Pahalgam Terror Attack: ಕಾಶ್ಮೀರದಲ್ಲಿ ಉಗ್ರರ ಗುಂಡಿನ ದಾಳಿಗೆ ಶಿವಮೊಗ್ಗ ಉದ್ಯಮಿ ಬಲಿ

ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಭಯೋತ್ಪಾದರು ಪ್ರವಾಸಿಗರನ್ನು ಗುರಿಯಾಗಿಸಿಕೊಂಡು ದಾಳಿ ಮಾಡಿದ್ದಾರೆ. ಭಯೋತ್ಪಾದಕರ ದಾಳಿಯಲ್ಲಿ ಶಿವಮೊಗ್ಗದ ಉದ್ಯಮಿ ಮೃತಪಟ್ಟಿದ್ದಾರೆ. ಇನ್ನು, 12 ಮಂದಿ ಗಾಯಗೊಂಡಿದ್ದಾರೆ. ಭದ್ರತಾ ಪಡೆಗಳು ಮತ್ತು ವೈದ್ಯಕೀಯ ತಂಡಗಳು ಘಟನೆ ನಡೆದ ಸ್ಥಳಕ್ಕೆ ಧಾವಿಸಿವೆ. ರಕ್ಷಣಾ ಕಾರ್ಯಾಚರಣೆ ನಡೆದಿದೆ.

Pahalgam Terror Attack: ಕಾಶ್ಮೀರದಲ್ಲಿ ಉಗ್ರರ ಗುಂಡಿನ ದಾಳಿಗೆ ಶಿವಮೊಗ್ಗ ಉದ್ಯಮಿ ಬಲಿ
ಜಮ್ಮು-ಕಾಶ್ಮೀರದ ಪಹಲ್ಗಾಮ್‌ದಲ್ಲಿ ರಕ್ಷಣಾ ಕಾರ್ಯಾಚರಣೆ, ಮೃತ ಮಂಜುನಾಥ್​
Edited By:

Updated on: Apr 22, 2025 | 6:39 PM

ಶಿವಮೊಗ್ಗ, ಏಪ್ರಿಲ್​ 22: ಜಮ್ಮು-ಕಾಶ್ಮೀರದ ಪಹಲ್ಗಾಮ್‌ದಲ್ಲಿ ಪ್ರವಾಸಿಗರನ್ನು ಗುರಿಯಾಗಿಸಿ ನಡೆದ ಉಗ್ರರ ಗುಂಡಿನ ದಾಳಿಯಲ್ಲಿ (Pahalgam Terror Attack) ಶಿವಮೊಗ್ಗದ (Shivamogga) ರಿಯಲ್ ಎಸ್ಟೇಟ್ ಉದ್ಯಮಿ ಮೃತಪಟ್ಟಿದ್ದಾರೆ. ಶಿವಮೊಗ್ಗದ ವಿಜಯನಗರ ನಿವಾಸಿ, ಮಂಜುನಾಥ್ ಮೃತ ದುರ್ದೈವಿ. ಉದ್ಯಮಿ ಮಂಜುನಾಥ ಅವರ ಪತ್ನಿ ಪಲ್ಲವಿ ಮತ್ತು ಪುತ್ರ ಸುರಕ್ಷಿತವಾಗಿದ್ದಾರೆ.

ಟಿವಿ9ಜೊತೆ ಮಾತನಾಡಿದ ಮೃತ ಮಂಜುನಾಥ್​ ಪತ್ನಿ ಪಲ್ಲವಿ, ಏಪ್ರಿಲ್​ 19ರಂದು ಪ್ರವಾಸಕ್ಕೆ ಬಂದಿದ್ವಿ. ನನ್ನ ಕಣ್ಣೆದುರಿಗೆ ನನ್ನ ಪತಿ ಮೃತಪಟ್ಟಿದ್ದಾರೆ. ನನ್ನ ಗಂಡನನ್ನ ಸಾಯಿಸಿ ನನ್ನ ಮಗನಿಗೆ ಬೈದು ಹಲ್ಲೆ ಮಾಡಿದ್ದಾರೆ. ನನ್ನ, ನನ್ನ ಮಗನನ್ನೂ ಕೊಂದು ಬಿಡು ಎಂದು ಹೇಳಿದ್ವಿ. ನಿನ್ನ ಕೊಲ್ಲಲ್ಲ ಹೋಗಿ ಮೋದಿಗೆ ಹೇಳು ಎಂದು ಹೇಳಿದರು. ನನ್ನ ಪತಿ ಕೊಂದು ಉಗ್ರರು ಅಲ್ಲೇ ಓಡಾಡುತ್ತಿದ್ದರು ಎಂದು ಹೇಳಿದರು.

ಮಂಜುನಾಥ್​ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ, ಶಿವಮೊಗ್ಗದ ನಿವಾಸದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಇನ್ನು, ಮಂಜುನಾಥ್​ ಪತ್ನಿ ಪಲ್ಲವಿಯವರು ಮಲ್ನಾಡ್ ಅಡಕೆ ಮಾರ್ಕೆಟಿಂಗ್ ಕೋ-ಆಪರೇಟಿವ್ ಸೊಸೈಟಿ ಲಿಮಿಟೆಡ್​ನ ಬೀರೂರು ಬ್ರ್ಯಾಂಚ್​ನಲ್ಲಿ ಮ್ಯಾನೇಜರ್ ಆಗಿದ್ದಾರೆ.

