ಹರ್ಷನ ಹತ್ಯೆ ಹಿಂದೆ ಯಾವುದೇ ಸಂಘಟನೆ ಕೈವಾಡವಿಲ್ಲ, ಹಳೇ ವೈಷಮ್ಯದ ಹಿನ್ನೆಲೆಯಲ್ಲಿ ಕೊಲೆಯಾಗಿದೆ: ಸಚಿವ ನಾರಾಯಣಗೌಡ

ಹರ್ಷ ಹತ್ಯೆ ತುಂಬಾ ನೋವಿನ ಸಂಗತಿ, ಇದು ನಡೆಯಬಾರದಿತ್ತು ಎಂದ ಸಚಿವರು ತಾವು ಪೊಲೀಸ್ ಅಧಿಕಾರಿಗಳೊಂದಿಗೆ ಮಾತಾಡಿದ್ದು, ಈಗಾಗಲೇ ಮೂವರನ್ನ ಬಂಧಿಸಲಾಗಿದೆ ಇನ್ನೂ ಎರಡ್ಮೂರು ಜನ ಪ್ರಕರಣದಲ್ಲಿ ಭಾಗಿಯಾಗಿರಬಹುದು ಅವರನ್ನು ಕೂಡ ಶಿಘ್ರದಲ್ಲಿ ಅರೆಸ್ಟ್ ಮಾಡ್ತಿವಿ ಅಂತ ಅಧಿಕಾರಿಗಳು ತಿಳಿಸಿದರು ಎಂದಿದ್ದಾರೆ.

ಹರ್ಷನ ಹತ್ಯೆ ಹಿಂದೆ ಯಾವುದೇ ಸಂಘಟನೆ ಕೈವಾಡವಿಲ್ಲ, ಹಳೇ ವೈಷಮ್ಯದ ಹಿನ್ನೆಲೆಯಲ್ಲಿ ಕೊಲೆಯಾಗಿದೆ: ಸಚಿವ ನಾರಾಯಣಗೌಡ
ಬಜರಂಗದಳ ಕಾರ್ಯಕರ್ತ ಹರ್ಷ
Follow us
TV9 Web
| Updated By: ಅರುಣ್​ ಕುಮಾರ್​ ಬೆಳ್ಳಿ

Updated on: Feb 21, 2022 | 10:07 PM

ಶಿವಮೊಗ್ಗದಲ್ಲಿ ಬಜರಂಗದಳ ಕಾರ್ಯಕರ್ತ ಹರ್ಷ (Harsha) ಅವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆಸಿ ನಾರಾಯಣಗೌಡ (KC Narayangowda) ಹೇಳಿಕೆಯೊಂದನ್ನು ನೀಡಿದ್ದಾರೆ. ಅವರು ಹೇಳುವ ಪ್ರಕಾರ ಹರ್ಷನ ಹತ್ಯೆಯ ಹಿಂದೆ ಯಾವುದೇ ಸಂಘಟನೆಗಳ ಕೈವಾಡವಿಲ್ಲ, ಹಳೇ ವೈಷಮ್ಯದ (enmity) ಹಿನ್ನೆಲೆಯಲ್ಲಿ ಹರ್ಷನನ್ನು ಕೊಲೆ ಮಾಡಲಾಗಿದೆ. ಹರ್ಷ ಮತ್ತು ಆರೋಪಿಗಳ ನಡವಿನ ವೈರತ್ವ ಬಹಳ ದೊಡ್ಡದೇನೂ ಅಗಿರಲಿಲ್ಲ. ಎದುರು ಬದುರು ಕುಳಿತು ಮಾತಾಡಿ ಬಗೆಹರಿಸಿಕೊಂಡಿದ್ರೆ ಪರಿಸ್ಥಿತಿ ಕೊಲೆ ಮಾಡುವ ಹಂತಕ್ಕೆ ಹೋಗುತ್ತಿರಲಿಲ್ಲ ಎಂದು ನಾರಾಯಣಗೌಡ ಹೇಳಿದರು. ಮುಂದುವರಿದು ಮಾತನಾಡಿದ ಸಚಿವರು ಹರ್ಷ ಕೊಲೆ ಪ್ರಕರಣ ಸಂಬಂಧಿಸಿದಂತೆ ಈಗಾಗಲೇ ಮೂವರನ್ನು ಬಂಧಿಸಲಾಗಿದೆ. ಕೊಲೆಯಲ್ಲಿ ಇನ್ನೂ ಇಬ್ಬರು, ಮೂವರು ಭಾಗಿಯಾಗಿರುವ ಶಂಕೆ ಇದೆ. ತನಿಖೆಯ ಆಳಕ್ಕಿಳಿದಿರುವ ಪೊಲೀಸರರು ಮಿಕ್ಕ ಆರೋಪಿಗಳನ್ನು ಶೀಘ್ರವೇ ಬಂಧಿಸಲಿದ್ದಾರೆ ಎಂಬ ವಿಶ್ವಾಸವನ್ನು ಸಚಿವರು ವ್ಯಕ್ತಪಡಿಸಿದರು.

