ಶಿವಮೊಗ್ಗ ಎಸ್​ಪಿ ಟ್ರಾನ್ಸ್​ಫರ್ ಇಲ್ಲ, ಕಾನೂನು ಸುವ್ಯವಸ್ತೆಗೆ ಕಠಿಣ ಕ್ರಮ: ಗೃಹ ಸಚಿವ ಆರಗ ಜ್ಞಾನೇಂದ್ರ

ಕಾನೂನು ಸುವ್ಯವಸ್ಥೆಯ ವಿಚಾರದ ಕಾರಣಕ್ಕೇ ಶಿವಮೊಗ್ಗ ಸುದ್ದಿಯಾದ ಹಿನ್ನೆಲೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಂ.ಲಕ್ಷ್ಮೀಪ್ರಸಾದ್ ಅವರ ವರ್ಗಾವಣೆ ಸಾಧ್ಯತೆಯ ಬಗ್ಗೆಯೂ ಚರ್ಚೆಗಳು ಗರಿಗೆದರಿದ್ದವು.

ಶಿವಮೊಗ್ಗ ಎಸ್​ಪಿ ಟ್ರಾನ್ಸ್​ಫರ್ ಇಲ್ಲ, ಕಾನೂನು ಸುವ್ಯವಸ್ತೆಗೆ ಕಠಿಣ ಕ್ರಮ: ಗೃಹ ಸಚಿವ ಆರಗ ಜ್ಞಾನೇಂದ್ರ
ಗೃಹ ಸಚಿವ ಆರಗ ಜ್ಞಾನೇಂದ್ರ
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Feb 24, 2022 | 6:45 PM

ಶಿವಮೊಗ್ಗ: ಬಜರಂಗದಳ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣದ ನಂತರ ಶಿವಮೊಗ್ಗ ನಗರದ ವಿದ್ಯಮಾನಗಳು ರಾಜ್ಯವ್ಯಾಪಿ ಎಲ್ಲರ ಗಮನ ಸೆಳೆದಿವೆ. ಗಲಭೆ ಮತ್ತು ಕಾನೂನು ಸುವ್ಯವಸ್ಥೆಯ ವಿಚಾರದ ಕಾರಣಕ್ಕೇ ಶಿವಮೊಗ್ಗ ಸುದ್ದಿಯಾದ ಹಿನ್ನೆಲೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಂ.ಲಕ್ಷ್ಮೀಪ್ರಸಾದ್ ಅವರ ವರ್ಗಾವಣೆ ಸಾಧ್ಯತೆಯ ಬಗ್ಗೆಯೂ ಚರ್ಚೆಗಳು ಗರಿಗೆದರಿದ್ದವು. ಆದರೆ ಈ ವದಂತಿಯನ್ನು ಸ್ವತಃ ಗೃಹ ಸಚಿವ ಆರಗ ಜ್ಞಾನೇಂದ್ರ ತಳ್ಳಿ ಹಾಕಿದ್ದಾರೆ. ‘ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಂ.ಲಕ್ಷ್ಮೀಪ್ರಸಾದ್ ವರ್ಗಾವಣೆ ವಿಚಾರ ಕೇವಲ ವದಂತಿ ಮಾತ್ರ. ಅವರು ಉತ್ತಮ ಅಧಿಕಾರಿ. ಅವರನ್ನು ವರ್ಗಾವಣೆ ಮಾಡುವ ಉದ್ದೇಶ ಇಲ್ಲ. ಆದರೆ ಶಿವಮೊಗ್ಗ ಜಿಲ್ಲೆಯಲ್ಲಿ ಪೊಲೀಸ್ ಇಲಾಖೆಗೆ ಸರ್ಜರಿ ನಡೆಸುತ್ತೇವೆ ಎಂದರು. ಶಿವಮೊಗ್ಗವನ್ನು ರೌಡಿಗಳ ಬ್ರೀಡಿಂಗ್ ಸೆಂಟರ್ ಎಂದು ಕರೆಯುತ್ತಿದ್ದಾರೆ. ಇದರಿಂದಾಗಿ ಶಿವಮೊಗ್ಗದವರಾದ ನಾವು ತಲೆ ತಗ್ಗಿಸುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದರು.

