ಶಿವಮೊಗ್ಗ ಪ್ರೇಮ ಸಿಂಗ್ ಚಾಕು ಇರಿತ ಪ್ರಕರಣ; ನಗರ ಸಂಪೂರ್ಣ ನಿಯಂತ್ರಣಕ್ಕೆ ಬಂದಿದೆ: ಎಡಿಜಿಪಿ ಅಲೋಕ್ ಕುಮಾರ್

ಪ್ರೇಮ ಸಿಂಗ್ ಚಾಕು ಇರಿತ ಪ್ರಕರಣಕ್ಕೆ ಸಂಬಂಧಪಟ್ಟಂತೆ ಶಿವಮೊಗ್ಗ ನಗರದಲ್ಲಿ ನಿಷೇಧಾಜ್ಞೆ ಮುಂದುವರಿಸಲಾಗಿದ್ದು, ಶಿವಮೊಗ್ಗ ನಗರ ಸಂಪೂರ್ಣ ಶಾಂತಿಯುತವಾಗಿದೆ ಎಂದು ಕಾನೂನು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ಶಿವಮೊಗ್ಗದಲ್ಲಿ ಹೇಳಿದ್ದಾರೆ.

ಶಿವಮೊಗ್ಗ ಪ್ರೇಮ ಸಿಂಗ್ ಚಾಕು ಇರಿತ ಪ್ರಕರಣ; ನಗರ ಸಂಪೂರ್ಣ ನಿಯಂತ್ರಣಕ್ಕೆ ಬಂದಿದೆ: ಎಡಿಜಿಪಿ ಅಲೋಕ್ ಕುಮಾರ್
ಅಲೋಕ್​ ಕುಮಾರ್, ಎಡಿಜಿಪಿ
Follow us
TV9 Web
| Updated By: ವಿವೇಕ ಬಿರಾದಾರ

Updated on:Aug 17, 2022 | 11:00 AM

ಶಿವಮೊಗ್ಗ: ಪ್ರೇಮ ಸಿಂಗ್ ಚಾಕು ಇರಿತ ಪ್ರಕರಣಕ್ಕೆ ಸಂಬಂಧಪಟ್ಟಂತೆ ಶಿವಮೊಗ್ಗ ನಗರದಲ್ಲಿ ನಿಷೇಧಾಜ್ಞೆ ಮುಂದುವರಿಸಲಾಗಿದ್ದು, ಶಿವಮೊಗ್ಗ ನಗರ ಸಂಪೂರ್ಣ ಶಾಂತಿಯುತವಾಗಿದೆ ಎಂದು ಕಾನೂನು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ಶಿವಮೊಗ್ಗದಲ್ಲಿ ಹೇಳಿದ್ದಾರೆ. ಪ್ರಕರಣದ ಸಂಬಂಧ ಟಿವಿ9 ಜೊತೆ ಮಾತನಾಡಿದ ಅವರು ನಗರದಲ್ಲಿ ಇಂದು ಶಾಲಾ-ಕಾಲೇಜುಗಳು ಆರಂಭವಾಗಿವೆ. ಯಾರು ಭಯಪಡುವ ಅಗತ್ಯವಿಲ್ಲ. 2 ದಿನದಲ್ಲಿ ನಗರ ಸಂಪೂರ್ಣ ನಿಯಂತ್ರಣಕ್ಕೆ ಬಂದಿದೆ ಎಂದರು.

ಪೋಲೀಸ್ ಇಲಾಖೆ ಅಧಿಕಾರಿಗಳು ಸಿಬ್ಬಂದಿ ಹಗಲು ರಾತ್ರಿ ಕೆಲಸ ಮಾಡುತ್ತಿದ್ದಾರೆ. ಚಾಕು ಇರಿತ ಪ್ರಕರಣ ಆರೋಪಿಗಳ ಬಂಧನವಾಗಿದೆ. ಈಗಾಗಲೆ ಮುಬಾರಕನ ಬಂಧನವಾಗಿದೆ ಎಂದು ತಿಳಿಸಿದರು. ಶಿವಮೊಗ್ಗ ನಗರದಲ್ಲಿ ನಿಷೇಧಾಜ್ಞೆ ಮುಂದುವರಿಯಲಿದ್ದು, ಕಳೆದ ಎರಡು ದಿನಗಳಿಂದ ಗಾಂಧಿ ಬಜಾರ್ ಬಂದ್ ಆಗಿದೆ. ಗಾಂಧಿ ಬಜಾರ್​ನಲ್ಲಿ ಲಕ್ಷಾಂತರ ರೂಪಾಯಿ ನಷ್ಟ ಹಿನ್ನಲೆ ಇಂದು ಗಾಂಧಿ ಬಜಾರ್ ಅಂಗಡಿ ಓಪನ್​ಗೆ ಅವಕಾಶ ನೀಡಲಾಗಿದೆ.

