AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Religion Conversion: ಶಿವಮೊಗ್ಗದಲ್ಲಿ ಮತಾಂತರ ಆರೋಪ, ಪಾದ್ರಿ ಮನೆಗೆ ನುಗ್ಗಿದ ಬಜರಂಗದಳ ಕಾರ್ಯಕರ್ತರು

ಆಮಿಷವೊಡ್ಡಿ ಕ್ರೈಸ್ತ ಧರ್ಮಕ್ಕೆ ಮತಾಂತರ ಮಾಡುತ್ತಿರುವ ಆರೋಪ ಕೇಳಿ ಬಂದಿದ್ದು ಸಾಮೂಹಿಕ ಪ್ರಾರ್ಥನೆ ನಡೆಸುತ್ತಿದ್ದ ಮನೆಗೆ ಬಜರಂಗ ದಳ ಮುತ್ತಿಗೆ ಹಾಕಿದೆ.

Religion Conversion: ಶಿವಮೊಗ್ಗದಲ್ಲಿ ಮತಾಂತರ ಆರೋಪ, ಪಾದ್ರಿ ಮನೆಗೆ ನುಗ್ಗಿದ ಬಜರಂಗದಳ ಕಾರ್ಯಕರ್ತರು
ಸಾಮೂಹಿಕ ಪ್ರಾರ್ಥನೆ ನಡೆಸುತ್ತಿದ್ದ ಮನೆ
ಆಯೇಷಾ ಬಾನು
|

Updated on:Mar 19, 2023 | 1:01 PM

Share

ಶಿವಮೊಗ್ಗ: ಜಿಲ್ಲೆಯಲ್ಲಿ ಆಮಿಷವೊಡ್ಡಿ ಕ್ರೈಸ್ತ ಧರ್ಮಕ್ಕೆ ಮತಾಂತರ ಮಾಡುತ್ತಿರುವ ಆರೋಪ ಹಿನ್ನೆಲೆ ಸಾಮೂಹಿಕ ಪ್ರಾರ್ಥನೆ ನಡೆಸುತ್ತಿದ್ದ ಮನೆಗೆ ಬಜರಂಗ ದಳ ಮುತ್ತಿಗೆ ಹಾಕಿದ ಘಟನೆ ಶಿವಮೊಗ್ಗ ತಾಲೂಕಿನ ಗೋಪಿಶೆಟ್ಟಿಕೊಪ್ಪ ಗ್ರಾಮದಲ್ಲಿ ನಡೆದಿದೆ. ಪ್ರಾರ್ಥನೆ ನಡೆಸುತ್ತಿದ್ದ ಮನೆಯಲ್ಲಿ ಬಜರಂಗ ದಳ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗೋಪಿಶೆಟ್ಟಿಕೊಪ್ಪದಲ್ಲಿರುವ ಮನೆಯೊಂದರಲ್ಲಿ ಪ್ರತಿ ಭಾನುವಾರ ಹಿಂದೂಗಳನ್ನು ಕರೆಸಿ ಸಾಮೂಹಿಕ ಪ್ರಾರ್ಥನೆ ನಡೆಸಲಾಗುತ್ತಿತ್ತು ಎಂಬ ಆರೋಪ ಕೇಳಿ ಬಂದಿದೆ.

