NIA First Report: ಶಿವಮೊಗ್ಗ ಹರ್ಷ ಕೊಲೆ ಹಿಂದೆ ವೈಯಕ್ತಿಕ ದ್ವೇಷ ಅಲ್ಲ; ಕೋಮು ಗಲಭೆ ಸೃಷ್ಟಿಸುವ ಹುನ್ನಾರವಿತ್ತು- ಎನ್‌ಐಎ ವರದಿ

Shivamogga NIA Report: ಹರ್ಷ ಕೊಲೆ ಪ್ರಕರಣದಲ್ಲಿ 10 ಆರೋಪಿಗಳನ್ನು ಬಂಧಿಸಲಾಗಿದೆ. ಆರೋಪಿಗಳಿಗೆ ಸಮಾಜಯದಲ್ಲಿ ಭಯ ಹುಟ್ಟಿಸುವ ಉದ್ದೇಶವಿತ್ತು. ಸಮಾಜದ ಸ್ವಾಸ್ಥ್ಯ ಹಾಳು ಮಾಡಿ, ಕೋಮುಗಲಭೆ ಸೃಷ್ಟಿಸುವುದು, ಮಾರಕಾಸ್ತ್ರವನ್ನು ಝಳಪಿಸಿ ಜನರಲ್ಲಿ ಭಯ ಹುಟ್ಟಿಸುವ ಉದ್ದೇಶವಿತ್ತು ಎಂಬ ಆಘಾತಕಾರಿ ಅಂಶಗಳು ಎನ್‌ಐಎ ದಾಖಲಿಸಿರುವ ಎಫ್‌ಐಆರ್‌ನಲ್ಲಿ ಉಲ್ಲೇಖಗೊಂಡಿದೆ

NIA First Report: ಶಿವಮೊಗ್ಗ ಹರ್ಷ ಕೊಲೆ ಹಿಂದೆ ವೈಯಕ್ತಿಕ ದ್ವೇಷ ಅಲ್ಲ; ಕೋಮು ಗಲಭೆ ಸೃಷ್ಟಿಸುವ ಹುನ್ನಾರವಿತ್ತು- ಎನ್‌ಐಎ ವರದಿ
ಶಿವಮೊಗ್ಗದಲ್ಲಿ ಕೊಲೆಯಾಗಿದ್ದ ಬಜರಂಗದಳ ಕಾರ್ಯಕರ್ತ ಹರ್ಷ
Follow us
TV9 Web
| Updated By: ಸಾಧು ಶ್ರೀನಾಥ್​

Updated on:Apr 02, 2022 | 5:38 PM

ಶಿವಮೊಗ್ಗ: ಶಿವಮೊಗ್ಗದಲ್ಲಿ ಇತ್ತೀಚೆಗೆ ಬಜರಂಗದಳ ಕಾರ್ಯಕರ್ತ ಹರ್ಷ ಎಂಬ ಯುವಕನ ಕೊಲೆ ಪ್ರಕರಣದ ತನಿಖೆಯನ್ನು ಕೈಗೆತ್ತಿಕೊಂಡಿರುವ ರಾಷ್ಟ್ರೀಯ ತನಿಖಾ ದಳವು (ಎನ್‌ಐಎ -NIA) ತನ್ನ ಪ್ರಾಥಮಿಕ ವರದಿಯಲ್ಲಿ ಹರ್ಷ ಕೊಲೆ ಹಿಂದೆ ಸಮಾಜದ ಸ್ವಾಸ್ಥ್ಯ ಹಾಳು ಮಾಡುವ ಹುನ್ನಾರ ಅಡಗಿತ್ತು. ತನ್ಮೂಲಕ ಕೋಮುಗಲಭೆ (Communal Violence) ಎಬ್ಬಿಸುವ ಉದ್ದೇಶವಿತ್ತು ಎಂಬ ಆತಂಕಕಾರಿ ಅಂಶ ಬಹಿರಂಗಪಡಿಸಿದೆ. NIA ದಾಖಲು ಮಾಡಿರುವ ಎಫ್‌ಐಆರ್‌ನಲ್ಲಿ ಏನೇನು ಉಲ್ಲೇಖವಾಗಿದೆ ಎಂಬುದರ ವಿವರ ಟಿವಿ9 ಗೆ ಲಭ್ಯವಾಗಿದೆ. ಹರ್ಷ ಕೊಲೆ ಪ್ರಕರಣದಲ್ಲಿ 10 ಆರೋಪಿಗಳನ್ನು ಬಂಧಿಸಲಾಗಿದೆ. ಆರೋಪಿಗಳಿಗೆ ಸಮಾಜಯದಲ್ಲಿ ಭಯ ಹುಟ್ಟಿಸುವ ಉದ್ದೇಶವಿತ್ತು. ಸಮಾಜದ ಸ್ವಾಸ್ಥ್ಯ ಹಾಳು ಮಾಡಿ, ಕೋಮುಗಲಭೆ ಸೃಷ್ಟಿಸುವುದು, ಮಾರಕಾಸ್ತ್ರವನ್ನು ಝಳಪಿಸಿ ಜನರಲ್ಲಿ ಭಯ ಹುಟ್ಟಿಸುವ ಉದ್ದೇಶವಿತ್ತು ಎಂಬ ಆಘಾತಕಾರಿ ಅಂಶಗಳು ಎನ್‌ಐಎ ದಾಖಲಿಸಿರುವ ಎಫ್‌ಐಆರ್‌ನಲ್ಲಿ ಉಲ್ಲೇಖಗೊಂಡಿದೆ (Shivamogga Bhajarangabal Activist Harsh murder). NIA ದಾಖಲಿಸಿರುವ ಎಫ್ಐಆರ್ ಮತ್ತು ದೂರುದಾರರ ದೂರಿನ ಪ್ರತಿ ಟಿವಿ 9 ಗೆ ಲಭ್ಯವಾಗಿದೆ. ರಾಷ್ಟ್ರೀಯ ತನಿಖಾ ದಳದ ಎಫ್ಐಆರ್ ನಲ್ಲಿ ಈ ಮಹತ್ವದ ಅಂಶಗಳೆಲ್ಲಾ ಅಡಕವಾಗಿವೆ.