ಈ ಘಟನೆಯಲ್ಲಿ ಪೊಲೀಸ್ ಇಲಾಖೆಯ ವೈಫಲ್ಯ ಕೂಡ ಇದೆ. ಕೆಟ್ಟ ಶಕ್ತಿಗಳ ಜೊತೆ ಕೈಜೋಡಿಸಿರುವ ಪೊಲೀಸರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇವೆ. ಈಗಾಗಲೇ ಅಂಥ ವಿಚಾರದಲ್ಲಿ ಪೊಲೀಸ್ ಅಧಿಕಾರಿಗಳ ವಿರುದ್ಧ ವಿಚಾರಣೆ ಆರಂಭವಾಗಿದೆ. ಹರ್ಷ ಸಾವು ವ್ಯರ್ಥವಾಗಲು ನಾವು ಬಿಡುವುದಿಲ್ಲ. ಸ್ಪೆಷಲ್ ಪಬ್ಲಿಕ್ ಪ್ರಾಸಿಕ್ಯೂಟರ್ ನೇಮಿಸಿ ವಿಚಾರಣೆ ನಡೆಸುತ್ತೇವೆ. ನ್ಯಾಯಾಲಯದಲ್ಲಿ ವಿಚಾರಣೆ ಶೀಘ್ರಗತಿಯಲ್ಲಿ ನಡೆಯುವಂತೆ ನೋಡಿಕೊಳ್ಳುತ್ತೇವೆ. ಆದಷ್ಟು ಬೇಗ ಹಂತಕರಿಗೆ ಶಿಕ್ಷೆಯಾಗಲಿದೆ ಎಂದು ಭರವಸೆ ನೀಡಿದರು. ಶಿವಮೊಗ್ಗದ ಸೀಗೆಹಟ್ಟಿ ಬಡಾವಣೆಯಲ್ಲಿರುವ ಬಜರಂಗದಳ ಕಾರ್ಯಕರ್ತ ಹರ್ಷ ಅವರ ಮನೆಗೂ ಗೃಹ ಸಚಿವ ಆರಗ ಜ್ಞಾನೇಂದ್ರ ಭೇಟಿ ನೀಡಿ, ಪೋಷಕರಿಗೆ ಸಾಂತ್ವನ ಹೇಳಿದರು.

ನ್ಯಾಯಾಲಯಕ್ಕೆ ಆರೋಪಿಗಳು ಹಾಜರು

ಬಜರಂಗದಳ ಕಾರ್ಯಕರ್ತರ ಹರ್ಷಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಗಳಾದ ಜಿಲಾನ್ ಮತ್ತು ಫರಾತ್ ಅವರನ್ನು ಪೊಲೀಸರು ಗುರುವಾರ ನ್ಯಾಯಾಲಯಕ್ಕೆ ಹಾಜರುಪಡಿಸಿದರು. ಇಬ್ಬರಿಗೂ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಹರ್ಷ ಕೊಲೆ ಪ್ರಕರಣದ ತನಿಖೆಗೆಂದು ರಚಿಸಿರುವ ವಿಶೇಷ ತಂಡವು ಈವರೆಗೆ ಒಟ್ಟು 8 ಜನರನ್ನು ಬಂಧಿಸಿದೆ. ಎಲ್ಲ ಆರೋಪಿಗಳೂ ಶಿವಮೊಗ್ಗ ಕೇಂದ್ರ ಕಾರಾಗೃಹದಲ್ಲಿದ್ದಾರೆ. ಆರೋಪಿಗಳಾದ ಖಾಸಿಫ್, ನದೀಂ, ರಿಹಾನ್, ಆಸೀಫ್, ಅಬ್ದುಲ್ ಅಫಾನ್, ನಿಹಾನ್ ಈಗ ಜೈಲಿನಲ್ಲಿದ್ದಾರೆ.

ಇದನ್ನೂ ಓದಿ: Harsha Murder: ಹರ್ಷ ಕುಟುಂಬಕ್ಕೆ ಅಕ್ಷರದಲ್ಲಿ 5 ಲಕ್ಷ, ಅಂಕಿಯಲ್ಲಿ 50,000 ಅಂತ ಬರೆದು ಚೆಕ್ ಕೊಟ್ಟ ಶಾಸಕ ಯತ್ನಾಳ್!

ಇದನ್ನೂ ಓದಿ: Shivamogga Violence Live: ಸದ್ಗತಿ ಕೋರಿ ಹರ್ಷ ಅಸ್ಥಿ ವಿಸರ್ಜಿಸಿದ ಪ್ರಮೋದ್ ಮುತಾಲಿಕ್ ಹಾಗೂ ಕಾಳಿಸ್ವಾಮಿ

ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