Shivamogga Airport: ಶಿವಮೊಗ್ಗ ಏರ್ಪೋರ್ಟ್​ ಉದ್ಘಾಟನೆಗೆ ಕ್ಷಣಗಣನೆ; ಟ್ವೀಟ್ ಮೂಲಕ ವಿಡಿಯೋ ಹಂಚಿಕೊಂಡ ಬಿವೈ ರಾಘವೇಂದ್ರ, ಮೋದಿ

ಶಿವಮೊಗ್ಗದಲ್ಲಿ ತಲೆ ಎತ್ತಿರುವ ಬಹು ದಿನಗಳ ಕನಸಿನ ಏರ್ ಪೋರ್ಟ್ ಉದ್ಘಾಟನೆಗೆ ಸಿದ್ದವಾಗಿದ್ದು ಈ ಬಗ್ಗೆ ಶಿವಮೊಗ್ಗ ಕ್ಷೇತ್ರದ ಸಂಸದ ಬಿವೈ ರಾಘವೇಂದ್ರ ಅವರು ಟ್ವೀಟ್ ಮಾಡಿ ಸಂತಸ ವ್ಯಕ್ತಪಡಿಸಿದ್ದಾರೆ.

Shivamogga Airport: ಶಿವಮೊಗ್ಗ ಏರ್ಪೋರ್ಟ್​ ಉದ್ಘಾಟನೆಗೆ ಕ್ಷಣಗಣನೆ; ಟ್ವೀಟ್ ಮೂಲಕ ವಿಡಿಯೋ ಹಂಚಿಕೊಂಡ ಬಿವೈ ರಾಘವೇಂದ್ರ, ಮೋದಿ
ಶಿವಮೊಗ್ಗ ವಿಮಾನ ನಿಲ್ದಾಣ
Follow us
TV9 Web
| Updated By: ಆಯೇಷಾ ಬಾನು

Updated on:Feb 24, 2023 | 1:00 PM

ಶಿವಮೊಗ್ಗ: ಜಿಲ್ಲೆಯಲ್ಲಿ ನೂತನ ಏರ್ ಪೋರ್ಟ್ ಉದ್ಘಾಟನೆಗೆ ಕ್ಷಣಗಣೆನೆ ಶುರುವಾಗಿದೆ. ದಶಕಗಳ ಬಳಿಕ ಮಲೆನಾಡಿನಲ್ಲಿ ಲೋಹದ ಹಕ್ಕಿಗಳ ಹಾರಾಟಕ್ಕೆ ದೇಶದ ಪ್ರಧಾನಿಗಳು ಚಾಲನೆ ನೀಡಲಿದ್ದಾರೆ. ಸದ್ಯ ಶಿವಮೊಗ್ಗದಲ್ಲಿ ತಲೆ ಎತ್ತಿರುವ ಬಹು ದಿನಗಳ ಕನಸಿನ ಏರ್ ಪೋರ್ಟ್ ಉದ್ಘಾಟನೆಗೆ ಸಿದ್ದವಾಗಿದ್ದು ಈ ಬಗ್ಗೆ ಶಿವಮೊಗ್ಗ ಕ್ಷೇತ್ರದ ಸಂಸದ ಬಿವೈ ರಾಘವೇಂದ್ರ ಅವರು ಟ್ವೀಟ್ ಮಾಡಿ ಸಂತಸ ವ್ಯಕ್ತಪಡಿಸಿದ್ದಾರೆ. ಸಂಸದರ ಟ್ವೀಟ್​ಗೆ ಪ್ರತಿಕ್ರಿಯಿಸಿರುವ ಪ್ರಧಾನಿ ನರೇಂದ್ರ ಮೋದಿ ಅದನ್ನು ರೀ ಟ್ವೀಟ್ ಮಾಡಿದ್ದು ಶಿವಮೊಗ್ಗದ ವಿಮಾನ ನಿಲ್ದಾಣವು ವಾಣಿಜ್ಯ, ಸಂಪರ್ಕ ಮತ್ತು ಪ್ರವಾಸೋದ್ಯಮವನ್ನು ಹೆಚ್ಚಿಸುತ್ತದೆ ಎಂದಿದ್ದಾರೆ.

ಶಿವಮೊಗ್ಗದಲ್ಲಿ ವಿಮಾನ ನಿಲ್ದಾಣದ ಕನಸು ನನಸಾಗುತ್ತಿದೆ. ಶಿವಮೊಗ್ಗ ವಿಮಾನ ನಿಲ್ದಾಣವು ಕೇವಲ ವಿಮಾನ ನಿಲ್ದಾಣವಾಗದೆ ಮಲೆನಾಡು ಪ್ರದೇಶದ ಪರಿವರ್ತನೆಯ ಗೇಟ್‌ವೇ ಆಗಲಿದೆ ಎಂದು ಬಿವೈ ರಾಘವೇಂದ್ರ ಅವರು ಟ್ವೀಟ್ ಮಾಡಿದ್ದು ನರೇಂದ್ರ ಮೋದಿ ಅವರನ್ನು ಟ್ಯಾಗ್ ಮಾಡಿದ್ದಾರೆ. ಮತ್ತೊಂದೆಡೆ ಇದನ್ನು ಪ್ರಧಾನಿಯವರು ರಿಟ್ವೀಟ್ ಮಾಡಿದ್ದಾರೆ.

ಮೋದಿಗೆ ಧನ್ಯವಾದ ತಿಳಿಸಿದ ಬಿವೈ ರಾಘವೇಂದ್ರ

ಶಿವಮೊಗ್ಗ ವಿಮಾನ ನಿಲ್ದಾಣವು ಆರ್ಥಿಕ ಚೇತರಿಕೆಯನ್ನು ತರಲಿ. ಸಂಪರ್ಕ ಕ್ರಾಂತಿ ಜೊತೆಗೆ ಪ್ರವಾಸೋದ್ಯಮದಲ್ಲಿ ಅಭಿವೃದ್ಧಿ ಸಾಧಿಸಲಿ. ಇನ್ನಷ್ಟು ಅಭಿವೃದ್ಧಿ ಸಾಧಿಸಲೆಂದು ಹಾರೈಸಿದ ಮೋದಿಗೆ ಟ್ವೀಟ್ ಮೂಲಕ ಸಂಸದ ರಾಘವೇಂದ್ರ ಧನ್ಯವಾದ ತಿಳಿಸಿದ್ದಾರೆ. ಫೆ.27ರಂದು ಮೋದಿಯವರ ಅಮೃತ ಹಸ್ತದಿಂದ ಲೋಕಾರ್ಪಣೆಗೊಳ್ಳಲಿದೆ. ಹಲವು ಅಭಿವೃದ್ಧಿಯ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಅಡಿಗಲ್ಲು ಹಾಕುವ ಮೂಲಕ ಆಶೀರ್ವದಿಸಬೇಕೆಂದು ಕೋರಿಕೊಳ್ಳುತ್ತೇನೆ. ಶಿವಮೊಗ್ಗದ ಜನತೆ ಪರವಾಗಿ ತಮಗೆ ಆತ್ಮೀಯ ಸ್ವಾಗತ ಕೋರುತ್ತೇನೆ ಎಂದು ಟ್ವೀಟ್ ಮೂಲಕ ಸಂಸದ ರಾಘವೇಂದ್ರ ಪ್ರಧಾನಿ ಮೋದಿ ಸ್ವಾಗತಿಸಿದ್ದಾರೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 12:39 pm, Fri, 24 February 23

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