ವೈಯಕ್ತಿಕ ದ್ವೇಷ, ಹಳೆಯ ಗಲಾಟೆ ವಿಚಾರ ಅಲ್ಲ -ಸಮಾಜದ ಸ್ವಾಸ್ಥ್ಯ ಹಾಳು ಮಾಡುವುದೇ ಪಾತಕಿಗಳ ಉದ್ದೇಶವಾಗಿತ್ತು: ಹರ್ಷನ ಕೊಲೆ ಮಾಡುವ ಮೂಲಕ ಆರೋಪಿಗಳು ಸಮಾಜದ ಸ್ವಾಸ್ಥ್ಯ ಹಾಳು ಮಾಡಬೇಕು. ಸಾರ್ವಜನಿಕರಿಗೆ ಭಯವನ್ನು ಉಂಟು ಮಾಡುವ ಉದ್ದೇಶ ಹೊಂದಿದ್ದರು. ಶಿವಮೊಗ್ಗದಲ್ಲಿ ಕೋಮು ಗಲಭೆ ಎಬ್ಬಿಸಬೇಕು ಎಂಬ ಉದ್ದೇಶ ಇತ್ತಂತೆ. ಎಲ್ಲ ಹತ್ತು ಆರೋಪಿಗಳು ಕೂಡ ಕೋಮು ಗಲಭೆ ಎಬ್ಬಿಸುವ ಉದ್ದೇಶದಿಂದ ಈ ಕೊಲೆ ಮಾಡಿದ್ದಾರೆ. ಅಷ್ಟೇ ಅಲ್ಲದೆ ಮಾರಾಕಾಸ್ತ್ರಗಳ ಮೂಲಕ ಸಾರ್ವಜನಿಕರಿಗೆ ಭಯ ಉಂಟು ಮಾಡುವ ಕೃತ್ಯ ಮಾಡಿದ್ರಂತೆ. ಇದೆಲ್ಲಾ ರಾಷ್ಟ್ರೀಯ ತನಿಖಾ ದಳ ದಾಖಲು ಮಾಡಿರುವ ಎಫ್ ಐ ಆರ್ ನಲ್ಲಿ ಅಡಕವಾಗಿದೆ.

ಇನ್ನೂ ಘಾತಕಾರಿ ಅಂಶವೆಂದರೆ ಇಲ್ಲಿ ಯಾವುದೇ ವೈಯಕ್ತಿಕ ದ್ವೇಷ ಅನ್ನೋದನ್ನಾಗಲಿ, ಹಳೆಯ ಗಲಾಟೆ ವಿಚಾರ ಅನ್ನೋದಾಗಲಿ ಉಲ್ಲೇಖ ಮಾಡಿಲ್ಲ. ಆದರೆ ಸಮಾಜದ ಸ್ವಾಸ್ಥ್ಯ ಹಾಳು ಮಾಡಬೇಕು ಎಂಬುದು ಪಾತಕಿಗಳ ಉದ್ದೇಶವಾಗಿತ್ತು.

