AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುಡಾನ್​​ನಿಂದ ಸುರಕ್ಷಿತವಾಗಿ ತವರಿಗೆ ಬಂದ ಹಕ್ಕಿಪಿಕ್ಕಿ ಬುಡಕಟ್ಟು ಸಮುದಾಯದೊಂದಿಗೆ ಶಿವಮೊಗ್ಗದಲ್ಲಿ ಮೋದಿ ಸಂವಾದ

ಸಂಘರ್ಷಪೀಡಿತ ಸುಡಾನ್​​ನಲ್ಲಿ ಸಿಲುಕಿರುವ ಭಾರತೀಯರನ್ನು ಕರೆತರಲು ಕೇಂದ್ರ ಸರ್ಕಾರ ಹಮ್ಮಿಕೊಂಡಿದ್ದ ‘ಆಪರೇಷನ್ ಕಾವೇರಿ ಕಾರ್ಯಾಚರಣೆ ಯಶಸ್ವಿಯಾಗಿ ಸಂಪನ್ನಗೊಂಡಿದೆ. ಸುರಕ್ಷಿತವಾಗಿ ತವರು ಸೇರಿದ ಕರ್ನಾಟಕದ ಹಕ್ಕಿಪಿಕ್ಕಿ ಬುಡಕಟ್ಟಿನ ಸದಸ್ಯರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಸಂವಾದ ನಡೆಸಿದ್ದಾರೆ.

ಸುಡಾನ್​​ನಿಂದ ಸುರಕ್ಷಿತವಾಗಿ ತವರಿಗೆ ಬಂದ ಹಕ್ಕಿಪಿಕ್ಕಿ ಬುಡಕಟ್ಟು ಸಮುದಾಯದೊಂದಿಗೆ ಶಿವಮೊಗ್ಗದಲ್ಲಿ ಮೋದಿ ಸಂವಾದ
ಹಕ್ಕಿಪಿಕ್ಕಿ ಬುಡಕಟ್ಟು ಸಮುದಾಯದೊಂದಿಗೆ ಮೋದಿ ಸಂವಾದ
ರಮೇಶ್ ಬಿ. ಜವಳಗೇರಾ
|

Updated on: May 07, 2023 | 8:02 PM

Share

ಶಿವಮೊಗ್ಗ: ಸಂಘರ್ಷಪೀಡಿತ ಸುಡಾನ್​​ನಲ್ಲಿ ಸಿಲುಕಿರುವ ಭಾರತೀಯರನ್ನು ಕರೆತರಲು ಕೇಂದ್ರ ಸರ್ಕಾರ ಹಮ್ಮಿಕೊಂಡಿದ್ದ ‘ಆಪರೇಷನ್ ಕಾವೇರಿ (Operation Kaveri)’ ಕಾರ್ಯಾಚರಣೆ ಯಶಸ್ವಿಯಾಗಿ ಸಂಪನ್ನಗೊಂಡಿದೆ. ಎಲ್ಲ ಭಾರತೀಯರನ್ನು ವಾಪಸ್ ಕರೆತರಲಾಗಿದೆ. ಈವರೆಗೆ ಕರ್ನಾಟದ 439 ಮಂದಿಯನ್ನು ಸುಡಾನ್​​ನಿಂದ ಕರೆದುಕೊಂಡು ಬರಲಾಗಿದೆ. ಇನ್ನು ಈ ಪೈಕಿ ಶಿವಮೊಗ್ಗದ 194 ಹಕ್ಕಿಪಿಕ್ಕಿ ಬುಡಕಟ್ಟು ಸಮುದಾಯದ ಜನರು(Hakki Pikki tribe members) ಇದ್ದು, ಇವರೊಂದಿಗೆ ಪ್ರಧಾನಿ ನರೇಂದ್ರ ಮೋದಿ(Narendra Modi) ಅವರು ಇಂದು(ಮೇ 07) ಶಿವಮೊಗ್ಗದಲ್ಲಿ (Shivamogga) ಸಂವಾದ ನಡೆಸಿದ್ದು, ಹಕ್ಕಿಪಿಕ್ಕಿ ಸಮುದಾಯದ ಜನರು ಸುಡಾನ್​ನಲ್ಲಿ ಎದುರಿಸಿದ ಸಮಸ್ಯೆಗಳು ಹಾಗೂ ಅಲ್ಲಿನ ಭೀಕರತೆ ಬಗ್ಗೆ ಬಿಚ್ಚಿಟ್ಟರು.

ಇದನ್ನೂ ಓದಿ: Operation Kaveri: ಆಪರೇಷನ್​ ಕಾವೇರಿ ಯಶಸ್ವಿ; ಕರ್ನಾಟಕಕ್ಕೆ ಬಂದವರು ಎಷ್ಟು ಜನ?   

