Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೌಡಿಗೆ ಕಾಲಿಗೆ ಗುಂಡೇಟು; ಮಟ ಮಟ ಮಧ್ಯಾಹ್ನವೇ ದಾಳಿ ಮಾಡಿದ್ದ ರೌಡಿ ಶೀಟರ್ ಪೊಲೀಸ್​ ಬಲೆಗೆ

ಕಳೆದ ಮೂರು ದಿನಗಳ ಹಿಂದೆ ಶಿವಮೊಗ್ಗ ನಗರದಲ್ಲಿ ಹಾಡು ಹಗಲೇ ರೌಡಿಗಳು ಅಟ್ಟಹಾಸ ಮೆರೆದಿದ್ದರು. ರೌಡಿ ಮತ್ತು ಸಹಚರರು ಮಟ ಮಟ ಮಧ್ಯಾಹ್ನವೇ ಮಾರಕಾಸ್ತ್ರಗಳಿಂದ ವ್ಯಕ್ತಿ ಮೇಲೆ ದಾಳಿ ಮಾಡಿದ್ದರು. ಈ ದಾಳಿ ನಡದು ಮೂರು ದಿನಗಳ ಬಳಿಕ ರೌಡಿಸಂ ಖದರ್ ತೋರಿಸಿದ್ದ ರೌಡಿ ಕಾಲಿಗೆ ಪೊಲೀಸರು ಗುಂಟೇಟು ಹೊಡೆದಿದ್ದಾರೆ.

ರೌಡಿಗೆ ಕಾಲಿಗೆ ಗುಂಡೇಟು; ಮಟ ಮಟ ಮಧ್ಯಾಹ್ನವೇ ದಾಳಿ ಮಾಡಿದ್ದ ರೌಡಿ ಶೀಟರ್ ಪೊಲೀಸ್​ ಬಲೆಗೆ
ಆರೋಪಿ. ಎಸ್​ಪಿ
Follow us
Basavaraj Yaraganavi
| Updated By: ಕಿರಣ್ ಹನುಮಂತ್​ ಮಾದಾರ್

Updated on: Dec 28, 2023 | 9:28 PM

ಶಿವಮೊಗ್ಗ, ಡಿ.28: ನಗರದ ಫ್ರೀಡಂ ಪಾರ್ಕ್​ನಲ್ಲಿ ಡಿಸೆಂಬರ್​ 25 ರ ಮಧ್ಯಾಹ್ನ ಶಶಿ ಎಂಬಾತನ ಮೇಲೆ ಮೂವರು ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದರು. ಗಾಯಗೊಂಡಿರುವ ವ್ಯಕ್ತಿಯನ್ನು ಶಿವಮೊಗ್ಗ(Shivamogga)ದ ಮೆಗ್ಗಾನ್ ಜಿಲ್ಲಾಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಫ್ರೀಡಂ ಪಾರ್ಕ್​ನಲ್ಲಿರುವ ವಾಕಿಂಗ್ ಪಾತ್​ನ ಮೇಲೆ ಶಶಿಕುಮಾರ್ ಯುವಕ ನಡೆದುಕೊಂಡು ಹೋಗುತ್ತಿದ್ದ ವೇಳೆ ಬೈಕ್​ನಲ್ಲಿ ಬಂದ ಮೂವರು, ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದರು. ಈ ಘಟನೆ ನಡೆದು ಎರಡು ದಿನಗಳ ಬಳಿಕ ಇಂದು ಬೆಳಗಿನ ಜಾವ ಶಿವಮೊಗ್ಗ ತಾಲೂಕಿನ ತ್ಯಾಜವಳ್ಳಿಯಲ್ಲಿ ದಾಳಿ ಮಾಡಿದ ಆರೋಪಿ ರೌಡಿ ಶೀಟರ್ ಓಲಂಗ ಮಂಜುನಾಥ್​ನ ಮೇಲೆ ಪೊಲೀಸರು ಫೈರಿಂಗ್ ಮಾಡಿದ್ದಾರೆ.

