ನಮ್ಮ ಹೋರಾಟ ಕೇವಲ ಶಿವಮೊಗ್ಗ ಕ್ಷೇತ್ರಕ್ಕೆ ಸೀಮಿತ: ಕೆಎಸ್ ಈಶ್ವರಪ್ಪ ಪುತ್ರ ಕಾಂತೇಶ್

| Updated By: Rakesh Nayak Manchi

Updated on: Mar 16, 2024 | 9:40 AM

ಪುತ್ರನಿಗೆ ಹಾವೇರಿ ಲೋಕಸಭಾ ಟಿಕೆಟ್ ತಪ್ಪಿರುವುದು ಬಿಎಸ್ ಯಡಿಯೂರಪ್ಪ ಎಂದು ಬಹಿರಂಗವಾಗಿ ಹೇಳಿಕೆ ನೀಡಿದ್ದ ಕೆಎಸ್ ಈಶ್ವರಪ್ಪ ಅವರು ಬಿಎಸ್​ವೈ ಕುಟುಂಬದ ವಿರುದ್ಧ ಸಮರ ಸಾರಿದ್ದಾರೆ. ತಕ್ಕ ಪಾಠ ಕಲಿಸಲು ಯಡಿಯೂರಪ್ಪ ಪುತ್ರ ರಾಘವೇಂದ್ರ ಸ್ಪರ್ಧಿಸುತ್ತಿರುವ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಬಂಡಾಯ ಸ್ಪರ್ಧೆ ಮಾಡುವುದಾಗಿ ಈಶ್ವರಪ್ಪ ಘೋಷಿಸಿದ್ದಾರೆ. ಅದರಂತೆ, ಇಂದಿನಿಂದಲೇ ಕ್ಷೇತ್ರದಲ್ಲಿ ಪ್ರಚಾರ ಕಾರ್ಯ ಆರಂಭಿಸಲಿದ್ದಾರೆ.

ನಮ್ಮ ಹೋರಾಟ ಕೇವಲ ಶಿವಮೊಗ್ಗ ಕ್ಷೇತ್ರಕ್ಕೆ ಸೀಮಿತ: ಕೆಎಸ್ ಈಶ್ವರಪ್ಪ ಪುತ್ರ ಕಾಂತೇಶ್
ನಮ್ಮ ಹೋರಾಟ ಕೇವಲ ಶಿವಮೊಗ್ಗ ಕ್ಷೇತ್ರಕ್ಕೆ ಸೀಮಿತ ಎಂದ ಕೆಎಸ್ ಈಶ್ವರಪ್ಪ ಪುತ್ರ ಕೆಇ ಕಾಂತೇಶ್
Follow us on

ಶಿವಮೊಗ್ಗ, ಮಾ.16: ಪುತ್ರನಿಗೆ ಹಾವೇರಿ ಲೋಕಸಭಾ ಟಿಕೆಟ್ ತಪ್ಪಿರುವುದು ಬಿಎಸ್ ಯಡಿಯೂರಪ್ಪ (BS Yediyurappa) ಎಂದು ಬಹಿರಂಗವಾಗಿ ಹೇಳಿಕೆ ನೀಡಿದ್ದ ಕೆಎಸ್ ಈಶ್ವರಪ್ಪ (KS Eshwarappa) ಅವರು ಬಿಎಸ್​ವೈ ಕುಟುಂಬದ ವಿರುದ್ಧ ಸಮರ ಸಾರಿದ್ದಾರೆ. ತಕ್ಕ ಪಾಠ ಕಲಿಸಲು ಯಡಿಯೂರಪ್ಪ ಪುತ್ರ ಬಿವೈ ರಾಘವೇಂದ್ರ (BY Raghavendra) ಸ್ಪರ್ಧಿಸುತ್ತಿರುವ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಬಂಡಾಯ ಸ್ಪರ್ಧೆ ಮಾಡುವುದಾಗಿ ಈಶ್ವರಪ್ಪ ಘೋಷಿಸಿದ್ದಾರೆ. ಅದರಂತೆ, ಇಂದಿನಿಂದಲೇ ಕ್ಷೇತ್ರದಲ್ಲಿ ಪ್ರಚಾರ ಕಾರ್ಯ ಆರಂಭಿಸಲಿದ್ದಾರೆ.

ಈ ಬಗ್ಗೆ ಮಾತನಾಡಿದ ಕೆಎಸ್ ಈಶ್ವರಪ್ಪ, ನಾನು ಪಕ್ಷೇತರ ಅಭ್ಯರ್ಥಿ ಆಗಿ ಸ್ಪರ್ಧೆ ಮಾಡುತ್ತೇನೆ. ನನ್ನ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ. ಪಕ್ಷ ತಂದೆ ಮಕ್ಕಳ ಕೈಗೆ ಸಿಕ್ಕಿದೆ. ಇದರಿಂದ ಕಾರ್ಯಕರ್ತರು ಪರದಾಡುತ್ತಿದ್ದಾರೆ. ಪಕ್ಷ ಉಳಿಸಲು ನನ್ನ ಈ ಹೋರಾಟವಾಗಿದೆ. ನಾವು ಪಕ್ಷ ಸಂಘಟನೆ ವಿಚಾರಕ್ಕೆ ಯತ್ನಾಳ್, ಸಿಟಿ ರವಿಗೆ ರಾಜ್ಯಾಧ್ಯಕ್ಷ ಸ್ಥಾನ ನೀಡಬೇಕಿತ್ತು. ಆದರೆ ಅದು ಬಿಟ್ಟು ವಿಜಯೇಂದ್ರಗೆ ರಾಜ್ಯಾಧ್ಯಕ್ಷ ಸ್ಥಾನ ನೀಡಿದರು. ನಾನು ಹಿಂದುತ್ವದ ವಿಚಾರದ ಮೇಲೆ ಚುನಾವಣೆ ಮಾಡುತ್ತೇನೆ. ರಾಘವೇಂದ್ರ ಲಿಂಗಾಯತ ಅಂತಾ ಚುನಾವಣೆ ಮಾಡುತ್ತಾರೆ. ಅವರು ಲಿಂಗಾಯತರಿಗೆ ಏನು ಕೊಟ್ಟಿದ್ದಾರೆ? ಅವರಿಗೆ ಮಾತ್ರ ಲಿಂಗಾಯತರು ಸಿಮೀತ ಆಗಿಲ್ಲ. ನಮ್ಮ ಜೊತೆ ಕೂಡಾ ಈ ಸಮಾಜ ಇದೆ ಎಂದರು.