ಇದೇ ವೇಳೆ, ಕೇಂದ್ರ ಸರ್ಕಾರವು ಹೇಗೆ ರಕ್ಷಣೆ ಮಾಡಿತು ಎಂದು ಹಕ್ಕಿಪಿಕ್ಕಿ ಸಮುದಾಯದವರು ವಿವರಿಸಿದ್ದು, ನಮಗೆ ಒಂದು ಸಣ್ಣ ಗಾಯ ಕೂಡ ಆಗದಂತೆ ಸರ್ಕಾರ ಮುತುವರ್ಜಿ ವಹಿಸಿತು. ನರೇಂದ್ರ ಮೋದಿ ಅವರ ಶ್ರಮದಿಂದಾಗಿ ನಾವು ಭಾರತಕ್ಕೆ ಬಂದೆವು ಎಂದು ಸಂತಸ ವ್ಯಕ್ತಪಡಿಸಿದರು.

ಈ ವೇಳೆ ಕೇಂದ್ರ ಸರ್ಕಾರದ ಆಪರೇಷನ್ ಕಾವೇರಿ ತಂಡ ಮಾಡಿದ ರಕ್ಷಣಾ ಕಾರ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಹಕ್ಕಿ ಪಿಕ್ಕಿ ಬುಡಕಟ್ಟು ಸಮುದಾಯದ ಜನರು ಕೃತಜ್ಞತೆ ತಿಳಿಸಿದರು. ಸಮುದಾಯದವರ ಜತೆ ಮಾತನಾಡುತ್ತ ಮೋದಿ ಅವರು ಭಾರತೀಯರ ರಕ್ಷಣೆಯ ವಿಚಾರವನ್ನು ಪ್ರಸ್ತಾಪಿಸಿದರು. ಜಗತ್ತಿನ ಯಾವುದೇ ಮೂಲೆಯಲ್ಲಿ ಭಾರತೀಯರು ಸಂಕಷ್ಟಕ್ಕೆ ಸಿಲುಕಿದರೂ ಸರ್ಕಾರ ಅವರ ನೆರವಿಗೆ ಬರುತ್ತದೆ. ಸಂಕಷ್ಟಕ್ಕೆ ಸಿಲುಕಿದವರನ್ನು ರಕ್ಷಣೆ ಮಾಡುತ್ತದೆ. ಹಾಗೆಯೇ, ನೀವು ಕೂಡ, ನಾವು ಒಬ್ಬರಿಗೆ ಸಹಾಯ ಮಾಡಿದರೆ, ನಮಗೆ ಬೇರೆಯವರು ಸಹಾಯ ಮಾಡುತ್ತಾರೆ ಎಂಬ ಮನೋಭಾವನೆ ರೂಢಿಸಿಕೊಳ್ಳಿ. ಆ ಮೂಲಕ ದೇಶಕ್ಕೆ, ಸಮಾಜಕ್ಕೆ ಕೊಡುಗೆ ನೀಡಿ ಎಂದು ಕರೆ ನೀಡಿದರು.

ಸುಡಾನ್​​​ನಲ್ಲಿ ಸಿಲುಕಿಕೊಂಡಿರುವ ಎಲ್ಲ ಭಾರತೀಯರನ್ನು ಸುರಕ್ಷಿತವಾಗಿ ಕರೆತರುವ ಪ್ರಕ್ರಿಯೆ ಸಂಪೂರ್ಣವಾಗಿ ಕೊನೆಗೊಂಡಿದೆ. ಇದೀಗ ಎಲ್ಲ ಭಾರತೀಯರು ಭಾರತಕ್ಕೆ ಬಂದಿದ್ದಾರೆ ಎಂದು ರಕ್ಷಣಾ ಸಚಿವಾಲಯ ತಿಳಿಸಿದೆ.

ಯಾವ ಜಿಲ್ಲೆಯ ಎಷ್ಟು ಜನರ ರಕ್ಷಣೆ?

ಈವರೆಗೆ ಕರ್ನಾಟದ 439 ಮಂದಿಯನ್ನು ಸುಡಾನ್​​ನಿಂದ ಕರೆದುಕೊಂಡು ಬರಲಾಗಿದೆ. ಈ ಪೈಕಿ 194 ಮಂದಿ ಶಿವಮೊಗ್ಗದವರು. 116 ಮಂದಿ ಮೈಸೂರಿನವರು. ದಾವಣಗೆರೆಯ 32, ಬೆಂಗಳೂರಿನ 31, ಬೆಳಗಾವಿಯ 24 ಮಂದಿಯನ್ನು ರಕ್ಷಿಸಿ ಕರೆದುಕೊಂಡು ಬರಲಾಗಿದೆ. ಉಳಿದವರು ಕೊಡಗು, ರಾಮನಗರ, ಹಾಸನ, ಕಲಬುರಗಿ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಧಾರವಾಡ ಹಾಗೂ ತುಮಕೂರು ಜಿಲ್ಲೆಯವರು. ಇದುವರೆಗೆ 14 ಬ್ಯಾಚ್‌ಗಳಲ್ಲಿ ಕರ್ನಾಟಕದವರನ್ನು ಕರೆತರಲಾಗಿದೆ. ಇವರಲ್ಲಿ ಬೆಂಗಳೂರು ಮಾತ್ರವಲ್ಲದೆ ಮುಂಬೈ, ದೆಹಲಿ, ಕೊಚ್ಚಿ, ಅಹಮದಾಬಾದ್‌ನಲ್ಲೂ ಅನೇಕರು ಬಂದಿಳಿದಿದ್ದನ್ನು ಇಲ್ಲಿ ಸ್ಮರಿಸಬಹುದು.

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?