AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೈಂಗಿಕ ಹಗರಣವಲ್ಲ ಸಾಮೂಹಿಕ ಅತ್ಯಾಚಾರ; ಪ್ರಜ್ವಲ್ ರೇವಣ್ಣ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ

ಹಾಸನದ ಎನ್​ಡಿಎ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ವಿರುದ್ಧದ ಅಶ್ಲೀಲ ವಿಡಿಯೋ ಎಲ್ಲೆಡೆ ಹರಿದಾಡುತ್ತಿದ್ದಂತೆ ವಿಪಕ್ಷಗಳು ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಮೌನ ತಳೆದಿರುವುದಕ್ಕೆ ಟೀಕಾಪ್ರಹಾರ ನಡೆಸಲಾರಂಭಿಸಿವೆ. ಈ ನಡುವೆ ಪ್ರಜ್ವಲ್ ರೇವಣ್ಣ ಅವರನ್ನು ಜೆಡಿಎಸ್ ಪಕ್ಷದಿಂದ ಅಮಾನತುಗೊಳಿಸಲಾಗಿದೆ. ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣದ ವಿರುದ್ಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆಕ್ರೋಶ ಹೊರಹಾಕಿದ್ದಾರೆ.

ಲೈಂಗಿಕ ಹಗರಣವಲ್ಲ ಸಾಮೂಹಿಕ ಅತ್ಯಾಚಾರ; ಪ್ರಜ್ವಲ್ ರೇವಣ್ಣ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ
ವಿಧಾನಸಭೆ ಚುನಾವಣೆ ವೇಳೆ ಬಿಜೆಪಿ ವಿರುದ್ಧ ಅಪಪ್ರಚಾರ: ಜೂ.7ರಂದು ಕೋರ್ಟ್‌ಗೆ ಹಾಜರಾಗಲು ರಾಹುಲ್​ ಗಾಂಧಿಗೆ ಸೂಚನೆ
ಸುಷ್ಮಾ ಚಕ್ರೆ
|

Updated on: May 02, 2024 | 5:32 PM

Share

ಶಿವಮೊಗ್ಗ: ಬಿಜೆಪಿ ಮತ್ತು ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡಿದ್ದಾರೆ. ಮೋದಿ ಸಾಮೂಹಿಕ ಅತ್ಯಾಚಾರಿಯ ಪರವಾಗಿ ಮತ ಕೇಳುತ್ತಿದ್ದಾರೆ. ಕರ್ನಾಟಕದ ಹಾಸನ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಅವರ ಅಶ್ಲೀಲ ವಿಡಿಯೋ ಪ್ರಕರಣವು ಕೇವಲ ಲೈಂಗಿಕ ಹಗರಣವಲ್ಲ, ಅದೊಂದು ಸಾಮೂಹಿಕ ಅತ್ಯಾಚಾರ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಟೀಕಿಸಿದ್ದಾರೆ.

ಬಿಜೆಪಿ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರು ದೇವೇಗೌಡ ನೇತೃತ್ವದ ಜನತಾ ದಳದ (ಜಾತ್ಯತೀತ) ಜೊತೆ ಮೈತ್ರಿ ಮಾಡಿಕೊಂಡಿದ್ದಾರೆ. “ಸಾಮೂಹಿಕ ಅತ್ಯಾಚಾರಿ”ಯ ಪರವಾಗಿ ಮತ ಕೇಳುತ್ತಿದ್ದಾರೆ ಎಂದು ರಾಹುಲ್ ಗಾಂಧಿ ಆಕ್ರೋಶ ಹೊರಹಾಕಿದ್ದಾರೆ.

ಪ್ರಜ್ವಲ್ ರೇವಣ್ಣ ನೂರಾರು ಮಹಿಳೆಯರ ಮೇಲೆ ಅತ್ಯಾಚಾರವೆಸಗಿದ್ದಾರೆ. ಅವರ ಅಶ್ಲೀಲ ವೀಡಿಯೊಗಳನ್ನು ಮಾಡಿದ್ದಾರೆ. ನಮ್ಮ ದೇಶದ ಪ್ರಧಾನಿ ಮೋದಿ ಸಾರ್ವಜನಿಕ ವೇದಿಕೆಯಲ್ಲೇ ಆ ಅತ್ಯಾಚಾರಿಗೆ ಬೆಂಬಲ ನೀಡಿ, ಅವರ ಪರವಾಗಿ ಮತಯಾಚನೆ ಮಾಡುತ್ತಿದ್ದಾರೆ ಎಂದು ಶಿವಮೊಗ್ಗದಲ್ಲಿ ನಡೆದ ಚುನಾವಣಾ ರ್ಯಾಲಿಯಲ್ಲಿ ರಾಹುಲ್ ಗಾಂಧಿ ಹೇಳಿದ್ದಾರೆ.