ಶಿವಮೊಗ್ಗ ಹರ್ಷ ಕೊಲೆ ಹಿಂದೆ ವ್ಯವಸ್ಥಿತ ಜಾಲ ಕೆಲಸ ಮಾಡುತ್ತಿರುವ ಸಾಧ್ಯತೆಯಿದೆ- ಸಿ.ಟಿ.ರವಿ ಶಿವಮೊಗ್ಗ ಹರ್ಷ ಕೊಲೆ ಹಿಂದೆ ಕೋಮುದಳ್ಳುರಿ ಉದ್ದೇಶವಿದೆ. ವೈಯಕ್ತಿಕ ಕಾರಣಕ್ಕೆ ಕೊಲೆಯಾಗಿಲ್ಲ ಎಂದು NIA ಹೇಳಿದೆ. ಕೋಮುಗಲಭೆ ಸೃಷ್ಟಿಸಬೇಕೆಂಬ ಉದ್ದೇಶದಿಂದ ಹತ್ಯೆಗೈದಿದ್ದಾರೆ. ವೈಯಕ್ತಿಕವಾಗಿ ತೆಗೆದುಕೊಂಡ ತೀರ್ಮಾನ ಅಲ್ಲ ಅನಿಸುತ್ತದೆ. ಇದರ ಹಿಂದೆ ವ್ಯವಸ್ಥಿತ ಜಾಲ ಕೆಲಸ ಮಾಡುತ್ತಿರುವ ಸಾಧ್ಯತೆಯಿದೆ. ಫೈನಾನ್ಸ್ ಮಾಡುವವರು, ಪ್ರಚೋದನೆ ಕೊಟ್ಟವರು ಯಾರು? ಹಣದ ವ್ಯವಸ್ಥೆ ಮಾಡುವವರು ಯಾರೆಂದು ತನಿಖೆ ಆಗಲಿ. ಬೆಂಬಲ ಕೊಡುವವರು ಯಾರೆಂದು ಸಮಗ್ರ ತನಿಖೆಯಾಗಬೇಕು ಎಂದು ಚಿಕ್ಕಮಗಳೂರು ನಗರದಲ್ಲಿ ಬಿಜೆಪಿ ನಾಯಕ ಸಿ.ಟಿ. ರವಿ ಹೇಳಿದ್ದಾರೆ.

ಹರ್ಷನಿಗಾಗಲಿ-ಆಪಾದಿತರಿಗಾಗಲಿ ವ್ಯಕ್ತಿಗತ ಜಗಳ ಇಲ್ಲವೆಂದು ಮೇಲ್ನೋಟಕ್ಕೆ ಕಂಡಿತ್ತು. ವೈಯಕ್ತಿಕ ಕಾರಣಗಳಿಂದ ಹರ್ಷ ಕೊಲೆಯಾಗಿಲ್ಲ ಎಂದು ಎನ್.ಐ.ಎ. ದೃಢೀಕರಿಸಿದೆ. ಹಾಗಾಗಿ ನ್ಯಾಯಾಲಯದಲ್ಲಿ ಬೆಂಬಲ ಕೊಡುವವರು ಯಾರು ಎಂಬುದೆಲ್ಲಾ ಸಮಗ್ರ ತನಿಖೆಯಾಗಬೇಕು. ನಿನ್ನೆ ಪರೇಶ್ ಮೇಸ್ತಾ, ಇಂದು ಹರ್ಷ, ನಾಳೆ ಮತ್ತೊಬ್ಬರು ಎಂಬ ಪರಿಸ್ಥಿತಿ ಬರಬಾರದು. ಈ ಹಿನ್ನೆಲೆಯಲ್ಲೇ ಎನ್.ಐ.ಎಗೆ ಕೇಸ್ ವಹಿಸಿರುವುದು, ಸಮಗ್ರ ತನಿಖೆಯಾಗಲಿ. ಇದರ ನೆಟ್ವರ್ಕ್ ನೋಡೋಣ, ರಾಜ್ಯದಲ್ಲೇ ಇದ್ದಾರೋ, ಹೊರರಾಜ್ಯದಲ್ಲಿ ಇದ್ದಾರೋ ಗೊತ್ತಾಗಲಿ ಎಂದು ಬಿಜೆಪಿ ನಾಯಕ ಸಿ.ಟಿ. ರವಿ ಅಭಿಪ್ರಾಯಪಟ್ಟಿದ್ದಾರೆ.