ಭದ್ರಾವತಿಯಲ್ಲಿ ಮುಂದುವರಿದ ಅಘೋಷಿತ ಬಂದ್ ಮುಂದುವರೆದಿದ್ದು, ಭದ್ರಾವತಿಯಲ್ಲಿ ಇಂದು ಕೂಡ ಅಂಗಡಿಗಳು ಬಂದ್​ ಆಗಿವೆ. ಅಗತ್ಯ ವಸ್ತುಗಳ ಅಂಗಡಿ ಹೊರತುಪಡಿಸಿ ಎಲ್ಲ ಬಂದ್ ಆಗಿವೆ. ಹೋಟೆಲ್​​ನಲ್ಲಿ ಪಾರ್ಸೆಲ್​​ಗಷ್ಟೇ ಅವಕಾಶ ನೀಡಲಾಗಿದೆ. ಒಟ್ಟಾರೆಯಾಗಿ ಶಿವಮೊಗ್ಗ ಜಿಲ್ಲೆ ಭದ್ರಾವತಿಯಲ್ಲಿ ನಿಷೇಧಾಜ್ಞೆ ಮುಂದುವರಿಕೆಯಾಗಿದ್ದು, ನಗರದ ಸೂಕ್ಷ್ಮ ಪ್ರದೇಶಗಳಲ್ಲಿ ಪೊಲೀಸ್ ಬಿಗಿ ಭದ್ರತೆ ಇದೆ.

ಶಿವಮೊಗ್ಗದಲ್ಲಿ ಮತ್ತೊಂದು ಎಫ್ ಐಆರ್ ದಾಖಲು

ವೀರ ಸಾವರ್ಕರ್ ಫ್ಲೆಕ್ಸ್ ಅಳವಡಿಕೆ ವೇಳೆ ಗಲಾಟೆ ವಿಚಾರವಾಗಿ ಮತ್ತೊಂದು ಎಫ್ ಐಆರ್ ದಾಖಲಾಗಿದೆ. ಗಲಾಟೆ ಸಂಬಂಧ ಈವರೆಗೆ ದೊಡ್ಡಪೇಟೆ ಠಾಣೆಯಲ್ಲಿ ನಾಲ್ಕು ಎಫ್ಐಆರ್ ದಾಖಲಾಗಿವೆ. ಸಾವರ್ಕರ್ ಫ್ಲೆಕ್ಸ್​​ನ್ನು ತೆರವುಗೊಳಿಸುವ ವೇಳೆ ಕಿಡಿಗೇಡಿಗಳು ತೆಗಿರೋ ಆ ಸಾವರ್ಕರ್ ಫೋಟೋ ತೇರಿ ಮಾಕಿ ಎಂದು ಕೂಗಿ, ನಂತರ ಫ್ಲೆಕ್ಸ್ ಕಿತ್ತು ಹಾಕಿದ್ದರು.

ಈ ಸಂಬಂಧ  ಭಾವನೆಗಳಿಗೆ ಧಕ್ಕೆ ತರುವ ಘೋಷಣೆ ಕೂಗಿದ್ದಾರೆಂದು ಅನ್ಯಕೋಮಿನ ವ್ಯಕ್ತಿಗಳ ವಿರುದ್ಧ ಪ್ರಕರಣ ದಾಖಲಾಗಿದೆ. ದೊಡ್ಡಪೇಟೆ ಪೊಲೀಸರು 2ನೇ ಸುಮೋಟೋ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪ್ರಕರಣಕ್ಕೆ ಮೂರರಿಂದ ನಾಲ್ಕು ಜನರು ಕಾರಣಕರ್ತರು ಎಂದು ಪೊಲೀಸ್​ ಎಫ್ಐಆರ್​ನಲ್ಲಿ ದಾಖಲಾಗಿದೆ. ಎಫ್ಐಆರ್​​ನಲ್ಲಿ ಅಪರಿಚಿತ ವ್ಯಕ್ತಿಗಳು ಎಂದು ಪ್ರಕರಣ ದಾಖಲಾಗಿದೆ. ಆ 4 ಜನರಿಗೆ ದೊಡ್ಡಪೇಟೆ ಪೊಲೀಸರು ಶೋಧ ಕಾರ್ಯ ಆರಂಭಿಸಿದ್ದಾರೆ.

