ಶಿವಮೊಗ್ಗ: ತೀವ್ರ ಸ್ವರೂಪ ಪಡೆದ ಈದ್ ಮಿಲಾದ್​ ಕಟೌಟ್ ವಿವಾದ: ಶೇರ್ ಟಿಪ್ಪು ಎಂದು ರಕ್ತದಲ್ಲೇ ಬರೆದ ಮುಸ್ಲಿಂ ಯುವಕ

ಈದ್‌ ಮಿಲಾದ್‌ ಮೆರವಣಿಗೆ ಹಿನ್ನಲೆ ಶಿವಮೊಗ್ಗದ ರಾಗಿಗುಡ್ಡ- ಶಾಂತಿನಗರದಲ್ಲಿ ಅಳವಡಿಸಲಾಗಿದ್ದ ಕಟೌಟ್ ವಿವಾದಕ್ಕೆ ಕಾರಣವಾಗಿದೆ. ಕಟೌಟ್​ಗೆ ಪೊಲೀಸರು ಬಳಿ ಬಣ್ಣ ಹಚ್ಚಿದ್ದು ಮುಸ್ಲಿಂ ಯುವಕನೋರ್ವ ಕೈ ಕೊಯ್ದುಕೊಂಡು ಬಿಳಿ ಬಣ್ಣದ ಮೇಲೆಯೇ ರಕ್ತದಲ್ಲಿ "ಶೇರ್ ಟಿಪ್ಪು" ಎಂದು ಬರೆದಿದ್ದಾನೆ.

Follow us
| Updated By: ಆಯೇಷಾ ಬಾನು

Updated on:Oct 01, 2023 | 3:19 PM

ಶಿವಮೊಗ್ಗ, ಅ.01: ಈದ್‌ ಮಿಲಾದ್‌ (Eid Milad Un Nabi) ಮೆರವಣಿಗೆ ಹಿನ್ನಲೆ ಶಿವಮೊಗ್ಗದ ರಾಗಿಗುಡ್ಡ- ಶಾಂತಿನಗರದಲ್ಲಿ ಟಿಪ್ಪು ಸುಲ್ತಾನ್ ಕಟೌಟ್ (CutOut) ಅಳವಡಿಸಲಾಗಿತ್ತು. ಈ ವಿಚಾರ ಗಲಾಟೆ, ಗೊಂದಲಕ್ಕೆ ಕಾರಣವಾಗುತ್ತಿದ್ದಂತೆ ಸ್ಥಳದಲ್ಲಿ ಜನ ಗುಂಪುಗೂಡಿದ್ದರು. ಶಿವಮೊಗ್ಗ – ಹೊನ್ನಾಳಿ ರಸ್ತೆಯಲ್ಲಿ ಪ್ರತಿಭಟನೆಗಳು ಶುರುವಾದವು. ಇದರಿಂದ ಎಚ್ಚೆತ್ತ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಸಾರ್ವಜನಿಕರಿಗೆ ಮನವರಿಕೆ ಮಾಡಿ, ಪರಿಸ್ಥಿತಿ ತಿಳಿಗೊಳಿಸಿದರು. ಬಳಿಕ ಮುಸ್ಲಿಂ ಮುಖಂಡರ ಜೊತೆ ಎಸ್ಪಿ ಮಿಥುನ್ (SP Mithun Kumar) ಮಾತುಕತೆ ನಡೆಸಿ ಟಿಪ್ಪು ಸುಲ್ತಾನ್ ಕಟೌಟ್ ಗೆ ಬಣ್ಣ ಬಳಿದರು. ಪೊಲೀಸರು ಬಣ್ಣ ಬಳಿಯುತ್ತಿದ್ದಂತೆ ಮುಸ್ಲಿಂ ಯುವಕನೋರ್ವ ಬಣ್ಣ ಬಳಿದಿದ್ದ ಕಟೌಟ್ ಮೇಲೆಯೇ ರಕ್ತದಲ್ಲಿ “ಶೇರ್ ಟಿಪ್ಪು” ಎಂದು ಬರೆದಿದ್ದಾನೆ.