ಇದನ್ನೂ ಓದಿ: ಪ್ರಜ್ವಲ್ ರೇವಣ್ಣಗೆ ಲುಕ್ ಔಟ್ ನೋಟಿಸ್, ಏನಿದು ನೋಟಿಸ್? ಪ್ರಜ್ವಲ್ ಮೇಲಾಗುವ ಪರಿಣಾಮವೇನು?

ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡರ ಮೊಮ್ಮಗ ಪ್ರಜ್ವಲ್ ರೇವಣ್ಣ ಭಾರತದಿಂದ ಪಾರಾಗಲು ಪ್ರಧಾನಿ ಮೋದಿ ಸಹಾಯ ಮಾಡಿದ್ದಾರೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ.

ಪ್ರಜ್ವಲ್ ರೇವಣ್ಣ ನೂರಾರು ಮಹಿಳೆಯರ ಮೇಲೆ ಅತ್ಯಾಚಾರ ಎಸಗಿದ್ದು ಗೊತ್ತಾದ ನಂತರವೂ ಪ್ರಧಾನಿ ಮೋದಿ ಅವರು ಪ್ರಜ್ವಲ್ ರೇವಣ್ಣ ಜರ್ಮನಿಗೆ ಹೋಗುವುದನ್ನು ತಡೆಯಲಿಲ್ಲ ಎಂದು ರಾಹುಲ್ ಗಾಂಧಿ ಹೇಳಿದರು. “ಪ್ರಧಾನಿ ಮೋದಿ ಬಳಿ ಎಲ್ಲಾ ಅಧಿಕಾರವೂ ಇದೆ. ಆದರೂ ಅವರು ಸಾಮೂಹಿಕ ಅತ್ಯಾಚಾರಿಗೆ ಜರ್ಮನಿಗೆ ಪರಾರಿಯಾಗಲು ಅವಕಾಶ ನೀಡಿದರು, ಇದು ‘ಮೋದಿ ಗ್ಯಾರಂಟಿ’. ಭ್ರಷ್ಟ ನಾಯಕನಾಗಲಿ ಅಥವಾ ಸಾಮೂಹಿಕ ಅತ್ಯಾಚಾರಿಯಾಗಲಿ ಬಿಜೆಪಿಯು ಅವನನ್ನು ರಕ್ಷಿಸುತ್ತದೆ ಎಂದು ರಾಹುಲ್ ಗಾಂಧಿ ಟೀಕಿಸಿದ್ದಾರೆ.

ಹಾಸನದ ಹಾಲಿ ಸಂಸದ ಹಾಗೂ ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡರ ಮೊಮ್ಮಗ ಪ್ರಜ್ವಲ್ ರೇವಣ್ಣ ಅವರ ವಿರುದ್ಧ ಸೆಕ್ಸ್ ಟೇಪ್‌ಗಳಿವೆ ಎಂಬ ಆರೋಪ ಕೇಳಿಬಂದಿದೆ. ಅವರು ಭಾರತೀಯ ಜನತಾ ಪಕ್ಷ (ಬಿಜೆಪಿ) ಹಾಗೂ ಜೆಡಿ (ಎಸ್) ಅಭ್ಯರ್ಥಿಯಾಗಿರುವ ಲೋಕಸಭಾ ಕ್ಷೇತ್ರವಾದ ಹಾಸನದಲ್ಲಿ ಅವರ ಲೈಂಗಿಕ ದೌರ್ಜನ್ಯದ ವೀಡಿಯೊಗಳನ್ನು ಒಳಗೊಂಡಿರುವ ಸಾವಿರಾರು ಪೆನ್ ಡ್ರೈವ್‌ಗಳನ್ನು ಪ್ರಸಾರ ಮಾಡಲಾಗಿದೆ.