ಪ್ರಕರಣದ ತನಿಖೆಯ ಕುರಿತು ಬೆಳಗಿನ ಜಾವ ಸ್ಥಳ ಮಹಜರಕ್ಕೆ ತೆರಳಿದ್ದ ವೇಳೆಯಲ್ಲಿ ಈ ಘಟನೆ ನಡೆದಿದ್ದು, ರೌಡಿಯು ಡ್ರ್ಯಾಗನ್​ನಿಂದ ಮೊದಲು ಪೊಲೀಸ್ ಪೇದೆ ಮೇಲೆ ಹಲ್ಲೆ ಮಾಡಿದ್ದಾನೆ. ಜಯನಗರ ಸಿಪಿಐ ಸಿದ್ದನಗೌಡ ವಾರ್ನಿಂಗ್ ಮಾಡಿದರೂ ರೌಡಿಯು ಕೇಳದೇ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ. ಮೊದಲು ಗಾಳಿಯಲ್ಲಿ ಗುಂಡು ಹಾರಿಸಿ ಬಳಿಕ ಆತನ ಕಾಲಿಗೆ ಗುಂಡೇಟು ಕೊಟ್ಟು ಪೊಲೀಸರು ರೌಡಿಯನ್ನು ಬಂಧಿಸಿದ್ದಾರೆ. ಗಾಯಾಳು ರೌಡಿಯನ್ನು ಶಿವಮೊಗ್ಗದ ಮೆಗ್ಗಾನ್ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಇದನ್ನೂ ಓದಿ:ಶಿವಮೊಗ್ಗ: ಅನೈತಿಕ ಸಂಬಂಧ ಪ್ರಶ್ನಿಸಿದ್ದಕ್ಕೆ ಕತ್ತು ಸೀಳಿ ಎರಡನೇ ಪತ್ನಿಯ ಕೊಲೆ

