ಶಿವಮೊಗ್ಗ: ಕರ್ನಾಟಕ ವಿಧಾನಸಭಾ ಚುನಾವಣೆ ಹೊಸ್ತಿಲಲ್ಲೇ ರಾಜ್ಯ ಬಿಜೆಪಿ ವಲಯದಲ್ಲಿ ಅಸಮಾಧಾನ ಭುಗಿಲೆದ್ದಿದೆ. ಬಿಜೆಪಿ ಪಟ್ಟಿ ಘೋಷಣೆಯಾಗುತ್ತಿದ್ದಂತೆ ಕೈ ತಪ್ಪಿದ ಟಿಕೆಟ್ ಆಕಾಂಕ್ಷಿಗಳು ಬಂಡಾಯ ಎದ್ದಿದ್ದಾರೆ. ಇದರ ನಡುವೆ ಬಿಜೆಪಿ ಶಾಸಕ ಕೆ.ಎಸ್.ಈಶ್ವರಪ್ಪ ರಾಜಕೀಯ ನಿವೃತ್ತಿ ಘೋಷಣೆ ಮಾಡಿದ್ದಾರೆ. ಈಶ್ವರಪ್ಪ ಅವರು ಚುನಾವಣೆಯಿಂದ ಹಿಂದೆ ಸರಿದಿರುವುದಕ್ಕೆ ಕಾರ್ಯಕರ್ತರು, ಬೆಂಬಲಿಗರು ತೀವ್ರ ಆಕ್ರೋಶ ಹೊರ ಹಾಕಿದ್ದಾರೆ. ಶಿವಮೊಗ್ಗ ಪಾಲಿಕೆ ಬಿಜೆಪಿ ಸದಸ್ಯರು ಪಕ್ಷದ ವಿವಿಧ ಜವಾಬ್ದಾರಿಗಳಿಗೆ ಸಾಮೂಹಿಕ ರಾಜೀನಾಮೆ ಸಲ್ಲಿಸಿದ್ದಾರೆ. ಮೇಯರ್, ಉಪಮೇಯರ್ ಸೇರಿ 19 ಸದಸ್ಯರು ಶಿವಮೊಗ್ಗ ನಗರ ಬಿಜೆಪಿ ಅಧ್ಯಕ್ಷರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ಹಾಗೂ ಬೆಂಗಳೂರಿಗೆ ತೆರಳಿ ಯಡಿಯೂರಪ್ಪ ಭೇಟಿಯಾಗಲು ನಿರ್ಧಾರ ಮಾಡಿದ್ದಾರೆ.
ಇನ್ನು ಶಿವಮೊಗ್ಗ ಬಿಜೆಪಿ ಜಿಲ್ಲಾ ಕಚೇರಿ ಎದುರು ಕಾರ್ಯಕರ್ತರು ಮತ್ತು ಈಶ್ವರಪ್ಪ ಆಭಿಮಾನಿಗಳು ಧರಣಿ ನಡೆಸಿದ್ದಾರೆ. ಬಿಜೆಪಿ ಕಚೇರಿಯ ಮುಂಭಾಗದ ದೀನ ದಯಾಳ್ ರಸ್ತೆ ತಡೆದು ಪ್ರತಿಭಟನೆ ನಡೆಸಿದ್ದಾರೆ. ಈಶ್ವರಪ್ಪ ಪುತ್ರ ಕಾಂತೇಶ್ಗೆ ಟಿಕೆಟ್ ನೀಡುವಂತೆ ಆಗ್ರಹಿಸಿದ್ದಾರೆ.
K.S.ಈಶ್ವರಪ್ಪ ನಿವೃತ್ತಿ ಸ್ವಲ್ಪ ಆಘಾತಕಾರಿ ಮತ್ತು ಬೇಸರವಾಗಿದೆ ಎಂದು ಶಿವಮೊಗ್ಗದಲ್ಲಿ ಎಂಎಲ್ಸಿ ಆಯನೂರು ಮಂಜುನಾಥ್ ಬೇಸರ ವ್ಯಕ್ತಪಡಿಸಿದ್ದಾರೆ. ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ವ್ಯಕ್ತಿಗತವಾಗಿ ದ್ವೇಷಿಗಳು ಕಡಿಮೆ. ಉತ್ತಮವಾಗಿ ಕೆಲಸ ಮಾಡ್ತಿದ್ದರೂ ಅಪಖ್ಯಾತಿಗೆ ಗುರಿಯಾಗಿದ್ದಾರೆ. ಈಶ್ವರಪ್ಪ ನಾಲಗೆ, ಮನೆಯಲ್ಲಿರುವ ವೈರಿಯಿಂದಾಗಿ ಟಿಕೆಟ್ ಸಿಕ್ಕಿಲ್ಲ. ಪುತ್ರ ವ್ಯಾಮೋಹದಿಂದ ಹೊರ ಬಂದಿದ್ದರೆ ಸ್ಪರ್ಧಿಸಬಹುದಿತ್ತು. ತನ್ನದಲ್ಲದ ತಪ್ಪಿಗೆ ಈಶ್ವರಪ್ಪ ರಾಜಕೀಯದಿಂದ ನಿವೃತ್ತಿ ಆಗಿದ್ದಾರೆ. ಕೆ.ಎಸ್.ಈಶ್ವರಪ್ಪ ನಿವೃತ್ತಿಗೆ ಕಾರ್ಯಕರ್ತರು, ಪಕ್ಷ ಕಾರಣವಲ್ಲ. ಪುತ್ರನಿಂದಾಗಿ K.S.ಈಶ್ವರಪ್ಪ ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ. ಈಶ್ವರಪ್ಪ ಯಾವತ್ತೂ ನನ್ನ ಟಾರ್ಗೆಟ್ ಆಗಿರಲಿಲ್ಲ. ಈಶ್ವರಪ್ಪ ಬದಲು ನನಗೆ ಟಿಕೆಟ್ ನೀಡಿ ಎಂದು ಕೇಳಿದ್ದೇನೆ ಅಷ್ಟೇ ಎಂದು ಶಿವಮೊಗ್ಗದಲ್ಲಿ ಎಂಎಲ್ಸಿ ಆಯನೂರು ಮಂಜುನಾಥ್ ತಿಳಿಸಿದರು.
ಶಿವಮೊಗ್ಗ ಜಿಲ್ಲೆಗೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ
Published On - 3:03 pm, Wed, 12 April 23