Published On - 10:20 am, Wed, 17 August 22

ಧೋನಿ ಸಂಪ್ರದಾಯ ಮುಂದುವರಿಸಿದ ಸೂರ್ಯಕುಮಾರ್ ಯಾದವ್
ಧೋನಿ ಸಂಪ್ರದಾಯ ಮುಂದುವರಿಸಿದ ಸೂರ್ಯಕುಮಾರ್ ಯಾದವ್
ಧರಣಿನಿರತ ಮಹಿಳೆಯರನ್ನು ಜೊತೆಗೂಡಿದ ಬಿಜೆಪಿ ಶಾಸಕ ಅರವಿಂದ್ ಬೆಲ್ಲದ್
ಧರಣಿನಿರತ ಮಹಿಳೆಯರನ್ನು ಜೊತೆಗೂಡಿದ ಬಿಜೆಪಿ ಶಾಸಕ ಅರವಿಂದ್ ಬೆಲ್ಲದ್
ಜನಪರ ಯೋಜನೆಗಳನ್ನು ಆಗಾಗ ಬದಲಾಯಿಸುತ್ತಿರಬೇಕಾಗುತ್ತದೆ: ಎನ್ ಎಸ್ ಬೋಸರಾಜು
ಜನಪರ ಯೋಜನೆಗಳನ್ನು ಆಗಾಗ ಬದಲಾಯಿಸುತ್ತಿರಬೇಕಾಗುತ್ತದೆ: ಎನ್ ಎಸ್ ಬೋಸರಾಜು
10 ಸ್ಪರ್ಧಿಗಳ ಮೇಲೆ ನಾಮಿನೇಷನ್ ತೂಗುಗತ್ತಿ; ಗೇಟ್​ಪಾಸ್ ಯಾರಿಗೆ?
10 ಸ್ಪರ್ಧಿಗಳ ಮೇಲೆ ನಾಮಿನೇಷನ್ ತೂಗುಗತ್ತಿ; ಗೇಟ್​ಪಾಸ್ ಯಾರಿಗೆ?
ಶನಿ ವ್ರತದ ಹಿಂದಿನ ರಹಸ್ಯ ಹಾಗೂ ಫಲಗಳ ವಿವರ
ಶನಿ ವ್ರತದ ಹಿಂದಿನ ರಹಸ್ಯ ಹಾಗೂ ಫಲಗಳ ವಿವರ
ವೃಶ್ಚಿಕ ರಾಶಿಗೆ ಸೂರ್ಯ ಪ್ರವೇಶ, ಗಜಕೇಸರಿ ಯೋಗ, 12 ರಾಶಿಗಳ ಫಲಾಫಲ ಇಲ್ಲಿದೆ
ವೃಶ್ಚಿಕ ರಾಶಿಗೆ ಸೂರ್ಯ ಪ್ರವೇಶ, ಗಜಕೇಸರಿ ಯೋಗ, 12 ರಾಶಿಗಳ ಫಲಾಫಲ ಇಲ್ಲಿದೆ
ಒಂದೇ ಬೈಕ್​ನಲ್ಲಿ 8 ಜನ, ಜೊತೆಗೊಂದು ಹಾಸಿಗೆ; ಪೊಲೀಸರೇ ಕಂಗಾಲು!
ಒಂದೇ ಬೈಕ್​ನಲ್ಲಿ 8 ಜನ, ಜೊತೆಗೊಂದು ಹಾಸಿಗೆ; ಪೊಲೀಸರೇ ಕಂಗಾಲು!
ಕಾಡುಹಂದಿಗಳ ಕಾಟದಿಂದ ಪಾರಾಗಲು ಬೀಸಿದ್ದ ಬಲೆಗೆ ಸಿಕ್ಕಿಬಿದ್ದ ಹೆಬ್ಬಾವು
ಕಾಡುಹಂದಿಗಳ ಕಾಟದಿಂದ ಪಾರಾಗಲು ಬೀಸಿದ್ದ ಬಲೆಗೆ ಸಿಕ್ಕಿಬಿದ್ದ ಹೆಬ್ಬಾವು
ಮೋಕ್ಷಿತಾ ಜೊತೆ ಮನಸ್ಸಿನ ಮಾತು ವಿನಿಮಯ ಮಾಡಿಕೊಂಡ ತ್ರಿವಿಕ್ರಮ್
ಮೋಕ್ಷಿತಾ ಜೊತೆ ಮನಸ್ಸಿನ ಮಾತು ವಿನಿಮಯ ಮಾಡಿಕೊಂಡ ತ್ರಿವಿಕ್ರಮ್
ಕುರುಬ ಸಮುದಾಯ ಪ್ರಾಬಲ್ಯದ ಕ್ಷೇತ್ರಗಳಲ್ಲಿ ಸಿದ್ದರಾಮಯ್ಯ ಮತಯಾಚನೆ
ಕುರುಬ ಸಮುದಾಯ ಪ್ರಾಬಲ್ಯದ ಕ್ಷೇತ್ರಗಳಲ್ಲಿ ಸಿದ್ದರಾಮಯ್ಯ ಮತಯಾಚನೆ