ಶಿವಮೊಗ್ಗದ ಸರ್ಕಾರಿ ಅತಿಥಿ ಗೃಹದಲ್ಲಿ ಮಾಧ್ಯಮದವರೊಂದಿಗೆ ಮಾತಾಡಿದ ಸಚಿವ ನಾರಾಯಣಗೌಡ ಅವರು, ‘ಪೊಲೀಸರ ಮೇಲೆ ಹೆಚ್ಚಿನ ಜವಾಬ್ದಾರಿ ಇರುತ್ತದೆ, ಅವರಿಗೆ ನಿರಾತಂಕದಿಂದ ಕೆಲಸ ಮಾಡಲು ಬಿಡಬೇಕು. ಪೊಲೀಸ್ ಅಧಿಕಾರಿಗಳಿಗೆ ನಾವು ಕೂಡ ಸಹಕಾರ ನೀಡಬೇಕು. ಅವರ ಪೂರ್ಣ ತನಿಖೆ ನಂತರ ಪೂರ್ತಿ ಸತ್ಯ ಬಹಿರಂಗವಾಗುತ್ತದೆ,’ ಎಂದು ಹೇಳಿದರು.

ಹರ್ಷ ಹತ್ಯೆ ತುಂಬಾ ನೋವಿನ ಸಂಗತಿ, ಇದು ನಡೆಯಬಾರದಿತ್ತು ಎಂದ ಸಚಿವರು ತಾವು ಪೊಲೀಸ್ ಅಧಿಕಾರಿಗಳೊಂದಿಗೆ ಮಾತಾಡಿದ್ದು, ಈಗಾಗಲೇ ಮೂವರನ್ನ ಬಂಧಿಸಲಾಗಿದೆ ಇನ್ನೂ ಎರಡ್ಮೂರು ಜನ ಪ್ರಕರಣದಲ್ಲಿ ಭಾಗಿಯಾಗಿರಬಹುದು ಅವರನ್ನು ಕೂಡ ಶಿಘ್ರದಲ್ಲಿ ಅರೆಸ್ಟ್ ಮಾಡ್ತಿವಿ ಅಂತ ಅಧಿಕಾರಿಗಳು ತಿಳಿಸಿದರು ಎಂದಿದ್ದಾರೆ.

