ವೀರ್ ಸಾವರ್ಕರ್ ಸ್ವಾತಂತ್ರ್ಯ ಹೋರಾಟಗಾರರೇ ಅಲ್ಲ! ಅವರ ಭಾವಚಿತ್ರ ಏಕೆ ಹಾಕಿದ್ದೀರಿ: ಶಿವಮೊಗ್ಗದಲ್ಲಿ ಎಸ್​ಡಿಪಿಐ ಕಾರ್ಯಕರ್ತರ ಆಕ್ರೋಶ

ವಿನಾಯಕ ದಾಮೋದರ ಸಾವರ್ಕರ್ ಸ್ವಾತಂತ್ರ್ಯ ಹೋರಾಟಗಾರರೇ ಅಲ್ಲ! ಅವರ ಭಾವಚಿತ್ರ ಏಕೆ ಹಾಕಿದ್ದೀರಿ‌ ಎಂದು ಎಸ್ಡಿಪಿಐ ಕಾರ್ಯಕರ್ತರು ಆಕ್ರೋಶ ಹೊರ ಹಾಕಿದ್ದಾರೆ. ಬ್ರಿಟೀಷರಿಗೆ ಕ್ಷಮಾಪಣಾ ಪತ್ರ ಬರೆದುಕೊಟ್ಟು ಬಂದ ಸಾವರ್ಕರ್ ಹೇಗೆ ಸ್ವಾತಂತ್ರ್ಯ ಹೋರಾಟಗಾರನಾಗಲು ಸಾಧ್ಯ ಎಂದು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ವೀರ್ ಸಾವರ್ಕರ್ ಸ್ವಾತಂತ್ರ್ಯ ಹೋರಾಟಗಾರರೇ ಅಲ್ಲ! ಅವರ ಭಾವಚಿತ್ರ ಏಕೆ ಹಾಕಿದ್ದೀರಿ: ಶಿವಮೊಗ್ಗದಲ್ಲಿ ಎಸ್​ಡಿಪಿಐ ಕಾರ್ಯಕರ್ತರ ಆಕ್ರೋಶ
Shivamogga City Center Mall Savarkar Photo controversy Police arrested a person
TV9kannada Web Team

| Edited By: Ayesha Banu

Aug 13, 2022 | 9:00 PM


ಶಿವಮೊಗ್ಗ: ಜಿಲ್ಲೆಯ ಸಿಟಿ ಸೆಂಟರ್ ಮಾಲ್ನಲ್ಲಿ ಗೊಂದಲದ ವಾತಾವರಣ ನಿರ್ಮಾಣವಾಗಿದೆ. 75ನೇ ವರ್ಷದ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಇಂದು ಶಿವಮೊಗ್ಗದ ಸಿಟಿ ಸೆಂಟರ್ ಮಾಲ್ನಲ್ಲಿ ಸ್ವಾತಂತ್ರ್ಯ ಹೋರಾಟಗಾರರ ಭಾವಚಿತ್ರ ಹಾಕಿ ಅಲಂಕರಿಸಲಾಗಿತ್ತು. ಭಾವಚಿತ್ರಗಳ ಮಧ್ಯದಲ್ಲಿ ವಿನಾಯಕ ದಾಮೋದರ ಸಾವರ್ಕರ್(Vinayak Damodar Savarkar) ಭಾವಚಿತ್ರ ಗಮನಿಸಿ ಎಸ್​ಡಿಪಿಐ ಕಾರ್ಯಕರ್ತರು(SDPI Workers) ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹೀಗಾಗಿ ಮಾಲ್ನಲ್ಲಿ ಗೊಂದಲದ ವಾತಾವರಣ ನಿರ್ಮಾಣವಾಗಿದೆ.

ವಿನಾಯಕ ದಾಮೋದರ ಸಾವರ್ಕರ್ ಸ್ವಾತಂತ್ರ್ಯ ಹೋರಾಟಗಾರರೇ ಅಲ್ಲ! ಅವರ ಭಾವಚಿತ್ರ ಏಕೆ ಹಾಕಿದ್ದೀರಿ‌ ಎಂದು ಎಸ್ಡಿಪಿಐ ಕಾರ್ಯಕರ್ತರು ಆಕ್ರೋಶ ಹೊರ ಹಾಕಿದ್ದಾರೆ. ಬ್ರಿಟೀಷರಿಗೆ ಕ್ಷಮಾಪಣಾ ಪತ್ರ ಬರೆದುಕೊಟ್ಟು ಬಂದ ಸಾವರ್ಕರ್ ಹೇಗೆ ಸ್ವಾತಂತ್ರ್ಯ ಹೋರಾಟಗಾರನಾಗಲು ಸಾಧ್ಯ ಎಂದು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಹಾಗೂ ಸಾವರ್ಕರ್ ಭಾವಚಿತ್ರ ತೆಗೆಯುವಂತೆ ಎಸ್ಡಿಪಿಐ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು ಕೇವಲ ಸ್ವಾತಂತ್ರಕ್ಕಾಗಿ ಜೀವಕೊಟ್ಟವರ ಭಾವಚಿತ್ರ ಹಾಕುವಂತೆ ಪಟ್ಟು ಹಿಡಿದಿದ್ದಾರೆ. ಈ ವೇಳೆ ಸಾವರ್ಕರ್ ಭಾವಚಿತ್ರದೊಂದಿಗೆ ಅಬ್ದುಲ್ ಕಲಾಂ ಆಜಾದ್ ಅವರ ಭಾವಚಿತ್ರ ಹಾಕುವುದಾಗಿ ಹೇಳಿ ಮಾಲ್‌ನ ಸಿಬ್ಬಂದಿ ಸಮಸ್ಯೆ ಪರಿಹರಿಸಿಕೊಂಡಿದ್ದಾರೆ.

