AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವಮೊಗ್ಗ ಏರ್​ಪೋರ್ಟ್​​​ಗೆ ಬಿಎಸ್​ ಯಡಿಯೂರಪ್ಪ ಹೆಸರಿಡಲು ನಿರ್ಧಾರ, ಪ್ರಧಾನಿ ಮೋದಿ ಉದ್ಘಾಟನೆ: ಸಿಎಂ ಬೊಮ್ಮಾಯಿ

ಶಿವಮೊಗ್ಗ ಏರ್​ಪೋರ್ಟ್​​​ಗೆ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹೆಸರಿಡಲು ನಿರ್ಧಾರ ಮಾಡಲಾಗಿದೆ. ಕೇಂದ್ರ ಸರ್ಕಾರಕ್ಕೆ ಈ ಪ್ರಸ್ತಾವನೆ ಕಳುಹಿಸಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.

ಶಿವಮೊಗ್ಗ ಏರ್​ಪೋರ್ಟ್​​​ಗೆ ಬಿಎಸ್​ ಯಡಿಯೂರಪ್ಪ ಹೆಸರಿಡಲು ನಿರ್ಧಾರ, ಪ್ರಧಾನಿ ಮೋದಿ ಉದ್ಘಾಟನೆ: ಸಿಎಂ ಬೊಮ್ಮಾಯಿ
ಬಿಎಸ್​ವೈ, ಶಿವಮೊಗ್ಗ ಏರ್​ಪೋರ್ಟ್
TV9 Web
| Edited By: |

Updated on: Feb 08, 2023 | 7:02 PM

Share

ಶಿವಮೊಗ್ಗ: ಶಿವಮೊಗ್ಗ ಏರ್​ಪೋರ್ಟ್​​​ಗೆ (Shimoga airport) ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹೆಸರಿಡಲು ನಿರ್ಧಾರ ಮಾಡಲಾಗಿದೆ. ಕೇಂದ್ರ ಸರ್ಕಾರಕ್ಕೆ ಈ ಪ್ರಸ್ತಾವನೆ ಕಳುಹಿಸಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು. ಜಿಲ್ಲೆಯ ಎನ್​ಇಎಸ್​​ ಮೈದಾನದಲ್ಲಿ ನಡೆಯುತ್ತಿರುವ ಸಮಾವೇಶದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಬಳಿಕ ಮಾತನಾಡಿ,ಬಿಎಸ್​​ವೈ ಪರಿಶ್ರಮದಿಂದ ವಿಮಾನ ನಿಲ್ದಾಣ ನಿರ್ಮಾಣ ಆಗಿದೆ. ಪ್ರಧಾನಿ ನರೇಂದ್ರ ಮೋದಿ ಶಿವಮೊಗ್ಗ ಏರ್​ಪೋರ್ಟ್​ ಉದ್ಘಾಟನೆ ಮಾಡ್ತಾರೆ ಎಂದರು. ಯಡಿಯೂರಪ್ಪ, ಈಶ್ವರಪ್ಪ ಶಿವಮೊಗ್ಗ ಅಭಿವೃದ್ಧಿಯ ರೂವಾರಿಗಳು. ಶಿವಮೊಗ್ಗ ರಾಜ್ಯದ ಭವಿಷ್ಯದ ನಗರ ಆಗಲಿದೆ ಎಂದು ಹೇಳಿದರು.

ಡಬಲ್​ ಇಂಜಿನ್​ ಸರ್ಕಾರದಿಂದ ಮಾತ್ರ ಶಾಶ್ವತ ಪರಿಹಾರ ಸಾಧ್ಯ

ಶರಾವತಿ ಸಂತ್ರಸ್ತರಿಗೆ ಶಾಶ್ವತ ಪರಿಹಾರ ನೀಡುತ್ತೇವೆ. ಡಬಲ್​ ಇಂಜಿನ್​ ಸರ್ಕಾರದಿಂದ ಮಾತ್ರ ಶಾಶ್ವತ ಪರಿಹಾರ ಸಾಧ್ಯ. ವಿಐಎಲ್​​ಎಲ್​ ಕಾರ್ಖಾನೆಯನ್ನು ಹಾಳು ಮಾಡಿದ್ದು ಕಾಂಗ್ರೆಸ್ ಪಕ್ಷ. ಕಾಂಗ್ರೆಸ್​ ನಾಯಕರು ಈಗ ಬಂದು ದೊಡ್ಡ ಭಾಷಣ ಮಾಡುತ್ತಿದ್ದಾರೆ. ಈ ದೇಶದಲ್ಲಿ ಭಾಷಣದಿಂದ ಯಾವುದೇ ಕೆಲಸ ಆಗಿಲ್ಲ. ವಿಐಎಲ್​​ಎಲ್​ ಕಾರ್ಖಾನೆ ವಿಚಾರವಾಗಿ ಮುಂದಿರ ಸಭೆ ನಡೆಸುವೆ. ಕಾರ್ಮಿಕರ ಹಿತ ಕಾಪಾಡುವುದಕ್ಕೆ ನಾನು ಬದ್ಧನಾಗಿದ್ದೇನೆ ಎಂದರು.

