ಗೃಹ ಸಚಿವ ಆರಗ ಜ್ಞಾನೇಂದ್ರರವರ ಜಿಲ್ಲೆಯಲ್ಲೇ ಮಿತಿಮೀರಿದ ರೌಡಿಗಳ ಹಾವಳಿ! ಜೀವ ಬೆದರಿಕೆ ಹಾಕಿ ಹಣಕ್ಕೆ ಡಿಮ್ಯಾಂಡ್

ಜಮೀರ್ ಶಿವಮೊಗ್ಗದ ಶಾದ್ ನಗರದ ಉದ್ಯಮಿಯಾಗಿರುವ ಅನ್ಸರ್ ಎಂಬುವವರಿಗೆ ಜೀವ ಬೆದರಿಕೆ ಹಾಕಿ ಲಕ್ಷಾಂತರ ರೂಪಾಯಿ ಹಣ ನೀಡುವಂತೆ ಡಿಮ್ಯಾಂಡ್ ಹಾಕಿದ್ದಾನೆ.

ಗೃಹ ಸಚಿವ ಆರಗ ಜ್ಞಾನೇಂದ್ರರವರ ಜಿಲ್ಲೆಯಲ್ಲೇ ಮಿತಿಮೀರಿದ ರೌಡಿಗಳ ಹಾವಳಿ! ಜೀವ ಬೆದರಿಕೆ ಹಾಕಿ ಹಣಕ್ಕೆ ಡಿಮ್ಯಾಂಡ್
ಕುಖ್ಯಾತ ರೌಡಿ ಜಮೀರ್, ಉದ್ಯಮಿ ಮನೆ ಬಳಿ ರೌಡಿ ಸಹಚರರು ಬಂದು ಹೋಗೊರುವ ದೃಶ್ಯ
Edited By:

Updated on: Oct 27, 2021 | 12:58 PM

ಶಿವಮೊಗ್ಗ: ಗೃಹ ಸಚಿವ ಆರಗ ಜ್ಞಾನೇಂದ್ರರವರ ಜಿಲ್ಲೆಯಲ್ಲೇ ರೌಡಿಗಳ ಹಾವಳಿ ಮಿತಿಮೀರಿದೆ. ರೌಡಿಗಳು ಉದ್ಯಮಿಗಳಿಗೆ ಜೀವ ಬೆದರಿಕೆ ಹಾಕಿ ಹಣ ನೀಡುವಂತೆ ಡಿಮ್ಯಾಂಡ್ ಮಾಡುತ್ತಿದ್ದಾರೆ. ಶಿವಮೊಗ್ಗದ ಕುಖ್ಯಾತ ರೌಡಿ ಬಚ್ಚಾ ಅಲಿಯಾಸ್ ಜಮೀರ್ ಉದ್ಯಮಿಗಳಿಗೆ ಜೀವ ಬೆದರಿಕೆ ಹಾಕಿ ಹಣ ನೀಡಬೇಕೆಂದು ಬೇಡಿಕೆ ಇಟ್ಟಿದ್ದಾನೆ. ಹಣ ನೀಡುವಂತೆ ಹೆದರಿಸಲು ಜಮೀರ್ ಸಹಚರರು ಉದ್ಯಮಿ ಮನೆ ಮೇಲೆ ದಾಳಿ ನಡೆಸಿದ್ದು, ಈ ಪ್ರಕರಣ ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ದಾಖಲಾಗಿದೆ.

ಜಮೀರ್ ಶಿವಮೊಗ್ಗದ ಶಾದ್ ನಗರದ ಉದ್ಯಮಿಯಾಗಿರುವ ಅನ್ಸರ್ ಎಂಬುವವರಿಗೆ ಜೀವ ಬೆದರಿಕೆ ಹಾಕಿ ಲಕ್ಷಾಂತರ ರೂಪಾಯಿ ಹಣ ನೀಡುವಂತೆ ಡಿಮ್ಯಾಂಡ್ ಹಾಕಿದ್ದಾನೆ. ವಾಟ್ಸಾಪ್ ಕಾಲ್ ಮೂಲಕ ಬೆದರಿಕೆ ಹಾಕಿದ್ದಾನೆ. ಹೆದರಿಸಲು ಜಮೀರ್ ಸಹಚರರು ಉದ್ಯಮಿ ಮನೆ ಮೇಲೆ ಕಲ್ಲು ಮತ್ತು ಇಟ್ಟಿಗೆಗಳನ್ನು ಎಸೆದಿದ್ದಾರೆ. ಮನೆಯ ಮುಂಬಾಗಿಲಿಗೆ ಹಾನಿ ಮಾಡಿದ್ದಾರೆ. ಉದ್ಯಮಿ ಮನೆ ಬಳಿ ರೌಡಿ ಸಹಚರರು ಬಂದು ಹೋಗಿರುವುದು ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಕಳೆದ ಕೆಲವು ದಿನಗಳಿಂದ ಕುಖ್ಯಾತ ರೌಡಿಗಳ ಹೆಸರಿನಲ್ಲಿ ಉದ್ಯಮಿಗಳಿಗೆ ಬೆದರಿಕೆ ಹಾಕುತ್ತಿರುವ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮೊನ್ನೆಯಷ್ಟೇ ರೌಡಿ ಹೆಬ್ಬೆಟ್ ಮಂಜ ಹೆಸರಿನಲ್ಲಿ ಶಿವಮೊಗ್ಗ ಉದ್ಯಮಿಗೆ ಬೆದರಿಕೆ ಕರೆ ಬಂದಿತ್ತು. ಉದ್ಯಮಿಯಿಂದ 80 ಸಾವಿರ ರೂ. ಹಣವನ್ನು ವಸೂಲಿ ಮಾಡಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿ ಭಟ್ಕಳ ಮಹಿಳೆಯನ್ನು ಬಂಧಿಸಲಾಗಿತ್ತು.

ಇದನ್ನೂ ಓದಿ

ಕುಖ್ಯಾತ ರೌಡಿ ಹೆಬ್ಬೆಟ್ ಮಂಜನ ಹೆಸರಿನಲ್ಲಿ ಬೆದರಿಕೆ! ಪೊಲೀಸರ ಬಲೆಗೆ ಬಿದ್ದ ಭಟ್ಕಳ ಮಹಿಳೆ

ದೇಶದ ಭದ್ರತೆ ವಿಚಾರದಲ್ಲಿ ‌ರಾಜಿ ಮಾಡಿಕೊಳ್ಳಲ್ಲ, ಪಂಜಾಬ್ ಸರ್ಕಾರ ಬಿಎಸ್ಎಫ್ ಆದೇಶ ರಾಜಕೀಯ ಮಾಡಿದೆ- ಕ್ಯಾಪ್ಟನ್ ಅಮರೀಂದರ್