ಇದನ್ನೂ ಓದಿ: ಪ್ರಜ್ವಲ್ ರೇವಣ್ಣ ಪ್ರಕರಣ: ಪೆನ್ ಡ್ರೈವ್​ಗಳನ್ನು ಡಿಕೆ ಶಿವಕುಮಾರ್ 2 ತಿಂಗಳು ತಮ್ಮ ಬಳಿ ಇಟ್ಟುಕೊಂಡಿದ್ದು ಯಾಕೆ? ಬಿವೈ ವಿಜಯೇಂದ್ರ

ಪೆನ್​ಡ್ರೈವ್​ನಲ್ಲಿರುವ ಹೆಚ್ಚಿನ ಲೈಂಗಿಕ ವಿಡಿಯೋಗಳನ್ನು ಪ್ರಜ್ವಲ್ ತನ್ನ ಮನೆ ಮತ್ತು ಕಚೇರಿಯಲ್ಲಿ ರೆಕಾರ್ಡ್ ಮಾಡಿದ್ದಾರೆ ಎನ್ನಲಾಗಿದೆ. ಆರಂಭದಲ್ಲಿ, ಗೌಡರ ಕುಟುಂಬ ಮತ್ತು ಬಿಜೆಪಿಯು ಚುನಾವಣೆಯಲ್ಲಿ ಕುಟುಂಬದ ಪ್ರತಿಷ್ಠೆಯನ್ನು ಹಾಳುಮಾಡಲು ಟೇಪ್‌ಗಳ ಸುದ್ದಿ ಎತ್ತುತ್ತಿದ್ದಾರೆ ಎನ್ನಲಾಗಿತ್ತು. ಆದರೆ, ನಂತರ ಎಚ್‌ಡಿ ಕುಮಾರಸ್ವಾಮಿ ಅವರು ಈ ಪ್ರಕರಣದ ತನಿಖೆಯನ್ನು ಪೊಲೀಸರು ನಡೆಸುತ್ತಿದ್ದಾರೆ. ಈ ಪ್ರಕರಣಕ್ಕೂ ನನಗೂ ಸಂಬಂಧವಿಲ್ಲ ಎಂದು ಜಾರಿಕೊಂಡಿದ್ದರು.

ಪ್ರಜ್ವಲ್ ರೇವಣ್ಣನ ಆರೋಪಗಳ ತನಿಖೆಗಾಗಿ ಕರ್ನಾಟಕ ಸರ್ಕಾರ ವಿಶೇಷ ತನಿಖಾ ತಂಡವನ್ನು (ಎಸ್‌ಐಟಿ) ರಚಿಸಿದೆ. ಪ್ರಜ್ವಲ್ ರೇವಣ್ಣ ಕರ್ನಾಟಕ ಪೊಲೀಸರು ಎಸ್‌ಐಟಿಯನ್ನು ರಚಿಸಿದ ದಿನವೇ ಫ್ರಾಂಕ್‌ಫರ್ಟ್‌ಗೆ ಪರಾರಿಯಾಗಿದ್ದರು. ಮಂಗಳವಾರ ಪ್ರಜ್ವಲ್ ರೇವಣ್ಣ ಅವರನ್ನು ಜೆಡಿಎಸ್ ಪಕ್ಷದಿಂದ ಅಮಾನತು ಮಾಡಲಾಗಿತ್ತು. ಪ್ರಜ್ವಲ್ ರೇವಣ್ಣ ವಿರುದ್ಧ ಭಾರತದಾದ್ಯಂತ ಎಲ್ಲಾ ವಲಸೆ ಕೇಂದ್ರಗಳಲ್ಲಿ ಲುಕ್‌ಔಟ್ ಸುತ್ತೋಲೆ ಹೊರಡಿಸಲಾಗಿದೆ.

ಇನ್ನಷ್ಟು ಕರ್ನಾಟಕದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ವೃಷಭ ರಾಶಿಯವರಿಗೆ ಆರು ಗ್ರಹಗಳ ಅನುಗ್ರಹ, ಹಣಕಾಸಿನಲ್ಲಿ ಲಾಭ
ವೃಷಭ ರಾಶಿಯವರಿಗೆ ಆರು ಗ್ರಹಗಳ ಅನುಗ್ರಹ, ಹಣಕಾಸಿನಲ್ಲಿ ಲಾಭ
ಹಾಲು ಹಾಕುವ ಮುನ್ನ ಹಾಲಿನ ಪಾತ್ರೆಗೆ ಎಂಜಲು ಉಗುಳಿದ ವ್ಯಾಪಾರಿ
ಹಾಲು ಹಾಕುವ ಮುನ್ನ ಹಾಲಿನ ಪಾತ್ರೆಗೆ ಎಂಜಲು ಉಗುಳಿದ ವ್ಯಾಪಾರಿ
ಭಾರತದ ಪ್ರಧಾನಿ ಮೋದಿಯನ್ನು ತಬ್ಬಿ ಸ್ವಾಗತಿಸಿದ ಅರ್ಜೆಂಟಿನಾ ಅಧ್ಯಕ್ಷ
ಭಾರತದ ಪ್ರಧಾನಿ ಮೋದಿಯನ್ನು ತಬ್ಬಿ ಸ್ವಾಗತಿಸಿದ ಅರ್ಜೆಂಟಿನಾ ಅಧ್ಯಕ್ಷ
ಭತ್ತದ ಗಿಡ ನೆಟ್ಟು ಗಮನಸೆಳೆದ ಉತ್ತರಾಖಂಡ ಸಿಎಂ ಪುಷ್ಕರ್ ಸಿಂಗ್ ಧಾಮಿ
ಭತ್ತದ ಗಿಡ ನೆಟ್ಟು ಗಮನಸೆಳೆದ ಉತ್ತರಾಖಂಡ ಸಿಎಂ ಪುಷ್ಕರ್ ಸಿಂಗ್ ಧಾಮಿ
ಮದುವೆಯಾಗದೆ ಗರ್ಭಿಣಿ, ಭಾವನ ರಾಮಣ್ಣ ತಂದೆ ಪ್ರತಿಕ್ರಿಯೆ ಏನಿತ್ತು?
ಮದುವೆಯಾಗದೆ ಗರ್ಭಿಣಿ, ಭಾವನ ರಾಮಣ್ಣ ತಂದೆ ಪ್ರತಿಕ್ರಿಯೆ ಏನಿತ್ತು?
ಮತ್ತೊಮ್ಮೆ ಬ್ಯಾಟ್ ಕೈಬಿಟ್ಟ ರಿಷಭ್ ಪಂತ್
ಮತ್ತೊಮ್ಮೆ ಬ್ಯಾಟ್ ಕೈಬಿಟ್ಟ ರಿಷಭ್ ಪಂತ್
ಹತ್ತು ನಿಮಿಷಗಳಲ್ಲಿ ಅನುಮತಿ ತರುತ್ತೇನೆಂದವರು ಯಾಕೆ ಸುಮ್ಮನಿದ್ದಾರೆ?ಸುರೇಶ್
ಹತ್ತು ನಿಮಿಷಗಳಲ್ಲಿ ಅನುಮತಿ ತರುತ್ತೇನೆಂದವರು ಯಾಕೆ ಸುಮ್ಮನಿದ್ದಾರೆ?ಸುರೇಶ್
ನನ್ನದು ಶಿಸ್ತು ಬದ್ಧ ಬದುಕು, ಊಟದಲ್ಲಿ ಬಹಳ ಕಟ್ಟುನಿಟ್ಟು: ಭಾವನಾ
ನನ್ನದು ಶಿಸ್ತು ಬದ್ಧ ಬದುಕು, ಊಟದಲ್ಲಿ ಬಹಳ ಕಟ್ಟುನಿಟ್ಟು: ಭಾವನಾ
ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ ಕುಸಿತ
ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ ಕುಸಿತ
ಕುಮಾರಸ್ವಾಮಿ ಕುರಿತ ಪ್ರಶ್ನೆಯನ್ನು ಶಿವಕುಮಾರ್ ಅಸಡ್ಡೆ ಮಾಡಿದರು!
ಕುಮಾರಸ್ವಾಮಿ ಕುರಿತ ಪ್ರಶ್ನೆಯನ್ನು ಶಿವಕುಮಾರ್ ಅಸಡ್ಡೆ ಮಾಡಿದರು!