ಘಟನೆ  ವಿವರ

ಶಿವಮೊಗ್ಗದ ಜಟ್ ಪಟ್ ನಗರದಲ್ಲಿ ಮೂರು ದಿನಗಳ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ನಡೆದಿದೆ. ಕಾರ್ಯಕ್ರಮದಲ್ಲಿ ಆರ್ಕೆಸ್ಟ್ರಾದ ಹಾಡಿನ ವಿಚಾರದಲ್ಲಿ ಶಶಿಕುಮಾರ್ ಮತ್ತು ಬೊಮ್ಮಕಟ್ಟೆಯ ರೌಡಿಶೀಟರ್ ಮಂಜುನಾಥ್ ಓಲಂಗ ಗ್ಯಾಂಗ್ ನಡುವೆ ಕಿರಿಕ್ ಆಗಿತ್ತು. ಇದೇ ಗಲಾಟೆಯನ್ನು ಮುಂದೆ ಇಟ್ಟುಕೊಂಡು ಮಂಜುನಾಥ್ ಮತ್ತು ಆತನ ಸಹಚರರು ಸೇರಿಕೊಂಡು ಶಶಿ ಕುಮಾರ್ ಮೇಲೆ ಮಾರಣಾಂತಿಕ ದಾಳಿ ಮಾಡಿದ್ದರು. ನಂತರ ಇಂದು ಮುಂಜಾನೆ ಪೊಲೀಸರ ಮೇಲೆ ಅಟ್ಯಾಕ್ ಮಾಡಲು ಹೋಗಿದ್ದ ರೌಡಿಯು, ಈಗ ಕಾಲಿಗೆ ಖಾಕಿಯಿಂದ ಗುಂಡೇಟು ತಿಂದು ಆಸ್ಪತ್ರೆ ಪಾಲಾಗಿದ್ದಾನೆ. ಇತನ ಮೇಲೆ 10 ಕ್ಕೂ ಹೆಚ್ಚು ಪ್ರಕರಣಗಳಿವೆ. ಕೊಲೆ ಮತ್ತು ಕೊಲೆಗೆ ಯತ್ನ ಸಂಬಂಧಿಸಿದಂತೆ ವಿವಿಧ ಕೇಸ್​ಗಳಿವೆ. ಇನ್ನು ರೌಡಿ ಕಾಲಿಗೆ ಬುಲೆಟ್ ಹಾರಿಸುವ ಮೂಲಕ ಖಡಕ್ ಎಚ್ಚರಿಕೆ ಶಿವಮೊಗ್ಗ ಪೊಲೀಸರು ರೌಡಿಗಳಿಗೆ ರವಾನಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಡಿಕೆ ಶಿವಕುಮಾರ್​ ಕೂಡ ಏಕನಾಥ ಶಿಂಧೆ ರೀತಿ ಆಗಬಹುದು: ಆರ್​ ಅಶೋಕ್
ಡಿಕೆ ಶಿವಕುಮಾರ್​ ಕೂಡ ಏಕನಾಥ ಶಿಂಧೆ ರೀತಿ ಆಗಬಹುದು: ಆರ್​ ಅಶೋಕ್
ಸದ್ಗುರು ವಾಸುದೇವ್ ಖುದ್ದಾಗಿ ಮನೆಗೆ ಬಂದು ಆಹ್ವಾನಿಸಿದ್ದರು: ಶಿವಕುಮಾರ್
ಸದ್ಗುರು ವಾಸುದೇವ್ ಖುದ್ದಾಗಿ ಮನೆಗೆ ಬಂದು ಆಹ್ವಾನಿಸಿದ್ದರು: ಶಿವಕುಮಾರ್
ಮಹಿಳಾ ಪಿಡಿಒಗೆ ಚಪ್ಪಲಿಯಿಂದ ಹೊಡೆದ ಗ್ರಾಮ ಪಂಚಾಯಿತಿ ಸದಸ್ಯೆ
ಮಹಿಳಾ ಪಿಡಿಒಗೆ ಚಪ್ಪಲಿಯಿಂದ ಹೊಡೆದ ಗ್ರಾಮ ಪಂಚಾಯಿತಿ ಸದಸ್ಯೆ
ಲೇಡಿ ಕಾನ್​ಸ್ಟೇಬಲ್​ರನ್ನು ಸಾರ್ವಜನಿಕವಾಗಿ ನಿಂದಿಸಿದ ಹೆಡ್ ಕಾನ್​ಸ್ಟೇಬಲ್
ಲೇಡಿ ಕಾನ್​ಸ್ಟೇಬಲ್​ರನ್ನು ಸಾರ್ವಜನಿಕವಾಗಿ ನಿಂದಿಸಿದ ಹೆಡ್ ಕಾನ್​ಸ್ಟೇಬಲ್
ವಿಧಾನಸೌಧ ಆವರಣದಲ್ಲಿ ಮೊದಲ ಬಾರಿಗೆ ಪುಸ್ತಕ ಮೇಳ ಆಯೋಜನೆ
ವಿಧಾನಸೌಧ ಆವರಣದಲ್ಲಿ ಮೊದಲ ಬಾರಿಗೆ ಪುಸ್ತಕ ಮೇಳ ಆಯೋಜನೆ
ಲಕ್ಷ್ಮಿ ಹೆಬ್ಬಾಳ್ಕರ್​ಗೆ ಭವತಿ ಭಿಕ್ಷಾಂ ದೇಹಿ ಎಂದ ವಿದ್ಯಾರ್ಥಿಗಳು !
ಲಕ್ಷ್ಮಿ ಹೆಬ್ಬಾಳ್ಕರ್​ಗೆ ಭವತಿ ಭಿಕ್ಷಾಂ ದೇಹಿ ಎಂದ ವಿದ್ಯಾರ್ಥಿಗಳು !
ರಾಜಸ್ಥಾನದ ಬಿಜೆಪಿ ಅಧ್ಯಕ್ಷರೆದುರೇ ಇಬ್ಬರು ನಾಯಕರ ಹೊಡೆದಾಟ; ವಿಡಿಯೋ ವೈರಲ್
ರಾಜಸ್ಥಾನದ ಬಿಜೆಪಿ ಅಧ್ಯಕ್ಷರೆದುರೇ ಇಬ್ಬರು ನಾಯಕರ ಹೊಡೆದಾಟ; ವಿಡಿಯೋ ವೈರಲ್
ಚಾಮುಂಡೇಶ್ವರಿ ದೇವಾಲಯಕ್ಕೆ ಬಂದ ದರ್ಶನ್ ಪುತ್ರ ವಿನೀಶ್
ಚಾಮುಂಡೇಶ್ವರಿ ದೇವಾಲಯಕ್ಕೆ ಬಂದ ದರ್ಶನ್ ಪುತ್ರ ವಿನೀಶ್
ಕಾಂಗ್ರೆಸ್ ಸಾಮೂಹಿಕ ನಾಯಕತ್ವದಲ್ಲಿ ವಿಶ್ವಾಸ ಹೊಂದಿದೆ: ಎಂಬಿ ಪಾಟೀಲ್
ಕಾಂಗ್ರೆಸ್ ಸಾಮೂಹಿಕ ನಾಯಕತ್ವದಲ್ಲಿ ವಿಶ್ವಾಸ ಹೊಂದಿದೆ: ಎಂಬಿ ಪಾಟೀಲ್
ಘಟನೆ ವಿವರಿಸಿದ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳು
ಘಟನೆ ವಿವರಿಸಿದ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳು