ಶಿವಮೊಗ್ಗ: ಶಿವಮೊಗ್ಗ ಏರ್ಪೋರ್ಟ್ಗೆ (Shimoga airport) ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹೆಸರಿಡಲು ನಿರ್ಧಾರ ಮಾಡಲಾಗಿದೆ. ಕೇಂದ್ರ ಸರ್ಕಾರಕ್ಕೆ ಈ ಪ್ರಸ್ತಾವನೆ ಕಳುಹಿಸಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು. ಜಿಲ್ಲೆಯ ಎನ್ಇಎಸ್ ಮೈದಾನದಲ್ಲಿ ನಡೆಯುತ್ತಿರುವ ಸಮಾವೇಶದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಬಳಿಕ ಮಾತನಾಡಿ,ಬಿಎಸ್ವೈ ಪರಿಶ್ರಮದಿಂದ ವಿಮಾನ ನಿಲ್ದಾಣ ನಿರ್ಮಾಣ ಆಗಿದೆ. ಪ್ರಧಾನಿ ನರೇಂದ್ರ ಮೋದಿ ಶಿವಮೊಗ್ಗ ಏರ್ಪೋರ್ಟ್ ಉದ್ಘಾಟನೆ ಮಾಡ್ತಾರೆ ಎಂದರು. ಯಡಿಯೂರಪ್ಪ, ಈಶ್ವರಪ್ಪ ಶಿವಮೊಗ್ಗ ಅಭಿವೃದ್ಧಿಯ ರೂವಾರಿಗಳು. ಶಿವಮೊಗ್ಗ ರಾಜ್ಯದ ಭವಿಷ್ಯದ ನಗರ ಆಗಲಿದೆ ಎಂದು ಹೇಳಿದರು.
ಶರಾವತಿ ಸಂತ್ರಸ್ತರಿಗೆ ಶಾಶ್ವತ ಪರಿಹಾರ ನೀಡುತ್ತೇವೆ. ಡಬಲ್ ಇಂಜಿನ್ ಸರ್ಕಾರದಿಂದ ಮಾತ್ರ ಶಾಶ್ವತ ಪರಿಹಾರ ಸಾಧ್ಯ. ವಿಐಎಲ್ಎಲ್ ಕಾರ್ಖಾನೆಯನ್ನು ಹಾಳು ಮಾಡಿದ್ದು ಕಾಂಗ್ರೆಸ್ ಪಕ್ಷ. ಕಾಂಗ್ರೆಸ್ ನಾಯಕರು ಈಗ ಬಂದು ದೊಡ್ಡ ಭಾಷಣ ಮಾಡುತ್ತಿದ್ದಾರೆ. ಈ ದೇಶದಲ್ಲಿ ಭಾಷಣದಿಂದ ಯಾವುದೇ ಕೆಲಸ ಆಗಿಲ್ಲ. ವಿಐಎಲ್ಎಲ್ ಕಾರ್ಖಾನೆ ವಿಚಾರವಾಗಿ ಮುಂದಿರ ಸಭೆ ನಡೆಸುವೆ. ಕಾರ್ಮಿಕರ ಹಿತ ಕಾಪಾಡುವುದಕ್ಕೆ ನಾನು ಬದ್ಧನಾಗಿದ್ದೇನೆ ಎಂದರು.
