ಶಿವಮೊಗ್ಗ, (ಜೂನ್ 28): ಜಿದ್ದಾಜಿದ್ದಿಯಿಂದ ಕೂಡಿದ್ದ ಶಿವಮೊಗ್ಗ ಡಿಸಿಸಿ ಬ್ಯಾಂಕ್ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು, ಮತ್ತೊಮ್ಮೆ ಕಾಂಗ್ರೆಸ್ ಮೇಲುಗೈ ಸಾಧಿಸಿದೆ. ಒಟ್ಟು 13ಕ್ಷೇತ್ರಗಳ ಪೈಕಿ ಒಂದು ಬಿಜೆಪಿ ಹಾಗು ಒಂದು ರಾಷ್ಟ್ರ ಭಕ್ತರ ಬಳಗ ಗೆಲುವು ಪಡೆದುಕೊಂಡಿದೆ ಉಳಿದ 11ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದೆ. ಈ ಮೂಲಕ ಶಿವಮೊಗ್ಗ ಡಿಸಿಸಿ ಬ್ಯಾಂಕ್ ಚುನಾವಣ ಫಲಿತಾಂಶದಲ್ಲಿ ಕಾಂಗ್ರೆಸ್ ಗೆದ್ದು ತನ್ನ ಹಿಡಿತದಲ್ಲಿ ಅಧಿಕಾರವನ್ನು ಉಳಿಸಿಕೊಂಡಿದೆ.
ಬಿಜೆಪಿಯಿಂದ ಶಿಕಾರಿಪುರದ ಡಿ.ಎಲ್.ಬಸವರಾಜ್ ಮಾತ್ರ ಗೆಲುವು ಸಾಧಿಸಿದ್ದಾರೆ. ಇನ್ನು ಕಾಂಗ್ರೆಸ್ ಬಿಜೆಪಿ ಪೈಪೋಟಿ ಮಧ್ಯ ಸ್ಪರ್ಧೆ ಮಾಡಿದ್ದ ಕೆ ಎಸ್.ಈಶ್ವರಪ್ಪನವರ ರಾಷ್ಟ್ರಭಕ್ತ ಬಳಗದ ಮಹಾಲಿಂಗಶಾಸ್ತ್ರಿ ಅವರು ಗೆಲುವಿನ ನಗೆ ಬೀರಿದ್ದಾರೆ. ಈ ಮೂಲಕ 11 ಸ್ಥಾನ ಗೆದ್ದಿರುವ ಕಾಂಗ್ರೆಸ್ ಮತ್ತೊಮ್ಮೆ ಶಿವಮೊಗ್ಗ ಡಿಸಿಸಿ ಬ್ಯಾಂಕ್ ಚುಕ್ಕಾಣಿ ಹಿಡಿಯುವಲ್ಲಿ ಯಶಸ್ವಿಯಾಗಿದೆ. ಬಿಜೆಪಿ ಕೇವಲ ಒಂದೇ ಸ್ಥಾನ ಗೆಲ್ಲುವಲ್ಲಿ ಸಫಲವಾಗಿದ್ದು, ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಮತ್ತು ಅವರ ಪುತ್ರರಿಗೆ ಮುಖಭಂಗವಾದಂತಾಗಿದೆ.
ಇದನ್ನೂ ಓದಿ: ಡಿಸಿಸಿ ಬ್ಯಾಂಕ್ ನೇಮಕಾತಿಯಲ್ಲಿ ಗೋಲ್ ಮಾಲ್: ಕೋರ್ಟ್ ಮೊರೆ ಹೋದ ಉದ್ಯೋಗ ವಂಚಿತರು
ಸಾಗರ ವಿಧಾನಸಭಾ ಕ್ಷೇತ್ರದ ಶಾಸಕ ಗೋಪಾಲ ಕೃಷ್ಣ ಬೇಳೂರು ತಮ್ಮ ಪ್ರಥಮ ಪ್ರಯತ್ನದಲ್ಲಿ ಗೆಲುವು ಸಾಧಿಸಿ ಸಹಕಾರಿ ಕ್ಷೇತ್ರಕ್ಕೆ ಕಾಲಿಟ್ಟಿದ್ದಾರೆ. ಗೆದ್ದ ನಂತರ ಬಿಜೆಪಿ ಅವಧಿಯಲ್ಲಿ ನಡೆದ ನೇಮಕಾತಿ ಹಗರಣವನ್ನು ಅರ್ಧಕ್ಕೆ ಬಿಡುವು ಮಾತಿಲ್ಲ ತನಿಖೆ ನಡೆಸಿ ತಪ್ಪಿತಸ್ಥರಿಗೆ ಪಾಠ ಕಲಿಸುತ್ತೇವೆ ಎಂದು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ.
ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಮೊದಲ ಪ್ರಯತ್ನದಲ್ಲೇ ಮಹಾಲಿಂಗಯ್ಯ ಶಾಸ್ತ್ರಿ ಗೆಲುವು ಸಾಧಿಸಿದ್ದಾರೆ. ಈ ಮೂಲಕ ಲೋಕಸಭೆ ಹಾಗೂ ಪರಿಷತ್ ಚುನಾವಣೆಯಲ್ಲಿ ಸೋಲು ಕಂಡಿದ್ದ ರಾಷ್ಟ್ರ ಭಕ್ತರ ಬಳಗಕ್ಕೆ ಶಾಸ್ತ್ರಿಗಳು ಗೆಲುವನ್ನು ತಂದು ಕೊಟ್ಟು ಕಾರ್ಯಕರ್ತರಲ್ಲಿ ಹೊಸ ಹುಮ್ಮಸ್ಸು ತಂದಿದ್ದಾರೆ.
ಶಿವಮೊಗ್ಗ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ (ಡಿಸಿಸಿ ಬ್ಯಾಂಕ್) ಆಡಳಿತ ಮಂಡಳಿ ನಿರ್ದೇಶಕರ ಆಯ್ಕೆಗೆ ಚುನಾವಣೆ ಇಂದು (ಜೂನ್ 28) ಮತದಾನ ನಡೆದಿತ್ತು. ಚುನಾವಣೆಯಲ್ಲಿ ಡಿಸಿಸಿ ಬ್ಯಾಂಕ್‌ನ ಹಾಲಿ ಅಧ್ಯಕ್ಷ ಆರ್.ಎಂ. ಮಂಜುನಾಥಗೌಡ ಸೇರಿದಂತೆ ಹಾಲಿ 10 ನಿರ್ದೇಶಕರು, ಶಿಮುಲ್‌ನ ಆರು ಹಾಲಿ ನಿರ್ದೇಶಕರು ಸ್ಪರ್ಧೆ ಮಾಡಿದ್ದರು. ಅದರಲ್ಲೂ ಪ್ರಮುಖವಾಗಿ ಈ ಬಾರಿ ಶಾಸಕ ಬೇಳೂರು ಗೋಪಾಲಕೃಷ್ಣ ಕಣಕ್ಕಿಳಿದಿದ್ದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.