ಬಣ್ಣ ಬಳಿದಿದ್ದ ಕಟೌಟ್ ಮೇಲೆ ರಕ್ತದ ಬರಹ

ಟಿಪ್ಪು ಕಟೌಟ್ ಮೇಲೆ ಪೊಲೀಸರು ಹಚ್ಚಿದ್ದ ಬಿಳಿ ಬಣ್ಣದ ಮೇಲೆಯೇ ರಕ್ತದಲ್ಲಿ “ಶೇರ್ ಟಿಪ್ಪು” ಎಂದು ಮುಸ್ಲಿಂ ಯುವಕನೋರ್ವ ಬರೆದಿದ್ದಾನೆ. ಕೈ ಕೊಯ್ದುಕೊಂಡು ರಕ್ತದಲ್ಲಿ ಬರೆದಿದ್ದಾರೆ. ಜೊತೆಗೆ ಕಟೌಟ್ ನಲ್ಲಿನ ಬಿಳಿ ಬಣ್ಣಕ್ಕೆ ತನ್ನ ರಕ್ತ ಚಿಮ್ಮಿಸಿದ್ದಾನೆ. ರೆಡ್ ಕಲರ್ ಪೆಯಿಂಟ್ ಸ್ಪ್ರೇ ಮಾಡಿದ್ದಾನೆ ಎನ್ನಲಾಗುತ್ತಿದೆ. ರಾಗಿಗುಡ್ಡ- ಶಾಂತಿನಗರ ಭಾಗದಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ.

Shimoga news Controversy over the tipu sultan cut out placed for Eid Milad celebration

ಬಣ್ಣ ಬಳಿದಿದ್ದ ಕಟೌಟ್ ಮೇಲೆ ರಕ್ತದ ಬರಹ

ಇದನ್ನೂ ಓದಿ: ಕೋಲಾರ ಈದ್ ಮಿಲಾದ್ ಕತ್ತಿ ಪ್ರಕರಣ; ಕುದುರೆ ಮೇಲೆ ಕೂತು ಕತ್ತಿ ಜಳಪಿಸಿದ್ದ ವ್ಯಕ್ತಿ ಸೇರಿ ಆರು ಜನರ ವಿರುದ್ಧ ಪ್ರಕರಣ ದಾಖಲು

ಇನ್ನು ಮತ್ತೊಂದೆಡೆ ಪೊಲೀಸರೇ ಕಟೌಟ್ ಗೆ ಬಣ್ಣ ಬಳಿದಿದ್ದರಿಂದ ಗೊಂದಲ ಸೃಷ್ಟಿಯಾಗಿದ್ದು ಮುಸ್ಲಿಂ ಮುಖಂಡರ ಜೊತೆ ಎಸ್ಪಿ ಮಿಥುನ್ ಕುಮಾರ್ ಮಾತುಕತೆ ನಡೆಸಿದರು. ಟಿಪ್ಪು ಕಟೌಟ್ ವಿವಾದಾತ್ಮಕವಾಗಿದ್ದ ಬಗ್ಗೆ ಮುಖಂಡರಿಗೆ ಮನವರಿಕೆ ಮಾಡಿಕೊಟ್ಟರು. ಮಾತುಕತೆಯಲ್ಲಿ ಕಟೌಟ್ ಗೆ ಹಚ್ಚಿದ ಬಿಳಿ ಬಣ್ಣದ ಬದಲಾಗಿ ಬೇರೆ ಬಣ್ಣ ಬಳಿಯಲು ಮುಸ್ಲಿಂ ಮುಖಂಡರು ಸಮ್ಮತಿ ನೀಡಿದರು. ಬಳಿಕ ಪೊಲೀಸರು ಪರಿಸ್ಥಿತಿ ತಿಳಿಗೊಳಿಸಿದರು. ಮುಸ್ಲಿಂ ಯುವಕರು- ಮಹಿಳೆಯರು ಶಿವಮೊಗ್ಗ -ಹೊನ್ನಾಳಿ ರಸ್ತೆಯಲ್ಲಿನ ಪ್ರತಿಭಟನೆ ಕೈಬಿಟ್ಟರು. ಪೊಲೀಸರು ಬ್ಯಾರಿಕೇಡ್ ತೆಗೆದು ಸಂಚಾರಕ್ಕೆ ಅನುವು ಮಾಡಿಕೊಟ್ಟರು.