ಪಾದ್ರಿ ಮಣಿಕಂಠ ಮತ್ತವರ ತಂಡದವರು ಪ್ರತಿ ಭಾನುವಾರ ಸಾಮೂಹಿಕ ಪ್ರಾರ್ಥನೆಯನ್ನು ಆಯೋಜನೆ ಮಾಡುತ್ತಿದ್ದರು. ಪ್ರಾರ್ಥನೆ ಆಯೋಜಿಸುತ್ತಿದ್ದವರ ವಿರುದ್ಧ ಬಜರಂಗ ದಳ ಆಕ್ರೋಶ ವ್ಯಕ್ತಪಡಿಸಿದೆ. ಹಿಂದು ಧರ್ಮೀಯರಿಗೆ ಆಮಿಷವೊಡ್ಡಿ ಕ್ರೈಸ್ತ ಧರ್ಮಕ್ಕೆ ಮತಾಂತರ ಮಾಡುತ್ತಿದ್ದಾರೆ ಎಂದು ಆರೋಪ ಕೇಳಿ ಬಂದಿದೆ. ಹಿಂದುಗಳಿಗೆ ಬೈಬಲ್ ನೀಡಿ ಪ್ರಾರ್ಥನೆ ಮಾಡಿಸಲಾಗುತ್ತಿತ್ತು. ಹೀಗಾಗಿ ಖಚಿತ ಮಾಹಿತಿ ಮೇರೆಗೆ ಬಜರಂದಗಳದವರು ದಾಳಿ ಮಾಡಿ ಆಕ್ರೋಶವನ್ನು ಹೊರಹಾಕಿದರು. ವಿಷಯ ತಿಳಿದು ಸ್ಥಳಕ್ಕೆ ಬಂದ ತುಂಗಾ ನಗರ ಪೊಲೀಸರು ಪಾದ್ರಿ ಮಣಿಕಂಠ ಮತ್ತು ಸಂಗಡಿಗರನ್ನು ವಶಕ್ಕೆ ಪಡೆದಿದ್ದಾರೆ.

ಇದನ್ನೂ ಓದಿ: ಕಲಬುರಗಿ: ಮಾನಸಿಕ ಅಸ್ವಸ್ಥ ರೋಗಿಯ ಮೇಲೆ ಅತ್ಯಾಚಾರ; ಕಾಮುಕನನ್ನ ಬಂಧಿಸಿದ ಪೊಲೀಸರು

ಶಿವಮೊಗ್ಗ ಡಿಸಿ ಕಚೇರಿ ಆವರಣದಲ್ಲಿ ನಿಂತು ಆಜಾನ್ ಕೂಗಿದ ಯುವಕ

ಶಿವಮೊಗ್ಗ: ಜಿಲ್ಲೆಯ ಡಿಸಿ ಕಚೇರಿ ಆವರಣದಲ್ಲಿ(Shivamogga DC Office) ನಿಂತು ಯುವಕನೋರ್ವ ಆಜಾನ್(Azaan) ಕೂಗಿದ ಘಟನೆ ನಡೆದಿದ್ದು ಸ್ಥಳೀಯರ ಮೊಬೈಲ್​ನಲ್ಲಿ ದೃಶ್ಯ ಸೆರೆಯಾಗಿದೆ. ಕೆಎಸ್​ ಈಶ್ವರಪ್ಪ(KS Eshwarappa) ಆಜಾನ್ ಬಗ್ಗೆ ನೀಡಿದ್ದ ಹೇಳಿಕೆಯನ್ನು ಖಂಡಿಸಿ ಎರಡು ದಿನಗಳ ಹಿಂದೆ ಜಿಲ್ಲಾಧಿಕಾರಿ ಕಚೇರಿ ಮುಂದೆ ಮುಸ್ಲಿಮರು ಪ್ರತಿಭಟನೆ ನಡೆಸಿದ್ದರು. ಈ ವೇಳೆ ಯುವಕ ಕಚೇರಿ ಆವರಣದಲ್ಲಿ ನಿಂತು ಆಜಾನ್ ಕೂಗಿದ್ದ. ವಿಡಿಯೋ ವೈರಲ್ ಆಗಿದೆ.

ಆಜಾನ್ ಹಾಗೂ ಅಲ್ಲಾಹು ಬಗ್ಗೆ ಮಾಜಿ‌ ಸಚಿವ ಈಶ್ವರಪ್ಪ ಅವಹೇಳನ ಮಾಡಿದ ಆರೋಪ ಹಿನ್ನೆಲೆ ಶಿವಮೊಗ್ಗದ ಜಿಲ್ಲಾಧಿಕಾರಿ ಕಚೇರಿ ಎದುರು ಮುಸ್ಲಿಂ ಸಮುದಾಯದವರು ಪ್ರತಿಭಟನೆ ನಡೆಸಿದ್ದರು. ಈಶ್ವರಪ್ಪ ವಿರುದ್ದ ಘೋಷಣೆ ಕೂಗಿ ಆಕ್ರೋಶ ಹಾಕಿದ್ದರು. ಪ್ರತಿಭಟನೆ ವೇಳೆ ಮುಸ್ಲಿಂ ಯುವಕನೊಬ್ಬ ಜಿಲ್ಲಾಧಿಕಾರಿ ಕಚೇರಿ ಮೇಲೆ ಹತ್ತಿ ಆಜಾನ್ ಕೂಗಿ ಉದ್ದಟತನ ಪ್ರದರ್ಶಿಸಿದ್ದ. ಎರಡು ದಿನಗಳ ಹಿಂದೆ ನಡೆದಿದ್ದ ಈ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಇನ್ನು ಯುವಕ ಆಜಾನ್ ಕೂಗುತ್ತಿದ್ದಂತೆ ಪೊಲೀಸರು ವಿರೋಧ ವ್ಯಕ್ತಪಡಿಸಿದ್ದು ಈ ವೇಳೆ ಪೊಲೀಸರು ಹಾಗು ಪ್ರತಿಭಟನಾಕಾರರ ನಡುವೆ ಮಾತಿನ ಚಕಮಕಿ ನಡೆದಿತ್ತು. ಜಿಲ್ಲಾಧಿಕಾರಿ ಕಚೇರಿ ಮೇಲೆ ಆಜಾನ್ ಕೂಗದಂತೆ ಪೊಲೀಸರು ತಾಕೀತು ಮಾಡಿದ್ದರು. ಆಜಾನ್ ಬಗ್ಗೆ ಮಾತನಾಡುವುದಕ್ಕೆ ಈಶ್ವರಪ್ಪ ಯಾರು? ಇವತ್ತು ಇಲ್ಲಿ ಕೂಗಿದ್ದೇವೆ ನಾಳೆ ವಿಧಾನಸೌಧದಲ್ಲಿ ಕೂಗುತ್ತೇವೆ. ಇದು ತಾಯಿ ಬಗ್ಗೆ ಮಾತನಾಡಿದ್ದಲ್ಲ, ಅಲ್ಲ ಬಗ್ಗೆ ಮಾತನಾಡಿದ್ದು ಎಂದು ಮತ್ತೋರ್ವ ಯುವಕ ಆಕ್ರೋಶ ಹೊರ ಹಾಕಿದ್ದ. ಬಳಿಕ ಮುಸ್ಲಿಂ ಮುಖಂಡರೆ ಮುಂದೆ ಬಂದು ಜನರಿಗೆ ಬುದ್ದಿ ಹೇಳಿ ಯುವಕನಿಗೆ ಬೈದು ಪರಿಸ್ಥಿತಿ ನಿಯಂತ್ರಿಸಿದ್ದರು. ನಂತರ ಪ್ರತಿಭಟನಾಕಾರರನ್ನು ಪೊಲೀಸರು ಸ್ಥಳದಿಂದ ವಾಪಸ್ ಕಳುಹಿಸಿದ್ದರು.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 1:01 pm, Sun, 19 March 23

Follow Us
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
SSLC ಬೋರ್ಡ್ ಎಡವಟ್ಟಿಗೆ ಪ್ರತಿಭಾವಂತ ಅಂಧ ವಿದ್ಯಾರ್ಥಿನಿ ಫೇಲ್
SSLC ಬೋರ್ಡ್ ಎಡವಟ್ಟಿಗೆ ಪ್ರತಿಭಾವಂತ ಅಂಧ ವಿದ್ಯಾರ್ಥಿನಿ ಫೇಲ್