ಶಿವಮೊಗ್ಗ ಡಿಸಿಸಿ ಬ್ಯಾಂಕ್ ಕಾಂಗ್ರೆಸ್ ತೆಕ್ಕೆಗೆ: ಖಾತೆ ತೆರೆದ ಈಶ್ವರಪ್ಪ, ಬಿಎಸ್​ವೈಗೆ ಮುಖಭಂಗ

ತೀವ್ರ ಕುತೂಹಲ ಮೂಡಿಸಿದ್ದ ಶಿವಮೊಗ್ಗ ಶಿವಮೊಗ್ಗ ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಮತ್ತೆ ಕಾಂಗ್ರೆಸ್ ಮೇಲುಗೈ ಸಾಧಿಸಿದೆ. ಇನ್ನು ಬಿಎಸ್​ವೈ ಕುಟುಂಬದ ರಾಜಕೀಯ ವಿರೋಧಿ ಕೆಎಸ್ ಈಶ್ವರಪ್ಪ ಬಣ ಒಂದು ಸ್ಥಾನದಲ್ಲಿ ಗೆದ್ದು ಕೊಂಚ ನಗೆ ಬೀರಿದೆ. ಇದರಿಂದ ಮಾಜಿ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ ಹಾಗೂ ಅವರ ಪುತ್ರರಾದ ಸಂಸದ ರಾಘವೇಂದ್ರ, ಶಾಸಕ ವಿಜಯೇಂದ್ರಗೆ ಮುಖಭಂಗವಾಗಿದೆ.

ಶಿವಮೊಗ್ಗ ಡಿಸಿಸಿ ಬ್ಯಾಂಕ್ ಕಾಂಗ್ರೆಸ್ ತೆಕ್ಕೆಗೆ: ಖಾತೆ ತೆರೆದ ಈಶ್ವರಪ್ಪ, ಬಿಎಸ್​ವೈಗೆ ಮುಖಭಂಗ
ಯಡಿಯೂರಪ್ಪ, ಈಶ್ವರಪ್ಪ
Follow us
| Updated By: ರಮೇಶ್ ಬಿ. ಜವಳಗೇರಾ

Updated on: Jun 28, 2024 | 7:23 PM

ಶಿವಮೊಗ್ಗ, (ಜೂನ್ 28): ಜಿದ್ದಾಜಿದ್ದಿಯಿಂದ ಕೂಡಿದ್ದ ಶಿವಮೊಗ್ಗ ಡಿಸಿಸಿ ಬ್ಯಾಂಕ್ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು, ಮತ್ತೊಮ್ಮೆ  ಕಾಂಗ್ರೆಸ್ ಮೇಲುಗೈ ಸಾಧಿಸಿದೆ. ಒಟ್ಟು 13ಕ್ಷೇತ್ರಗಳ ಪೈಕಿ ಒಂದು ಬಿಜೆಪಿ ಹಾಗು ಒಂದು ರಾಷ್ಟ್ರ ಭಕ್ತರ ಬಳಗ ಗೆಲುವು ಪಡೆದುಕೊಂಡಿದೆ ಉಳಿದ 11ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದೆ. ಈ ಮೂಲಕ ಶಿವಮೊಗ್ಗ ಡಿಸಿಸಿ ಬ್ಯಾಂಕ್ ಚುನಾವಣ ಫಲಿತಾಂಶದಲ್ಲಿ ಕಾಂಗ್ರೆಸ್ ಗೆದ್ದು ತನ್ನ ಹಿಡಿತದಲ್ಲಿ ಅಧಿಕಾರವನ್ನು ಉಳಿಸಿಕೊಂಡಿದೆ.

ಬಿಜೆಪಿಯಿಂದ ಶಿಕಾರಿಪುರದ ಡಿ.ಎಲ್.ಬಸವರಾಜ್​ ಮಾತ್ರ ಗೆಲುವು ಸಾಧಿಸಿದ್ದಾರೆ. ಇನ್ನು ಕಾಂಗ್ರೆಸ್​ ಬಿಜೆಪಿ ಪೈಪೋಟಿ ಮಧ್ಯ ಸ್ಪರ್ಧೆ ಮಾಡಿದ್ದ ಕೆ ಎಸ್.ಈಶ್ವರಪ್ಪನವರ ರಾಷ್ಟ್ರಭಕ್ತ ಬಳಗದ ಮಹಾಲಿಂಗಶಾಸ್ತ್ರಿ ಅವರು ಗೆಲುವಿನ ನಗೆ ಬೀರಿದ್ದಾರೆ. ಈ ಮೂಲಕ 11 ಸ್ಥಾನ ಗೆದ್ದಿರುವ ಕಾಂಗ್ರೆಸ್ ಮತ್ತೊಮ್ಮೆ ಶಿವಮೊಗ್ಗ ಡಿಸಿಸಿ ಬ್ಯಾಂಕ್ ಚುಕ್ಕಾಣಿ ಹಿಡಿಯುವಲ್ಲಿ ಯಶಸ್ವಿಯಾಗಿದೆ. ಬಿಜೆಪಿ ಕೇವಲ ಒಂದೇ ಸ್ಥಾನ ಗೆಲ್ಲುವಲ್ಲಿ ಸಫಲವಾಗಿದ್ದು, ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪ ಮತ್ತು ಅವರ ಪುತ್ರರಿಗೆ ಮುಖಭಂಗವಾದಂತಾಗಿದೆ.