ನಾನು ಪಕ್ಷೇತರ ಅಭ್ಯರ್ಥಿ ಘೋಷಣೆ ಬಳಿಕ ರಾಜ್ಯಾದ್ಯಂತ ಬೆಂಬಲ ಸಿಗುತ್ತಿದೆ. ರಾಜ್ಯದ ವಿವಿಧ ಭಾಗಗಳಿಂದ ಬಂದು ಜನರು ಶಿವಮೊಗ್ಗ ಲೋಕಸಭೆ ಚುನಾವಣೆ ಮಾಡುತ್ತಾರೆ. ನಿನ್ನೆ ಸಭೆಯ ಬಳಿಕ ಎಲ್ಲಡೆಯಿಂದ ಉತ್ತಮ ಬೆಂಬಲ ಸಿಗುತ್ತಿದೆ ಎಂದರು.

ಈ ಬಗ್ಗೆ ಟಿವಿ9 ಜೊತೆ ಮಾತನಾಡಿದ ಕೆಇ ಕಾಂತೇಶ್, ಇಂದಿನಿಂದ ಪ್ರಚಾರ ಆರಂಭ ಮಾಡುತ್ತೇವೆ. ಸಾಗರದ ವರದಹಳ್ಳಿ ಶ್ರೀಧರ್ ಆಶ್ರಮಕ್ಕೆ ಈಶ್ವರಪ್ಪ ಭೇಟಿ ನೀಡಲಿದ್ದಾರೆ. ಆಶ್ರಮಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿ ಪ್ರಚಾರ ಆರಂಭಿಸಲಾಗುವುದು. ಈ ನಮ್ಮ ಹೋರಾಟ ಕೇವಲ ಶಿವಮೊಗ್ಗ ಕ್ಷೇತ್ರಕ್ಕಷ್ಟೇ. ಇತರೆ ಕ್ಷೇತ್ರದಲ್ಲಿ ಬಿಜೆಪಿ ಗೆಲುವಿಗೆ ಸಮಸ್ಯೆಯಾಗಲ್ಲ ಎಂದರು.

ಇದನ್ನೂ ಓದಿ: ಯಡಿಯೂರಪ್ಪ ಹೃದಯ ಬಗೆದ್ರೆ ಶೋಭಕ್ಕ ಇರ್ತಾರೆ ಎಂದ ಈಶ್ವರಪ್ಪ ಬೆಂಬಲಿಗರು

ಅಪ್ಪ-ಮಕ್ಕಳು vs ಹಿಂದುತ್ವದ ಸ್ಪರ್ಧೆ

ಮೋದಿ ಅವರು ಮತ್ತೆ ಪ್ರಧಾನಿ ಆಗಬೇಕು ಎಂಬುದು ನಮ್ಮ ಉದ್ದೇಶವಾಗಿದೆ ಎಂದು ಹೇಳಿದ ಕಾಂತೇಶ್ ಅವರು ಯಡಿಯೂರಪ್ಪ ಕುಟುಂಬದ ವಿರುದ್ಧ ವಾಗ್ದಾಳಿ ನಡೆಸಿದರು. ಶಿವಮೊಗ್ಗದಲ್ಲಿ ಅಪ್ಪ-ಮಕ್ಕಳು vs ಹಿಂದುತ್ವದ ಸ್ಪರ್ಧೆ ನಡೆಯಲಿದೆ ಎಂದರು. ಶಿವಮೊಗ್ಗ ಚುನಾವಣೆ ಗೆಲ್ಲಲು ಎಲ್ಲರ ಬೆಂಬಲ ಇದೆ. ಶಿವಮೊಗ್ಗ ಲೋಕಸಭೆ ಕ್ಷೇತ್ರ ಗೆಲ್ಲುತ್ತೇವೆ ಎಂದರು.

ಮತ್ತೆ ನಮ್ಮ ಬೆಂಬಲ ಮೋದಿ ಅವರಿಗೆ ಇರುತ್ತದೆ. ನಾನು ಕೂಡಾ 8 ವಿಧಾನ ಸಭೆ ಕ್ಷೇತ್ರದಲ್ಲಿ ತಂದೆಯ ಪರ ಕೆಲಸ ಮಾಡುತ್ತೇನೆ. ಇಲ್ಲಿ ಈಶ್ವರಪ್ಪ ಅಭ್ಯರ್ಥಿ ಅಲ್ಲ, ಪ್ರತಿಯೊಬ್ಬ ಹಿಂದೂಗಳು ಅಭ್ಯರ್ಥಿ ಆಗಿದ್ದಾರೆ ಎಂದರು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:34 am, Sat, 16 March 24