ಈ ವೇಳೆ ಮಾತನಾಡಿದ ಶಿವಮೊಗ್ಗ ಎಸ್ಪಿ ಜಿಕೆ ಮಿಥುನ್ ಕುಮಾರ್, ಶಿವಮೊಗ್ಗದ ರಾಗಿಗುಡ್ಡದಲ್ಲಿ ಒಂದು ಕಟ್ ಔಟ್ ವಿಚಾರವಾಗಿ ಗೊಂದಲ ಉಂಟಾಗಿತ್ತು. ಸ್ವಲ್ಪ ವಿವಾದಾತ್ಮಕವಾಗಿ ಕಟೌಟ್ ಇದ್ದಿದ್ದರಿಂದ ಅದಕ್ಕಾಗಿ ಯಾವ ಮುನ್ನೆಚ್ಚರಿಕೆ ತೆಗೆದುಕೊಳ್ಳಬೇಕು ಅದನ್ನು ತೆಗೆದುಕೊಂಡಿದ್ದೇವೆ. ಅದಕ್ಕೆ ಕೆಲವರಿಂದ ವಿರೋಧ ಕೂಡ ವ್ಯಕ್ತವಾಗಿತ್ತು. ಆ ಸಮಯದಲ್ಲಿ ನೂರಕ್ಕೂ ಹೆಚ್ಚು ಜನ ಸೇರಿದ್ದರು. ನಾನೇ ಮುಂದೆ ನಿಂತು ಅವರಿಗೆ ಸಮಾಧಾನಪಡಿಸಿ ವಿಚಾರವನ್ನು ತಿಳಿಸಿದ್ದೇನೆ. ಅವರಿಗೆ ಈಗ ಮನವರಿಕೆ ಮಾಡಿಕೊಟ್ಟಿದ್ದೇವೆ. ಈಗ ಅವರೆಲ್ಲರೂ ನಮ್ಮ ಮಾತಿಗೆ ಒಪ್ಪಿಕೊಂಡಿದ್ದಾರೆ. ಶಿವಮೊಗ್ಗದಲ್ಲಿ ಈದ್ ಮಿಲಾದ್ ಮೆರವಣಿಗೆಗೆ ಎಲ್ಲಾ ತಯಾರಿಯನ್ನು ಮಾಡಿಕೊಂಡಿದ್ದಾರೆ. ಅದಕ್ಕಾಗಿ ಶಿವಮೊಗ್ಗದಲ್ಲಿ ಅಲಂಕಾರ ಕೂಡ ಮಾಡಲಾಗಿದೆ. ಈದ್ ಮಿಲಾದ್ ಮೆರವಣಿಗೆ ಮಧ್ಯಾಹ್ನದ ವೇಳೆಗೆ ಪ್ರಾರಂಭವಾಗಲಿದೆ. ನಾವು ಕೂಡ ಸಾಕಷ್ಟು ತಯಾರಿನ ಮಾಡಿಕೊಂಡಿದ್ದೇವೆ.

ಸಾರ್ವಜನಿಕರು ಕೂಡ ಯಾವುದೇ ವದಂತಿಗಳಿಗೆ ಕಿವಿ ಕೊಡಬಾರದು. ಯಾವುದೇ ರೀತಿಯ ಸಮಸ್ಯೆಗಳಿದ್ದರೆ ಅದನ್ನ ನಮ್ಮ ಬಳಿಗೆ ತೆಗೆದುಕೊಂಡು ಬನ್ನಿ. ಈಗ ಪರಿಸ್ಥಿತಿ ಶಾಂತಿಯುತವಾಗಿದ್ದು ನಮ್ಮ ಕಂಟ್ರೋಲ್ ನಲ್ಲಿದೆ. ಕಳೆದ 15 ದಿನಗಳಿಂದ ಶಿವಮೊಗ್ಗದಲ್ಲಿ ನಾವು ಬಂದೋಬಸ್ತ್ ಮಾಡುತ್ತಿದ್ದೇವೆ. ಆರ್​ಎಎಫ್ ಎರಡು ತುಕಡಿ, 12 ಡಿಎಆರ್, 2 ಕೆಎಸ್​ಆರ್​ಪಿ ತುಕಡಿ ಹಾಗೂ 2500ಕ್ಕೂ ಹೆಚ್ಚು ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿದೆ. ಶಿವಮೊಗ್ಗದಲ್ಲಿ ಎಲ್ಲಾ ರೀತಿಯ ಬಂದೋಬಸ್ತ್ ನಾವು ಮಾಡಿಕೊಂಡಿದ್ದೇವೆ ಎಂದರು.

ಶಿವಮೊಗ್ಗಕ್ಕೆ ಸೇರಿದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 3:14 pm, Sun, 1 October 23

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