ಕನಸನ್ನು ಪ್ರಧಾನಿ ನರೇಂದ್ರ ಮೋದಿ(Narendra Modi) ಇಂದು(ಫೆ.27) ನನಸು ಮಾಡಿದರು. ಶಿವಮೊಗ್ಗದ ಸೋಗಾನೆಯ ನಿರ್ಮಾಣವಾಗಿರುವ ವಿಮಾನ ನಿಲ್ದಾಣವನ್ನು(Shivamogga Airport) ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸುವ ಮೂಲಕ ಬಿಎಸ್​ವೈಗೆ ಬರ್ತ್​ ಡೇ ಗಿಫ್ಟ್​ ಕೊಟ್ಟರು. ಬಳಿಕ ಮೋದಿಯವರು ಬಹಿರಂಗ ಸಮಾವೇಶದಲ್ಲಿ ಯಡಿಯೂರಪ್ಪ ಅವರಿಗೆ ಹಸಿರು ಶಾಲು ಹೊದಿಸಿ ನೇಗಿಲಿನ ಸ್ಮರಣಿಕೆ ನೀಡಿ ಸನ್ಮಾನಿಸಿದರು. ಈ ವೇಳೆಯಡಿಯೂರಪ್ಪ ಕೊಂಚ ಭಾವುಕರಾದರು.

ಇದನ್ನೂ ಓದಿ: PM Modi Shivamogga Visit Live: ಯಡಿಯೂರಪ್ಪ ಕನಸು ನನಸು ಮಾಡಿದ ಪ್ರಧಾನಿ ಮೋದಿ

775 ಎಕರೆ ಪ್ರದೇಶದಲ್ಲಿ 450 ಕೋಟಿ ರೂಪಾಯಿ ವೆಚ್ಚ

ಆಯನೂರು ಅಥವಾ ಸೋಗಾನೆಯಲ್ಲಿ ಏರ್ ಪೋರ್ಟ್ ನಿರ್ಮಾಣ ಮಾಡುವ ಕುರಿತು ಚರ್ಚೆಯಾಗಿತ್ತು. ಕೊನೆಗೆ ಸೋಗಾನೆಯಲ್ಲಿ 2006ರಲ್ಲಿ ವಿಮಾನ ನಿಲ್ದಾಣ ಯೋಜನೆಗೆ ಚಾಲನೆ ಸಿಕ್ಕಿತ್ತು. 2008 ಜೂನ್ 20ರಂದು ಅಂದು ಮುಖ್ಯಮಂತ್ರಿಯಾಗಿದ್ದ ಬಿ.ಎಸ್.ಯಡಿಯೂರಪ್ಪ ಅವರು ಶಂಕುಸ್ಥಾಪನೆ ನೆರವೇರಿಸಿದ್ದರು. ಇದೀಗ ಅವರ ಸಮ್ಮುಖದಲ್ಲೇ ಮುಖ್ಯವಾಗಿ ಅವರ ಜನ್ಮದಿನದಂದೇ ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟಿಸಿದರು.

775 ಎಕರೆ ಪ್ರದೇಶದಲ್ಲಿ 450 ಕೋಟಿ ರೂಪಾಯಿ ವೆಚ್ಚದಲ್ಲಿ ವಿಮಾನ ನಿಲ್ದಾಣ ನಿರ್ಮಿಸಲಾಗಿದ್ದು, ಇದು ಕರ್ನಾಟಕ ರಾಜ್ಯದ ಅತಿದೊಡ್ಡ ಎರಡನೇ ವಿಮಾನ ನಿಲ್ದಾಣ ಎನ್ನುವ ಹೆಗ್ಗಳಿಗೆ ಪಾತ್ರವಾಗಿದೆ.

ಯಡಿಯೂರಪ್ಪ ಭಾಷಣ

ಬಳಿಕ ಮಾತನಾಡಿದ ಯಡಿಯೂರಪ್ಪ, ಇಡೀ ವಿಶ್ವವೇ ಮೆಚ್ಚಿರುವ ಆದರ್ಶ ನಾಯಕ ಪ್ರಧಾನಿ ಮೋದಿಯವರು ಏರ್​ಪೋರ್ಟ್​ ಉದ್ಘಾಟಿಸಿರುವುದು ಸಂತಸ ತಂದಿದೆ.ಕೊಟ್ಟ ಮಾತಿನಂತೆ ಏರ್​ಪೋರ್ಟ್​ ನಿರ್ಮಾಣ ಮಾಡಿ ಉದ್ಘಾಟನೆಯಾಗಿದೆ. ಈ ದಿನ ಬಹಳ ವೈಶಿಷ್ಟ್ಯಪೂರ್ಣವಾದದ್ದು. ಮಲೆನಾಡು ಭಾಗದ ಜನರ ಕನಸು ನನಸಾಗುತ್ತಿರುವ ಶುಭ ಸಂಕೇತವಾಗಿದೆ. ಮೋದಿಯವರ ಆಶೀರ್ವಾದದಿಂದ ಕನ್ನಡನಾಡಿನ ಜನರ ಸೇವೆ. ಇಂತಹ ಅವಕಾಶ ನನಗೆ ಸಿಕ್ಕಿದ್ದಕ್ಕೆ ಜನರಿಗೆ ನಾನು ಋಣಿಯಾಗಿದ್ದೇನೆ ಎಂದರು.

ಡಬಲ್​ ಇಂಜಿನ್​ ಸರ್ಕಾರದಿಂದ ಹಳ್ಳಿ-ಹಳ್ಳಿಗಳ ಅಭಿವೃದ್ಧಿ. ಮೋದಿಗೆ ಅಭಿವೃದ್ಧಿಗೆ ಕರ್ನಾಟಕವೇ ಪ್ರೇರಣೆ. ಮೋದಿ ಬಸವಣ್ಣ ಕಾಯಕ ತತ್ವವನ್ನು ಉಲ್ಲೇಖಿಸುತ್ತಾರೆ ಎಂದು ಮೋದಿಯವರನ್ನು ಹಾಡಿಗೊಳಿದರು.

2014ರಲ್ಲಿ ಮೋದಿ ಒತ್ತಾಸೆಯಂತೆ ಸಂಸದನಾದೆ. 55 ರಾಜಕೀಯ ಜೀವನದಲ್ಲಿ ಅಧಿಕಾರದಲ್ಲಿ ಇದ್ದಿದ್ದು ಮಾತ್ರ ಏಳು ವರ್ಷ . ಆ 7 ವರ್ಷವೂ ರಾಜ್ಯದ ಉದ್ದಗಲಕ್ಕೂ ಓಡಾಡಿ ಜನರ ಸೇವೆ ಮಾಡಿದ್ದೇನೆ ಎಂದು ಯಡಿಯೂರಪ್ಪ ಹೇಳಿದರು.

Published On - 12:54 pm, Mon, 27 February 23

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