ಶಿವಮೊಗ್ಗ: ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರ(BS Yediyurappa) ಕನಸನ್ನು ಪ್ರಧಾನಿ ನರೇಂದ್ರ ಮೋದಿ(Narendra Modi) ಇಂದು(ಫೆ.27) ನನಸು ಮಾಡಿದರು. ಶಿವಮೊಗ್ಗದ ಸೋಗಾನೆಯ ನಿರ್ಮಾಣವಾಗಿರುವ ವಿಮಾನ ನಿಲ್ದಾಣವನ್ನು(Shivamogga Airport) ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸುವ ಮೂಲಕ ಬಿಎಸ್ವೈಗೆ ಬರ್ತ್ ಡೇ ಗಿಫ್ಟ್ ಕೊಟ್ಟರು. ಬಳಿಕ ಮೋದಿಯವರು ಬಹಿರಂಗ ಸಮಾವೇಶದಲ್ಲಿ ಯಡಿಯೂರಪ್ಪ ಅವರಿಗೆ ಹಸಿರು ಶಾಲು ಹೊದಿಸಿ ನೇಗಿಲಿನ ಸ್ಮರಣಿಕೆ ನೀಡಿ ಸನ್ಮಾನಿಸಿದರು. ಈ ವೇಳೆಯಡಿಯೂರಪ್ಪ ಕೊಂಚ ಭಾವುಕರಾದರು.
ಇದನ್ನೂ ಓದಿ: PM Modi Shivamogga Visit Live: ಯಡಿಯೂರಪ್ಪ ಕನಸು ನನಸು ಮಾಡಿದ ಪ್ರಧಾನಿ ಮೋದಿ
ಆಯನೂರು ಅಥವಾ ಸೋಗಾನೆಯಲ್ಲಿ ಏರ್ ಪೋರ್ಟ್ ನಿರ್ಮಾಣ ಮಾಡುವ ಕುರಿತು ಚರ್ಚೆಯಾಗಿತ್ತು. ಕೊನೆಗೆ ಸೋಗಾನೆಯಲ್ಲಿ 2006ರಲ್ಲಿ ವಿಮಾನ ನಿಲ್ದಾಣ ಯೋಜನೆಗೆ ಚಾಲನೆ ಸಿಕ್ಕಿತ್ತು. 2008 ಜೂನ್ 20ರಂದು ಅಂದು ಮುಖ್ಯಮಂತ್ರಿಯಾಗಿದ್ದ ಬಿ.ಎಸ್.ಯಡಿಯೂರಪ್ಪ ಅವರು ಶಂಕುಸ್ಥಾಪನೆ ನೆರವೇರಿಸಿದ್ದರು. ಇದೀಗ ಅವರ ಸಮ್ಮುಖದಲ್ಲೇ ಮುಖ್ಯವಾಗಿ ಅವರ ಜನ್ಮದಿನದಂದೇ ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟಿಸಿದರು.
Prime Minister Narendra Modi inaugurates Shivamogga Airport in Karnataka. pic.twitter.com/3fkDgwAN7c
— ANI (@ANI) February 27, 2023
775 ಎಕರೆ ಪ್ರದೇಶದಲ್ಲಿ 450 ಕೋಟಿ ರೂಪಾಯಿ ವೆಚ್ಚದಲ್ಲಿ ವಿಮಾನ ನಿಲ್ದಾಣ ನಿರ್ಮಿಸಲಾಗಿದ್ದು, ಇದು ಕರ್ನಾಟಕ ರಾಜ್ಯದ ಅತಿದೊಡ್ಡ ಎರಡನೇ ವಿಮಾನ ನಿಲ್ದಾಣ ಎನ್ನುವ ಹೆಗ್ಗಳಿಗೆ ಪಾತ್ರವಾಗಿದೆ.
ಬಳಿಕ ಮಾತನಾಡಿದ ಯಡಿಯೂರಪ್ಪ, ಇಡೀ ವಿಶ್ವವೇ ಮೆಚ್ಚಿರುವ ಆದರ್ಶ ನಾಯಕ ಪ್ರಧಾನಿ ಮೋದಿಯವರು ಏರ್ಪೋರ್ಟ್ ಉದ್ಘಾಟಿಸಿರುವುದು ಸಂತಸ ತಂದಿದೆ.ಕೊಟ್ಟ ಮಾತಿನಂತೆ ಏರ್ಪೋರ್ಟ್ ನಿರ್ಮಾಣ ಮಾಡಿ ಉದ್ಘಾಟನೆಯಾಗಿದೆ. ಈ ದಿನ ಬಹಳ ವೈಶಿಷ್ಟ್ಯಪೂರ್ಣವಾದದ್ದು. ಮಲೆನಾಡು ಭಾಗದ ಜನರ ಕನಸು ನನಸಾಗುತ್ತಿರುವ ಶುಭ ಸಂಕೇತವಾಗಿದೆ. ಮೋದಿಯವರ ಆಶೀರ್ವಾದದಿಂದ ಕನ್ನಡನಾಡಿನ ಜನರ ಸೇವೆ. ಇಂತಹ ಅವಕಾಶ ನನಗೆ ಸಿಕ್ಕಿದ್ದಕ್ಕೆ ಜನರಿಗೆ ನಾನು ಋಣಿಯಾಗಿದ್ದೇನೆ ಎಂದರು.
ಡಬಲ್ ಇಂಜಿನ್ ಸರ್ಕಾರದಿಂದ ಹಳ್ಳಿ-ಹಳ್ಳಿಗಳ ಅಭಿವೃದ್ಧಿ. ಮೋದಿಗೆ ಅಭಿವೃದ್ಧಿಗೆ ಕರ್ನಾಟಕವೇ ಪ್ರೇರಣೆ. ಮೋದಿ ಬಸವಣ್ಣ ಕಾಯಕ ತತ್ವವನ್ನು ಉಲ್ಲೇಖಿಸುತ್ತಾರೆ ಎಂದು ಮೋದಿಯವರನ್ನು ಹಾಡಿಗೊಳಿದರು.
2014ರಲ್ಲಿ ಮೋದಿ ಒತ್ತಾಸೆಯಂತೆ ಸಂಸದನಾದೆ. 55 ರಾಜಕೀಯ ಜೀವನದಲ್ಲಿ ಅಧಿಕಾರದಲ್ಲಿ ಇದ್ದಿದ್ದು ಮಾತ್ರ ಏಳು ವರ್ಷ . ಆ 7 ವರ್ಷವೂ ರಾಜ್ಯದ ಉದ್ದಗಲಕ್ಕೂ ಓಡಾಡಿ ಜನರ ಸೇವೆ ಮಾಡಿದ್ದೇನೆ ಎಂದು ಯಡಿಯೂರಪ್ಪ ಹೇಳಿದರು.
Published On - 12:54 pm, Mon, 27 February 23