‘ಈ ರೀತಿ ಆಗುತ್ತದೆ ಅಂತ ಯಾರು ಅನ್ಕೊಂಡಿರಲಿಲ್ಲ. ಐಜಿಪಿಯವರು ಸ್ಥಳದಲ್ಲೇ ಮೊಕ್ಕಾಂ ಹೂಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವರು ಈಗಾಗಲೇ ನಿರ್ದೇಶನ ನೀಡಿದ್ದಾರೆ. ಆರೋಪಿಗಳಲ್ಲಿ ಒಬ್ಬರ ಹೆಸರು ಖಾಸಿಮ್ ಅಂತ ಗೊತ್ತಾಗಿದೆ. ಇನ್ನಿಬ್ಬರ ಹೆಸರು ನಾಳೆ ಗೊತ್ತಾಗಲಿದೆ. ಹತ್ಯೆಗೆ ಕೊಟ್೯ನಲ್ಲಿ ನಡೆದ ಗಲಾಟೆ ಕಾರಣ ಎಂದು ಹೇಳಲಾಗುತ್ತಿದೆ. ಈ ಹಿಂದೆಯೂ ಹರ್ಷ ಮತ್ತು ಆರೋಪಿಗಳ ನಡುವೆ ಸಣ್ಣ ಪುಟ್ಟ ಗಲಾಟೆಗಳು ನಡೆದಿದ್ದವು. ಪೂರ್ಣ ತನಿಖೆಯ ನಂತರ ಸತ್ಯಾತ್ಯತೆ ಬಹಿರಂಗ ಆಗುತ್ತದೆ,’ ಎಂದು ಸಚಿವರು ಹೇಳಿದರು.

‘ಇದೊಂದು ಉಹಿಸಲಾಗದ ಕೆಟ್ಟ ಘಟನೆ. ಹರ್ಷ ಒಬ್ಬನೇ ಮಗನಾಗಿದ್ದರು, ಅವರ ತಂದೆ-ತಾಯಿಯನ್ನ ನೋಡಿಕೊಳ್ಳಲು ಯಾರೂ ಇಲ್ಲ. ನಾನು ಖುದ್ದು ಮನೆಗೆ ಹೋಗಿ ಸಾಂತ್ವನ ಹೇಳಿದ್ದೆನೆ,’ ಎಂದು ನಾರಾಯಣಗೌಡ ಹೇಳಿದರು

‘ಮುಂದಿನ ದಿನಗಳಲ್ಲಿ ಈ ರೀತಿಯ ಘಟನೆ ಆಗಬಾರದು. ಗುಪ್ತಚರ ವಿಭಾಗ ಇನ್ನಷ್ಟು ಮಾಹಿತಿ ಸಂಗ್ರಹಿಸಿ ಕ್ರಮ ಕೈಗೊಳ್ಳಬೇಕು. ನೈಟ್ ಕರ್ಫ್ಯೂ ಜಾರಿ ಮಾಡಲೇಬೇಕಾದ ಅನಿವಾರ್ಯತೆ ಇದೆ, ಬೆಳಿಗ್ಗೆ ವ್ಯಾಪಾರ, ವಹಿವಾಟುಗಳಿಗೆ ತೊಂದರೆಯಾಗುತ್ತೆ. ವಾತಾವರಣ ನೋಡಿ ತೀರ್ಮಾನ ತೆಗೆದುಕೊಳ್ಳಲಾಗುತ್ತೆ. ಜನರರ ಸಹಕಾರ ನಮಗೆ ಬೇಕು. ಪೊಲೀಸರಿಗೆ ಯಾರೂ ಆಡ್ಡಿಪಡಿಸಬಾರದು, ಅವರ ಮೇಲಿರುವ ಜವಾಬ್ದಾರಿ ಬಹಳ ದೊಡ್ಡದು,’ ಎಂದು ಸಚಿವರು ಹೇಳಿದರು.

ಹತ್ಯೆಯ ಹಿಂದೆ ಯಾವುದೇ ಸಂಘಟನೆಗಳ ಕೈವಾಡವಿಲ್ಲ. ಹರ್ಷ ಮತ್ತು ಆರೋಪಿಗಳ ನಡುವಿಬ ಹಳೆ ಹಗೆತನ ಈ ಹಂತಕ್ಕೆ ಹೋಗಿದೆ ಎಂದು ಸಚಿವರು ಹೇಳಿದರು.