ಹರ್ಷ ಕೊಲೆಯ ಮುಂದಿನ ತನಿಖೆ ಎನ್‌ಐಎ ನಡೆಸಲಿದೆ: ಶಿವಮೊಗ್ಗ ಎಸ್​ಪಿ ಶಿವಮೊಗ್ಗದಲ್ಲಿ ಬಜರಂಗದಳ ಕಾರ್ಯಕರ್ತನ ಕೊಲೆ ಪ್ರಕರಣದ ತನಿಖೆ ಈಗ ಎನ್‌ಐಎ ನಡೆಸುತ್ತಿದೆ. ಹರ್ಷ ಕೊಲೆ ಪ್ರಕರಣದ ತನಿಖೆಯ ದಾಖಲೆಗಳ ಹಸ್ತಾಂತರವಾಗಿದೆ. ನ್ಯಾಯಾಲಯದ ಮೂಲಕ ಎನ್​ಐಎಗೆ ದಾಖಲೆ ಹಸ್ತಾಂತರ ಮಾಡಲಾಗಿದೆ. ಹರ್ಷ ಹತ್ಯೆ ಪ್ರಕರಣದ ಎಲ್ಲಾ ಆರೋಪಿಗಳು ಜೈಲಿನಲ್ಲಿದ್ದಾರೆ. ಬೆಂಗಳೂರಿನ ಪರಪ್ಪನ ಅಗ್ರಹಾರದ ಸೆಂಟ್ರಲ್​ ಜೈಲಿನಲ್ಲಿದ್ದಾರೆ. ಹರ್ಷ ಕೊಲೆಯ ಮುಂದಿನ ತನಿಖೆ ಎನ್‌ಐಎ ನಡೆಸಲಿದೆ ಎಂದು ಶಿವಮೊಗ್ಗ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮೀಪ್ರಸಾದ್ ತಿಳಿಸಿದ್ದಾರೆ.

ಇದನ್ನೂ ಓದಿ: ಬಜರಂಗದಳ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣ: ಶಿವಮೊಗ್ಗಕ್ಕೆ ಶೀಘ್ರ ಎನ್​ಐಎ ಸಿಬ್ಬಂದಿ

Published On - 1:49 pm, Sat, 2 April 22

ಆಟವೆಲ್ಲ ರಂಪಾಟವಾದಾಗ; ಹದ್ದುಮೀರಿ ನಡೆದುಕೊಂಡ ಸ್ಪರ್ಧಿಗಳು
ಆಟವೆಲ್ಲ ರಂಪಾಟವಾದಾಗ; ಹದ್ದುಮೀರಿ ನಡೆದುಕೊಂಡ ಸ್ಪರ್ಧಿಗಳು
ಕೈ ತುತ್ತಿನ ಹಿಂದಿರುವ ಮಹತ್ವದ ಬಗ್ಗೆ ನಿಮಗೆ ಗೊತ್ತಾ?
ಕೈ ತುತ್ತಿನ ಹಿಂದಿರುವ ಮಹತ್ವದ ಬಗ್ಗೆ ನಿಮಗೆ ಗೊತ್ತಾ?
ವಿಷ್ಣು, ಗಣೇಶನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ
ವಿಷ್ಣು, ಗಣೇಶನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ
2025ರ ಸರ್ಕಾರಿ ಕ್ಯಾಲೆಂಡರ್ ಹೇಗಿರುತ್ತದೆ? ಇಲ್ಲಿದೆ ನೋಡಿ ವಿಡಿಯೋ
2025ರ ಸರ್ಕಾರಿ ಕ್ಯಾಲೆಂಡರ್ ಹೇಗಿರುತ್ತದೆ? ಇಲ್ಲಿದೆ ನೋಡಿ ವಿಡಿಯೋ
ಹಿಮದಿಂದ ತುಂಬಿದ ಕಣಿವೆಯಲ್ಲಿ ಚಿರತೆಗಳ ಕುಣಿದಾಟ
ಹಿಮದಿಂದ ತುಂಬಿದ ಕಣಿವೆಯಲ್ಲಿ ಚಿರತೆಗಳ ಕುಣಿದಾಟ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