ಇದನ್ನೂ ಓದಿ: ಡಿಸಿಸಿ ಬ್ಯಾಂಕ್ ನೇಮಕಾತಿಯಲ್ಲಿ ಗೋಲ್ ಮಾಲ್: ಕೋರ್ಟ್​ ಮೊರೆ ಹೋದ ಉದ್ಯೋಗ ವಂಚಿತರು

ಮೊದಲ ಪ್ರಯತ್ನದಲ್ಲೇ ಗೆಲುವು ಸಾಧಿಸಿದ ಬೇಳೂರು

ಸಾಗರ ವಿಧಾನಸಭಾ ಕ್ಷೇತ್ರದ ಶಾಸಕ ಗೋಪಾಲ ಕೃಷ್ಣ ಬೇಳೂರು ತಮ್ಮ ಪ್ರಥಮ ಪ್ರಯತ್ನದಲ್ಲಿ ಗೆಲುವು ಸಾಧಿಸಿ ಸಹಕಾರಿ ಕ್ಷೇತ್ರಕ್ಕೆ ಕಾಲಿಟ್ಟಿದ್ದಾರೆ. ಗೆದ್ದ ನಂತರ ಬಿಜೆಪಿ ಅವಧಿಯಲ್ಲಿ ನಡೆದ ನೇಮಕಾತಿ ಹಗರಣವನ್ನು ಅರ್ಧಕ್ಕೆ ಬಿಡುವು ಮಾತಿಲ್ಲ ತನಿಖೆ ನಡೆಸಿ ತಪ್ಪಿತಸ್ಥರಿಗೆ ಪಾಠ ಕಲಿಸುತ್ತೇವೆ ಎಂದು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ.

ರಾಷ್ಟ್ರ ಭಕ್ತರ ಬಳಗದ ಖಾತೆ ಓಪನ್

ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಮೊದಲ ಪ್ರಯತ್ನದಲ್ಲೇ ಮಹಾಲಿಂಗಯ್ಯ ಶಾಸ್ತ್ರಿ ಗೆಲುವು ಸಾಧಿಸಿದ್ದಾರೆ. ಈ ಮೂಲಕ ಲೋಕಸಭೆ ಹಾಗೂ ಪರಿಷತ್ ಚುನಾವಣೆಯಲ್ಲಿ ಸೋಲು ಕಂಡಿದ್ದ ರಾಷ್ಟ್ರ ಭಕ್ತರ ಬಳಗಕ್ಕೆ ಶಾಸ್ತ್ರಿಗಳು ಗೆಲುವನ್ನು ತಂದು ಕೊಟ್ಟು ಕಾರ್ಯಕರ್ತರಲ್ಲಿ ಹೊಸ ಹುಮ್ಮಸ್ಸು ತಂದಿದ್ದಾರೆ.

Congress Wins 11 Seats And BJP Gets 1 Seat In shivamogga dcc bank election

ಶಿವಮೊಗ್ಗ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ (ಡಿಸಿಸಿ ಬ್ಯಾಂಕ್)‌ ಆಡಳಿತ ಮಂಡಳಿ ನಿರ್ದೇಶಕರ ಆಯ್ಕೆಗೆ ಚುನಾವಣೆ ಇಂದು (ಜೂನ್ 28) ಮತದಾನ ನಡೆದಿತ್ತು. ಚುನಾವಣೆಯಲ್ಲಿ ಡಿಸಿಸಿ ಬ್ಯಾಂಕ್‌ನ ಹಾಲಿ ಅಧ್ಯಕ್ಷ ಆರ್‌.ಎಂ. ಮಂಜುನಾಥಗೌಡ  ಸೇರಿದಂತೆ ಹಾಲಿ 10 ನಿರ್ದೇಶಕರು, ಶಿಮುಲ್‌ನ ಆರು ಹಾಲಿ ನಿರ್ದೇಶಕರು ಸ್ಪರ್ಧೆ ಮಾಡಿದ್ದರು. ಅದರಲ್ಲೂ ಪ್ರಮುಖವಾಗಿ ಈ  ಬಾರಿ ಶಾಸಕ ಬೇಳೂರು ಗೋಪಾಲಕೃಷ್ಣ ಕಣಕ್ಕಿಳಿದಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