ಶಿವಮೊಗ್ಗದಲ್ಲಿ ಬಜರಂಗದಳ ಕಾರ್ಯಕರ್ತನ ಕೊಲೆ ಪ್ರಕರಣದ ಬಗ್ಗೆ ರಾಜ್ಯ ಬಿಜೆಪಿ ಉಪಾಧ್ಯಕ್ಷ ವಿಜಯೇಂದ್ರ ಅವರು ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಅವರ ಹೇಳಿಕೆಯನ್ನು ಉಲ್ಲೇಖಿಸಿ ಹೇಳಿಕೆ ನೀಡಿದ್ದಾರೆ

‘ಯಾರೋ ಏನೋ ಹೇಳಿಕೆ ಕೊಡುತ್ತಾರೆ ಅನ್ನೋದು ದೊಡ್ಡದಲ್ಲ. ಶಿವಮೊಗ್ಗದಲ್ಲಿ ನಡೆದಿರುವುದು ಸಣ್ಣ ಘಟನೆ ಅಲ್ಲ. ಎಸ್ಡಿಪಿಐ, ಪಿಎಫ್ಐ ನಿಷೇಧಿಸುವಂತೆ ನಾವು ಕೂಡ ಆಗ್ರಹಿಸುತ್ತಿದ್ದೇವೆ. ಹಿಂದೂ-ಪರ ಸಂಘಟನೆಗಳ ಕಾರ್ಯಕರ್ತರ ರಕ್ಷಣೆ ಆಗಬೇಕಾಗಿದೆ. ಕಾಂಗ್ರೆಸ್ ಆಡಳಿತದ ಸಮಯದಲ್ಲಿ ಪ್ರಕರಣ ಹಿಂಪಡೆದ ಕಾರಣವೇ ಎಸ್ಡಿಪಿಐ, ಪಿಎಫ್ಐನವರಿಗೆ ಇಷ್ಟು ಧೈರ್ಯ ಬಂದಿದೆ. ಇಂಥ ಸಂಘಟನೆಗಳ ವಿರುದ್ಧ ಕ್ರಮಕೈಗೊಳ್ಳಬೇಕು ಮತ್ತು ಘಟನೆ ಮರುಕಳಿಸಬಾರದು ಅಂತಾದರೆ ಅವುಗಳ ವಿರುದ್ಧ ನಿಷೇಧ ಹೇರಬೇಕು,’ ಎಂದು ಬೆಂಗಳೂರಿನಲ್ಲಿ ವಿಜಯೇಂದ್ರ ಹೇಳಿದರು.

ಬಜರಂಗದಳ ಕಾರ್ಯಕರ್ತನ ಕೊಲೆ ಪ್ರಕರಣ ಹಿನ್ನೆಲೆಯಲ್ಲಿ ವಿಜಯೇಂದ್ರ ಅವ್ ನೇತೃತ್ವದಲ್ಲಿ ಬೆಂಗಳೂರಿನ ಮಲ್ಲೇಶ್ವರಂನಲ್ಲಿ ಮೋಂಬತ್ತಿ ಬೆಳಗಿಸಿ ಶ್ರದ್ಧಾಂಜಲಿ ಅರ್ಪಿಸಲಾಯಿತು.

ಇದನ್ನೂ ಓದಿ:   ಕೆ ಜಿ ಹಳ್ಳಿ ಗಲಭೆ ನಡೆದಾಗಲೇ ಎಸ್ ಡಿ ಪಿ ಐ ಮತ್ತು ಪಿ ಎಫ್ ಐ ಸಂಘಟನೆ ಬ್ಯಾನ್ ಮಾಡಿದ್ದರೆ ಹರ್ಷನ ಕೊಲೆ ನಡೆಯುತ್ತಿರಲಿಲ್ಲ: ಪ್ರತಾಪ್ ಸಿಂಹ

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್