ಇದನ್ನೂ ಓದಿ: Karnataka Politics: ಚುನಾವಣಾ ಪೂರ್ವ ಸಿದ್ಧತಾ ಕಾರ್ಯಕ್ರಮಗಳಿಗೆ ಬಿಜೆಪಿ ಟೀಂ ರೆಡಿ; ಹಳೇ ಮೈಸೂರು ಮೊದಲ ಟಾರ್ಗೆಟ್
ಇನ್ನು ಜೋಶಿ ಸಿಎಂ ಮಾಡಲು RSS ಹುನ್ನಾರ ಎಂಬ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ್ದು, ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆ ಬಗ್ಗೆ ನನಗೆ ನಂಬಿಕೆ ಇಲ್ಲ. ಈ ನಾಡು ಸ್ಥಾಪನೆ ಆಗಿ 75 ವರ್ಷ ಕಳೆದಿದೆ. ಕರ್ನಾಟಕದಲ್ಲಿ ಎಲ್ಲ ಸಮುದಾಯದವರಿಗೂ ಅಧಿಕಾರ ಸಿಕ್ಕಿದೆ. ಜನರು ನಮ್ಮ ಅಭಿವೃದ್ಧಿ ಕಾರ್ಯಗಳನ್ನು ನೋಡಿ ಮತ ಹಾಕ್ತಾರೆ. ಇಂತಹ ಜಾತಿಯ ವಿಚಾರದಲ್ಲಿ ತಲೆಕೆಡಿಸಿಕೊಳ್ಳುವುದಿಲ್ಲ. ಇಂತಹ ವಿಚಾರದಿಂದ ಯಾವುದೇ ಸಾಧನೆಯಾಗಲ್ಲ ಎಂದು ಹೇಳಿದರು.
ಶಿವಮೊಗ್ಗ ಏರ್ಪೋರ್ಟ್ ಉದ್ಘಾಟನೆ ಕುರಿತಾಗಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಮಾತನಾಡಿ, ಅಂದಿನ ಸಮಾವೇಶದಲ್ಲಿ 2ರಿಂದ 3 ಲಕ್ಷ ಜನ ಪಾಲ್ಗೊಳ್ಳಲಿದ್ದಾರೆ. ನಮ್ಮ ಅಭಿವೃದ್ಧಿ ಕೆಲಸಗಳು ಇಲ್ಲಿಗೆ ನಿಲ್ಲುವುದಿಲ್ಲ. ಬಿಜೆಪಿ ಸರ್ಕಾರದಲ್ಲಿ ಇನ್ನೂ ಹೆಚ್ಚು ಅಭಿವೃದ್ಧಿ ಕೆಲಸ ನಡೆಯುತ್ತದೆ. ವಿಐಎಸ್ಎಲ್ ಕಾರ್ಖಾನೆ ಉಳಿಸಿಕೊಳ್ಳುವ ನಿಟ್ಟಿನಲ್ಲಿ ಅಗತ್ಯ ಕ್ರಮಗೊಳ್ಳಲಾಗುವುದು. ಪ್ರವಾಸಿ ಮಂದಿರದಲ್ಲಿ ಸಿಎಂ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದರು.
ಇದನ್ನೂ ಓದಿ: ಡಿ.ಕೆ ಶಿವಕುಮಾರ್ಗೆ ಮತ್ತೆ ಇ.ಡಿ ಶಾಕ್, ವಿಚಾರಣೆಗೆ ಹಾಜರಾಗುವಂತೆ ಪುತ್ರಿ ಐಶ್ವರ್ಯಗೆ ನೋಟಿಸ್ ನೀಡಿದ CBI
ಅಗತ್ಯ ಕ್ರಮಗಳನ್ನ ಕೈಗೊಳ್ಳುವುದಾಗಿ ಸಭೆಯಲ್ಲಿ ಸಿಎಂ ಬೊಮ್ಮಾಯಿ ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ VISL ಕಾರ್ಮಿಕರು ಆತಂಕಪಡುವ ಅಗತ್ಯವಿಲ್ಲ. ಫೆ.27ರ ಮುನ್ನ ರಾಜ್ಯ ಸರ್ಕಾರ ಒಳ್ಳೆಯ ನಿರ್ಧಾರ ತೆಗೆದುಕೊಳ್ಳಲಿದೆ. ಫೆ.27ರಂದು ಏರ್ಪೋರ್ಟ್ ಉದ್ಘಾಟನೆಗೆ ಪಿಎಂ ಮೋದಿ ಬರುತ್ತಾರೆ ಎಂದು ಹೇಳಿದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.