ಅಶ್ಲೀಲ ವಿಡಿಯೋ ವೈರಲ್: ನನಗೂ, ಆ ವ್ಯಕ್ತಿಗೂ ಯಾವುದೇ ಸಂಬಂಧವಿಲ್ಲ ಎಂದ ಶಾಸಕ ಆರಗ ಜ್ಞಾನೇಂದ್ರ
ತೀರ್ಥಹಳ್ಳಿಯಲ್ಲಿ ವೈರಲ್ ಆದ ಹಿರಿಯ ಮುಖಂಡನ ಅಶ್ಲೀಲ ವಿಡಿಯೋ ಬಗ್ಗೆ ತೀರ್ಥಹಳ್ಳಿಯ ಶಾಸಕ ಆರಗ ಜ್ಞಾನೇಂದ್ರ ಪ್ರತಿಕ್ರಿಯಿಸಿದ್ದು, ನನ್ನ ಆಪ್ತ ಅಂತಾ ಅಪಪ್ರಚಾರ ಮಾಡಲಾಗಿದೆ. ಉದ್ದೇಶ ಪೂರ್ವಕವಾಗಿ ನನ್ನ ಹೆಸರು ಬಳಕೆ ಮೂಲಕ ತೇಜೋವಧೆ ಮಾಡಲಾಗುತ್ತಿದೆ. ನನಗೂ ಆ ವ್ಯಕ್ತಿಗೆ ಯಾವುದೇ ಸಂಬಂಧವಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.
ಶಿವಮೊಗ್ಗ, ಸೆಪ್ಟೆಂಬರ್ 15: ತೀರ್ಥಹಳ್ಳಿಯ ಶಾಸಕ ಆರಗ ಜ್ಞಾನೇಂದ್ರ ಅವರ ಆಪ್ತ ಎನ್ನಲಾಗುತ್ತಿರುವ ಹಿರಿಯ ಮುಖಂಡ ಸುಬ್ರಹ್ಮಣ್ಯ ಅವರದ್ದು ಎಂದು ಹೇಳಲಾಗುತ್ತಿರುವ ಅಶ್ಲೀಲ ವಿಡಿಯೋ (Obscene video) ಒಂದು ಇದೀಗ ವೈರಲ್ ಆಗಿದೆ. ಸದ್ಯ ಈ ವಿಚಾರವಾಗಿ ತೀರ್ಥಹಳ್ಳಿಯ ಶಾಸಕ ಆರಗ ಜ್ಞಾನೇಂದ್ರ ಪ್ರತಿಕ್ರಿಯಿಸಿದ್ದು, ಈ ವ್ಯಕ್ತಿ ನನ್ನ ಆಪ್ತ ಅಂತಾ ಅಪಪ್ರಚಾರ ಮಾಡಲಾಗಿದೆ. ಉದ್ದೇಶ ಪೂರ್ವಕವಾಗಿ ನನ್ನ ಹೆಸರು ಬಳಕೆ ಮೂಲಕ ತೇಜೋವಧೆ ಮಾಡಲಾಗುತ್ತಿದೆ. ನನಗೂ ಆ ವ್ಯಕ್ತಿಗೆ ಯಾವುದೇ ಸಂಬಂಧವಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.
