ಶಿವಮೊಗ್ಗದ ರಾಗಿಗುಡ್ಡದಲ್ಲಿ ಭಯದ ವಾತಾವರಣ, ನಗರದಲ್ಲಿ ನಿಷೇಧಾಜ್ಞೆ ಮುಂದುವರಿಕೆ

ಶಿವಮೊಗ್ಗದ ರಾಗಿಗುಡ್ಡ ಗಲಾಟೆ ಪ್ರಕರಣ ಸಂಬಂದ ಘಟನಾ ಸ್ಥಳದಲ್ಲಿ ಬಿಗಿ ಪೊಲೀಸ್ ಭದ್ರತೆ ಕಲ್ಪಿಸಲಾಗಿದೆ. ನಿಷೇಧಾಜ್ಞೆ ಜಾರಿ ಹಿನ್ನಲೆ ಅಗತ್ಯ ವಸ್ತು ಖರೀದಿ ಮಾತ್ರ ಪೊಲೀಸರು ಅವಕಾಶ ನೀಡುತ್ತಿದ್ದು, ಸಾರ್ವಜನಿಕರ ಅನಗತ್ಯ ಓಡಾಟಕ್ಕೆ ಬ್ರೇಕ್ ಹಾಕುತ್ತಿದ್ದಾರೆ. ರಸ್ತೆಗಿಳಿದ ಜನರನ್ನು ವಾಪಸ್ ಮನೆಗೆ ಕಳುಹಿಸುತ್ತಿದ್ದಾರೆ.

ಶಿವಮೊಗ್ಗದ ರಾಗಿಗುಡ್ಡದಲ್ಲಿ ಭಯದ ವಾತಾವರಣ, ನಗರದಲ್ಲಿ ನಿಷೇಧಾಜ್ಞೆ ಮುಂದುವರಿಕೆ
ಶಿವಮೊಗ್ಗ ನಗರದಲ್ಲಿ ನಿಷೇಧಾಜ್ಞೆ ಮುಂದುವರಿಕೆ
Image Credit source: PTI FILE PHOTO
Updated By: Rakesh Nayak Manchi

Updated on: Oct 03, 2023 | 9:15 AM

ಶಿವಮೊಗ್ಗ, ಅ.3: ಈದ್ ಮಿಲಾದ್ (Eid Milad) ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆಸಿದ ಪ್ರಕರಣ ಸಂಬಂಧ ರಾಗಿಗುಡ್ಡ ಶಾಂತಿ ನಗರದಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ. ಇದನ್ನು ಹೊರತುಪಡಿಸಿ ಶಿವಮೊಗ್ಗ (Shivamogga) ನಗರ ಸಹಜ ಸ್ಥಿತಿಯತ್ತ ಮರಳುತ್ತಿದ್ದು, 144 ಸೆಕ್ಷನ್ ಮುಂದುವರಿದಿದೆ. ಹೀಗಾಗಿ ಸಾರ್ವಜನಿಕರ ಅನಗತ್ಯ ಓಡಾಟಕ್ಕೆ ಪೊಲೀಸರು ಕಡಿವಾಣ ಹಾಕುತ್ತಿದ್ದಾರೆ.

ರಾಗಿಗುಡ್ಡದಲ್ಲಿ ಕಲ್ಲು ತೂರಾಟದ ಬಳಿಕ ಮುಂಜಾಗ್ರತಾ ಕ್ರಮವಾಗಿ ಶಿವಮೊಗ್ಗ ನಗರದಾದ್ಯಂತ ನಿಷೇಧಾಜ್ಞೆಯನ್ನು ವಿಸ್ತರಿಸಲಾಗಿದೆ. ಆದರೆ ನಿಷೇಧಾಜ್ಞೆ ನಡುವೆಯೇ ಶಿವಮೊಗ್ಗ ನಗರದಲ್ಲಿ ವ್ಯಾಪಾರಸ್ಥರು ಅಂಗಡಿ ಮುಂಗಟ್ಟುಗಳನ್ನ ತೆರೆಯುತ್ತಿದ್ದು, ವ್ಯಾಪಕ ವಹಿವಾಟು ಆರಂಭಗೊಂಡಿದೆ.

ಇದನ್ನೂ ಓದಿ: ಶಿವಮೊಗ್ಗ: 4 ವರ್ಷದ ಮಗು ಕೂದಲೆಳೆ ಅಂತರದಲ್ಲಿ ಪಾರು ! ರಾಗಿಗುಡ್ಡದ ಕಲ್ಲು ತೂರಾಟದ ಕರಾಳತೆ ಬಿಚ್ಚಿಟ್ಟ ಹಿಂದೂಗಳು

ನಿನ್ನೆ ಶಿವಮೊಗ್ಗ ನಗರದ ಸಂಪೂರ್ಣ ಸ್ತಬ್ಧವಾಗಿದ್ದ ಅಮೀರ್ ಅಹ್ಮದ್ ಸರ್ಕಲ್ ಬಳಿಯ ಹೂವಿನ ಮಾರುಕಟ್ಟೆ ಇಂದು ಓಪನ್ ಆಗಿದೆ. 144 ಸೆಕ್ಷನ್ ತೆರವು ಮಾಡಿ ವ್ಯಾಪಾರ ವಹಿವಾಟಿಗೆ ಅನುಮತಿ ನೀಡುವಂತೆ ವರ್ತಕರು ಪಟ್ಟು ಹಿಡಿದಿದ್ದಾರೆ.

ಅದಾಗ್ಯೂ, ಅಂಗಡಿ ಮುಂಗಟ್ಟು ಓಪನ್ ಮಾಡದಂತೆ ವ್ಯಾಪಾರಸ್ಥರಲ್ಲಿ ಮನವಿ ಮಾಡುತ್ತಿರುವ ಪೊಲೀಸರು, ಗುಂಪು ಸೇರದಂತೆ ಸಾರ್ವಜನಿಕರಿಗೆ ಸೂಚಿಸುತ್ತಿದ್ದಾರೆ. ನಿಷೇಧಾಜ್ಞೆ ಜಾರಿ ಹಿನ್ನಲೆ ಅಗತ್ಯ ವಸ್ತು ಖರೀದಿಗೆ ಮಾತ್ರ ಅವಕಾಶ ನೀಡಲಾಗುತ್ತಿದ್ದು, ಅನಗತ್ಯ ಬೈಕ್ ಮತ್ತು ಜನರ ಓಡಾಟಕ್ಕೆ ಪೋಲಿಸರು ಕಡಿವಾಣ ಹಾಕುತ್ತಿದ್ದಾರೆ. ಅದಾಗ್ಯೂ, ರಸ್ತೆಗಿಳಿದ ಬೈಕ್ ಸವಾರರನ್ನು ತಡೆದು ವಾಪಸ್ ಕಳುಹಿಸಲಾಗುತ್ತಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:12 am, Tue, 3 October 23