ತಾಜಾ ಸುದ್ದಿ
‘6 ತಿಂಗಳಲ್ಲಿ ಕನ್ನಡಕ್ಕೆ ಹೊಸ ಒಟಿಟಿ’: ಸಿಹಿ ಸುದ್ದಿ ನೀಡಿದ ಸಾಧು ಕೋಕಿಲ
‘6 ತಿಂಗಳಲ್ಲಿ ಕನ್ನಡಕ್ಕೆ ಹೊಸ ಒಟಿಟಿ’: ಸಿಹಿ ಸುದ್ದಿ ನೀಡಿದ ಸಾಧು ಕೋಕಿಲ
ಲೋಕಲ್​ನವರನ್ನ ಹಿಡಿದ್ರೆ ಮನೆಗೆ ಕಳಿಸ್ತೇನೆ: ಪೊಲೀಸ್​ ಮೇಲೆ ಮಂಜು ದರ್ಪ
ಲೋಕಲ್​ನವರನ್ನ ಹಿಡಿದ್ರೆ ಮನೆಗೆ ಕಳಿಸ್ತೇನೆ: ಪೊಲೀಸ್​ ಮೇಲೆ ಮಂಜು ದರ್ಪ
ಆಗಾಗ ಸಿಎಂ ಸಿದ್ದರಾಮಯ್ಯರ ತಲೆ ತಿನ್ನುತ್ತಿರಬೇಕು: ಜಗ್ಗೇಶ್
ಆಗಾಗ ಸಿಎಂ ಸಿದ್ದರಾಮಯ್ಯರ ತಲೆ ತಿನ್ನುತ್ತಿರಬೇಕು: ಜಗ್ಗೇಶ್
ಸಿದ್ದರಾಮಯ್ಯ-ಡಿಕೆಶಿ ವಿರಾಟ್ ಕೊಹ್ಲಿ-ರೋಹಿತ್ ಇದ್ದಂತೆ: ವಚನಾನಂದ ಶ್ರೀ
ಸಿದ್ದರಾಮಯ್ಯ-ಡಿಕೆಶಿ ವಿರಾಟ್ ಕೊಹ್ಲಿ-ರೋಹಿತ್ ಇದ್ದಂತೆ: ವಚನಾನಂದ ಶ್ರೀ
ಅಶೋಕ್​ ನಮ್ಮ ಪಕ್ಷದ ಆಂತರಿಕದ ಬಗ್ಗೆ ನಿಮಗ್ಯಾಕೆ ತೆವಲು?: ಪ್ರದೀಪ್​ ಈಶ್ವರ್
ಅಶೋಕ್​ ನಮ್ಮ ಪಕ್ಷದ ಆಂತರಿಕದ ಬಗ್ಗೆ ನಿಮಗ್ಯಾಕೆ ತೆವಲು?: ಪ್ರದೀಪ್​ ಈಶ್ವರ್
ಬಸ್​ ಪಲ್ಟಿ.. 20ಕ್ಕೂ ಹೆಚ್ಚು ಜನರಿಗೆ ಗಾಯ: ಆಕ್ಸಿಡೆಂಟ್ ಆಗಿದ್ದೇಗೆ?
ಬಸ್​ ಪಲ್ಟಿ.. 20ಕ್ಕೂ ಹೆಚ್ಚು ಜನರಿಗೆ ಗಾಯ: ಆಕ್ಸಿಡೆಂಟ್ ಆಗಿದ್ದೇಗೆ?
ಭೋರ್ಗರೆಯುತ್ತಿದೆ ಚುಂಚನಕಟ್ಟೆ ಜಲಪಾತ, ವೈಭವ ನೋಡಲು ಪ್ರವಾಸಿಗರ ದಂಡು
ಭೋರ್ಗರೆಯುತ್ತಿದೆ ಚುಂಚನಕಟ್ಟೆ ಜಲಪಾತ, ವೈಭವ ನೋಡಲು ಪ್ರವಾಸಿಗರ ದಂಡು
ಭಾರತ ಫೈನಲ್​ ಮ್ಯಾಚ್​ ಗೆಲುವಿಗೆ ಈ ಐದು ಕಾರಣಗಳು, ಯಾವುವು ಗೊತ್ತಾ?
ಭಾರತ ಫೈನಲ್​ ಮ್ಯಾಚ್​ ಗೆಲುವಿಗೆ ಈ ಐದು ಕಾರಣಗಳು, ಯಾವುವು ಗೊತ್ತಾ?
T20 World Cup: ದ್ರಾವಿಡ್ ಭಾವನಾತ್ಮಕ ಸಂಭ್ರಮಾಚರಣೆ ಹೇಗಿದೆ ನೋಡಿ
T20 World Cup: ದ್ರಾವಿಡ್ ಭಾವನಾತ್ಮಕ ಸಂಭ್ರಮಾಚರಣೆ ಹೇಗಿದೆ ನೋಡಿ
T20 World Cup: ಶಾಂಪೆನ್​ ಬಾಟಲ್​ ಓಪನ್​ ಮಾಡಿ ಸಂಭ್ರಮಿಸಿದ ನಾಯಕ ರೋಹಿತ್
T20 World Cup: ಶಾಂಪೆನ್​ ಬಾಟಲ್​ ಓಪನ್​ ಮಾಡಿ ಸಂಭ್ರಮಿಸಿದ ನಾಯಕ ರೋಹಿತ್