Shivamogga Airport: ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಬರುವ ಮೊದಲ ವಿಮಾನ ಪ್ರಧಾನಿ ಮೋದಿಯವರದ್ದು; ಸಂಸದ ಬಿ ವೈ ರಾಘವೇಂದ್ರ

|

Updated on: Feb 18, 2023 | 10:38 AM

ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟನೆಗೆ ಫೆಬ್ರವರಿ 27 ರಂದು ಪ್ರಧಾನಿ ನರೇಂದ್ರ ಮೋದಿ ಅವರು ದೆಹಲಿಯಿಂದ ಶಿವಮೊಗ್ಗಕ್ಕೆ ವಿಶೇಷ ವಿಮಾನದ ಮೂಲಕ ಬಂದಿಳಿಯಲಿದ್ದಾರೆ. ಈ ಮೂಲಕ ಪ್ರಧಾನಿಗಳ ವಿಶೇಷ ವಿಮಾನವೇ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಬರುವ ಮೊಟ್ಟ ಮೊದಲ ವಿಮಾನವಾಗಲಿದೆ ಎಂದು ಸಂಸದ ಬಿ ವೈ ರಾಘವೇಂದ್ರ ಹೇಳಿದ್ದಾರೆ.

Shivamogga Airport: ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಬರುವ ಮೊದಲ ವಿಮಾನ ಪ್ರಧಾನಿ ಮೋದಿಯವರದ್ದು; ಸಂಸದ ಬಿ ವೈ ರಾಘವೇಂದ್ರ
ಶಿವಮೊಗ್ಗ ವಿಮಾನ ನಿಲ್ದಾಣ
Follow us on

ಶಿವಮೊಗ್ಗ: ಶಿವಮೊಗ್ಗ ವಿಮಾನ ನಿಲ್ದಾಣ (Shivamogga Airport) ಉದ್ಘಾಟನೆಗೆ ಫೆಬ್ರವರಿ 27 ರಂದು ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ದೆಹಲಿಯಿಂದ ಶಿವಮೊಗ್ಗಕ್ಕೆ ವಿಶೇಷ ವಿಮಾನದ ಮೂಲಕ ಬಂದಿಳಿಯಲಿದ್ದಾರೆ. ಈ ಮೂಲಕ ಪ್ರಧಾನಿಗಳ ವಿಶೇಷ ವಿಮಾನವೇ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಬರುವ ಮೊಟ್ಟ ಮೊದಲ ವಿಮಾನವಾಗಲಿದೆ ಎಂದು ಸಂಸದ ಬಿ ವೈ ರಾಘವೇಂದ್ರ (BY Raghavendra) ಹೇಳಿದ್ದಾರೆ.

ಶಿವಮೊಗ್ಗದಲ್ಲಿ ಮಾಧ್ಯಮ ಗೋಷ್ಠಿ ನಡೆಸಿ ಮಾತನಾಡಿದ ಅವರು ಪ್ರಧಾನಿಗಳ ವಿಮಾನವೇ ಮೊದಲ ವಿಮಾನ, ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್​ ಆಗಲಿದೆ. ಇದು ನಮಗೆ ಬಹಳ ಸಂಸತಸ ತಂದಿದೆ. ಇದೇ ವೇಳೆ ಪ್ರಧಾನಿ ಮೋದಿ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ. ಮತ್ತು ವಿವಿಧ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಎಂದು ಹೇಳಿದರು.

ಅವರ ಕಾರ್ಯಕ್ರಮ ವೇಳಾಪಟ್ಟಿ ಪ್ರಕಾರ, ಪ್ರಧಾನಿ ಮೋದಿ ಅವರು ಮಧ್ಯಾಹ್ನ 12:30ಕ್ಕೆ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಸಭೆಗೆ 2ಲಕ್ಷ ಜನರು ಸೇರುವ ಸಾಧ್ಯತೆ ಇದೆ. ಅಂದಿನ ಕಾರ್ಯಮದ ತಯಾರಿ ಈಗಾಗಲೇ ಪ್ರಾರಂಭವಾಗಿದೆ ಎಂದು ತಿಳಿಸಿದರು.

ವಿಮಾನ ನಿಲ್ದಾಣ ಉದ್ಘಾಟನೆಯಾದ 15 ಅಥವಾ 1 ತಿಂಗಳ ನಂತರ ತನ್ನ ಕಾರ್ಯಾರಂಭ ಮಾಡಲಿದೆ. ಮತ್ತು ಆಧ್ಯತೆ ಪ್ರಕಾರ ವಿಮಾನ ನಿಲ್ದಾಣದಿಂದ ಕಾರ್ಯನಿರ್ವಹಿಸುವ ವಿಮಾನಗಳ ಪಟ್ಟಿ ಸಿದ್ದವಾಗಿದೆ ಎಂದು ರಾಘವೇಂದ್ರ ತಿಳಿಸಿದ್ದಾರೆ.

ಒಟ್ಟು ವಿಮಾನ ನಿಲ್ದಾಣಕ್ಕೆ 600 ಕೋಟಿ ರೂ. ವ್ಯಯಿಸಲಾಗಿದೆ. ಇದರಲ್ಲಿ ಕಟ್ಟಡ ಕಾಮಗಾರಿಗೆ 449 ಕೋಟಿ ರೂ. ಖರ್ಚು ಮಾಡಲಾಗಿದೆ. ಇನ್ನು ಉಳಿದ ಹಣದಲ್ಲಿ ಭೂ ಖರೀದಿಗೆ ನೀಡಲಾಗಿದೆ. ಭೂಮಿಯನ್ನು ಕಳೆದುಕೊಂಡವರಿಗೆ ಕರ್ನಾಟಕ ಗೃಹ ಮಂಡಳಿ ನಿವೇಶನ ನೀಡಲಿದೆ. ಈಗಾಗಲೇ 320 ಕುಟುಂಬಗಳಿಗೆ ನೀಡಲು ನಿವೇಶನಗಳು ಸಿದ್ದವಾಗಿವೆ ಎಂದರು.

ಹಾಗೇ ವಿಮಾನ ನಿಲ್ದಾಣದ ಪಕ್ಕದಲ್ಲಿ ಪ್ರಧಾನಿ ಮೋದಿ ಅವರು ಹೈವೆ, ಸ್ಮಾರ್ಟ್​ ಸಿಟಿ, ರೇಲ್ವೆ ಕಾಮಗಾರಿಗಳನ್ನು ಮತ್ತು ಹಲವು ಗ್ರಾಮಗಳಿಗೆ ನೀರಿನ ಸೌಲಭ್ಯ, ಜನ್​ ಜೀವನ್​ ಮಿಷನ್​ನ್ನು ಉದ್ಘಾಟಿಸಲಿದ್ದಾರೆ. ಮತ್ತು ಹಲವು ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಎಂದು ಮಾಹಿತಿ ನೀಡಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