ಇದನ್ನೂ ಓದಿ
ಬಿಜೆಪಿ ಭದ್ರಕೋಟೆಯೇ ಡಿಕೆ ಶಿವಕುಮಾರ್ ಟಾರ್ಗೆಟ್: ಸಾಫ್ಟ್​ ಹಿಂದುತ್ವ ಮಂತ್ರ
ಕರ್ನಾಟಕ ಸಿಇಟಿ ಪರೀಕ್ಷೆ, ಜನಿವಾರ ವಿವಾದ: ನಿಜಕ್ಕೂ ಈವರೆಗೆ ನಡೆದಿದ್ದೇನು?
ಜನಿವಾರ ತೆಗೆಸಿದ್ದೇ ಆದರೆ ಅತಿರೇಕ, ಕಠಿಣ ಕ್ರಮ ಕೈಗೊಳ್ತೇವೆ: ಸಚಿವ ಸುಧಾಕರ್
CET ಪರೀಕ್ಷೆ ಬರೆಯಲು ಬಂದ ಅಭ್ಯರ್ಥಿಗಳ ಜನಿವಾರ ತೆಗೆಸಿದ ಅಧಿಕಾರಿಗಳು

ಗುಂಡಿನ ದಾಳಿಯಲ್ಲಿ 12 ಮಂದಿಗೆ ಗಾಯ

ಭಯೋತ್ಪಾದಕರು ನಡೆಸಿದ ಗುಂಡಿನ ದಾಳಿಯಲ್ಲಿ 12ಕ್ಕೂ ಹೆಚ್ಚು ಜನರಿಗೆ ಗಾಯಗೊಂಡಿದ್ದು, ಐದಕ್ಕೂ ಹೆಚ್ಚು ಜನರು ಮೃತಪಟ್ಟಿರುವ ಮಾಹಿತಿ ಲಭ್ಯವಾಗಿದೆ. ಆದರೆ, ಇದುವರೆಗೆ ಕೇವಲ ಇಬ್ಬರ ಸಾವಿನ ಬಗ್ಗೆ ಖಚಿತ ಮಾಹಿತಿ ದೊರೆತಿದೆ. ಘಟನೆ ಬಗ್ಗೆ ಕೇಂದ್ರ ಸರ್ಕಾರದ ಅಧಿಕಾರಿಗಳು ಪ್ರಧಾನಿ ನರೇಂದ್ರ ಮೋದಿಯವರಿಗೆ ಮಾಹಿತಿ ನೀಡಿದ್ದಾರೆ.

ಘಟನೆ ಸಂಬಂಧ ಪ್ರಧಾನಿ ಮೋದಿಯವರು ಗೃಹ ಸಚಿವ ಅಮಿತ್‌ ಶಾ ಅವರ ಜೊತೆ ಮಾತನಾಡಿದ್ದು, ಕೂಡಲೇ ಕಾಶ್ಮೀರಕಕ್ಕೆ ತೆರಳುವಂತೆ ಸೂಚನೆ ನೀಡಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್​ ಶಾ ಅವರು ಕಾಶ್ಮೀರಕ್ಕೆ ತೆರಳಿದ್ದಾರೆ. ಇನ್ನು, ಘಟನೆ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಪ್ರವಾಹ ಪೀಡಿತ ಸ್ಥಳಗಳ ಪರಿಶೀಲನೆಗೆ ತೆರಳಿದ್ದ ಜಮ್ಮು-ಕಾಶ್ಮೀರ ಸಿಎಂ ಓಮರ್‌ ಅಬ್ದುಲ್ಲಾ ಶ್ರೀನಗರಕ್ಕೆ ವಾಪಸ್‌ ಆಗಿದ್ದಾರೆ.

ಇದನ್ನೂ ಓದಿ: ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಉಗ್ರರ ದಾಳಿ

ಅಮಿತ್​ ಶಾ ಸಂತಾಪ

“ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಾಳಿಯಿಂದ ದುಃಖಿತನಾಗಿದ್ದೇನೆ. ಮೃತರ ಕುಟುಂಬ ಸದಸ್ಯರೊಂದಿಗೆ ನನ್ನ ಆಲೋಚನೆಗಳು ಇವೆ. ಈ ಭೀಕರ ಭಯೋತ್ಪಾದಕ ಕೃತ್ಯದಲ್ಲಿ ಭಾಗಿಯಾಗಿರುವವರನ್ನು ಬಿಡುವುದಿಲ್ಲ. ಮತ್ತು ದುಷ್ಕರ್ಮಿಗಳ ವಿರುದ್ಧ ನಾವು ಕಠಿಣ ಕ್ರಮ ಕೈಗೊಳ್ಳುತ್ತೇವೆ” ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಟ್ವೀಟ್ ಮಾಡಿದ್ದಾರೆ.

“ಪ್ರಧಾನಿ ನರೇಂದ್ರ ಮೋದಿ ಅವರಿಗೆ ಘಟನೆಯ ಬಗ್ಗೆ ವಿವರಿಸಲಾಯಿತು ಮತ್ತು ಸಂಬಂಧಿತ ಅಧಿಕಾರಿಗಳೊಂದಿಗೆ ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ ಸಭೆ ನಡೆಸಲಾಯಿತು. ಎಲ್ಲಾ ಸಂಸ್ಥೆಗಳೊಂದಿಗೆ ತುರ್ತು ಭದ್ರತಾ ಪರಿಶೀಲನಾ ಸಭೆ ನಡೆಸುತ್ತೇವೆ.” ಎಂದಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:12 pm, Tue, 22 April 25