AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shivamogga News: ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ, ಜಾತಿನಿಂದನೆ ಆರೋಪ: ಖಾಸಗಿ ಕಾಲೇಜ್​ ಪ್ರಿನ್ಸಿಪಾಲ್​ ಅರೆಸ್ಟ್​​

ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಮತ್ತು ಜಾತಿನಿಂದನೆ ಆರೋಪದಡಿ ಖಾಸಗಿ ಕಾಲೇಜ್​​ ಪ್ರಿನ್ಸಿಪಾಲ್​​ರನ್ನು ಪೋಕ್ಸೋ, ಅಟ್ರಾಸಿಟಿ ಕಾಯ್ದೆಯಡಿ ಕೋಟೆ ಠಾಣೆ ಪೊಲೀಸರು ಬಂಧಿಸಿದ್ದಾರೆ.

Shivamogga News: ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ, ಜಾತಿನಿಂದನೆ ಆರೋಪ: ಖಾಸಗಿ ಕಾಲೇಜ್​ ಪ್ರಿನ್ಸಿಪಾಲ್​ ಅರೆಸ್ಟ್​​
ಕೋಟೆ ಪೊಲೀಸ್ ಠಾಣೆ
Basavaraj Yaraganavi
| Updated By: ಗಂಗಾಧರ​ ಬ. ಸಾಬೋಜಿ|

Updated on:Jul 20, 2023 | 7:10 PM

Share

ಶಿವಮೊಗ್ಗ, ಜುಲೈ 20: ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಮತ್ತು ಜಾತಿನಿಂದನೆ ಆರೋಪದಡಿ ಖಾಸಗಿ ಕಾಲೇಜ್​ ಪ್ರಿನ್ಸಿಪಾಲ್​ (principal) ​ರನ್ನು ಕೋಟೆ ಠಾಣೆ ಪೊಲೀಸರು ಬಂಧಿಸಿದ್ದಾರೆ. ಫ್ರಾನ್ಸಿಸ್​ ಫರ್ನಾಂಡಿಸ್ ಬಂಧಿತ ಪ್ರಿನ್ಸಿಪಾಲ್. ಫ್ರಾನ್ಸಿಸ್​ ಫರ್ನಾಂಡಿಸ್ ಚರ್ಚ್ ಫಾದರ್​ ಕೂಡ ಆಗಿದ್ದಾರೆ.​​ ಸದ್ಯ ಫ್ರಾನ್ಸಿಸ್​ ಫರ್ನಾಂಡಿಸ್ ವಿರುದ್ಧ ಪೋಕ್ಸೋ, ಅಟ್ರಾಸಿಟಿ ಕಾಯ್ದೆಯಡಿ ಕೇಸ್​ ದಾಖಲಿಸಲಾಗಿದೆ.

ಸೆಕ್ರೆಡ್ ಹಾರ್ಟ್ ಕಾಲೇಜಿನ ಪಿಯುಸಿ ದ್ವಿತೀಯ ವರ್ಷದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿಯನ್ನು ಪ್ರೀತಿಸುವ ನಾಟಕವಾಡಿದ್ದರು ಎನ್ನಲಾಗಿದೆ. ಎಸ್​ಸಿಎಸ್​ಟಿ ವಸತಿ ನಿಲಯದಲ್ಲಿದ್ದುಕೊಂಡು ವಿದ್ಯಾರ್ಥಿನಿ ವ್ಯಾಸಂಗ ಮಾಡುತ್ತಿದ್ದಳು. ಫರ್ನಾಂಡಿಸ್ ಕಿರುಕುಳದಿಂದ ವಿದ್ಯಾರ್ಥಿನಿ ನಿನ್ನೆ ಸಂಜೆ ಆತ್ಮಹತ್ಯೆಗೆ ಯತ್ನಿಸಿದ್ದು, ಬಳಿಕ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.

ಇದನ್ನೂ ಓದಿ: ಮಗನ ಬರ್ತಡೇ ಸಂಭ್ರಮದಲ್ಲಿದ್ದ ತಂದೆಯ ಎದೆಗೆ ಚೂರಿ ಇರಿದ ಹಂತಕರು, ಉದ್ಯಮಿ ಕೊಲೆ ಪ್ರಕರಣಕ್ಕೆ ಬಿಗ್ ಟಿಸ್ಟ್

ಸರಣಿ ಬೈಕ್ ಕಳ್ಳತನ ಮಾಡುತ್ತಿದ್ದ ಕಳ್ಳ ಅಂದರ್

ರಾಮನಗರ: ಐಜೂರು ಪೊಲೀಸ್ ಕಾರ್ಯಾಚರಣೆ ಮಾಡಿ ಸರಣಿ ಬೈಕ್ ಕಳ್ಳತನ ಮಾಡುತ್ತಿದ್ದ ಕಳ್ಳನನ್ನು ಬಂಧಿಸಿದ್ದಾರೆ. ಕನಕಪುರ ತಾಲೂಕಿನ ಹೊಸದುರ್ಗ ಗ್ರಾಮದ ಕೇಶವ ಬಂಧಿತ ಆರೋಪಿ. ಬೈಕ್ ಕದಿಯುವುದೇ ಹವ್ಯಾಸ ಮಾಡಿಕೊಂಡಿದ್ದ. ಸದ್ಯ ಕೇಶವನಿಂದ 10 ಬೈಕ್​ಗಳನ್ನು ವಶಪಡಿಸಿಕೊಳ್ಳಲಾಗಿದೆ. ಜಿಲ್ಲೆಯ ಐಜೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಹಾಡಹಗಲೇ ಹೋಟೆಲ್ ಕ್ಯಾಶಿಯರ್​ ಕೊಲೆ: ಹೌಸ್​ಕೀಪರ್​​ ಬಂಧನ​​

ದಾಖಲೆ ಇಲ್ಲದೆ ಸಾಗಿಸುತ್ತಿದ್ದ 25 ಲಕ್ಷ ರೂಪಾಯಿ ನಗದು ಜಪ್ತಿ

ಕೋಲಾರ: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 25 ಲಕ್ಷ ಹಣವನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿರುವಂತಹ ಘಟನೆ ಕೋಲಾರ ತಾಲೂಕಿನ ನರಸಾಪುರ ಬಳಿ ನಡೆದಿದೆ. ಹೋಟೆಲ್​ ಬಳಿ ಕಾರಿನಲ್ಲಿ ಕುಳಿತು ಹಣ ಎಣಿಸುತ್ತಿದ್ದ ವೇಳೆ ಪೊಲೀಸರು ದಾಳಿ ಮಾಡಿದ್ದಾರೆ. ಆಂದ್ರದ ಹಿಂದೂಪುರ ಮೂಲದ ಶ್ಯಾಮ್ ಪ್ರಸಾದ್ ರೆಡ್ಡಿ ಎಂಬುವರಿಗೆ ಹಣ ಸೇರಿದೆ ಎನ್ನಲಾಗಿದೆ.  ಮನೆ ಮಾರಿದ ದುಡ್ಡು ಎಂದು ಸುಳ್ಳು ಹೇಳಿಕೆ ಮತ್ತು ದಾಖಲೆ ಇಲ್ಲದ ಹಿನ್ನಲೆ ವ್ಯಕ್ತಿ ಹಾಗೂ ಹಣವನ್ನ ವೇಮಗಲ್ ಪೊಲೀಸ್ ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 7:08 pm, Thu, 20 July 23

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