ಶಿವಮೊಗ್ಗ, ಜುಲೈ 20: ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಮತ್ತು ಜಾತಿನಿಂದನೆ ಆರೋಪದಡಿ ಖಾಸಗಿ ಕಾಲೇಜ್ ಪ್ರಿನ್ಸಿಪಾಲ್ (principal) ರನ್ನು ಕೋಟೆ ಠಾಣೆ ಪೊಲೀಸರು ಬಂಧಿಸಿದ್ದಾರೆ. ಫ್ರಾನ್ಸಿಸ್ ಫರ್ನಾಂಡಿಸ್ ಬಂಧಿತ ಪ್ರಿನ್ಸಿಪಾಲ್. ಫ್ರಾನ್ಸಿಸ್ ಫರ್ನಾಂಡಿಸ್ ಚರ್ಚ್ ಫಾದರ್ ಕೂಡ ಆಗಿದ್ದಾರೆ. ಸದ್ಯ ಫ್ರಾನ್ಸಿಸ್ ಫರ್ನಾಂಡಿಸ್ ವಿರುದ್ಧ ಪೋಕ್ಸೋ, ಅಟ್ರಾಸಿಟಿ ಕಾಯ್ದೆಯಡಿ ಕೇಸ್ ದಾಖಲಿಸಲಾಗಿದೆ.
ಸೆಕ್ರೆಡ್ ಹಾರ್ಟ್ ಕಾಲೇಜಿನ ಪಿಯುಸಿ ದ್ವಿತೀಯ ವರ್ಷದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿಯನ್ನು ಪ್ರೀತಿಸುವ ನಾಟಕವಾಡಿದ್ದರು ಎನ್ನಲಾಗಿದೆ. ಎಸ್ಸಿಎಸ್ಟಿ ವಸತಿ ನಿಲಯದಲ್ಲಿದ್ದುಕೊಂಡು ವಿದ್ಯಾರ್ಥಿನಿ ವ್ಯಾಸಂಗ ಮಾಡುತ್ತಿದ್ದಳು. ಫರ್ನಾಂಡಿಸ್ ಕಿರುಕುಳದಿಂದ ವಿದ್ಯಾರ್ಥಿನಿ ನಿನ್ನೆ ಸಂಜೆ ಆತ್ಮಹತ್ಯೆಗೆ ಯತ್ನಿಸಿದ್ದು, ಬಳಿಕ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.
ಇದನ್ನೂ ಓದಿ: ಮಗನ ಬರ್ತಡೇ ಸಂಭ್ರಮದಲ್ಲಿದ್ದ ತಂದೆಯ ಎದೆಗೆ ಚೂರಿ ಇರಿದ ಹಂತಕರು, ಉದ್ಯಮಿ ಕೊಲೆ ಪ್ರಕರಣಕ್ಕೆ ಬಿಗ್ ಟಿಸ್ಟ್
ರಾಮನಗರ: ಐಜೂರು ಪೊಲೀಸ್ ಕಾರ್ಯಾಚರಣೆ ಮಾಡಿ ಸರಣಿ ಬೈಕ್ ಕಳ್ಳತನ ಮಾಡುತ್ತಿದ್ದ ಕಳ್ಳನನ್ನು ಬಂಧಿಸಿದ್ದಾರೆ. ಕನಕಪುರ ತಾಲೂಕಿನ ಹೊಸದುರ್ಗ ಗ್ರಾಮದ ಕೇಶವ ಬಂಧಿತ ಆರೋಪಿ. ಬೈಕ್ ಕದಿಯುವುದೇ ಹವ್ಯಾಸ ಮಾಡಿಕೊಂಡಿದ್ದ. ಸದ್ಯ ಕೇಶವನಿಂದ 10 ಬೈಕ್ಗಳನ್ನು ವಶಪಡಿಸಿಕೊಳ್ಳಲಾಗಿದೆ. ಜಿಲ್ಲೆಯ ಐಜೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ಬೆಂಗಳೂರಿನಲ್ಲಿ ಹಾಡಹಗಲೇ ಹೋಟೆಲ್ ಕ್ಯಾಶಿಯರ್ ಕೊಲೆ: ಹೌಸ್ಕೀಪರ್ ಬಂಧನ
ಕೋಲಾರ: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 25 ಲಕ್ಷ ಹಣವನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿರುವಂತಹ ಘಟನೆ ಕೋಲಾರ ತಾಲೂಕಿನ ನರಸಾಪುರ ಬಳಿ ನಡೆದಿದೆ. ಹೋಟೆಲ್ ಬಳಿ ಕಾರಿನಲ್ಲಿ ಕುಳಿತು ಹಣ ಎಣಿಸುತ್ತಿದ್ದ ವೇಳೆ ಪೊಲೀಸರು ದಾಳಿ ಮಾಡಿದ್ದಾರೆ. ಆಂದ್ರದ ಹಿಂದೂಪುರ ಮೂಲದ ಶ್ಯಾಮ್ ಪ್ರಸಾದ್ ರೆಡ್ಡಿ ಎಂಬುವರಿಗೆ ಹಣ ಸೇರಿದೆ ಎನ್ನಲಾಗಿದೆ. ಮನೆ ಮಾರಿದ ದುಡ್ಡು ಎಂದು ಸುಳ್ಳು ಹೇಳಿಕೆ ಮತ್ತು ದಾಖಲೆ ಇಲ್ಲದ ಹಿನ್ನಲೆ ವ್ಯಕ್ತಿ ಹಾಗೂ ಹಣವನ್ನ ವೇಮಗಲ್ ಪೊಲೀಸ್ ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 7:08 pm, Thu, 20 July 23