ಅಪ್ರಾಪ್ತೆಗೆ ಲೈಂಗಿಕ‌ ಕಿರುಕುಳ: ಅಪರಾಧಿಗೆ ದಂಡ ಸಹಿತ 20 ವರ್ಷ ಜೈಲುಶಿಕ್ಷೆ ವಿಧಿಸಿದ ಶಿವಮೊಗ್ಗ ಕೋರ್ಟ್

ಅಪ್ರಾಪ್ತ ಬಾಲಕಿಗೆ ಲೈಂಗಿಕ‌ ಕಿರುಕುಳ ನೀಡಿದ್ದ 27 ವರ್ಷದ ಯುವಕನಿಗೆ 20 ವರ್ಷ ಕಠಿಣಶಿಕ್ಷೆ ಹಾಗೂ ₹1.50 ಲಕ್ಷ ದಂಡ ವಿಧಿಸಿ ಆದೇಶ ಹೊರಡಿಸಲಾಗಿದೆ.

ಅಪ್ರಾಪ್ತೆಗೆ ಲೈಂಗಿಕ‌ ಕಿರುಕುಳ: ಅಪರಾಧಿಗೆ ದಂಡ ಸಹಿತ 20 ವರ್ಷ ಜೈಲುಶಿಕ್ಷೆ ವಿಧಿಸಿದ ಶಿವಮೊಗ್ಗ ಕೋರ್ಟ್
ಸಾಂದರ್ಭಿಕ ಚಿತ್ರ
Follow us
TV9 Web
| Updated By: ಆಯೇಷಾ ಬಾನು

Updated on: Aug 07, 2023 | 11:54 AM

ಶಿವಮೊಗ್ಗ, ಆ.07: ಅಪ್ರಾಪ್ತೆಗೆ ಲೈಂಗಿಕ‌ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿ ಅಪರಾಧಿಗೆ ದಂಡ ಸಹಿತ 20 ವರ್ಷ ಜೈಲುಶಿಕ್ಷೆ ವಿಧಿಸಿ ಶಿವಮೊಗ್ಗ ಕೋರ್ಟ್ ತೀರ್ಪು ನೀಡಿದೆ. ಅಪ್ರಾಪ್ತ ಬಾಲಕಿಗೆ ಲೈಂಗಿಕ‌ ಕಿರುಕುಳ ನೀಡಿದ್ದ 27 ವರ್ಷದ ಯುವಕನಿಗೆ 20 ವರ್ಷ ಕಠಿಣಶಿಕ್ಷೆ ಹಾಗೂ ₹1.50 ಲಕ್ಷ ದಂಡ ವಿಧಿಸಿ ಆದೇಶ ಹೊರಡಿಸಲಾಗಿದೆ. ಹಾಗೂ ದಂಡದ ಹಣ ಕಟ್ಟಲು ವಿಫಲವಾದರೆ ಹೆಚ್ಚುವರಿ 9 ತಿಂಗಳು ಸಾದಾ ಶಿಕ್ಷೆ ನೀಡಲು ತಿಳಿಸಿದೆ.

2022ರಲ್ಲಿ 14 ವರ್ಷದ ಬಾಲಕಿಗೆ ಲೈಂಗಿಕ‌ ಕಿರುಕುಳ ನೀಡಿದ್ದ ಆರೋಪ ಯುವಕನ ಮೇಲೆ ಕೇಳಿ ಬಂದಿತ್ತು. ಈ ಸಂಬಂಧ ಬಾಲಕಿಯ ತಂದೆ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ದೂರು ದಾಖಲಿಸಿಕೊಂಡು ತನಿಖೆ ನಡೆಸಿದ್ದ ಪೊಲೀಸರು ಆರೋಪಿ ವಿರುದ್ದ ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು. ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲಾ ನ್ಯಾಯಾಲಯ ಆರೋಪಿಗೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿದೆ. 1 ಲಕ್ಷದ 50 ಸಾವಿರ ದಂಡ ವಿಧಿಸಿ ತೀರ್ಪು ನೀಡಿದೆ‌.

ಇದನ್ನೂ ಓದಿ: ಪತ್ನಿಗೆ ಅಧ್ಯಕ್ಷ ಪಟ್ಟ ಕಟ್ಟಲು ಸದಸ್ಯರ ಹೈಜಾಕ್: ಸುತ್ತಾಡಿ ವಾಪಾಸ್ ಬರುವಾಗ ಅಪಘಾತ, ಇಬ್ಬರ ಸಾವು

ದೇವಸ್ಥಾನದಲ್ಲಿ ನಾಗರ ಹಾವು ಪ್ರತ್ಯಕ್ಷ

ಗದಗ ತಾಲೂಕಿನ ಚಿಂಚಲಿ ಗ್ರಾಮದ ಬಸವೇಶ್ವರ ದೇವಸ್ಥಾನದಲ್ಲಿ ನಾಗರ ಹಾವು ಪ್ರತ್ಯಕ್ಷವಾಗಿದೆ. ನಾಗರ ಹಾವು ಕಂಡು ಭಕ್ತರು ಭಯ ಭೀತರಾಗಿದ್ದಾರೆ. ಸೋಮವಾರ ಇರುವ ಕಾರಣ ಪೂಜೆ ಸಲ್ಲಿಸಲು ಆಗಮಿಸಿದ ಭಕ್ತರು ಆತಂಕಕ್ಕೆ ಒಳಗಾಗಿದ್ದಾರೆ. ಬಸವೇಶ್ವರ ದೇವಸ್ಥಾನಕ್ಕೆ ಆಗಮಿಸಿದ್ದ ನಾಗರ ಹಾವು ರಕ್ಷಣೆ ಮಾಡಲಾಗಿದೆ. ಉರಗ ತಜ್ಞ ಸುರೇಶ್ ಅವರು ನಾಗರ ಹಾವನ್ನು ರಕ್ಷಿಸಿದ್ದಾರೆ. ನಾಗರ ಹಾವು ಹಿಡಿದು ಗುಡ್ಡಗಾಡು ಪ್ರದೇಶಕ್ಕೆ ಬಿಟ್ಟು ಬರಲಾಯಿತು.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