ಇದನ್ನೂ ಓದಿ: Karnataka Politics: ಚುನಾವಣಾ ಪೂರ್ವ ಸಿದ್ಧತಾ ಕಾರ್ಯಕ್ರಮಗಳಿಗೆ ಬಿಜೆಪಿ ಟೀಂ ರೆಡಿ; ಹಳೇ ಮೈಸೂರು ಮೊದಲ ಟಾರ್ಗೆಟ್​​​

ಜನರು ನಮ್ಮ ಅಭಿವೃದ್ಧಿ ಕಾರ್ಯಗಳನ್ನು ನೋಡಿ ಮತ ಹಾಕ್ತಾರೆ

ಇನ್ನು ಜೋಶಿ ಸಿಎಂ ಮಾಡಲು RSS​​​ ಹುನ್ನಾರ ಎಂಬ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ್ದು, ಹೆಚ್​.ಡಿ.ಕುಮಾರಸ್ವಾಮಿ ಹೇಳಿಕೆ ಬಗ್ಗೆ ನನಗೆ ನಂಬಿಕೆ ಇಲ್ಲ. ಈ ನಾಡು ಸ್ಥಾಪನೆ ಆಗಿ 75 ವರ್ಷ ಕಳೆದಿದೆ. ಕರ್ನಾಟಕದಲ್ಲಿ ಎಲ್ಲ ಸಮುದಾಯದವರಿಗೂ ಅಧಿಕಾರ ಸಿಕ್ಕಿದೆ. ಜನರು ನಮ್ಮ ಅಭಿವೃದ್ಧಿ ಕಾರ್ಯಗಳನ್ನು ನೋಡಿ ಮತ ಹಾಕ್ತಾರೆ. ಇಂತಹ ಜಾತಿಯ ವಿಚಾರದಲ್ಲಿ ತಲೆಕೆಡಿಸಿಕೊಳ್ಳುವುದಿಲ್ಲ. ಇಂತಹ ವಿಚಾರದಿಂದ ಯಾವುದೇ ಸಾಧನೆಯಾಗಲ್ಲ ಎಂದು ಹೇಳಿದರು.

ವಿಐಎಸ್​ಎಲ್ ಕಾರ್ಖಾನೆ ಉಳಿಸಿಕೊಳ್ಳುವ ನಿಟ್ಟಿನಲ್ಲಿ ಅಗತ್ಯ ಕ್ರಮ: ಬಿ.ಎಸ್​.ಯಡಿಯೂರಪ್ಪ

ಶಿವಮೊಗ್ಗ ಏರ್​ಪೋರ್ಟ್ ಉದ್ಘಾಟನೆ ಕುರಿತಾಗಿ ಮಾಜಿ ಸಿಎಂ ಬಿ.ಎಸ್​.ಯಡಿಯೂರಪ್ಪ ಮಾತನಾಡಿ, ಅಂದಿನ ಸಮಾವೇಶದಲ್ಲಿ 2ರಿಂದ 3 ಲಕ್ಷ ಜನ ಪಾಲ್ಗೊಳ್ಳಲಿದ್ದಾರೆ. ನಮ್ಮ ಅಭಿವೃದ್ಧಿ ಕೆಲಸಗಳು ಇಲ್ಲಿಗೆ ನಿಲ್ಲುವುದಿಲ್ಲ. ಬಿಜೆಪಿ ಸರ್ಕಾರದಲ್ಲಿ ಇನ್ನೂ ಹೆಚ್ಚು ಅಭಿವೃದ್ಧಿ ಕೆಲಸ ನಡೆಯುತ್ತದೆ. ವಿಐಎಸ್​ಎಲ್ ಕಾರ್ಖಾನೆ ಉಳಿಸಿಕೊಳ್ಳುವ ನಿಟ್ಟಿನಲ್ಲಿ ಅಗತ್ಯ ಕ್ರಮಗೊಳ್ಳಲಾಗುವುದು. ಪ್ರವಾಸಿ ಮಂದಿರದಲ್ಲಿ ಸಿಎಂ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದರು.

ಇದನ್ನೂ ಓದಿ: ಡಿ.ಕೆ ಶಿವಕುಮಾರ್​ಗೆ ಮತ್ತೆ ಇ.ಡಿ ಶಾಕ್​, ವಿಚಾರಣೆಗೆ ಹಾಜರಾಗುವಂತೆ ಪುತ್ರಿ ಐಶ್ವರ್ಯಗೆ ನೋಟಿಸ್ ನೀಡಿದ CBI

ಅಗತ್ಯ ಕ್ರಮಗಳನ್ನ ಕೈಗೊಳ್ಳುವುದಾಗಿ ಸಭೆಯಲ್ಲಿ ಸಿಎಂ ಬೊಮ್ಮಾಯಿ ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ VISL ಕಾರ್ಮಿಕರು ಆತಂಕಪಡುವ ಅಗತ್ಯವಿಲ್ಲ. ಫೆ.27ರ ಮುನ್ನ ರಾಜ್ಯ ಸರ್ಕಾರ ಒಳ್ಳೆಯ ನಿರ್ಧಾರ ತೆಗೆದುಕೊಳ್ಳಲಿದೆ. ಫೆ.27ರಂದು ಏರ್​ಪೋರ್ಟ್ ಉದ್ಘಾಟನೆಗೆ ಪಿಎಂ ಮೋದಿ ಬರುತ್ತಾರೆ ಎಂದು ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್