ಜಿಲ್ಲೆಯ ತೀರ್ಥಹಳ್ಳಿಯಲ್ಲಿ ಇತ್ತೀಚಿನ ದಿನಗಳಲ್ಲಿ ಅಶ್ಲೀಲ ವಿಡಿಯೋಗಳು ಹೆಚ್ಚಾಗಿ ವೈರಲ್ ಆಗುತ್ತಿವೆ. ಕೆಲ ದಿನಗಳ ಹಿಂದಷ್ಟೇ ಅಶ್ಲೀಲ ವಿಡಿಯೋಗಳು ವೈರಲ್ ಆಗಿ ಕೇಸ್ ಕೂಡ ದಾಖಲಾಗಿದ್ದವು. ಇದೀಗ ಮತ್ತೊಂದು ಅಶ್ಲೀಲ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಇದನ್ನೂ ಓದಿ: ತೀರ್ಥಹಳ್ಳಿಯ ಹಿರಿಯ ರಾಜಕೀಯ ಮುಖಂಡರೊಬ್ಬರ ಅಶ್ಲೀಲ ವಿಡಿಯೋ ವೈರಲ್
ಹಿರಿಯ ಮುಖಂಡ ಸುಬ್ರಹ್ಮಣ್ಯ ಅವರದ್ದು ಎಂದು ಹೇಳಲಾಗುತ್ತಿರುವ ಅಶ್ಲೀಲ ವಿಡಿಯೋ ಒಂದು ಇಂದು ವೈರಲ್ ಆಗಿತ್ತು. ತೀರ್ಥಹಳ್ಳಿಯ ಲಾಡ್ಜ್ ವೊಂದರಲ್ಲಿ ಘಟನೆ ನಡೆದಿದೆ. ವೈರಲ್ ಆದ ಸುಬ್ರಹ್ಮಣ್ಯ ಅವರು ತೀರ್ಥಹಳ್ಳಿಯ ಮಾಜಿ ಶಾಸಕ ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ಆಪ್ತ ಎಂದು ಸಹ ಹೇಳಲಾಗಿತ್ತು. ಆದರೆ ಈ ಕುರಿತಾಗಿ ಆರಗ ಜ್ಞಾನೇಂದ್ರ ಸ್ಪಷ್ಟನೆ ನೀಡಿದ್ದಾರೆ.
ಪ್ರೇಮಿಗಳ ಖಾಸಗಿ ವಿಡಿಯೊ ಇಟ್ಟುಕೊಂಡು ಬ್ಲ್ಯಾಕ್ ಮೇಲ್: ಬಂಧನ
ಬೆಂಗಳೂರು: ಪ್ರೇಮಿಗಳ ಖಾಸಗಿ ವಿಡಿಯೋ ಇಟ್ಟುಕೊಂಡು ಬ್ಲ್ಯಾಕ್ ಮೇಲ್ ಮಾಡುತ್ತಿದ್ದವರು ಇದೀಗ ಪೊಲೀಸರ ಅತಿಥಿಯಾಗಿದ್ದಾರೆ. ಬೆಂಗಳೂರಿನ ಕೆಂಗೇರಿ ಮುಖ್ಯರಸ್ತೆಯಲ್ಲಿರುವ ಕೆಂಚನಾಪುರದಲ್ಲಿರುವ ಹೋಟೆಲ್ನಲ್ಲಿ ರಹಸ್ಯ ಕ್ಯಾಮೆರಾ ಇಟ್ಟು ಪ್ರೇಮಿಗಳ ವಿಡಿಯೋ ಸೆರೆ ಹಿಡಿದು ಬಳಿಕ ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ನಯನಾ ಹಾಗೂ ಪಾರ್ಟರ್ ಕಿರಣ್ ಎನ್ನವರನ್ನು ಪೊಲೀಸರು ಬಂಧಿಸಿದ್ದಾರೆ.
ಇದನ್ನೂ ಓದಿ: ಬೆಳಗಾವಿ: ಲೋಕಾಯುಕ್ತ ಎಂದು ಪಿಡಬ್ಲ್ಯುಡಿ ಅಧಿಕಾರಿಗಳಿಗೆ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಆರೋಪಿ ಅರೆಸ್ಟ್, ಮತ್ತೋರ್ವ ಎಸ್ಕೇಪ್
ಪ್ರೇಮಿಗಳಿಗೆ ರೂಮ್ ವ್ಯವಸ್ಥೆ ಮಾಡಿಕೊಟ್ಟು ಇದೀಗ ಅವರೇ ಲವರ್ಸ್ ಖಾಸಗಿ ವಿಡಿಯೋ ಇಟ್ಟುಕೊಂಡು ಲಕ್ಷ ಲಕ್ಷಣ ಹಣ ನೀಡುವಂತೆ ಬ್ಲ್ಯಾಕ್ ಮೇಲ್ಗೆ ಇಳಿದಿದ್ದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 9:48 pm, Fri, 15 September 23