Sigandur Chowdeshwari Temple: ವೀಕೆಂಡ್‌ನಲ್ಲಿ ಸಿಗಂದೂರು ಚೌಡೇಶ್ವರಿ ದೇಗುಲಕ್ಕೆ ಭೇಟಿ ನೀಡಿದ್ರೆ ಸಿಗೊಲ್ಲ ತಾಯಿಯ ದರ್ಶನ

ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಸಿಗಂದೂರು ಪುಣ್ಯ ಕ್ಷೇತ್ರಕ್ಕೆ ಪ್ರತಿ ವರ್ಷ ಲಕ್ಷಾಂತರ ಭಕ್ತರು ಭೇಟಿ ನೀಡಿ ಚೌಡೇಶ್ವರಿ ತಾಯಿಯ ದರ್ಶನ ಮಾಡುತ್ತಾರೆ. ಸದ್ಯ ಈಗ ಕೊರೊನಾ 3ನೇ ಅಲೆ ಭೀತಿ ಎದುರಾಗಿದ್ದು ಸಿಗಂದೂರು ಚೌಡೇಶ್ವರಿ ದೇಗುಲಕ್ಕೆ ಭಕ್ತರ ಭೇಟಿ ನಿರ್ಬಂಧಿಸಲಾಗಿದೆ.

Sigandur Chowdeshwari Temple: ವೀಕೆಂಡ್‌ನಲ್ಲಿ ಸಿಗಂದೂರು ಚೌಡೇಶ್ವರಿ ದೇಗುಲಕ್ಕೆ ಭೇಟಿ ನೀಡಿದ್ರೆ ಸಿಗೊಲ್ಲ ತಾಯಿಯ ದರ್ಶನ
ಸಿಗಂದೂರು ಚೌಡೇಶ್ವರಿ ದೇಗುಲ
Follow us
TV9 Web
| Updated By: ಆಯೇಷಾ ಬಾನು

Updated on:Aug 06, 2021 | 12:10 PM

ಶಿವಮೊಗ್ಗ: ಮಹಾಮಾರಿ ಕೊರೊನಾ 3ನೇ ಅಲೆಯ ಭೀತಿ ಹಿನ್ನೆಲೆಯಲ್ಲಿ ಸಿಗಂದೂರು ಚೌಡೇಶ್ವರಿ ದೇಗುಲಕ್ಕೆ ಭಕ್ತರ ಭೇಟಿ ನಿರ್ಬಂಧಿಸಲಾಗಿದೆ. ವೀಕೆಂಡ್‌ನಲ್ಲಿ ಚೌಡೇಶ್ವರಿ ದೇಗುಲಕ್ಕೆ ಭಕ್ತರ ಭೇಟಿ ನಿಷೇಧ ಮಾಡಲಾಗಿದೆ ಎಂದು ಚೌಡೇಶ್ವರಿ ದೇಗುಲದ ಧರ್ಮದರ್ಶಿ ಎಸ್.ರಾಮಪ್ಪ ಮಾಹಿತಿ ನೀಡಿದ್ದಾರೆ.

ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಸಿಗಂದೂರು ಪುಣ್ಯ ಕ್ಷೇತ್ರಕ್ಕೆ ಪ್ರತಿ ವರ್ಷ ಲಕ್ಷಾಂತರ ಭಕ್ತರು ಭೇಟಿ ನೀಡಿ ಚೌಡೇಶ್ವರಿ ತಾಯಿಯ ದರ್ಶನ ಮಾಡುತ್ತಾರೆ. ಸದ್ಯ ಈಗ ಕೊರೊನಾ 3ನೇ ಅಲೆ ಭೀತಿ ಎದುರಾಗಿದ್ದು ಸಿಗಂದೂರು ಚೌಡೇಶ್ವರಿ ದೇಗುಲಕ್ಕೆ ಭಕ್ತರ ಭೇಟಿ ನಿರ್ಬಂಧಿಸಲಾಗಿದೆ. ಆದರೆ ಆಗಸ್ಟ್ 6ರಿಂದ 13ರವರೆಗೆ ಮಾತ್ರ ದೇವರ ದರ್ಶನಕ್ಕಷ್ಟೇ ಅವಕಾಶ ನೀಡಲಾಗಿದೆ. ಹಾಗೂ ವಾರಾಂತ್ಯದಲ್ಲಿ ಸಿಗಂದೂರು ಶ್ರೀ ಕ್ಷೇತ್ರಕ್ಕೆ ಭಕ್ತರಿಗೆ ಪ್ರವೇಶವಿಲ್ಲ. ದೇಗುಲದಲ್ಲಿ ಉಳಿದ ಎಲ್ಲ ಸೇವೆ ಸ್ಥಗಿತಗೊಳಿಸಿ ಆದೇಶ ಹೊರಡಿಸಲಾಗಿದೆ. ಈ ಬಗ್ಗೆ ಚೌಡೇಶ್ವರಿ ದೇಗುಲದ ಧರ್ಮದರ್ಶಿ ಎಸ್. ರಾಮಪ್ಪ ಮಾಹಿತಿ ನೀಡಿದ್ದಾರೆ.

ದೇವಸ್ಥಾನದ ಧರ್ಮದರ್ಶಿ ಎಸ್. ರಾಮಪ್ಪ ಆಗಸ್ಟ್ 5 ರಂದು ಬಿಡುಗಡೆ ಮಾಡಿದ ಪತ್ರಿಕಾ ಪ್ರಕಟಣೆಯಲ್ಲಿ ಸಾರ್ವಜನಿಕರ ಹಿತದೃಷ್ಟಿಯಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ. ಇತರ ದಿನಗಳಲ್ಲಿ ಭಕ್ತರಿಗೆ ದೇವರ ದರ್ಶನಕ್ಕೆ ಅವಕಾಶ ನೀಡಲಾಗಿದ್ದು. ಎಲ್ಲಾ ಇತರ ಸೇವೆಗಳನ್ನು ರದ್ದುಗೊಳಿಸಲಾಗಿದೆ.

ಇದನ್ನೂ ಓದಿ: ಸಿಗಂದೂರು ಚೌಡೇಶ್ವರಿ ದೇಗುಲ ವಿವಾದ: ಮೇಲ್ವಿಚಾರಣೆ ಹೊಣೆ ನೂತನ ಸಮಿತಿಯ ಹೆಗಲಿಗೆ

Published On - 12:08 pm, Fri, 6 August 21