ಶಿವಮೊಗ್ಗ: ಜಿಲ್ಲೆಯಲ್ಲಿ ನೂತನ ಏರ್ ಪೋರ್ಟ್ ಉದ್ಘಾಟನೆಗೆ ಕ್ಷಣಗಣೆನೆ ಶುರುವಾಗಿದೆ. ದಶಕಗಳ ಬಳಿಕ ಮಲೆನಾಡಿನಲ್ಲಿ ಲೋಹದ ಹಕ್ಕಿಗಳ ಹಾರಾಟಕ್ಕೆ ದೇಶದ ಪ್ರಧಾನಿಗಳು ಚಾಲನೆ ನೀಡಲಿದ್ದಾರೆ. ಸದ್ಯ ಶಿವಮೊಗ್ಗದಲ್ಲಿ ತಲೆ ಎತ್ತಿರುವ ಬಹು ದಿನಗಳ ಕನಸಿನ ಏರ್ ಪೋರ್ಟ್ ಉದ್ಘಾಟನೆಗೆ ಸಿದ್ದವಾಗಿದ್ದು ಈ ಬಗ್ಗೆ ಶಿವಮೊಗ್ಗ ಕ್ಷೇತ್ರದ ಸಂಸದ ಬಿವೈ ರಾಘವೇಂದ್ರ ಅವರು ಟ್ವೀಟ್ ಮಾಡಿ ಸಂತಸ ವ್ಯಕ್ತಪಡಿಸಿದ್ದಾರೆ. ಸಂಸದರ ಟ್ವೀಟ್ಗೆ ಪ್ರತಿಕ್ರಿಯಿಸಿರುವ ಪ್ರಧಾನಿ ನರೇಂದ್ರ ಮೋದಿ ಅದನ್ನು ರೀ ಟ್ವೀಟ್ ಮಾಡಿದ್ದು ಶಿವಮೊಗ್ಗದ ವಿಮಾನ ನಿಲ್ದಾಣವು ವಾಣಿಜ್ಯ, ಸಂಪರ್ಕ ಮತ್ತು ಪ್ರವಾಸೋದ್ಯಮವನ್ನು ಹೆಚ್ಚಿಸುತ್ತದೆ ಎಂದಿದ್ದಾರೆ.
ಶಿವಮೊಗ್ಗದಲ್ಲಿ ವಿಮಾನ ನಿಲ್ದಾಣದ ಕನಸು ನನಸಾಗುತ್ತಿದೆ. ಶಿವಮೊಗ್ಗ ವಿಮಾನ ನಿಲ್ದಾಣವು ಕೇವಲ ವಿಮಾನ ನಿಲ್ದಾಣವಾಗದೆ ಮಲೆನಾಡು ಪ್ರದೇಶದ ಪರಿವರ್ತನೆಯ ಗೇಟ್‌ವೇ ಆಗಲಿದೆ ಎಂದು ಬಿವೈ ರಾಘವೇಂದ್ರ ಅವರು ಟ್ವೀಟ್ ಮಾಡಿದ್ದು ನರೇಂದ್ರ ಮೋದಿ ಅವರನ್ನು ಟ್ಯಾಗ್ ಮಾಡಿದ್ದಾರೆ. ಮತ್ತೊಂದೆಡೆ ಇದನ್ನು ಪ್ರಧಾನಿಯವರು ರಿಟ್ವೀಟ್ ಮಾಡಿದ್ದಾರೆ.
The airport in Shivamogga will boost commerce, connectivity and enhance tourism. https://t.co/6yT84zpBaC
— Narendra Modi (@narendramodi) February 24, 2023
ಶಿವಮೊಗ್ಗ ವಿಮಾನ ನಿಲ್ದಾಣವು ಆರ್ಥಿಕ ಚೇತರಿಕೆಯನ್ನು ತರಲಿ. ಸಂಪರ್ಕ ಕ್ರಾಂತಿ ಜೊತೆಗೆ ಪ್ರವಾಸೋದ್ಯಮದಲ್ಲಿ ಅಭಿವೃದ್ಧಿ ಸಾಧಿಸಲಿ. ಇನ್ನಷ್ಟು ಅಭಿವೃದ್ಧಿ ಸಾಧಿಸಲೆಂದು ಹಾರೈಸಿದ ಮೋದಿಗೆ ಟ್ವೀಟ್ ಮೂಲಕ ಸಂಸದ ರಾಘವೇಂದ್ರ ಧನ್ಯವಾದ ತಿಳಿಸಿದ್ದಾರೆ. ಫೆ.27ರಂದು ಮೋದಿಯವರ ಅಮೃತ ಹಸ್ತದಿಂದ ಲೋಕಾರ್ಪಣೆಗೊಳ್ಳಲಿದೆ. ಹಲವು ಅಭಿವೃದ್ಧಿಯ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಅಡಿಗಲ್ಲು ಹಾಕುವ ಮೂಲಕ ಆಶೀರ್ವದಿಸಬೇಕೆಂದು ಕೋರಿಕೊಳ್ಳುತ್ತೇನೆ. ಶಿವಮೊಗ್ಗದ ಜನತೆ ಪರವಾಗಿ ತಮಗೆ ಆತ್ಮೀಯ ಸ್ವಾಗತ ಕೋರುತ್ತೇನೆ ಎಂದು ಟ್ವೀಟ್ ಮೂಲಕ ಸಂಸದ ರಾಘವೇಂದ್ರ ಪ್ರಧಾನಿ ಮೋದಿ ಸ್ವಾಗತಿಸಿದ್ದಾರೆ.
ಶಿವಮೊಗ್ಗ ವಿಮಾನ ನಿಲ್ದಾಣವು ಆರ್ಥಿಕ ಚೇತರಿಕೆಯನ್ನು ತರಲಿ ಹಾಗೂ ಸಂಪರ್ಕ ಕ್ರಾಂತಿಯ ಜೊತೆಗೆ ಪ್ರವಾಸೋದ್ಯಮ ಕ್ಷೇತ್ರದಲ್ಲಿ ಇನ್ನಷ್ಟು ಅಭಿವೃದ್ಧಿಯನ್ನು ಸಾಧಿಸಲಿ ಎಂದು ಹಾರೈಸಿದ ಸನ್ಮಾನ್ಯ ಶ್ರೀ @narendramodi ಯವರಿಗೆ ಹೃತ್ಪೂರ್ವಕವಾದ ಧನ್ಯವಾದಗಳು.
ಶಿವಮೊಗ್ಗದ ಮಹಾಜನತೆಯ ಪರವಾಗಿ ತಮಗೆ ಆತ್ಮೀಯವಾದ ಸ್ವಾಗತವನ್ನು ಕೋರುತ್ತೇನೆ. https://t.co/OsNbDWxEhP
— B Y Raghavendra (@BYRBJP) February 24, 2023
ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ
Published On - 12:39 pm, Fri, 24 February 23