ಎಸ್​ಡಿಪಿಐ ಕಾರ್ಯಕರ್ತರ ವಿರುದ್ಧ ಬಿಜೆಪಿ ಪ್ರತಿಭಟನೆ

ಇನ್ನು ಎಸ್​ಡಿಪಿಐ ಕಾರ್ಯಕರ್ತರ ಆಕ್ರೋಶ ಬೆನ್ನಲ್ಲೆ ಇತ್ತ ಸಿಟಿ ಸೆಂಟರ್ ಮಾಲ್ ಎದುರು ಬಿಜೆಪಿ ಪ್ರತಿಭಟನೆ ಶುರುವಾಗಿದೆ. ಇಂದು ಮಧ್ಯಾಹ್ನ ಸಿಟಿ ಸೆಂಟರ್ ಮಾಲ್ ನಲ್ಲಿ ಪ್ರತಿಭಟನೆ ನಡೆಸಿ ಸಾವರ್ಕರ್ ಭಾವಚಿತ್ರ ತೆಗೆಯುವಂತೆ ಎಸ್ ಡಿಪಿಐ ಕಾರ್ಯಕರ್ತರು ಒತ್ತಾಯಿಸಿದ್ದರು. ಈ ವೇಳೆ ಎಸ್​ಡಿಪಿಐ ಕಾರ್ಯಕರ್ತರು ಅವಾಚ್ಯ ಶಬ್ದಗಳನ್ನು ಬಳಸಿದ್ದರು. ಹೀಗಾಗಿ ಎಸ್​ಡಿಪಿಐ ಕಾರ್ಯಕರ್ತರ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸುವಂತೆ ಬಿಜೆಪಿ ಪ್ರತಿಭಟನೆ ನಡೆಸಿದೆ. ಎಸ್​ಡಿಪಿಐ ಕಾರ್ಯಕರ್ತರನ್ನು ಗಡಿಪಾರು ಮಾಡುವಂತೆ ಆಗ್ರಹಿಸಿದೆ. ಶಿವಮೊಗ್ಗ ಮಹಾನಗರ ಪಾಲಿಕೆಯಿಂದಲೇ ಸಿಟಿ ಸೆಂಟರ್ ಮಾಲ್‌ ನಲ್ಲಿ ಸ್ವಾತಂತ್ರ ಹೋರಾಟಗಾರರ ಭಾವಚಿತ್ರ ಪ್ರದರ್ಶನ ಆಯೋಜಿಸಲಾಗಿದೆ.

ಮಾಲ್​ಗೆ ನುಗ್ಗಲು ಯತ್ನಿಸಿದ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು

ಶಿವಮೊಗ್ಗದ ಅಮೀರ್ ಅಹಮದ್ ವೃತ್ತದ ಬಳಿಯಿರುವ ಸಿಟಿ ಸೆಂಟರ್ ಮಾಲ್ ಬಳಿ ಪಂಜಿನ ಮೆರವಣಿಗೆ ವೇಳೆ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಮಾಲ್​ಗೆ ನುಗ್ಗಲು ಯತ್ನಿಸಿದ್ದಾರೆ. ಇಂದು ಹಿಂದೂ ಜಾಗರಣಾ ವೇದಿಕೆಯಿಂದ ಯೋಧ ನಮನ ಪಂಜಿನ ಮೆರವಣಿಗೆ ಕಾರ್ಯಕ್ರಮ ಆಯೋಜಿಸಲಾಗಿತ್ತು. ಶಿವಮೊಗ್ಗದ ಶಿವಪ್ಪ ನಾಯಕ ವೃತ್ತದಿಂದ ಆರಂಭಗೊಂಡಿದ್ದ ಪಂಜಿನ ಮೆರವಣಿಗೆ ಸಿಟಿ ಸೆಂಟರ್ ಮಾಲ್ ಬಳಿ ಬರುತಿದ್ದಂತೆ ಕೆಲ ಕಾರ್ಯಕರ್ತರು ಮಾಲ್ ಆವರಣದ ಒಳಗೆ ನುಗ್ಗಿದ್ದಾರೆ. ಈ ವೇಳೆ ಮಾಲ್ ಆವರಣದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಹಿಂದೂಪರ ಕಾರ್ಯಕರ್ತರು ಮಾಲ್ ಒಳಗೆ ನುಗ್ಗುವುದನ್ನು ತಡೆಯಲು ಪೊಲೀಸರು ಹರಸಾಹಸ ಪಟ್ಟಿದ್ದಾರೆ. ಆದರೂ ಕೆಲ ಕಾರ್ಯಕರ್ತರು ಮಾಲ್ ಆವರಣದೊಳಗೆ ನುಗ್ಗಿದ್ದಾರೆ. ಈ ವೇಳೆ ಪೊಲೀಸರು ಕೆಲವರನ್ನು ವಶಕ್ಕೆ ಪಡೆದು ಕರೆದೊಯ್ದಿದ್ದಾರೆ.

ತಾಜಾ ಸುದ್ದಿ

Follow us on

Related Stories

Most Read Stories

Click on your DTH Provider to Add TV9 Kannada